ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ಕಂಪನಿಯು 2021ರ ಡಿಸೆಂಬರ್ ತಿಂಗಳ ಮಾಸಿಕ ಮಾರಾಟದ ಅಂಕಿ ಅಂಶಗಳ ವರದಿಯನ್ನು ಬಿಡುಗಡೆ ಮಾಡಿದೆ, ಈ ವರದಿ ಪ್ರಕಾರ, ಟೊಯೊಟಾ ಕಂಪನಿಯು ಕಳೆದ ತಿಂಗಳು ಭಾರತದಲ್ಲಿ 10,832 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

2020ರ ಡಿಸೆಂಬರ್ ತಿಂಗಳಲ್ಲಿ ಟೊಯೊಟಾ ಕಂಪನಿಯು 7,487 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.45 ರಷ್ಟು ಬೆಳವಣಿಗೆಯನ್ನು ಕಂಡಿದೆ. 2021ರ ವರ್ಷದಲ್ಲಿ ಜಪಾನಿನ ಕಾರು ತಯಾರಕರು ಭಾರತದಲ್ಲಿ 1,30,768 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ, ಇನ್ನು 2020ರ ವರ್ಷದಲ್ಲಿ 76,111 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ವರ್ಷದ ಮಾರಾಟಕ್ಕೆ ಹೋಲಿಸಿದರೆ ವಾರ್ಷಿಕ ಮಾರಾಟದಲ್ಲಿ ಶೇ.72 ರಷ್ಟು ಬೆಳವಣಿಗೆಯಾಗಿದೆ.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

2020ರಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮತ್ತು ಇತರ ಕರೋನಾ ಸಂಬಂಧಿತ ಸವಾಲುಗಳೊಂದಿಗೆ ಮಾರುಕಟ್ಟೆ ಪರಿಸ್ಥಿತಿಯು ವಿಭಿನ್ನವಾಗಿದೆ ಎಂಬ ಅಂಶವನ್ನು ನಾವು ಪರಿಗಣಿಸಬೇಕಾಗಿದೆ. ವಾಸ್ತವವಾಗಿ, ಆಟೋ ಉದ್ಯಮವು 2020ರ ಏಪ್ರಿಲ್ ತಿಂಗಳಿನಲ್ಲಿ ಶೂನ್ಯ ಮಾರಾಟಕ್ಕೆ ಸಾಕ್ಷಿಯಾಗಿದೆ, ಆದ್ದರಿಂದ, ಈ ಬೃಹತ್ ಬೆಳವಣಿಗೆಯಲ್ಲಿ ಈ ಅಂಶಗಳನ್ನು ಕೂಡ ಪರಿಗಣಿಸಬೇಕು.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಕೊರೊನಾ ವೈರಸ್‌ನ ಎರಡನೇ ಅಲೆ ಮತ್ತು ಸೆಮಿಕಂಡಕ್ಟರ್ ಚಿಪ್‌ಗಳಿಗೆ ಜಾಗತಿಕ ಕೊರತೆಯಂತಹ ತನ್ನದೇ ಆದ ಸವಾಲುಗಳನ್ನು 2021ರಲ್ಲಿ ಎದುರಿಸುತ್ತಿದೆ ಎಂದು ಹೇಳಿದರು. ಅದರೆ ರ್ಷದ ದ್ವಿತೀಯಾರ್ಧದಲ್ಲಿ ಬೇಡಿಕೆ ಹೆಚ್ಚಾಯಿತು ಮತ್ತು ಪೂರ್ವ ಕೋವಿಡ್ ಸಮಯಕ್ಕೆ ಮರಳುತ್ತಿದೆ ಎಂದು ಟೊಯೋಟಾ ಹೇಳಿದೆ. 2021ರ ಡಿಸೆಂಬರ್ ತಿಂಗಳಿನಲ್ಲಿ ಟೊಯೊಟಾ ಇಡೀ ವರ್ಷಕ್ಕೆ ಹೆಚ್ಚಿನ ಗ್ರಾಹಕ ಆರ್ಡರ್‌ಗಳನ್ನು ನೋಂದಾಯಿಸಿದೆ.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಟೊಯೊಟಾ ಕಂಪನಿಯ ಮಾರ್ಕೆಟಿಂಗ್‌ನ ಅಸೋಸಿಯೇಟ್ ಜನರಲ್ ಮ್ಯಾನೇಜರ್ ವೈಸ್‌ಲೈನ್ ಸಿಗಮಣಿ ಮಾತನಾಡಿ, ನಾವು ಹೊಸ ಪ್ರಾರಂಭದೊಂದಿಗೆ ವರ್ಷವನ್ನು ಪ್ರಾರಂಭಿಸಿದ್ದೇವೆ ಮತ್ತು ಚೇತರಿಕೆಯ ಹೊಸ ಭರವಸೆಯನ್ನು ಹೊಂದಿದ್ದೇವೆ. ಕಳೆ ದವರ್ಷ ವರ್ಷದ ಉತ್ತರಾರ್ಧದಲ್ಲಿ ಬೇಡಿಕೆಯು ಹೆಚ್ಚಾಯಿತು ಮತ್ತು ಇದು ಆರಂಭದಲ್ಲಿ ಬೇಡಿಕೆಯನ್ನು ಹೆಚ್ಚಿಸಲು ಸಹಾಯ ಮಾಡುವ ಅಂಶಗಳಿಗೆ ಕಾರಣವಾಗಿದೆ ಎಂದು ಹೇಳಿದರು.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಜಪಾನಿನ ಕಾರು ತಯಾರಕ ಟೊಯೊಟಾ ಈ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಹೊಸ ಮಾದರಿಗಳನ್ನು ಪರಿಚಯಿಸಲು ಯೋಜಿಸಿದೆ. ಬಿಡುಗಡೆಯಾಗಲಿರುವ ಹೊಸ ಟೊಯೊಟಾ ಕಾರುಗಳ ಬಗ್ಗೆ ಖರೀದಿದಾರರಲ್ಲಿ ನಿರೀಕ್ಷೆಯು ಸಾಕಷ್ಟು ಹೆಚ್ಚಾಗಿದೆ. ಈಗಗಾಲೇ ಟೊಯೊಟಾ ಕಂಪನಿಯು ಬಹುತೇಕ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಇದರ ನಡುವೆ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಿ ಟೊಯೊಟಾ ವಾಹನ ಮಾರಾಟದ ಸಂಖ್ಯೆ ಹೆಚ್ಚಿಸಲು ಸಜ್ಜಾಗುತ್ತಿದೆ, ಟೊಯೊಟಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಹಿಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಪಿಕ್ಅಪ್ ಟ್ರಕ್ ಈಗಾಗಲೇ ಡೀಲರ್‌ಶಿಪ್‌ಗಳಿಗೆ ಆಗಮಿಸಲು ಪ್ರಾರಂಭಿಸಿದೆ.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಇನ್ನು ಟೊಯೊಟಾ ಮುಂದಿನ ವರ್ಷ ಭಾರತದಲ್ಲಿ ಮಾರುತಿ ಸುಜುಕಿ ಸಿಯಾಜ್ ಆಧಾರಿತ ಕಾಂಪ್ಯಾಕ್ಟ್ ಸೆಡಾನ್ ಅನ್ನು ಪರಿಚಯಿಸಲು ಯೋಜಿಸಿದೆ. ಈಗ ಸ್ಥಗಿತಗೊಂಡಿರುವ ಯಾರಿಸ್ ಬದಲಿಗೆ ಇದು ಹೆಜ್ಜೆ ಹಾಕಲಿದೆ. ಜಪಾನಿನ ಕಾರು ತಯಾರಕರು ಟೊಯೋಟಾ ಬೆಲ್ಟಾವನ್ನು ಮಧ್ಯಪ್ರಾಚ್ಯ ಮಾರುಕಟ್ಟೆಗಳಿಗಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಈ ಕಾರು ಸಿಯಾಜ್ ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಅಂಶಗಳನ್ನು ಪಡೆಯಲಿದೆ,

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಟೊಯೊಟಾ ಬೆಲ್ಟಾವು ಮಾರುತಿ ಸೆಡಾನ್‌ನಂತೆಯೇ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ರೀಬ್ಯಾಡ್ಜ್ ಆವೃತ್ತಿಯಲ್ಲಿ ಟೊಯೊಟಾ ಬ್ಯಾಡ್ಜ್ ಸೇರಿದಂತೆ ಮುಂಭಾಗದ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ. ಮೂಲ ಮಾದರಿಗಿಂತ ರೀಬ್ಯಾಡ್ಜ್ ಕಾರನ್ನು ತುಸು ಆಕರ್ಷಕಗೊಳಿಸುವುದಕ್ಕಾಗಿ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಟೊಯೊಟಾ ರೀಬ್ಯಾಡ್ಜ್ ಕಾರು ಮೂಲ ಸಿಯಾಜ್ ಕಾರು ಮಾದರಿಗಿಂತಲೂ ತುಸು ದುಬಾರಿಯಾಗಲಿದೆ.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಟೊಯೊಟಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ರೂಮಿಯನ್ ಹೆಸರಿಗಾಗಿ ಟ್ರೇಡ್‌ಮಾರ್ಕ್ ಅರ್ಜಿಯನ್ನು ಸಲ್ಲಿಸಿದೆ. ಇದರಿಂದ 7-ಸೀಟರ್ ಎಂಪಿವಿಯನ್ನು ಭಾರತದಲ್ಲಿ ಅದೇ ಹೆಸರಿನಲ್ಲಿ ಪರಿಚಯಿಸಲಾಗುವುದು ಎಂದು ತಿಳಿಯುತ್ತದೆ. ಆದರೆ ಟೊಯೊಟಾ ಕಂಪನಿಯು ಇದರ ಬಗ್ಗೆ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ. ಎಂಪಿವಿ ಮಾದರಿಗಳಿಗೆ ಭಾರತದಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ,

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಅಲ್ಲದೇ ಕೈಗೆಟುಕು ದರದಲ್ಲಿ ಹೊಸ ಎಂಪಿವಿಯನ್ನು ಬಿಡುಗಡೆಗೊಳಿಸಿ ಮಾರಾಟವನ್ನು ಹೆಚ್ಚಿಸಿ ತಂತ್ರವನ್ನು ಹೊಂದಿರಬಹುದು. ಟೊಯೊಟಾ ರೂಮಿಯನ್ ಎಂದು ಕರೆಯಲ್ಪಡುವ ಹೊಸ ಎಂಪಿವಿ ಭಾರತದಲ್ಲಿ ಮಾರಾಟದಲ್ಲಿರುವ ಮಾರುತಿ ಸುಜುಕಿ ಎರ್ಟಿಗಾವನ್ನು ಹೋಲುತ್ತದೆ. ಈ ಹೊಸ ಟೊಯೊಟಾ ರೂಮಿಯನ್ ಎಂಪಿವಿ ತನ್ನನ್ನು ಮಾರುತಿ ಎರ್ಟಿಗಾದಿಂದ ಪ್ರತ್ಯೇಕಿಸಲು ಕೆಲವು ಬದಲಾವಣೆಗಳನ್ನು ಮಾಡಬಹುದು ಎಂದು ನಿರೀಕ್ಷಿಸುತ್ತೇವೆ.

ಡಿಸೆಂಬರ್ ತಿಂಗಳ ಕಾರು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ Toyota

ಟೊಯೊಟಾ ಮತ್ತು ಮಾರುತಿ ಸುಜುಕಿ ಕಂಪನಿಗಳು ಜಂಟಿಯಾಗಿ ಹೊಸ ಮಿಡ್ ಎಸ್‍ಯುವಿಯನ್ನು ಅಭಿವೃದ್ಧಿಪಡಿಸುತ್ತಿವೆ. ಇದು ಈ ವರ್ಷ ಆಗಮಿಸಲಿದೆ. ಇದು ಟೊಯೊಟಾದ DNGA ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಅರ್ಬನ್ ಕ್ರೂಸರ್ ಮತ್ತು ಫಾರ್ಚುನರ್ ನಡುವೆ ಸ್ಥಾನವನ್ನು ಪಡೆದುಕೊಳ್ಳುತ್ತದೆ. ಹೊಸ ಮಾದರಿಗಳ ಮೂಲಕ ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಪ್ರಸ್ತುತ ಟೊಯೊಟಾ ಕಾರುಗಳು ಮಾರಾಟದಲ್ಲಿ ಕಂಪನಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ.

Most Read Articles

Kannada
Read more on ಟೊಯೊಟಾ toyota
English summary
Toyota kirloskar sales 10832 units in december 2021 45 percent growth details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X