Just In
- 1 hr ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 1 hr ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
- 1 hr ago
ಕಡಿಮೆ ಮೊತ್ತಕ್ಕೆ ಲೀಸ್ಗೆ ಸಿಗಲಿದೆ ಫೋಕ್ಸ್ವ್ಯಾಗನ್ ವರ್ಟಸ್ ಕಾರು
- 4 hrs ago
ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್
Don't Miss!
- Lifestyle
ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಕೆಲಸಕ್ಕಂತೂ ಅಲ್ಪ ವಿರಾಮ ನೀಡಲೇಬೇಕು..!
- Movies
ಹೊಸ ಬಿಗ್ಬಾಸ್ಗೆ ನಾಗಾರ್ಜುನ ಪಡೆಯುತ್ತಿರುವ ಸಂಭಾವನೆ ಇಷ್ಟೋಂದಾ?
- News
ಕೃಷ್ಣ ಜನ್ಮಾಷ್ಟಮಿ: ಮುಂಬೈನಲ್ಲಿ ವಿಶ್ವ ದಾಖಲೆ ಬರೆದ ಅತಿ ಎತ್ತರದ ಮಾನವ ಪಿರಮಿಡ್
- Sports
Anil Kumble: ಪಂಜಾಬ್ ಕಿಂಗ್ಸ್ ಕೋಚ್ ಸ್ಥಾನದಿಂದ ಕನ್ನಡಿಗ ಕುಂಬ್ಳೆ ಔಟ್; ಬೇರೆ ಕೋಚ್ ಆಯ್ಕೆ!
- Technology
ಲೆನೊವೊ ಲೀಜನ್ Y70 ಸ್ಮಾರ್ಟ್ಫೋನ್ ಬಿಡುಗಡೆ!..68W ವೇಗದ ಚಾರ್ಜಿಂಗ್!
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ವಂಡರ್ಲಾ ಬೆಂಗಳೂರಿನಲ್ಲಿರುವ ವಿಶಿಷ್ಟ ಅಮ್ಯೂಸ್ಮೆಂಟ್ ಪಾರ್ಕ್ ಆಗಿದೆ.
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
ಹ್ಯುಂಡೈ ಕ್ರೆಟಾಗೆ ಸೆಡ್ಡು ಹೊಡೆಯಲು ಬರುತ್ತಿದೆ ಟೊಯೊಟಾ ಹೈರೈಡರ್ ಎಸ್‌ಯುವಿ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಮಿಡ್ ಸೈಜ್ ಎಸ್‍ಯುವಿಯ ಮೊದಲ ಟೀಸರ್ ವೀಡಿಯೋವನ್ನು ಬಿಡುಗಡೆ ಮಾಡಿದೆ, ಈ ಹೊಸ ಟೊಯೊಟಾ ಎಸ್‍ಯುವಿಯು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್‌ಗೆ ಪೈಪೋಟಿ ನೀಡುತ್ತದೆ.

ಹೊಸ ಟೊಯೊಟಾ ಎಸ್‍ಯುವಿಗೆ ಅರ್ಬನ್ ಕ್ರೂಸರ್ ಹೈರೈಡರ್ ಅಥವಾ ಟೊಯೊಟಾ ಹೈರೈಡರ್ ಎಂಬ ಹೆಸರನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಎಸ್‍ಯುವಿಯ ಉತ್ಪಾದನೆಯು ಜುಲೈ 1 ರಿಂದ ಆರಂಭವಾಗಲಿದೆ. ಇದರ ಉತ್ಪಾದನೆಯು ಕರ್ನಾಟಕದ ಬಿಡದಿಯಲ್ಲಿರುವ ಟೊಯೊಟಾ ಉತ್ಪಾದನೆ ಘಟಕದಲ್ಲಿ ಉತ್ಪಾದಿಸಲಾಗುತ್ತದೆ. ಹೊಸ ಟೊಯೊಟಾ ಎಸ್‌ಯುವಿ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಮಾರುಕಟ್ಟೆ ಬಿಡುಗಡೆಗಯಾಗುವ ಸಾಧ್ಯತೆಗಳಿದೆ.

ಅಧಿಕೃತ ಟೀಸರ್ ನಲ್ಲಿ ಸ್ಪೋರ್ಟಿ ಬ್ಲ್ಯಾಕ್ ಮಾದರಿಯೊಂದಿಗೆ ಹೊಸದಾಗಿ ವಿನ್ಯಾಸಗೊಳಿಸಲಾದ ಗ್ರಿಲ್, ಎಲ್ಇಡಿ DRL ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಬ್ಲ್ಯಾಕ್ ORVM ಗಳು, ಬಾಡಿ ಬಣ್ಣದಲ್ಲಿರುವ ಡೋರ್ ಹ್ಯಾಂಡಲ್‌ಗಳು, ಸ್ಪೋರ್ಟಿ ರಿಯರ್ ಸ್ಪೋಲಿಯರ್ ಮತ್ತು ನಯವಾದ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ತೋರಿಸಲಾಗಿದೆ.

ಹೊಸ ಟೊಯೊಟಾ ಎಸ್‍ಯುವಿಯ ಮುಂಭಾಗದ ಗ್ರಿಲ್‌ನ ಮೇಲ್ಭಾಗದಲ್ಲಿ ಮತ್ತು ಎಸ್‍ಯುವಿಯ ಮುಂಭಾಗದ ಮಧ್ಯದಲ್ಲಿ ಸಿಗ್ನೇಚರ್ ಬ್ಯಾಡ್ಜ್ ಅನ್ನು ಒಳಗೊಂಡಿರುವ ಸ್ಪ್ಲಿಟ್ ಕ್ರೋಮ್ ಬಾರ್‌ಗಳೊಂದಿಗೆ ಬ್ಲ್ಯಾಕ್ ಫಿನಿಶಿಂಗ್ ಅನ್ನು ನೋಡಬಹುದು.

ಮಾರುತಿ ವಿಟಾರಾ ಬ್ರೆಝಾ, ಎಸ್-ಕ್ರಾಸ್ ಮತ್ತು ಗ್ಲೋಬಲ್-ಸ್ಪೆಕ್ ವಿಟಾರಾ ಎಸ್‌ಯುವಿಯನ್ನು ಸಹ ಆಧಾರವಾಗಿರುವ ಸುಜುಕಿಯ ಗ್ಲೋಬಲ್-ಸಿ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಟೊಯೋಟಾ ಹೈರೈಡರ್ ಎಸ್‌ಯುವಿ ವಿನ್ಯಾಸಗೊಳಿಸಲಾಗುವುದು ಎಂದು ವರದಿಗಳು ಸೂಚಿಸುತ್ತವೆ.

ಮುಂಬರುವ ಹೊಸ ಮಿಡ್ ಸೈಜ್ ಎಸ್‍ಯುವಿ ಹೈಬ್ರಿಡ್ ಪವರ್‌ಟ್ರೇನ್‌ನೊಂದಿಗೆ ಬರಲಿದೆ ಎಂದು ವಾಹನ ತಯಾರಕರು ದೃಢಪಡಿಸಿದ್ದಾರೆ. ಈ ಎಸ್‍ಯುವಿಯಲ್ಲಿ 1.5 ಲೀಟರ್ K15C ಡ್ಯುಯಲ್ ಜೆಟ್ ನ್ಯಾಚುರಲ್ ಆಸ್ಪೈರಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಇದು ಮೈಲ್ಡ್ ಮತ್ತು ಬಲವಾದ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ನೀಡಲಾಗುವುದು.

ಮೈಲ್ಡ್ ಹೈಬ್ರಿಡ್ ಆವೃತ್ತಿಯು 103 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎರಡನೆಯದು 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಗೇರ್ ಬಾಕ್ಸ್ ವಿಷಯದಲ್ಲಿ, ಟೊಯೊಟಾ ಹೈರೈಡರ್ ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್ ಅನ್ನು ಹೊಂದಿರುತ್ತದೆ. ಮೈಲ್ದ್ ಹೈಬ್ರಿಡ್ ರೂಪಾಂತರಗಳು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳೊಂದಿಗೆ ಬರುತ್ತವೆ,

ಬಲವಾದ ಹೈಬ್ರಿಡ್ ಆವೃತ್ತಿಯು ಇ-ಸಿವಿಟಿ ಗೇರ್‌ಬಾಕ್ಸ್‌ನೊಂದಿಗೆ ಪ್ರತ್ಯೇಕವಾಗಿ ಲಭ್ಯವಿರುತ್ತದೆ. ಫ್ಹೋರ್ ವ್ಹೀಲ್ ಡ್ರೈವ್ ಮತ್ತು ಆಲ್ ವ್ಹೀಲ್ ಡ್ರೈವ್ ಎರಡು ಡ್ರೈವ್‌ಟ್ರೇನ್ ಸಿಸ್ಟಂಗಳು ಆಫರ್‌ನಲ್ಲಿರುತ್ತವೆ. ಪ್ರಬಲವಾದ ಹೈಬ್ರಿಡ್ ಪವರ್‌ಟ್ರೇನ್ ಅನ್ನು ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಮತ್ತು ಸ್ಪೆಲ್ಫ್ ಚಾರ್ಜಿಂಗ್ ಸಿಸ್ಟಂನೊಂದಿಗೆ ನೀಡಲಾಗುತ್ತದೆ, ಮುಂಬರುವ ಟೊಯೊಟಾ ಹೈರೈಡರ್ ಎಸ್ಯುವಿ ಅಧಿಕೃತ ವಿವರಗಳನ್ನು ಜುಲೈ 1 ರಿಂದ ಬಹಿರಂಗಪಡಿಸಲಾಗುವುದು.

ಹುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್‌ಗೆ ಪ್ರತಿಸ್ಪರ್ಧಿಯಾಗಲಿರುವ ಟೊಯೊಟಾ ಮತ್ತು ಮಾರುತಿ ಸುಜುಕಿಯಿಂದ ಕಾಂಪ್ಯಾಕ್ಟ್ ಎಸ್‌ಯುವಿ ಜಂಟಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಕಷ್ಟು ಊಹೆಗಳಿವೆ. ಎರಡೂ ಬ್ರಾಂಡ್‌ಗಳು ಹೈಬ್ರಿಡ್ ಎಸ್‌ಯುವಿಯನ್ನು ಸಹ-ಅಭಿವೃದ್ಧಿಪಡಿಸಿದ್ದರೂ, ಟೊಯೊಟಾದ ಹೈಬ್ರಿಡ್ ಎಸ್‌ಯುವಿ ಆವೃತ್ತಿಯು ಮಾರುತಿ ಸುಜುಕಿಯ ಆವೃತ್ತಿಗಿಂತ ಸ್ವಲ್ಪ ಮುಂಚಿತವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಇನ್ನು ವೈಶಿಷ್ಟ್ಯಗಳ ವಿಷಯದಲ್ಲಿ, ಮುಂಬರುವ ಟೊಯೊಟಾ ಹೈರೈಡರ್ ಎಸ್‍ಯುವಿಯು 9.0 ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯುನಿಟ್, ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಕನೆಕ್ಟೆಡ್ ಕಾರ್ ಟೆಕ್, 360-ಡಿಗ್ರಿ ಸರೌಂಡ್-ವ್ಯೂ ಮುಂತಾದ ವೈಶಿಷ್ಟ್ಯಗಳನ್ನು ಒಳಗೊಂಡಿರುವ ದೀರ್ಘ ವೈಶಿಷ್ಟ್ಯಗಳ ಪಟ್ಟಿ ಸಾಧ್ಯತೆಯಿದೆ. ಇದರ ಕ್ಯಾಮೆರಾ, ಕ್ಲೈಮೆಂಟ್ ಕಂಟ್ರೋಲ್, ವೈರ್ವೈರ್‌ಲೆಸ್ ಚಾರ್ಜಿಂಗ್, ಏರ್ ಪ್ಯೂರಿಫೈಯರ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಇನ್ನಷ್ಟನ್ನು ಒಳಗೊಂಡಿದೆ. ಅದರ ಜೊತೆಗೆ, ಟೊಯೊಟಾ ಹೈರೈಡರ್ ಹೈಬ್ರಿಡ್ ಮತ್ತು ಮಾರುತಿ ಸುಜುಕಿ YFG ಎಸ್‍ಯುವಿ ಎರಡನ್ನೂ 6 ಏರ್‌ಬ್ಯಾಗ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಒಳಗೊಂಡಿರುತ್ತವೆ

ಈ ಎಸ್‍ಯುವಿಯಲ್ಲಿ ಎಬಿಎಸ್, ಇಬಿಡಿ, ಟ್ರಾಕ್ಷನ್ ಕಂಟ್ರೋಲ್ (TC), ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ಎಲೆಕ್ಟ್ರಾನಿಕ್ ಸುರಕ್ಷತಾ ವ್ಯವಸ್ಥೆಗಳೊಂದಿಗೆ ಬರುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ. ಸ್ಟೆಬಿಲಿಟಿ ಪ್ರೋಗ್ರಾಂ (ESP), ಹಿಂಭಾಗದ ಪಾರ್ಕಿಂಗ್ ಸೆನ್ಸರ್ ಗಳು, ಹಿಂಬದಿಯ ವೀಕ್ಷಣೆ ಕ್ಯಾಮೆರಾ ಮತ್ತು ಇನ್ನಷ್ಟು ಹೊಂದಿದೆ. ಇತ್ತೀಚೆಗೆ, ದೇಶದಲ್ಲಿ ಹೈಬ್ರಿಡ್ ವಾಹನಗಳನ್ನು ಉತ್ತೇಜಿಸಲು ಟೊಯೊಟಾ ಭಾರತದಲ್ಲಿ 'ಹಮ್ ಹೈ ಹೈಬ್ರಿಡ್' ಅಭಿಯಾನವನ್ನು ಬಿಡುಗಡೆ ಮಾಡಿತು. ಇದಲ್ಲದೆ, ಮುಂಬರುವ ಟೊಯೋಟಾ ಹೈರೈಡರ್ ಹೈಬ್ರಿಡ್ ಎಸ್‌ಯುವಿಗೆ ಬಲವಾದ ಅಡಿಪಾಯವನ್ನು ಹಾಕುವ ಗುರಿಯನ್ನು ಈ ಅಭಿಯಾನ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಹೊಸ ಟೊಯೊಟಾ ಹೈರೈಡರ್ ಎಸ್‌ಯುವಿಯು ಬಿಡುಗಡೆಯ ಬಳಿಕ ಹೆಚ್ಚಿನ ಗ್ರಾಹಕರನ್ನು ಆಕರ್ಷಿಸುವುದಲ್ಲದೆ, ಇದು ಬ್ರ್ಯಾಂಡ್ ಇಮೇಜ್ ಸುಧಾರಿಸುತ್ತದೆ. ಹೆಚ್ಚುತ್ತಿರುವ ಇಂಧನ ಬೆಲೆಗಳಿಂದ ಗ್ರಾಹಕರು ಹೈಬ್ರಿಡ್ ವಾಹನಗಳನ್ನು ಖರೀದಿಸುತ್ತಿದ್ದಾರೆ. ಹೊಸ ಟೊಯೊಟಾ ಹೈರೈಡರ್ ಎಸ್‌ಯುವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಯಾಗಬಹುದು. ಈ ಟೊಯೊಟಾ ಹೈರೈಡರ್ ಎಸ್ಯುವಿ ಅಧಿಕೃತ ವಿವರಗಳನ್ನು ಜುಲೈ 1 ರಿಂದ ಬಹಿರಂಗವಾಗಲಿದೆ.