ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಆರಂಭಿಸಿದ ಟೊಯೊಟಾ
ಬಹುನೀರಿಕ್ಷಿತ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು ಭಾರತದಲ್ಲಿ ಇದೇ ತಿಂಗಳು 23ರಂದು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟೊಯೊಟಾ ನಿರ್ಮಾಣದ ನಾಲ್ಕು ಹೊಸ ಕಾರುಗಳ ಪೈಕಿ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಪ್ರಮುಖವಾಗಿದ್ದು, ಹೊಸ ಕಾರು ಖರೀದಿಗಾಗಿ ಟೊಯೊಟಾ ಕಂಪನಿಯು ರೂ.2 ಲಕ್ಷ ಮುಂಗಡ ಪಾವತಿಯೊಂದಿಗೆ ಬುಕ್ಕಿಂಗ್ ಸ್ವಿಕರಿಸುತ್ತಿದೆ. ಹೊಸ ಕಾರು ಮಾದರಿಯು ಆಫ್ ರೋಡ್ ಪ್ರಿಯರ ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಕಾರು ಪ್ರಮುಖ ಎರಡು ವೆರಿಯೆಂಟ್‌ಗಳೊಂದಿಗೆ ಬಿಡುಗಡೆಯಾಗಬಹುದಾಗಿದೆ.

ಹೊಸ ಕಾರು ಮಾದರಿಗಳ ಬಿಡುಗಡೆಗಾಗಿ ಭಾರತದಲ್ಲಿ ಬೃಹತ್ ಯೋಜನೆಗೆ ಚಾಲನೆ ನೀಡಿರುವ ಟೊಯೊಟಾ ಕಂಪನಿಯು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿರುವ ಪ್ರಮುಖ ಕಾರು ಮಾದರಿಗಳನ್ನು ದೇಶಿಯ ಮಾರುಕಟ್ಟೆಯಲ್ಲೂ ಹಂತ-ಹಂತವಾಗಿ ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆ ಅಡಿ ಮೊದಲ ಕಾರು ಮಾದರಿಯಾಗಿ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯು ಬಿಡುಗಡೆ ಮಾಡಲಾಗುತ್ತಿದೆ.

ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯ ಬಿಡುಗಡೆಗೂ ಮುನ್ನ ಟೊಯೊಟಾ ಕಂಪನಿಯ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿದ್ದು, ಹೊಸ ಕಾರು ಕೇಂದ್ರ ಸರ್ಕಾರದ ಹೊಸ ಆಮದು ನೀತಿಯಡಿ ಭಾರತದಲ್ಲಿ ಮಾರಾಟಗೊಳ್ಳಲಿದೆ.

ಹಿಲಕ್ಸ್ ಮಾದರಿಯನ್ನು ಸದ್ಯಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳಲಿರುವ ಟೊಯೊಟಾ ಕಂಪನಿಯು ಗ್ರಾಹಕರ ಪ್ರಕ್ರಿಯೆ ಆಧಾರ ಮೇಲೆ ಮುಂಬರುವ ದಿನಗಳಲ್ಲಿ ಭಾರತದಲ್ಲಿ ನಿರ್ಮಾಣ ಮಾಡುವ ಯೋಜನೆಯಲ್ಲಿದೆ.

ಮಧ್ಯಮ ಗಾತ್ರದ ಎಸ್‌ಯುವಿ ಆವೃತ್ತಿಗಳ ಕಾರುಗಳ ಮಾರಾಟವು ದೇಶಿಯ ಮಾರುಕಟ್ಟೆಯಲ್ಲಿ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಟೊಯೊಟಾ ಕಂಪನಿಯು ಸಹ ಮಾರುಕಟ್ಟೆಯಲ್ಲಿನ ಬೇಡಿಕೆಯನ್ನು ಆಧರಿಸಿ ಜಾಗತಿಕ ಮಾರುಕಟ್ಟೆಗಳಲ್ಲಿನ ಪ್ರಮುಖ ಕಾರು ಮಾದರಿಗಳನ್ನು ಇದೀಗ ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.

2022ರ ಅವಧಿಗಾಗಿ ಟೊಯೊಟಾ ಕಂಪನಿಯು ಹಿಲಕ್ಸ್ ಸೇರಿದಂತೆ ಒಟ್ಟು ನಾಲ್ಕು ಹೊಸ ಕಾರುಗಳನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿದ್ದು, ಹಿಲಕ್ಸ್ ಪಿಕ್‌ಅಪ್ ನಂತರ ರಾವ್4 ಹಾಗೂ ಮತ್ತೆರಡು ರೀಬ್ಯಾಡ್ಜ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ಕೇಂದ್ರ ಸರ್ಕಾರದ 2019ರ ಹೊಸ ಆಮದು ನೀತಿಯು ವಿದೇಶಿ ಕಾರು ಉತ್ಪಾದನಾ ಕಂಪನಿಗಳಿಗೆ ಸಾಕಷ್ಟು ಸಹಕಾರಿಯಾಗುತ್ತಿದ್ದು, ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಕಾರು ಕಂಪನಿಗಳು ವಾರ್ಷಿಕವಾಗಿ 2,500 ಯುನಿಟ್ ಕಾರುಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ದೇಶಿಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿರುವುದು ಟೊಯೊಟಾ ಕಂಪನಿಗೂ ಇದು ವರದಾನವಾಗಿದೆ.

ಟೊಯೊಟಾ ಕಂಪನಿಯು ಹೊಸ ಆಮದು ನೀತಿ ಅಡಿ ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಪ್ರಮುಖ ಕಾರುಗಳನ್ನು ಹೊಸ ಆಮದು ನೀತಿ ಅಡಿಯಲ್ಲಿ ಮಾರಾಟ ಮಾಡುವ ಯೋಜನೆಯಲ್ಲಿದ್ದು, ಈಗಾಗಲೇ ಹೊಸ ಆಮದು ನೀತಿ ಅಡಿಯಲ್ಲಿ ವೆಲ್‌ಫೈರ್ ಐಷಾರಾಮಿ ಎಂಪಿವಿ ಮಾದರಿಯನ್ನು ಮಾರಾಟ ಮಾಡುತ್ತಿದೆ.

ಮಧ್ಯಮ ಗಾತ್ರದ ಪಿಕ್ಅಪ್ ಎಸ್‌ಯುವಿ ಮಾದರಿಯಲ್ಲೇ ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹಿಲಕ್ಸ್ ಮಾದರಿಯು ವಿದೇಶಿ ಮಾರುಕಟ್ಟೆಯಲ್ಲಿ ವಿವಿಧ ಎಂಜಿನ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಹಿಲಕ್ಸ್ ಕಾರು ಭಾರತೀಯ ಮಾರುಕಟ್ಟೆಗಳಲ್ಲಿನ ಪಿಕ್ಅಪ್ ಮಾದರಿಗಳಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯು ಬೆಲೆ ಕಡಿತಕ್ಕಾಗಿ ಕೆಲವು ಬದಲಾವಣೆಗಳೊಂದಿಗೆ ಪ್ರಮುಖ ಎರಡು ಡೀಸೆಲ್ ಎಂಜಿನ್‌ನೊಂದಿಗೆ ರಸ್ತೆಗಿಳಿಯಲಿದೆ.

ಹಿಲಕ್ಸ್ ಪಿಕ್ಅಪ್ ಮಾದರಿಯು ಇಸುಝ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗೆ ಪೈಪೋಟಿಯಾಗಿ ಪ್ರಮುಖ ಎರಡು ಮಾದರಿಗಳಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರು 2.4-ಲೀಟರ್ ಡೀಸೆಲ್ ಮತ್ತು 2.8-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಬಹುದಾಗಿದೆ.

ಹೊಸ ಕಾರು ಕಡಿಮೆ ಎಂಜಿನ್ ವೇಗದಲ್ಲೂ ಅತಿಹೆಚ್ಚು ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್‌ಗಳೊಂದಿಗೆ ಮಾರಾಟವಾಗುತ್ತಿರುವ ಹಿಲಕ್ಸ್ ಮಾದರಿಯು ಭಾರತದಲ್ಲಿ ಎರಡು ಎಂಜಿನ್ ಆಯ್ಕೆಯೊಂದಿಗೆ ಕೆಲವೇ ವೆರಿಯೆಂಟ್‌ನಲ್ಲಿ ಮಾರಾಟಗೊಳ್ಳಲಿದೆ.

ಹೊಸ ಕಾರು ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ನಡುವಿನ ಸ್ಥಾನದಲ್ಲಿ ಮಾರಾಟಗೊಳ್ಳಲಿದ್ದು, ಹೊಸ ಕಾರು ಆರಂಭಿಕವಾಗಿ ರೂ. 24 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಗಳಿವೆ.

ಜೊತೆಗೆ ಹೊಸ ಪಿಕ್ಅಪ್ ಮಾದರಿಯಲ್ಲಿ ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಸಹ ನೀಡಲಾಗಿದ್ದು, ಆಫ್ ರೋಡ್ ಪ್ರಿಯರು ಹೊಸ ಕಾರು ಮಾದರಿಯನ್ನು ವಿವಿಧ ಬಗೆಯಲ್ಲಿ ಮಾಡಿಫೈ ಸೌಲಭ್ಯಗಳನ್ನು ಮಾರ್ಪಾಡುಗೊಳಿಸಲು ಸೂಕ್ತ ಕಾರು ಮಾದರಿಯಾಗಿದೆ.


Click it and Unblock the Notifications