ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಭಾರತದಲ್ಲಿ ಪ್ರಮುಖ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ಕಾರು ಮಾದರಿಗಳನ್ನು ಬಿಡುಗಡೆ ಸಿದ್ದವಾಗುತ್ತಿವೆ.

Recommended Video

Toyota Urban Cruiser Hyryder Kannada Walkaround | ಹೈಬ್ರಿಡ್ ಎಂಜಿನ್, ಗೇರ್ ಬಾಕ್ಸ್, ವೈಶಿಷ್ಟ್ಯತೆಗಳು..

ಈ ತಿಂಗಳಾಂತ್ಯಕ್ಕೆ ವಿವಿಧ ಸೆಗ್ಮೆಂಟ್‌ನಲ್ಲಿ ಸುಮಾರು ಐದು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಹಲವು ಹೊಸ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ಸೆಮಿಕಂಡಕ್ಟರ್ ಕೊರತೆ ನಡುವೆಯೂ ಹೊಸ ಕಾರುಗಳ ಬಿಡುಗಡೆ ಪ್ರಕ್ರಿಯೆ ಜೋರಾಗುತ್ತಿದೆ. ಹಾಗಾದರೆ ಈ ತಿಂಗಳು ಬಿಡುಗಡೆಯಾಗಲಿರುವ ಹೊಸ ಕಾರುಗಳು ಯಾವವು? ಹೊಸ ಕಾರುಗಳ ವಿಶೇಷತೆ ಮತ್ತು ನೀರಿಕ್ಷಿತ ಬೆಲೆ ಮಾಹಿತಿ ಇಲ್ಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್

ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಹೊಸ ತಲೆಮಾರಿನ ಆವೃತ್ತಿಯನ್ನು ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಬಿಡುಗಡೆ ಮಾಡಿದ್ದು, ಇದರ ಜೊತೆಗೆ ಕಂಪನಿಯು ಹಳೆಯ ತಲೆಮಾರಿನ ಸ್ಕಾರ್ಪಿಯೋ ಮಾದರಿಯನ್ನು ಸ್ಕಾರ್ಪಿಯೋ-ಕ್ಲಾಸಿಕ್ ಹೆಸರಿನಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಸ್ಕಾರ್ಪಿಯೋ-ಎನ್ ಹೊಸ ಆವೃತ್ತಿಯನ್ನು ಈಗಾಗಲೇ ಬಿಡುಗಡೆ ಮಾಡಿ ಭಾರೀ ಪ್ರಮಾಣದ ಬುಕಿಂಗ್ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಶೀಘ್ರದಲ್ಲಿಯೇ ವಿತರಣೆ ಆರಂಭಿಸಲು ಸಜ್ಜಾಗುತ್ತಿದ್ದು, ಸ್ಕಾರ್ಪಿಯೋ-ಎನ್ ವಿತರಣೆ ಆರಂಭಕ್ಕೂ ಮುನ್ನ ಕಂಪನಿಯು ಇದೀಗ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯನ್ನು ಇದೇ ತಿಂಗಳು 12ರಂದು ಬಿಡುಗಡೆ ಮಾಡುತ್ತಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಬಾರ್ನ್ ಎಲೆಕ್ಟ್ರಿಕ್ ಕಾನ್ಸೆಪ್ಟ್ ಅನಾವರಣ

ಮಹೀಂದ್ರಾ ಕಂಪನಿಯು ಇದೇ ತಿಂಗಳು 15ರಂದು ತನ್ನ ಹೊಸ ತಲೆಮಾರಿನ ವೈಶಿಷ್ಟ್ಯತೆಯ ಬಾರ್ನ್ ಎಲೆಕ್ಟ್ರಿಕ್ ಕಾನ್ಸೆಪ್ಟ್ ಕಾರುಗಳ ಅನಾವರಣಕ್ಕೆ ಸಿದ್ದವಾಗುತ್ತಿದ್ದು, ನ್ಯೂ ಜನರೇಷನ್ ಇವಿ ಕಾರು ಮಾದರಿಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸಿರುವ ಮಹೀಂದ್ರಾ ಕಂಪನಿಯು ಮುಂಬರುವ ಕೆಲವೇ ವರ್ಷಗಳಲ್ಲಿ ಹಲವಾರು ಹೊಸ ಇವಿ ಕಾರು ಮಾದರಿಗಳನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಹೊಸ ಸಂಚಲನ ಮೂಡಿಸಲು ಸಜ್ಜಾಗುತ್ತಿರುವ ಮಹೀಂದ್ರಾ ಕಂಪನಿಯು ಬಾರ್ನ್ ಇವಿ ಶ್ರೇಣಿಯಲ್ಲಿ ಒಟ್ಟು ಐದು ಹೊಸ ಇವಿ ಎಸ್‌ಯುವಿ ಕಾರುಗಳನ್ನು ಪರಿಚಯಿಸುತ್ತಿದ್ದು, ಹೊಸ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆ ಹಲವಾರು ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಹೊಸ ಮಾರುತಿ ಸುಜುಕಿ ಆಲ್ಟೊ ಕೆ10

ಮಾರುತಿ ಸುಜುಕಿ ಕಂಪನಿಯು ಇದೇ ತಿಂಗಳು 18ಕ್ಕೆ ಹೊಸ ಆಲ್ಟೊ ಕೆ10 ಬಿಡುಗಡೆ ಮಾಡುತ್ತಿದ್ದು, ಈಗಾಗಲೇ ಕಂಪನಿಯು ಬುಕಿಂಗ್ ಪ್ರಾರಂಭಿಸಿದೆ. 2022ರ ಆಲ್ಟೊ ಕೆ10 ಮಾದರಿಯಲ್ಲಿ ಕಂಪನಿಯು ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಹೆಚ್ಚುವರಿ ರೂಪಾಂತಗಳನ್ನು ಸೇರಿಸುತ್ತಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಹೊಸ ಪ್ರವೇಶ ಮಟ್ಟದ ಹ್ಯಾಚ್‌ಬ್ಯಾಕ್ K-ಸರಣಿ 1.0-ಲೀಟರ್ ಎಂಜಿನ್‌ನಿಂದ ನಿಯಂತ್ರಿಸಲ್ಪಡಲಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಅಥವಾ ಎಜಿಎಸ್‌ನೊಂದಿಗೆ 65.7 ಬಿಎಚ್‌ಪಿ ಮತ್ತು 89 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹೊಸ ಆಲ್ಟೊ ಕೆ10 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 3.99 ಲಕ್ಷದ ಆರಂಭಿಕ ಬೆಲೆಯೊಂದಿಗೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್

ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಉನ್ನತ ಕಾರ್ಯಕ್ಷಮತೆಯ ಬ್ರ್ಯಾಂಡ್‌ನ ಮೊದಲ ಆಲ್-ಎಲೆಕ್ಟ್ರಿಕ್ ಸರಣಿಯ ಉತ್ಪಾದನಾ ಮಾದರಿಯಾದ ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್ ಅನ್ನು ಇದೇ ತಿಂಗಳು ಆಗಸ್ಟ್ 24 ರಂದು ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಸ್ಟ್ಯಾಂಡರ್ಡ್ ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್ ನಲ್ಲಿ 649 ಬಿಎಚ್‌ಪಿ ಪವರ್ ನೀಡಲಾಗಿದ್ದರೆ ಡೈನಾಮಿಕ್ ಪ್ಲಸ್ ಪ್ಯಾಕೇಜ್‌ನೊಂದಿಗೆ ಅಳವಡಿಸಲಾಗಿರುವ ರೇಸ್ ಸ್ಟಾರ್ಟ್ ಮೋಡ್‌ನಲ್ಲಿ 751 ಬಿಎಚ್‌ಪಿ ಉತ್ಪಾದಿಸಬಲ್ಲದು. ಈ ಮೂಲಕ ಇದು ಸೊನ್ನೆಯಿಂದ ನೂರು ಕಿ.ಮೀ ವೇಗವನ್ನು ಕೇವಲ 3.4 ಸೆಕೆಂಡುಗಳಲ್ಲಿ ಸಾಧಿಸಬಹುದಾಗಿದ್ದು, ಗರಿಷ್ಠ 360 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಟೊಯೊಟಾ ಹೈರೈಡರ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ತನ್ನ ಮಿಡ್ ಸೈಜ್ ಎಸ್‍ಯುವಿಯಾದ ಅರ್ಬನ್ ಕ್ರೂಸರ್ ಹೈರೈಡರ್ ಹೈಬ್ರಿಡ್ ಕಾರನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಇದೇ ತಿಂಗಳಾಂತ್ಯಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಗಳಿವು!

ಹೊಸ ಕಾರಿನಲ್ಲಿ 1.5-ಲೀಟರ್ TNGA ಅಟ್ಕಿನ್ಸನ್ ಸೈಕಲ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಇದು 92 ಬಿಎಚ್‌ಪಿ ಮತ್ತು 122ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು 14:1 ಕಂಪ್ರೆಷನ್ ರೇಷಿಯೋ ಮತ್ತು ಟೆಂಪ್ರೇಚರ್ ಮತ್ತು ಪ್ರೆಷರ್ ಕಂಟ್ರೋಲ್ ಅನ್ನು ಹೊಂದಿದೆ. ಶೇ 40 ರಷ್ಟು ಉಷ್ಣ ದಕ್ಷತೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಎಂಜಿನ್ ಅನ್ನು 79 ಬಿಎಚ್‌ಪಿ ಮತ್ತು 141 ಎನ್ಎಂ ಟಾರ್ಕ್ ಮಾಡುವ ಸೆಲ್ಪ್ ರಿಚಾರ್ಜ್ ಎಲೆಕ್ಟ್ರಿಕ್ ಮೋಟಾರ್‌ಗೆ ಜೋಡಿಸಲಾಗಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಸರಾಸರಿ 27 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ.

Most Read Articles

Kannada
English summary
Upcoming cars in india august 2022 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X