Just In
- 8 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 9 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 10 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 10 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Lifestyle
Today Rashi Bhavishya: ಗುರುವಾರದ ದಿನ ಭವಿಷ್ಯ: ಕರ್ಕ, ಕನ್ಯಾ, ಕುಂಭ, ಮೀನ ರಾಶಿಯವರಿಗೆ ಉತ್ತಮ ದಿನ
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರ್ಚ್ ಅವಧಿಯಲ್ಲಿ ಕಾರು ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟೊಯೊಟಾ
ಕೋವಿಡ್ ಪರಿಣಾಮ ತಗ್ಗಿದ್ದ ಹೊಸ ವಾಹನ ಮಾರಾಟವು ಇದೀಗ ಸಾಕಷ್ಟು ಸುಧಾರಿಸಿದ್ದು, ಕಳೆದ ತಿಂಗಳು ಪ್ರಮುಖ ಕಾರು ಕಂಪನಿಗಳು ಉತ್ತಮ ಬೇಡಿಕೆ ಪಡೆದುಕೊಂಡಿವೆ. ಟೊಯೊಟಾ ಕಂಪನಿಯು ಸಹ ಸುಮಾರು ಮಾರ್ಚ್ ಅವಧಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಕಂಪನಿಯು ಕಳೆದು ತಿಂಗಳು 17,131 ಯುನಿಟ್ ಮಾರಾಟ ಮಾಡಿದೆ.

ಹೊಸ ವಾಹನ ಮಾರಾಟದ ಮೇಲೆ ಕೋವಿಡ್ ನಂತರ ಸೆಮಿಕಂಡಕ್ಟರ್ ಕೊರತೆಯು ಆಟೋ ಉತ್ಪಾದನಾ ಕಂಪನಿಗಳಿಗೆ ಕೆಲ ತಿಂಗಳಿನಿಂದ ಭಾರೀ ಹೊಡೆತ ನೀಡಿದ್ದವು. ಇದೀಗ ಪರಿಸ್ಥಿತಿ ಸುಧಾರಿಸುತ್ತಿದ್ದು, ಟೊಯೊಟಾ ಸೇರಿದಂತೆ ಪ್ರಮುಖ ಕಾರು ಕಂಪನಿಗಳ ಮಾರಾಟ ಪ್ರಮಾಣದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಟೊಯೊಟಾ ಕಂಪನಿಯು ಕಳೆದ ತಿಂಗಳು ಮಾರ್ಚ್ ಅವಧಿಯಲ್ಲಿ 17,131 ಯುನಿಟ್ ಮಾರಾಟ ಮಾಡುವ ಮೂಲಕ ಕಳೆದ ವರ್ಷದ ಮಾರ್ಚ್ ಅವಧಿಗಿಂತ ಶೇ. 58 ರಷ್ಟು ಬೆಳವಣಿಗೆ ಸಾಧಿಸಿದ್ದು, ಹೊಸ ಕಾರು ಮೂಲಕ ಭರ್ಜರಿ ಬೇಡಿಕೆ ಪಡೆದುಕೊಂಡಿದೆ.

2022ರ ಮಾರ್ಚ್‌ನಲ್ಲಿ ಮಾರಾಟ ಮಾಡಿದ ಕಾರುಗಳ ಸಂಖ್ಯೆಯು ಟೊಯೊಟಾ ಇಂಡಿಯಾ ಕಂಪನಿಗೆ ಹೊಸ ದಾಖಲೆಯಾಗಿದ್ದು, ಕಳೆದ 5 ವರ್ಷಗಳಲ್ಲಿ ಮೊದಲ ಬಾರಿಗೆ ಕಂಪನಿಯು ಪ್ರತಿ ತಿಂಗಳ ಕಾರು ಮಾರಾಟದಲ್ಲಿ 17 ಸಾವಿರ ಯುನಿಟ್ ಗಡಿದಾಟಿದೆ.

ಟೊಯೊಟಾ ಕಂಪನಿಯು ಸದ್ಯ ರೀಬ್ಯಾಡ್ಜ್ ಕಾರು ಮಾದರಿಗಳು ಸೇರಿದಂತೆ ಕೆಲವೇ ಕೆಲವು ಕಾರು ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ದುಬಾರಿ ಬೆಲೆ ನಡುವೆಯೂ ಟೊಯೊಟಾ ಪ್ರಮುಖ ಕಾರು ಮಾದರಿಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ಕಂಪನಿಯು ಇತ್ತೀಚೆಗೆ ಗ್ಲಾಂಝಾ ಹೊಸ ಮಾದರಿಯ ಬಿಡುಗಡೆಯ ನಂತರ ಮತ್ತೊಂದು ಬಹುನೀರಿಕ್ಷಿತ ಕಾರು ಮಾದರಿಯಾದ ಹೈಲಕ್ಸ್ ಪಿಕ್ಅಪ್ ಮಾದರಿಯನ್ನು ಭಾರತದಲ್ಲಿ ಪರಿಚಯಿಸಿದ್ದು, ಹೊಸ ಪಿಕ್ಅಪ್ ಮಾದರಿಯು ಭಾರತದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಟೊಯೊಟಾ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯನ್ನು ಆಧರಿಸಿ ಜಾಗತಿಕ ಮಾರುಕಟ್ಟೆಗಳಲ್ಲಿನ ಪ್ರಮುಖ ಕಾರು ಮಾದರಿಗಳನ್ನು ಭಾರತದಲ್ಲೂ ಬಿಡುಗಡೆ ಮಾಡುತ್ತಿದ್ದು, ಹೊಸ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು ಬಿಡದಿ ಕಾರು ಉತ್ಪಾದನಾ ಘಟಕದಲ್ಲಿಯೇ ಉತ್ಪಾದನೆ ಆರಂಭಿಸಿದೆ.

ಹೊಸ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು 4x4 ಸ್ಟ್ಯಾಂಡರ್ಡ್ ಮತ್ತು 4x4 ಹೈ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದ್ದು, 4x4 ಸ್ಟ್ಯಾಂಡರ್ಡ್ ಮಾದರಿಯು ಕೇವಲ ಮ್ಯಾನುವಲ್ ಆವೃತ್ತಿ ಖರೀದಿಗೆ ಲಭ್ಯವಿದ್ದರೆ 4x4 ಹೈ ಮಾದರಿಯಲ್ಲಿ ಕಂಪನಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿದೆ.

ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ 4x4 ಸ್ಟ್ಯಾಂಡರ್ಡ್ ಮ್ಯಾನುವಲ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 34 ಲಕ್ಷ ಬೆಲೆ ಹೊಂದಿದ್ದರೆ 4x4 ಹೈ ಮ್ಯಾನುವಲ್ ಮಾದರಿಯು ರೂ. 35.80 ಲಕ್ಷ ಮತ್ತು 4x4 ಹೈ ಆಟೋಮ್ಯಾಟಿಕ್ ಮಾದರಿಯು ರೂ. 36.80 ಲಕ್ಷ ಬೆಲೆ ಹೊಂದಿದೆ.

ಹೊಸ ಪಿಕ್ಅಪ್‌ನಲ್ಲಿ ಟೊಯೊಟಾ ಕಂಪನಿಯು ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆ ಮಾಡಿದ್ದು, 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

4x4 ಡ್ರೈವ್‌ಟ್ರೈನ್‌ನೊಂದಿಗೆ ಮ್ಯಾನುವಲ್ ಮಾದರಿಯು 204 ಬಿಎಚ್‌ಪಿ, 420 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ ಆಟೋಮ್ಯಾಟಿಕ್ ಮಾದರಿಯು 204 ಬಿಎಚ್‌ಪಿ, 500 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಗಮನಾರ್ಹವಾದ ರಸ್ತೆ ಉಪಸ್ಥಿತಿಯೊಂದಿಗೆ ಆನ್ ರೋಡ್ ಮತ್ತು ಆಫ್ ರೋಡ್ ಎರಡರಲ್ಲೂ ಗಮನಸೆಳೆಯಲಿದೆ.

ಹೈಲಕ್ಸ್ ಪಿಕ್ಅಪ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಎಂಪಿವಿ ಮತ್ತು ಫಾರ್ಚೂನರ್ ಎಸ್‌ಯುವಿ ನಡುವಿನ ಸ್ಥಾನ ಹೊಂದಿದ್ದು, ಹೊಸ ಇನೋವೆಟಿವ್ ಮಲ್ಟಿ ಪರ್ಪಸ್ ವೆಹಿಕಲ್(ಐಎಂವಿ2) ಆರ್ಕಿಟೆಕ್ಚರ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿದೆ.

1968ರಿಂದಲೇ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳುತ್ತಿರುವ ಹೈಲಕ್ಸ್ ಪಿಕ್ಅಪ್ ಮಾದರಿಯು ಟೊಯೊಟಾ ಕಂಪನಿಯ ಯಶಸ್ವಿ ಕಾರು ಮಾದರಿಗಳಲ್ಲಿ ಒಂದಾಗಿದ್ದು, 180ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮಾರಾಟಗೊಳ್ಳುತ್ತಿರುವ ಹೈಲಕ್ಸ್ ಪಿಕ್ಅಪ್ ಇದುವರೆಗೆ ಸುಮಾರು 2 ಕೋಟಿ ಯುನಿಟ್ ಮಾರಾಟ ದಾಖಲೆ ಹೊಂದಿದೆ.