Just In
Don't Miss!
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಹೊಸ ಟೊಯೊಟಾ ಗ್ಲಾಂಝಾ ಕಾರಿನ ಆಕರ್ಷಕ ಟಿವಿಸಿ ಬಿಡುಗಡೆ
ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಇತ್ತೀಚೆಗೆ ನವೀಕರಿಸಿದ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಹೊಸ ಮಾರುತಿ ಬಲೆನೊ ಕಾರು ಬಿಡುಗಡೆಯಾದ ಬಳಿಕ ಟೊಯೊಟಾ ಗ್ಲಾಂಝಾ ಕಾರು ಬಿಡುಗಡೆಯಾಗಿದೆ.

ಹೊಸ ಟೊಯೊಟಾ ಗ್ಲಾಂಝಾ ಕಾರಿನ ಆರಂಭಿಕ ಬೆಲೆಯು ರೂ.6.39 ಲಕ್ಷವಾಗಿದೆ. ಟೊಯೊಟಾ ಗ್ಲಾಂಝಾ ಕಾರು ಮಾರುತಿ ಸುಜುಕಿ ಬಲೆನೊ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದೆ. ಓ ಟೊಯೊಟಾ ಕಂಪನಿಯು ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಖರೀದಿಗಾಗಿ ಆನ್‌ಲೈನ್ ಅಥವಾ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಈಗಾಗಲೇ ಬುಕ್ಕಿಂಗ್ ಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಈ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ರೂ.11,000 ಟೋಕನ್ ಮೊತ್ತವನ್ನು ಪಾವತಿಸಿ ಹೊಸ ಮಾದರಿಯನ್ನು ಬುಕ್ ಮಾಡಬಹುದು.

ಇದೀಗ ಟೊಯೊಟಾ ಕಂಪನಿಯು ಗ್ಲಾಂಝಾ ಕಾರಿನ ಅಧಿಕೃತ ಟಿವಿಸಿಯನ್ನು ಬಿಡುಗಡೆಗೊಳಿಸಿದೆ. ಇದು ಕಾರಿನ ಒಳಭಾಗವನ್ನು ತೋರಿಸುತ್ತದೆ. ಈ ವಿಡಿಯೋವನ್ನು ಟೊಯೊಟಾ ಇಂಡಿಯಾ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದೆ. ಕಾರು ಹಿಂದಿನ ಆವೃತ್ತಿಗಿಂತ ಭಿನ್ನವಾಗಿ ಕಾಣುತ್ತದೆ.

ಹೊಸ ಟೊಯೊಟಾ ಗ್ಲಾಂಝಾ ಕಾರು ಹೊಸ ಸ್ಪೋರ್ಟಿಯರ್ ವಿನ್ಯಾಸದ ಶೈಲಿಯನ್ನು ಹೊಂದಿದೆ. ಈ ಹೊಸ ಮಾದರಿಯಲ್ಲಿ ಹೊಸ ವೈಶಿಷ್ಟ್ಯಗಳು, ಸುಧಾರಿತ ಸ್ಟೈಲಿಂಗ್ ಮತ್ತು ಸಮರ್ಥ ಎಂಜಿನ್ ಅನ್ನು ಒಳಗೊಂಡಿದೆ. ಹಿಂದಿನ ಗ್ಲಾಂಝಾ ಬಲೆನೊಗೆ ಹೋಲುವಂತಿದ್ದರೆ, ಹೊಸ ಮಾದರಿಯು ವಿಭಿನ್ನ ವಿನ್ಯಾಸದೊಂದಿಗೆ ಬಂದಿದೆ.

ಟೊಯೊಟಾ ಗ್ಲಾಂಝಾ ಹೊಸ ಮುಂಭಾಗದ ವಿನ್ಯಾಸದೊಂದಿಗೆ ಬಂದಿದೆ. ಇದು ಟೊಯೊಟಾದ ಜಾಗತಿಕ ಕಾರುಗಳಿಗೆ ಅನುಗುಣವಾಗಿರುತ್ತದೆ. ಇದು ಕ್ಯಾಮ್ರಿ ತರಹದ ಮುಂಭಾಗದ ಗ್ರಿಲ್ ಮತ್ತು ಬಂಪರ್, ಹೊಸ ಕ್ರೋಮ್ ಮತ್ತು ಎಲ್-ಆಕಾರದ ಎಲ್ಇಡಿ ಡಿಆರ್ಎಲ್ (ಡೇಟೈಮ್ ರನ್ನಿಂಗ್ ಲ್ಯಾಂಪ್) ಗಳನು ಒಳಗೊಂಡಿದೆ.

ಈ ಹೊಸ ಕಾರಿನ ಹಿಂಭಾಗವು ಸ್ವಲ್ಪ ಪರಿಷ್ಕೃತ ಬಂಪರ್ ಮತ್ತು ಟೈಲ್-ಲೈಟ್‌ಗಾಗಿ ಹೊಸ ಇನ್‌ಸರ್ಟ್‌ಗಳೊಂದಿಗೆ ಬರುತ್ತದೆ. ಇದು ಹೊಸದಾಗಿ ವಿನ್ಯಾಸಗೊಳಿಸಲಾದ 16-ಇಂಚಿನ ವ್ಹೀಲ್ ಗಳನ್ನು ಹೊಂದಿದೆ.ಈ ಹೊಸ ಗ್ಲಾಂಝಾ ಕಾರು ರೆಡ್, ಬ್ಲೂ, ಗ್ರೇ, ವೈಟ್ ಮತ್ತು ಸಿಲ್ವರ್ ಬಣ್ಣಗಳನ್ನು ಒಳಗೊಂಡಿದೆ.

ಹೊಸ ಗ್ಲಾಂಝಾ ಹ್ಯಾಚ್‌ಬ್ಯಾಕ್ ಕ್ಯಾಬಿನ್ ಹೊಸ ಬಲೆನೊ ಮಾದರಿಗೆ ಹೋಲುತ್ತದೆ. ಇದು ಬಲೆನೊದಲ್ಲಿ ನೀಡಲಾಗುವ ಬ್ಲ್ಯಾಕ್ ಮತ್ತು ಬ್ಲೂ ಬಣ್ಣಗಳ ಬದಲಿಗೆ ಬ್ಲ್ಯಾಕ್ ಮತ್ತು ಬೀಜ್ ಬಣ್ಣಗಳ ಯೋಜನೆಯೊಂದಿಗೆ ಬರುತ್ತದೆ. ವೈಶಿಷ್ಟ್ಯಗಳ ವಿಷಯದಲ್ಲಿ, ಹೊಸ ಗ್ಲಾಂಝಾ ಮಲ್ಟಿ-ಫಂಕ್ಷನಲ್ ಲೆದರ್ ಸುತ್ತಿದ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್, ನವೀಕರಿಸಿದ ಇನ್ಸ್ಟ್ರುಮೆಂಟ್ ಕನ್ಸೋಲ್, ಸೆಂಟರ್ ಕನ್ಸೋಲ್‌ನಲ್ಲಿ ಹೊಸ ಏರ್-ಕಾನ್ ವೆಂಟ್‌ಗಳು ಮತ್ತು ಹಿಂಭಾಗ ಆಟೋಮ್ಯಾಟಿಕ್ ಎಸಿ ಹೊಂದಿದೆ.

ಈ ಕಾರಿನಲ್ಲಿ Apple CarPlay ಮತ್ತು Android Auto, ನ್ಯಾವಿಗೇಶನ್ ಮತ್ತು ವಾಯ್ಸ್ ಕಾಮೆಂಡ್ ಗಳೊಂದಿಗೆ ದೊಡ್ಡ 9-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಬರುತ್ತದೆ. ಹೊಸದು 360-ಡಿಗ್ರಿ ಕ್ಯಾಮೆರಾ, ಹೆಡ್ಸ್-ಅಪ್ ಡಿಸ್ಪ್ಲೇ (HUD), ವಾಯ್ಸ್ ಅಸಿಸ್ಟ್ ಫೈಂಡ್ ಮೈ ಕಾರ್ ವೈಶಿಷ್ಟ್ಯ ಮತ್ತು ರಿಮೋಟ್ ಲಾಕ್ ಮತ್ತು ಅನ್‌ಲಾಕ್ ಕಾರ್ಯಗಳಂತಹ ವೈಶಿಷ್ಟ್ಯಗಳೊಂದಿಗೆ ಕನೆಕ್ಟಿವಿಟಿ ಕಾರ್ ತಂತ್ರಜ್ಞಾನದೊಂದಿಗೆ ಬಂದಿದೆ,

ಹೊಸ ಗ್ಲಾಂಝಾ ಹ್ಯಾಚ್‌ಬ್ಯಾಕ್ ನಲ್ಲಿ ಸುರಕ್ಷೆತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಈ ಕಾರಿನಲ್ಲಿ ಆರು ಏರ್‌ಬ್ಯಾಗ್‌ಗಳು, ಕ್ರೂಸ್ ಕಂಟ್ರೋಲ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎತ್ತರ ಹೊಂದಾಣಿಕೆಯ ಡ್ರೈವರ್ ಸೀಟ್, ಇಬಿಡಿಯೊಂದಿಗೆ ಎಬಿಎಸ್ ಇತ್ಯಾದಿಗಳಂತಹ ಉನ್ನತ-ಮಟ್ಟದ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ.

ಈ ಹೊಸ ಟೊಯೊಟಾ ಗ್ಲಾಂಝಾ ಕಾರಿನಲ್ಲಿ 1.2-ಲೀಟರ್ ಡ್ಯುಯಲ್-ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
ಟೊಯೊಟಾ 5 ವರ್ಷಗಳು/220,000 ಕಿಮೀ ವರೆಗೆ ವಿಸ್ತೃತ ವಾರಂಟಿಯನ್ನು ಆಯ್ಕೆ ಮಾಡುವ ಆಯ್ಕೆಯೊಂದಿಗೆ 3 ವರ್ಷಗಳು/100,000 ಕಿಮೀ ವಾರಂಟಿಯನ್ನು ನೀಡುತ್ತಿದೆ. ಕಂಪನಿಯು EM60 ಮೂಲಕ ಕೇವಲ 60 ನಿಮಿಷಗಳಲ್ಲಿ ಪಿರಿಯೋಡಿಕ್ ಸರ್ವಿಸ್ ನೀಡುತ್ತದೆ, ಇನ್ನು ರೋಡ್ ಅಸಿಸ್ಟ್ ಪ್ರಯೋಜನಗಳು ಮತ್ತು ಹೆಚ್ಚಿನವುಗಳನ್ನು ಹೊಂದಿವೆ.

ಇನ್ನು ಟೊಯೊಟಾ ಕಂಪನಿಯು 2022ರ ಫೆಬ್ರವರಿ ತಿಂಗಳ ಮಾಸಿಕ ಮಾರಾಟ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿದೆ. ಈ ಪ್ರಕಾರ, ಕಳೆದ ತಿಂಗಳು ಟೊಯೊಟಾ ಕಂಪನಿಯು ಒಟ್ಟು 8745 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಟೊಯೊಟಾ ಕಂಪನಿಯು ಕಳೆದ ವರ್ಷ ಇದೇ ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಒಟ್ಟು 14,075 ಯುನಿಟ್‌ಗಳನ್ನು ಮಾರಾಟ ಮಾಡಿತ್ತು ಮತ್ತು ಆದ್ದರಿಂದ, ಶೇಕಡಾ 37.8 ರಷ್ಟು ಕುಸಿತವನ್ನು ಕಂಡಿದೆ. ಟೊಯೊಟಾ ಗ್ಲಾಂಝಾದಂತಹ ಮಾದರಿಗಳು ಭಾರತದಲ್ಲಿ ಕಂಪನಿಗೆ ಮಾರಾಟದ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಟೊಯೊಟಾ ಹೊಸ ಗ್ಲಾಂಝಾಗೆ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಇದು 2022ರ ಮಾರುತಿ ಸುಜುಕಿ ಬಲೆನೊದಿಂದ ದೃಶ್ಯಾತ್ಮಕವಾಗಿ ಪ್ರತ್ಯೇಕಿಸುತ್ತದೆ. 2022ರ ಟೊಯೊಟಾ ಗ್ಲಾಂಝಾ ಕಾರು ಹೊಸ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಈ ಹೊಸ ಟೊಯೊಟಾ ಗ್ಲಾಂಝಾ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೋಜ್, ಹೋಂಡಾ ಜಾಝ್ ಮತ್ತು ಮಾರುತಿ ಸುಜುಕಿ ಬಲೆನೊ ಕಾರುಗಳುಗೆ ಪೈಪೋಟಿ ನೀಡುತ್ತದೆ.