Just In
- 7 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 7 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 9 hrs ago
ಎರ್ಟಿಗಾದಲ್ಲಿ ಹೊಸ ಸಿಎನ್‌ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 9 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2022ರ ಮಾದರಿಗಳ ಬಿಡುಗಡೆಗೂ ಮುನ್ನ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರುಗಳ ಬೆಲೆ ಏರಿಕೆ
ಟೊಯೊಟಾ ಇಂಡಿಯಾ ಕಂಪನಿಯು ತನ್ನ ಪ್ರಮುಖ ರೀಬ್ಯಾಜ್ಡ್ ಕಾರು ಮಾದರಿಗಳಾದ ಗ್ಲಾಂಝಾ ಹ್ಯಾಚ್‌ಬ್ಯಾಕ್ ಮತ್ತು ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳ 2022ರ ಆವೃತ್ತಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಆವೃತ್ತಿಗಳ ಬಿಡುಗಡೆಗೂ ಮುನ್ನ ಬೆಲೆ ಏರಿಕೆ ಘೋಷಿಸಿದೆ.

ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟೊಯೊಟಾ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಕಳೆದ ತಿಂಗಳ ಹಿಂದಷ್ಟೇ ಶೇ.1ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸಿದ್ದು, ಇದೀಗ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರುಗಳ ಬೆಲೆಯಲ್ಲೂ ಹೆಚ್ಚಳ ಮಾಡಿದೆ.

ಹೊಸ ದರ ಪಟ್ಟಿಯಲ್ಲಿ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರು ಮಾದರಿಗಳು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 4 ಸಾವಿರದಿಂದ ರೂ. 45 ಸಾವಿರ ತನಕ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ 2022ರ ಮಾದರಿಗಳು ಮತ್ತಷ್ಟು ದುಬಾರಿ ಬೆಲೆ ಪಡೆದುಕೊಳ್ಳಲಿವೆ.

ಬೆಲೆ ಹೆಚ್ಚಳ ನಂತರ ಗ್ಲಾಂಝಾ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.66 ಲಕ್ಷ ಬೆಲೆ ಹೊಂದಿದ್ದರೆ ಅರ್ಬನ್ ಕ್ರೂಸರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.87 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.58 ಲಕ್ಷ ಬೆಲೆ ಹೊಂದಿವೆ.

ಟೊಯೊಟಾ ಕಂಪನಿಯು ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರುಗಳ 2022ರ ಆವೃತ್ತಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳ ಬಿಡುಗಡೆಗೂ ಮುನ್ನ ಬೆಲೆ ಏರಿಕೆಯೂ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಟೊಯೊಟಾ ಕಂಪನಿಯು ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರುಗಳ ಬಿಡುಗಡೆಯ ನಂತರ ಮೊದಲ ಬಾರಿಗೆ 2022ರ ಮಾದರಿಗಳೊಂದಿಗೆ ಮಹತ್ವದ ಬದಲಾವಣೆ ಪರಿಚಯಿಸುವ ಸುಳಿವು ನೀಡಿದ್ದು, ಹೊಸ ಕಾರು ಮಾದರಿಗಳು ವಿನ್ಯಾಸ ಬದಲಾವಣೆಯೊಂದಿಗೆ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

2022ರ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿನ್ ಆಯ್ಕೆಯೊಂದಿಗೆ ಉನ್ನತೀಕರಿಸಿದ ತಾಂತ್ರಿಕ ಅಂಶಗಳೊಂದಿಗೆ ಮುಂಭಾಗದಲ್ಲಿ ಹೊಸ ವಿನ್ಯಾಸ ಪಡೆದುಕೊಳ್ಳಲಿದ್ದು, ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರುಗಳ ಮೂಲ ಮಾದರಿಯಾದ ಬಲೆನೊ ಮತ್ತು ವಿಟಾರಾ ಬ್ರೆಝಾ ಮಾದರಿಯಲ್ಲೂ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗುತ್ತಿದೆ.

ಮೂಲ ಮಾದರಿಗಳನ್ನು ಆಧರಿಸಿ ಬದಲಾವಣೆಗಳನ್ನು ಪಡೆದುಕೊಳ್ಳಲಿರುವ ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್ ಕಾರುಗಳಲ್ಲಿ ಈ ಬಾರಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯೆಂತೆ ಹೊಸ ಕಾರುಗಳನ್ನು ಉನ್ನತೀಕರಿಸಲಾಗಿದೆ.

ಅರ್ಬನ್ ಕ್ರೂಸರ್ ಮಾದರಿಯ ರೀಬ್ಯಾಡ್ಜ್ ಆವೃತ್ತಿಯಾಗಿದ್ದರೂ ಮೂಲ ಕಾರು ಮಾದರಿಯಾದ ವಿಟಾರಾ ಬ್ರೆಝಾ ಮಾದರಿಯೆಂತೆಯೇ ಅತ್ಯುತ್ತಮ ಬೇಡಿಕೆ ಪಡೆದುಕೊಂಡಿದ್ದು, ಬ್ರಾಂಡ್ ಬ್ಯಾಡ್ಜ್ ಹೆಸರು ಹೊರತುಪಡಿಸಿ ಎರಡು ಕಾರು ಮಾದರಿಗಳು ಒಂದೇ ರೀತಿಯ ತಾಂತ್ರಿಕ ಅಂಶಗಳನ್ನು ಹೊಂದಿವೆ.

ವಿಟಾರಾ ಬ್ರೆಝಾ ತನ್ನದೆ ಆದ ಜನಪ್ರಿಯತೆಯೊಂದಿಗೆ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದರೆ ಹೊಸದಾಗಿ ಬಿಡುಗಡೆಯಾದ ಅರ್ಬನ್ ಕ್ರೂಸರ್ ಕಾರು ಕೂಡಾ ಪ್ರೀಮಿಯಂ ಕಾರು ಖರೀದಿದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮಿಡ್, ಹೈ ಮತ್ತು ಪ್ರೀಮಿಯಂ ಎಂಬ ಮೂರು ರೂಪಾಂತರ ಹೊಂದಿರುವ ಅರ್ಬನ್ ಕ್ರೂಸರ್ ಕಾರು ಮಾದರಿಯು ಮೂಲ ಮಾದರಿಗಿಂತಲೂ ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಯೊಂದಿಗೆ ಎರಡು ಸ್ಲಾಟ್ ಹೊಂದಿರುವ ಫ್ರಂಟ್ ಗ್ರಿಲ್, ಎರಡು ತುದಿಗಳಲ್ಲೂ ಬೋಲ್ಡ್ ಕ್ರೊಮ್ ಹೊಂದಿದೆ.

ಅರ್ಬನ್ ಕ್ರೂಸರ್ ಕಾರಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್‌ಗಳೊಂದಿಗೆ ಫ್ರಂಟ್ ಗ್ರಿಲ್, ಎಲ್‌ಇಡಿ ಪ್ರೊಜೆಕ್ಟರ್ ಘಟಕಗಳನ್ನು ಹೊಂದಿದ್ದು, ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ಹಿಂಬದಿ ವಿನ್ಯಾಸದಲ್ಲೂ ಗಮನಸೆಳೆಯುತ್ತದೆ. ಸೈಡ್ ಪ್ರೊಫೈಲ್ ಮತ್ತು ಹಿಂಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ಕನಿಷ್ಠ ಮಟ್ಟದ ವಿನ್ಯಾಸ ಗುಣಲಕ್ಷಣಗಳಿದ್ದರೂ ಅಚ್ಚುಕಟ್ಟಾದ ವಿನ್ಯಾಸ ಹೊಂದಿದೆ.

ಹಾಗೆಯೇ ಇಂಟಿಗ್ರೇಟೆಡ್ ಟರ್ನ್ ಸಿಗ್ನಲ್‌ಗಳೊಂದಿಗೆ ಸ್ಟೈಲಿಶ್ ಆಗಿರುವ 16-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಹ್ ಮತ್ತು ಬಾಡಿ ಕಲರ್ ಒಳಗೊಂಡಿರುವ ಒಆರ್‌ವಿಎಂಗಳು ಪ್ರಮುಖ ತಾಂತ್ರಿಕ ಅಂಶಗಳಾಗಿವೆ.

ಕಾರಿನ ಹಿಂಭಾಗದಲ್ಲಿ ಎಲ್‌ಇಡಿ ಟೈಲ್ ಲೈಟ್‌ಗಳು, ಅದರ ಮೇಲೆ ಆಕರ್ಷಕವಾಗಿರುವ 'ಅರ್ಬನ್ ಕ್ರೂಸರ್' ಹೆಸರಿನ ಬೋಲ್ಡ್ ಕ್ರೋಮ್ ಸ್ಟ್ರಿಪ್, ಸ್ಟಾಪ್ ಲ್ಯಾಂಪ್ ಹೊಂದಿರುವ ರೂಫ್ ಮೌಟೆಂಡ್ ಸ್ಪಾಯ್ಲರ್ ಮತ್ತು ಹಿಂಭಾಗದ ಬಂಪರ್‌ನಲ್ಲಿ ಪ್ರತಿಫಲಕಗಳೊಂದಿಗೆ ಬರುತ್ತದೆ. ಕೆಳಭಾಗದಲ್ಲಿ ಸಿಲ್ವರ್ ಸ್ಕಿಡ್ ಪ್ಲೇಟ್ ಸಹ ಇದ್ದು, ಇದು ಎಸ್‌ಯುವಿ ಹೊರ ನೋಟದ ಬಲಿಷ್ಠತೆಯನ್ನು ಹೆಚ್ಚಿಸುತ್ತದೆ.

ಟೊಯೊಟಾ ಅರ್ಬನ್ ಕ್ರೂಸರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಂತೆ ಎಂಜಿನ್ ಆಯ್ಕೆ ಹೊಂದಿದೆ. ಬಿಎಸ್-6 ಪ್ರೇರಿತ ಕೆ-ಸೀರಿಸ್ 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 104-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಪೆಟ್ರೋಲ್ ಎಂಜಿನ್ ಮಾದರಿಯು ಆರಂಭಿಕ ಆವೃತ್ತಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 2022ರ ಮಾದರಿಯೊಂದಿಗೆ ಮತ್ತಷ್ಟು ಹೊಸ ಬದಲಾವಣೆಗಳನ್ನು ಪಡೆದುಕೊಳ್ಳಲಿರುವ ಅರ್ಬನ್ ಕ್ರೂಸರ್ ಕಾರು ಮೂಲ ಮಾದರಿಯಲ್ಲಿ ಹೊಸದಾಗಿ ಪರಿಚಯಿಸಲಾಗುತ್ತಿರುವ ಸಿಎನ್‌ಜಿ ಮಾದರಿಯನ್ನು ಸಹ ಬಿಡುಗಡೆ ಮಾಡಬಹುದಾಗಿದೆ.