ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಟೊಯೊಟಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಮಾದರಿಯಾದ ಇನೋವಾ ಕ್ರಿಸ್ಟಾದಲ್ಲಿ ಹೊಸ ಫೀಚರ್ಸ್ ಒಳಗೊಂಡ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ.

ಹೊಸ ಆವೃತ್ತಿಯು ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳಲ್ಲಿ ಖರೀದಿಸಬಹುದಾಗಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಎಂಪಿವಿ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಇನೋವಾ ಕ್ರಿಸ್ಟಾದಲ್ಲಿ ಟೊಯೊಟಾ ಕಂಪನಿಯು ಮುಂಬರುವ ದಸರಾ ಮತ್ತು ದೀಪಾವಳಿ ವಿಶೇಷವಾಗಿ ಲಿಮಿಟೆಡ್ ಎಡಿಷನ್ ಪರಿಚಯಿಸಿದ್ದು, ಹೊಸ ಆವೃತ್ತಿಗಳು ಜಿಎಕ್ಸ್ ರೂಪಾಂತರವನ್ನು ಆಧರಿಸಿ ಬಿಡುಗಡೆಗೊಂಡಿವೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಲಿಮಿಟೆಡ್ ಎಡಿಷನ್ ಮ್ಯಾನುವಲ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 17.45 ಲಕ್ಷ ಬೆಲೆ ಹೊಂದಿದ್ದರೆ ಆಟೋಮ್ಯಾಟಿಕ್ ಮಾದರಿಯು ರೂ. 19.02 ಲಕ್ಷ ಬೆಲೆ ಹೊಂದಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಟೊಯೊಟಾ ಕಂಪನಿಯು ಇನೋವಾ ಕ್ರಿಸ್ಟಾದಲ್ಲಿ ಸದ್ಯ ಪೆಟ್ರೋಲ್ ಮಾದರಿಗಾಗಿ ಬುಕಿಂಗ್ ಸ್ವಿಕರಿಸುತ್ತಿದ್ದು, ಹೆಚ್ಚಿನ ಬೇಡಿಕೆಯ ಪರಿಣಾಮ ಡೀಸೆಲ್ ಮಾದರಿಗಾಗಿ ತಾತ್ಕಾಲಿಕವಾಗಿ ಬುಕಿಂಗ್ ಸ್ಥಗಿತಗೊಳಿಸಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಹೀಗಾಗಿ ಕಂಪನಿಯು ಸದ್ಯಕ್ಕೆ ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದ್ದು, ಡೀಸೆಲ್ ಮಾದರಿಗಳಿಗಾಗಿ ಸಲ್ಲಿಕೆಯಾಗುತ್ತಿರುವ ಬೇಡಿಕೆ ತಗ್ಗಿಸಲು ಪೆಟ್ರೋಲ್ ಮಾದರಿಗಳಲ್ಲಿ ವಿಶೇಷ ಫೀಚರ್ಸ್ ಹೊಂದಿರುವ ಹೊಸ ಆವೃತ್ತಿಯನ್ನು ಪರಿಚಯಿಸಲಾಗುತ್ತಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಲಿಮಿಟೆಡ್ ಎಡಿಷನ್‌ನಲ್ಲಿ ಟೊಯೊಟಾ ಕಂಪನಿಯು ಜಿಎಕ್ಸ್ ಮಾದರಿಯಲ್ಲಿನ ಸ್ಟ್ಯಾಂಡರ್ಡ್ ಫೀಚರ್ಸ್‌ಗಳೊಂದಿಗೆ ಹೆಚ್ಚುವರಿಯಾಗಿ ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ವೈರ್‌ಲೆಸ್ ಚಾರ್ಜಿಂಗ್ ಮತ್ತು ಹೆಡ್ಸ್-ಅಪ್ ಡಿಸ್‌ಪ್ಲೇ ಮತ್ತು ಲಿಮಿಟೆಡ್ ಎಡಿಷನ್ ಬ್ಯಾಡ್ಜ್ ಸೇರಿಸಲಾಗಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಫೀಚರ್ಸ್‌ಗಳಿಂದಾಗಿ ಜಿಎಕ್ಸ್ ಸ್ಟ್ಯಾಂಡರ್ಡ್ ಮಾದರಿಗಿಂತ ಲಿಮಿಟೆಡ್ ಎಡಿಷನ್ ರೂ. 55 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಲಿಮಿಟೆಡ್ ಎಡಿಷನ್ ಮುಂಬರುವ ಅಕ್ಟೋಬರ್ ತನಕ ಅಥವಾ ಸ್ಟಾಕ್ ಮುಕ್ತಾಯದ ತನಕ ಮಾತ್ರ ಖರೀದಿಗೆ ಲಭ್ಯಲಿರಲಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಇನ್ನು ಟೊಯೊಟಾ ಕಂಪನಿಯು ಹೊಸ ತಲೆಮಾರಿನ ಇನೋವಾ ಕ್ರಿಸ್ಟಾ ಮಾದರಿಯನ್ನು 2023ರ ಆರಂಭದಲ್ಲಿ ಬಿಡುಗಡೆ ಮಾಡಬಹುದಾಗಿದ್ದು, ಅಲ್ಲಿಯ ತನಕ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿ ಕಂಪನಿಯು ಪೆಟ್ರೋಲ್ ಮಾದರಿಗಳನ್ನು ಮಾತ್ರ ಮಾರಾಟ ಮಾಡಲು ನಿರ್ಧರಿಸಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ಮಾಲಿನ್ಯ ನಿಯಂತ್ರಣ ಕಾಯ್ದೆಗಳಿಗೆ ಅನುಸಾರವಾಗಿ ಡೀಸೆಲ್ ಎಂಜಿನ್ ಕಾರುಗಳ ಉನ್ನತೀಕರಣವು ಸಾಕಷ್ಟು ದುಬಾರಿಯಾಗುವ ಕಾರಣಕ್ಕೆ ಬಹುತೇಕ ಕಾರು ಕಂಪನಿಗಳು ಹಂತ-ಹಂತವಾಗಿ ಡೀಸೆಲ್ ಮಾದರಿಗಳಿಗೆ ಗುಡ್‌ಬೈ ಹೇಳುತ್ತಿದ್ದು, ಕೇವಲ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರು ಮಾದರಿಗಳತ್ತ ಗಮನಹರಿಸುತ್ತಿವೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಇದೇ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿರುವ ಟೊಯೊಟಾ ಕಂಪನಿಯು ಕಂಪನಿಯು ಹೊಸ ತಲೆಮಾರಿನ ಇನೋವಾ ಕ್ರಿಸ್ಟಾದಲ್ಲಿ ಹೊಸ ಮಾಲಿನ್ಯ ನಿಯಂತ್ರಣ ಕಾಯ್ದೆಗಳಿಗೆ ಅನುಗುಣವಾಗಿ ಡೀಸೆಲ್ ಆಯ್ಕೆ ಬದಲಾಗಿ ಪೆಟ್ರೋಲ್ ಮತ್ತು ಪೆಟ್ರೋಲ್-ಹೈಬ್ರಿಡ್ ಮಾದರಿಗಳನ್ನು ಪರಿಚಯಿಸಬಹುದಾಗಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಹೊಸ ತಲೆಮಾರಿನ ಮಾದರಿಯಲ್ಲಿ ಡೀಸೆಲ್ ಎಂಜಿನ್ ತೆಗೆದುಹಾಕುವ ಕುರಿತಂತೆ ಕಂಪನಿಯು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲವಾದರೂ ಹೊಸ ಮಾಲಿನ್ಯ ನಿಯಂತ್ರಣ ಕಾಯ್ದೆ ನಿಯಮಗಳನ್ನು ಅನುಸರಿಸುವುದರಿಂದ ಡೀಸೆಲ್ ಎಂಜಿನ್ ಕಾರುಗಳ ಬೆಲೆಯಲ್ಲಿ ಸಾಕಷ್ಟು ಹೆಚ್ಚಳವಾಗಬಹುದಾದ ಸಾಧ್ಯತೆ ಹೆಚ್ಚಿರುವುದರಿಂದ ಡೀಸೆಲ್ ಎಂಜಿನ್ ಕೈಬಿಡಬಹುದು ಎನ್ನಲಾಗುತ್ತಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಹೀಗಾಗಿ ಪೆಟ್ರೋಲ್ ಮತ್ತು ಪೆಟ್ರೋಲ್-ಹೈಬ್ರಿಡ್ ಮಾದರಿಗಳ ಮೇಲೆ ಗಮನಹರಿಸುತ್ತಿರುವ ಟೊಯೊಟಾ ಕಂಪನಿಯು ಪೆಟ್ರೋಲ್-ಹೈಬ್ರಿಡ್ ಮೂಲಕ ಡೀಸೆಲ್ ಕಾರು ಬಯಸುವ ಗ್ರಾಹಕರನ್ನು ತಲುಪುವ ಯೋಜನೆ ರೂಪಿಸುತ್ತಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ವಿಶ್ವಾದ್ಯಂತ ಪ್ರಮುಖ ಆಟೋಮೊಬೈಲ್ ಕಂಪನಿಗಳು ಕಟ್ಟುನಿಟ್ಟಾದ ಮಾಲಿನ್ಯ ಹೊರಸೂಸುವಿಕೆಯ ಮಾನದಂಡಗಳನ್ನು ಅನುಸರಿಸುತ್ತಿರುವುದರಿಂದ ಪ್ರಯಾಣಿಕ ಕಾರುಗಳಲ್ಲಿ ಡೀಸೆಲ್ ಎಂಜಿನ್‌ ಆಯ್ಕೆಗಳು ಕ್ರಮೇಣವಾಗಿ ತಗ್ಗುತ್ತಿದ್ದು, ಪೆಟ್ರೋಲ್ ಮತ್ತು ಪೆಟ್ರೋಲ್-ಹೈಬ್ರಿಡ್ ಕಾರುಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಇದರಿಂದ ಕಂಪನಿಯು ಹೊಸ ಇನೋವಾ ಕ್ರಿಸ್ಟಾ ಬಿಡುಗಡೆಗೂ ಮುನ್ನ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾದಲ್ಲಿ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟ ಮಾಡಲು ನಿರ್ಧರಿಸಿದ್ದು, ಈಗಾಗಲೇ ಡೀಸೆಲ್ ಕಾರುಗಳಿಗೆ ಬುಕಿಂಗ್ ಸಲ್ಲಿಸಿರುವ ಗ್ರಾಹಕರನ್ನು ಹೊರತುಪಡಿಸಿ ಮುಂಬರುವ ದಿನಗಳಲ್ಲಿ ಬುಕಿಂಗ್ ಸಲ್ಲಿಸುವ ಗ್ರಾಹಕರಿಗೆ ಪೆಟ್ರೋಲ್ ವೆರಿಯೆಂಟ್‌ಗಳು ಮಾತ್ರ ಖರೀದಿಗೆ ಲಭ್ಯವಿರಲಿವೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಹೈಬ್ರಿಡ್ ಕಾರುಗಳ ಉತ್ಪಾದನೆಯಲ್ಲಿ ಟೊಯೊಟಾ ಕಂಪನಿಯು ಈಗಾಗಲೇ ಸಾಕಷ್ಟು ಮುನ್ನಡೆ ಕಾಯ್ದುಕೊಂಡಿದ್ದು, ಡೀಸೆಲ್ ಮಾದರಿಗಳನ್ನು ಸ್ಥಗಿತಗೊಳಿಸಿದರೂ ಸಹ ಹೈಬ್ರಿಡ್ ಮಾದರಿಗಳ ಮೂಲಕ ಡೀಸೆಲ್ ಕಾರುಗಳ ಅಲಭ್ಯತೆಯನ್ನು ಸರಿದೂಗಿಸುವ ನೀರಿಕ್ಷೆಯಲ್ಲಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್ ಬಿಡುಗಡೆ

ಪ್ರಸ್ತುತ ಮಾರುಕಟ್ಟೆಯಲ್ಲಿ ಜಿ, ಜಿ ಪ್ಲಸ್, ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಇನೋವಾ ಕ್ರಿಸ್ಟಾ ಕಾರು ಮಾದರಿಯು 2.7-ಲೀಟರ್ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 17.86 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 26.54 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Toyota introduced innova crysta limited edition details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X