ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಟೊಯೊಟಾ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಹೊಸ ಹೈರೈಡರ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಕಂಪನಿಯು ಇದೀಗ ಹೊಸ ಕಾರಿನ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಹೊಸ ಹೈರೈಡರ್ ಎಸ್‌ಯುವಿ ಮಾದರಿಯನ್ನು ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಕಂಪನಿಯೊಂದಿಗೆ ಸಹಭಾಗಿತ್ವದಲ್ಲಿ ಅಭಿವೃದ್ದಿಗೊಳಿಸಿ ಬಿಡುಗಡೆ ಮಾಡಿದ್ದು, ಗ್ರ್ಯಾಂಡ್ ವಿಟಾರಾ ಜೊತೆ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಹಂಚಿಕೊಂಡಿರುವ ಹೊಸ ಕಾರು ಈ ವಿಭಾಗದಲ್ಲಿಯೇ ಪ್ರಮುಖ ವೈಶಿಷ್ಟ್ಯತೆಗಳೊಂದಿಗೆ ಖರೀದಿಗೆ ಲಭ್ಯವಾಗಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಹೈರೈಡರ್ ಎಸ್‌ಯುವಿಗಾಗಿ ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಬುಕಿಂಗ್ ದಾಖಲಾಗಿದ್ದು, ಬುಕಿಂಗ್ ಆಧರಿಸಿ ವಿತರಣೆಗೆ ಚಾಲನೆ ನೀಡಲಾಗಿದೆ. ಹೊಸ ಕಾರನ್ನು ಟೊಯೊಟಾ ಕಂಪನಿಯು ನಮ್ಮ ಬೆಂಗಳೂರಿನ ಬಿಡದಿ ಕಾರು ಉತ್ಪಾದನಾ ಘಟಕದಲ್ಲಿ ಉತ್ಪಾದನೆ ಕೈಗೊಳ್ಳುತ್ತಿದ್ದು, ಹೊಸ ಕಾರು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಹೈರೈಡರ್ ಹೊಸ ಕಾರು ಮಾದರಿಯು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಿದೆ. ಹೊಸ ಕಾರಿನಲ್ಲಿರುವ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.48 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.19 ಲಕ್ಷ ಬೆಲೆ ಹೊಂದಿದ್ದರೆ ಸ್ಟ್ರಾಂಗ್ ಹೈಬ್ರಿಡ್ ಮಾದರಿಯು ಆರಂಭಿಕವಾಗಿ ರೂ. 15.11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.99 ಲಕ್ಷ ಬೆಲೆ ಹೊಂದಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಕೆಲವು ವಿಭಿನ್ನ ಫೀಚರ್ಸ್‌ಗಳೊಂದಿಗೆ ಗ್ರ್ಯಾಂಡ್ ವಿಟಾರಾಗಿಂತಲೂ ಹೊಸ ಹೈಡರ್ ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 3 ಸಾವಿರದಿಂದ ರೂ. 50 ಸಾವಿರದಷ್ಟು ದುಬಾರಿಯಾಗಿದ್ದು, ಸ್ಮಾರ್ಟ್ ಹೈಬ್ರಿಡ್ ಮಾದರಿಯ ಹೈ ಎಂಡ್ ಮಾದರಿಯಲ್ಲಿ ಮಾತ್ರ ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ನೀಡಲಾಗಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಸೌಲಭ್ಯವನ್ನು ಹೊಂದಿರುವ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಟೊಯೊಟಾ ಹೈರೈಡರ್ ಕಾರು ಮಾದರಿಯು ಇ, ಎಸ್, ಜಿ, ವಿ ವೆರಿಯೆಂಟ್‌ಗಳನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ವಿವಿಧ ವೆರಿಯೆಂಟ್ ಅನುಗುಣವಾಗಿ ಸ್ಮಾರ್ಟ್ ಹೈಬ್ರಿಡ್ ಮತ್ತು ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ನೀಡಲಾಗಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಸ್ಟ್ರಾಂಗ್ ಹೈಬ್ರಿಡ್ ಮಾದರಿಯಲ್ಲಿರುವ 1.5 ಲೀಟರ್ ಅಟ್ಕಿನ್ಸನ್ ಪೆಟ್ರೋಲ್ ಎಂಜಿನ್ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದ್ದು, ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಮತ್ತು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೈಬ್ರಿಡ್ ತಂತ್ರಜ್ಞಾನದ ಪ್ರಮುಖ ತಾಂತ್ರಿಕ ಅಂಶವಾಗಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮಾದರಿಯು 87 ಬಿಎಚ್‌ಪಿ ಮತ್ತು 122 ಎನ್ಎಂ ಟಾರ್ಕ್ ಉತ್ಪಾದಿಸಲಿದ್ದಲ್ಲಿ 177.6 ವೊಲ್ಟ್ ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯದೊಂದಿಗೆ 79 ಬಿಎಚ್‌ಪಿ ಮತ್ತು 141 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮೋಟಾರ್ ಒಟ್ಟಾಗಿ ಕಾರ್ಯನಿರ್ವಹಣೆ ಮಾಡುವ ಮೂಲಕ ಪೆಟ್ರೋಲ್ ದಹಿಸುವಿಕೆಯ ಪ್ರಮಾಣವನ್ನು ತಗ್ಗಿಸಲಿದ್ದು, ಈ ಮೂಲಕ ಎರಡು ತಂತ್ರಜ್ಞಾನಗಳು ಒಟ್ಟಾಗಿ 114 ಬಿಎಚ್‌ಪಿ ಉತ್ಪಾದನೆಯೊಂದಿಗೆ ಇಂಧನ ಕಾರ್ಯಕ್ಷಮತೆ ಕಾಯ್ದುಕೊಳ್ಳುತ್ತದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಹೊಂದಿರುವ ಹೈರೈಡರ್ ವೆರಿಯೆಂಟ್‌ಗಳಲ್ಲಿ ಟೊಯೊಟಾ ಕಂಪನಿಯು ಇ-ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಇನ್ನು ಸ್ಮಾರ್ಟ್ ಹೈಬ್ರಿಡ್ ಹೈರೈಡರ್‌ನಲ್ಲಿ ಟೊಯೊಟಾ ಕಂಪನಿಯು ಮಾರುತಿ ಸುಜುಕಿಯಿಂದ ಎರವಲು ಪಡೆಯಲಾದ 1.5-ಲೀಟರ್ K15C ಸ್ಮಾರ್ಟ್-ಹೈಬ್ರಿಡ್ ಜೊತೆಗೆ ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ (ISG) ಒದಗಿಸಲಿದ್ದು, ಇದು ಕೂಡಾ ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್ ಕಾಯ್ದುಕೊಳ್ಳಲು ಸಹಕಾರಿಯಾಗಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

1.5-ಲೀಟರ್ K15C ಸ್ಮಾರ್ಟ್-ಹೈಬ್ರಿಡ್ ಪೆಟ್ರೋಲ್ ಎಂಜಿನ್ ಅನ್ನು ಈಗಾಗಲೇ ಬ್ರೆಝಾ, ಎಕ್ಸ್‌ಎಲ್6 ಮತ್ತು ಹೊಸ ಎರ್ಟಿಗಾ ಮಾದರಿಗಳಲ್ಲಿಯೂ ನೋಡಬಹುದಾಗಿದ್ದು, ಇದೀಗ ಸಹಭಾಗಿತ್ವ ಯೋಜನೆಗಾಗಿ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ತಮ್ಮ ಹೊಸ ಮಾದರಿಗಳಿಗಾಗಿ ಬಳಕೆ ಮಾಡಿಕೊಂಡಿವೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಸ್ಮಾರ್ಟ್ ಹೈಬ್ರಿಡ್ ಹೊಂದಿರುವ ಪೆಟ್ರೋಲ್ ಎಂಜಿನ್ ಮಾದರಿಯು 103 ಬಿಎಚ್‌ಪಿ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಈ ಎಂಜಿನ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆ ನೀಡಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಹಾಗೆಯೇ ಹೊಸ ಕಾರು ಖರೀದಿ ಮೇಲೆ ಟೊಯೊಟಾ ಕಂಪನಿಯು 3 ವರ್ಷ ಅಥವಾ1,00,000 ಕಿ.ಮೀ ವಾರಂಟಿಯನ್ನು ನೀಡಲಿದ್ದು, ಇದನ್ನು 5 ವರ್ಷ ಅಥವಾ 2,20,000 ಕಿ.ಮೀವರೆಗೆ ವಿಸ್ತರಿಸಬಹುದಾಗಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಜೊತೆಗೆ ಹೊಸ ಕಾರಿನ ಹೈಬ್ರಿಡ್ ಬ್ಯಾಟರಿಗಳ ಮೇಲೆ 8 ವರ್ಷ ಅಥವಾ 1,60,000 ಕಿ.ಮೀ ವಾರಂಟಿಯನ್ನು ಸಹ ನೀಡುತ್ತಿದ್ದು, ಪ್ರಮುಖ ಪ್ರತಿಸ್ಪರ್ಧಿಗಳಾದ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಫೋಕ್ಸ್‌ವ್ಯಾಗನ್ ಟೈಗುನ್, ಸ್ಕೋಡಾ ಕುಶಾಕ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಸುರಕ್ಷತಾ ವೈಶಿಷ್ಟ್ಯಗಳ ವಿಷಯದಲ್ಲೂ ಗಮನಸೆಳೆಯಲಿರುವ ಅರ್ಬನ್ ಕ್ರೂಸರ್ ಹೈರೈಡರ್ ಕಾರು 6 ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಇಎಸ್‌ಪಿ, ಹಿಲ್-ಹೋಲ್ಡ್ ಅಸಿಸ್ಟ್ ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್ ಅನ್ನು ಪಡೆಯುತ್ತದೆ.

ಹೈರೈಡರ್ ಹೈಬ್ರಿಡ್ ಎಸ್‌ಯುವಿ ವಿತರಣೆಗೆ ಚಾಲನೆ ನೀಡಿದ ಟೊಯೊಟಾ

ಹೈರೈಡರ್‌ನ ಉನ್ನತ ರೂಪಾಂತರಗಳಲ್ಲಿ ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್, ಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ಸ್-ಅಪ್ ಡಿಸ್ಪ್ಲೇ, ಕನೆಕ್ಟ್ ಮಾಡಿದ ಕಾರ್ ಟೆಕ್ ಮತ್ತು ಗೂಗಲ್ ಮತ್ತು ಸಿರಿ ಹೊಂದಾಣಿಕೆಯೊಂದಿಗೆ ಧ್ವನಿ ಸಹಾಯದಂತಹ ವೈಶಿಷ್ಟ್ಯಗಳನ್ನು ಪಡೆಯುತ್ತದೆ.

Article Published On: Saturday, October 1, 2022, 12:03 [IST]
English summary
Toyota hyryder suv deliveries begin details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+