ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಭಾರತದಲ್ಲಿ ಹೊಸ ಕಾರು ಮಾರಾಟವು ಸುಧಾರಣೆ ಕಾಣುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆಗೆ ಪ್ರಮುಖ ಕಾರು ಉತ್ಪನ್ನಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿವೆ.

Recommended Video

Maruti Alto K10 Launched At Rs 3.99 Lakh | What’s New On The Hatchback? Dual-Jet VVT & AMT

ಮುಂಬರುವ ಸೆಪ್ಟೆಂಬರ್‌ನಲ್ಲೂ ಹಲವು ಹೊಸ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಕಾರುಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಹಲವು ಹೊಸ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿದ್ದು, ಸೆಮಿಕಂಡಕ್ಟರ್ ಕೊರತೆ ನಡುವೆಯೂ ಹೊಸ ಕಾರುಗಳ ಬಿಡುಗಡೆ ಪ್ರಕ್ರಿಯೆ ಜೋರಾಗುತ್ತಿದೆ. ಹಾಗಾದರೆ ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಹೊಸ ಕಾರುಗಳು ಯಾವವು? ಎನ್ನುವ ಮಾಹಿತಿ ಇಲ್ಲಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಟೊಯೊಟಾ ಹೈರೈಡರ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ತನ್ನ ಮಿಡ್ ಸೈಜ್ ಎಸ್‍ಯುವಿಯಾದ ಅರ್ಬನ್ ಕ್ರೂಸರ್ ಹೈರೈಡರ್ ಹೈಬ್ರಿಡ್ ಕಾರನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಇದೇ ತಿಂಗಳಾಂತ್ಯಕ್ಕೆ ಇಲ್ಲವೇ ಸೆಪ್ಟೆಂಬರ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಕಾರಿನಲ್ಲಿ 1.5-ಲೀಟರ್ TNGA ಅಟ್ಕಿನ್ಸನ್ ಸೈಕಲ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಇದು 92 ಬಿಎಚ್‌ಪಿ ಮತ್ತು 122ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು 14:1 ಕಂಪ್ರೆಷನ್ ರೇಷಿಯೋ ಮತ್ತು ಟೆಂಪ್ರೇಚರ್ ಮತ್ತು ಪ್ರೆಷರ್ ಕಂಟ್ರೋಲ್ ಅನ್ನು ಹೊಂದಿದೆ. ಶೇ 40 ರಷ್ಟು ಉಷ್ಣ ದಕ್ಷತೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಎಂಜಿನ್ ಅನ್ನು 79 ಬಿಎಚ್‌ಪಿ ಮತ್ತು 141 ಎನ್ಎಂ ಟಾರ್ಕ್ ಮಾಡುವ ಸೆಲ್ಪ್ ರಿಚಾರ್ಜ್ ಎಲೆಕ್ಟ್ರಿಕ್ ಮೋಟಾರ್‌ಗೆ ಜೋಡಿಸಲಾಗಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಸರಾಸರಿ 27 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಟೊಯೊಟಾ ಹೈರೈಡರ್‌ನ ಉನ್ನತ ರೂಪಾಂತರಗಳು ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್, ಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಹೆಡ್ಸ್-ಅಪ್ ಡಿಸ್ಪ್ಲೇ, ಕನೆಕ್ಟ್ ಮಾಡಿದ ಕಾರ್ ಟೆಕ್ ಮತ್ತು ಗೂಗಲ್ ಅಸಿಸ್ಟ್ ವೈಶಿಷ್ಟ್ಯಗಳನ್ನು ಪಡೆಯುತ್ತದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ

ಮಾರುತಿ ಸುಜುಕಿ ಕಂಪನಿಯು ತನ್ನ ಬಹುನೀರಿಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯನ್ನು ಮಾರುತಿ ಸುಜುಕಿ ಕಂಪನಿಯು ಟೊಯೊಟಾ ಹೈರೈಡರ್ ಮಾದರಿಯನ್ನು ಆಧರಿಸಿ ಬಿಡುಗಡೆ ಮಾಡುತ್ತಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಕಾರು ಸ್ವಯಂ ಚಾರ್ಜಿಂಗ್ ವೈಶಿಷ್ಟ್ಯತೆಯ ಪ್ರಬಲ ಹೈಬ್ರಿಡ್ ಎಂಜಿನ್ ಜೊತೆ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಹೈಬ್ರಿಡ್ ಮಾದರಿಯು 115.56 ಬಿಎಚ್‌ಪಿ ಮತ್ತು 122 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಮೂಲಕ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. 1.5 ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಲಾಗುತ್ತಿದ್ದು, ಹೊಸ ಕಾರು ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯ ನೀರಿಕ್ಷೆಯಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಗ್ರ್ಯಾಂಡ್ ವಿಟಾರಾ ಮಾದರಿಯು ಮಾರುತಿ ಸುಜುಕಿಯ ಇದುವರೆಗಿನ ಕಾರುಗಳಲ್ಲಿ ವಿಭಿನ್ನವಾದ ಮಾದರಿಯಾಗಲಿದ್ದು, ಇದು 4345 ಎಂಎಂ ಉದ್ದಳತೆಯೊಂದಿಗೆ 1645 ಎಂಎಂ ಅಗಲ, 1795 ಎಂಎಂ ಎತ್ತರ ಮತ್ತು 2600 ಎಂಎಂ ವ್ಹೀಲ್‌ಬೆಸ್ ಮೂಲಕ ಉತ್ತಮ ಕ್ಯಾಬಿನ್ ಸೌಲಭ್ಯದೊಂದಿಗೆ ಹೆಚ್ಚಿನ ಗಾತ್ರದ ಬೂಟ್‌ಸ್ಪೆಸ್ ಒದಗಿಸುತ್ತದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮಹೀಂದ್ರಾ ಎಕ್ಸ್‌ಯುವಿ400 ಎಲೆಕ್ಟ್ರಿಕ್

ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಸಿದ್ದವಾಗುತ್ತಿದ್ದು, ಕಂಪನಿಯು ಮುಂದಿನ ತಿಂಗಳು ಸೆಪ್ಟೆಂಬರ್ 8ರಂದು ಹೊಸ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಕಂಪನಿಯು ತನ್ನ ಹೊಸ ತಲೆಮಾರಿನ ಎಕ್ಸ್‌ಯುವಿ.ಇ ಮತ್ತು ಬಿಇ ಬ್ರಾಂಡ್ ಇವಿ ಕಾರುಗಳ ಬಿಡುಗಡೆಗೂ ಮುನ್ನ ಎಕ್ಸ್‌ಯುವಿ400 ಮತ್ತು ಇಕೆಯುವಿ100 ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಈ ಎರಡು ಕಾರು ಮಾದರಿಗಳು ಸಾಮಾನ್ಯ ಕಾರುಗಳ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿರಲಿವೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಎಕ್ಸ್‌ಯುವಿ400 ಮಾದರಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ಎರಡು ರೀತಿಯ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್‌ಗೆ ಕನಿಷ್ಠ 350 ಕಿ.ಮೀ ನಿಂದ 480 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌‌ಗಳನ್ನು ಹೊಂದಿರಲಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19 ಲಕ್ಷದ ತನಕ ಬೆಲೆ ಹೊಂದಬಹುದಾಗಿದ್ದು, ಸ್ಟ್ಯಾಂಡರ್ಡ್ ಮತ್ತು ಎಕ್ಸ್ಸೆಂಡ್ ಮಾದರಿಗಳೊಂದಿಗೆ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳಿಗೆ ಪೈಪೋಟಿಯಾಗಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹ್ಯುಂಡೈ ವೆನ್ಯೂ ಎನ್-ಲೈನ್

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ವೆನ್ಯೂ ಮಾದರಿಯ 2022ರ ಆವೃತ್ತಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದು, ಕಂಪನಿಯು ಇದೀಗ ವೆನ್ಯೂ ಮಾದರಿಯಲ್ಲಿ ಸ್ಪೋರ್ಟಿ ಮಾದರಿಯಾದ ಎನ್-ಲೈನ್ ಆವೃತ್ತಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಪರ್ಫಾಮೆನ್ಸ್ ಆವೃತ್ತಿಯಾಗಿರುವ ವೆನ್ಯೂ ಎನ್-ಲೈನ್ ಮುಂದಿನ ತಿಂಗಳು ಸೆಪ್ಟೆಂಬರ್ 6ರಂದು ಬಿಡುಗಡೆಯಾಗುವ ಬಹುತೇಕ ಖಚಿತವಾಗಿದ್ದು, ಹೊಸ ಕಾರು ಮಾದರಿಯು ಸ್ಪೋರ್ಟಿ ವಿನ್ಯಾಸ ಮತ್ತು ಹೆಚ್ಚಿನ ಪರ್ಫಾಮೆನ್ಸ್ ಬಯಸುವ ಗ್ರಾಹಕರ ಆಯ್ಕೆಗೆ ಸಹಕಾರಿಯಾಗಲಿದೆ. ಸ್ಟ್ಯಾಂಡರ್ಡ್ ಮಾದರಿಗಳಿಂತಲೂ ತುಸು ಹೆಚ್ಚುವರಿ ಎಂಜಿನ್ ಪರ್ಫಾಮೆನ್ಸ್ ಜೊತೆಗೆ ಪ್ರಮುಖ ತಾಂತ್ರಿಕ ಸೌಲಭ್ಯಗಳೊಂದಿಗೆ ಸ್ಪೋರ್ಟಿ ಮಾದರಿಯಾಗಿ ಗುರುತಿಸಿಕೊಳ್ಳುತ್ತವೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್

ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಉನ್ನತ ಕಾರ್ಯಕ್ಷಮತೆಯ ಬ್ರ್ಯಾಂಡ್‌ನ ಮೊದಲ ಆಲ್-ಎಲೆಕ್ಟ್ರಿಕ್ ಸರಣಿಯ ಉತ್ಪಾದನಾ ಮಾದರಿಯಾದ ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್ ಅನ್ನು ಇದೇ ತಿಂಗಳು ಆಗಸ್ಟ್ 24 ರಂದು ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಸ್ಟ್ಯಾಂಡರ್ಡ್ ಮರ್ಸಿಡಿಸ್-ಎಎಂಜಿ ಇಕ್ಯೂಎಸ್ 53 4ಮ್ಯಾಟಿಕ್ ಪ್ಲಸ್ ನಲ್ಲಿ 649 ಬಿಎಚ್‌ಪಿ ಪವರ್ ನೀಡಲಾಗಿದ್ದರೆ ಡೈನಾಮಿಕ್ ಪ್ಲಸ್ ಪ್ಯಾಕೇಜ್‌ನೊಂದಿಗೆ ಅಳವಡಿಸಲಾಗಿರುವ ರೇಸ್ ಸ್ಟಾರ್ಟ್ ಮೋಡ್‌ನಲ್ಲಿ 751 ಬಿಎಚ್‌ಪಿ ಉತ್ಪಾದಿಸಬಲ್ಲದು. ಈ ಮೂಲಕ ಇದು ಸೊನ್ನೆಯಿಂದ ನೂರು ಕಿ.ಮೀ ವೇಗವನ್ನು ಕೇವಲ 3.4 ಸೆಕೆಂಡುಗಳಲ್ಲಿ ಸಾಧಿಸಬಹುದಾಗಿದ್ದು, ಗರಿಷ್ಠ 360 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Upcoming cars in india in september 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X