ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಮಾರಾಟವು ಸಾಕಷ್ಟು ಸುಧಾರಿಸಿದ್ದು, ಪ್ರಮುಖ ಕಾರು ಕಂಪನಿಗಳು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿವೆ. ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸ ಕಾರುಗಳಲ್ಲಿ 2022ರ ಆವೃತ್ತಿಗಳೊಂದಿಗೆ ಮತ್ತಷ್ಟು ಹೊಸ ಮಾದರಿಗಳು ಮಾರುಕಟ್ಟೆಗೆ ಪ್ರವೇಶಿಸುತ್ತಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಕಾರುಗಳ ಜೊತೆಗೆ ಇವಿ ಮಾದರಿಗಳು ಸಹ ಬಿಡುಗಡೆಗೆ ಸಿದ್ದವಾಗಿವೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಕಿಯಾ ಇವಿ6 ಎಲೆಕ್ಟ್ರಿಕ್

ಕಿಯಾ ಇಂಡಿಯಾ ಕಂಪನಿಯು ತನ್ನ ಮೊದಲ ಇವಿ ಕಾರು ಮಾದರಿಯಾದ ಇವಿ6 ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಜೂನ್ 2ರಂದು ಮಾರುಕಟ್ಟೆ ಪ್ರವೇಶಿಸುತ್ತಿದೆ. ಕಿಯಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ರೂ.3 ಲಕ್ಷ ಮುಂಗಡದೊಂದಿಗೆ ಬುಕಿಂಗ್ ಅನ್ನು ಆರಂಭಿಸಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಇವಿ6 ಎಲೆಕ್ಟ್ರಿಕ್ ಕಾರು ಕಂಪನಿಯ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (E-GMP) ಅನ್ನು ಆಧರಿಸಿದ್ದು, ಇದು ಬ್ರ್ಯಾಂಡ್‌ನ ಭವಿಷ್ಯದ ಶ್ರೇಣಿಯ ಎಲೆಕ್ಟ್ರಿಕ್ ಮಾದರಿಗಳ ಆಧಾರವಾಗಿದೆ. ಹೊಸ ಕಾರಿನಲ್ಲಿ ಕಂಪನಿಯು 77.4kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡುತ್ತಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 528 ಕಿ.ಮೀ ರೇಂಜ್ ಅನ್ನು ನೀಡಲಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಭಾರತದಲ್ಲಿ ಬಿಡುಗಡೆಯಾಗಲಿರುವ ಇವಿ6 ಜಿಟಿ ಲೈನ್ ಸಂಪೂರ್ಣವಾಗಿ ವಿದೇಶಿಯ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳುತ್ತಿರುವುದರಿಂದ ಬೆಲೆಯು ತುಸು ದುಬಾರಿಯಾಗಿರಲಿದ್ದು, ಈ ಹೊಸ ಕಾರು ಮಾದರಿಗಳಲ್ಲಿ ಎಲ್ಲಾ ತಂತ್ರಜ್ಞಾನ ಆಯ್ಜೆಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಪ್ರಮುಖ ಐಷಾರಾಮಿ ಕಾರುಗಳಿಗೆ ಇದು ಪೈಪೋಟಿ ನೀಡಲಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮಹೀಂದ್ರಾ ಸ್ಕಾರ್ಪಿಯೋ-ಎನ್

ಮಹೀಂದ್ರಾ ಕಂಪನಿಯು ತನ್ನ ಮೂರನೇ ತಲೆಮಾರಿನ ಸ್ಕಾರ್ಪಿಯೋ ಮಾದರಿಯನ್ನು ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಮುಂದಿನ ತಿಂಗಳು 27ರಂದು ಅಧಿಕೃತವಾಗಿ ಬಿಡುಗಡೆಗೊಳಿಸುತ್ತಿದೆ. ಹೊಸ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಲಿಷ್ಠ ಎಂಜಿನ್ ಆಯ್ಕೆ ಸಹ ಹೊಂದಿರಲಿದ್ದು, ಹೊಸ ಮಾದರಿಯ ಜೊತೆಗೆ ಈಗಿರುವ ಸ್ಕಾರ್ಪಿಯೋ ಮಾರಾಟವು ಕೂಡಾ ಮುಂದುವರಿಯಲಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮಹೀಂದ್ರಾ ಕಂಪನಿಯು ಹೊಸ ಮಾದರಿಯನ್ನು ಸ್ಕಾರ್ಪಿಯೋ-ಎನ್(Scorpio-N) ಹೆಸರಿನೊಂದಿಗೆ ಮಾರಾಟ ಮಾಡಲಿದ್ದರೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯನ್ನು ಸ್ಕಾರ್ಪಿಯೋ ಕ್ಲಾಸಿಕ್(Scorpio Classic) ಹೆಸರಿನೊಂದಿಗೆ ಮಾರಾಟ ಮುಂದುವರಿಸಲಿದ್ದು, 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಮಹೀಂದ್ರಾ ಸ್ಕಾರ್ಪಿಯೊ-ಎನ್ ಪೆಟ್ರೋಲ್ ಮತ್ತು ಡೀಸೆಲ್ ಹೈ ಎಂಡ್ ರೂಪಾಂತರಗಳು 4x4 ಆಯ್ಕೆಗಳೊಂದಿಗೆ ಲಭ್ಯವಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಇನ್ನು ಹಲವಾರು ಹೊಸ ಸೌಲಭ್ಯಗಳನ್ನು ನೀಡಿದೆ. ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.14 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

2022ರ ಮಾರುತಿ ವಿಟಾರಾ ಬ್ರೆಝಾ

ಮಾರುತಿ ಸುಜುಕಿ 2022ರ ವಿಟಾರಾ ಬ್ರೆಝಾ ಮಾದರಿಯು ಮುಂದಿನ ತಿಂಗಳು ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಇದು ಫೇಸ್‌ಲಿಫ್ಟೆಡ್ ಎರ್ಟಿಗಾ ಮತ್ತು ಎಕ್ಸ್ಎಲ್6 ನಲ್ಲಿರುವ ಹೊಸ 1.5-ಲೀಟರ್ ನಾಲ್ಕು-ಸಿಲಿಂಡರ್ K15C ಪೆಟ್ರೋಲ್ ಮೈಲ್ಡ್-ಹೈಬ್ರಿಡ್ ಎಂಜಿನ್‌ ಅನ್ನು ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಜೊತೆಗೆ ಹೊಸ ಕಾರಿನ ಆಟೋಮ್ಯಾಟಿಕ್ ರೂಪಾಂತರವು ಪ್ಯಾಡಲ್ ಶಿಫ್ಟರ್ ಜೊತೆಗೆ ಆಯ್ದ ಟ್ರಿಮ್‌ಗಳಲ್ಲಿ ಸಿಎನ್‌ಜಿ ರೂಪಾಂತರಗಳನ್ನು ಪಡೆದುಕೊಳ್ಳಬಹುದಾಗಿದ್ದು, ಹೊಸ ಎಸ್‍ಯುವಿಯ ಒಳಾಂಗಣವನ್ನು ಸಹ ಸಂಪೂರ್ಣವಾಗಿ ನವೀಕರಿಸಲಾಗಿದೆ. ಜೊತೆಗೆ 2022ರ ಬ್ರೆಝಾವನ್ನು ಸುಜುಕಿ ಹಾರ್ಟೆಕ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸುವ ಸಾಧ್ಯತೆಯಿದ್ದು, ಇದು ನಾಲ್ಕು ಸ್ಟಾರ್‌ಗಳ ಪ್ರಸ್ತುತ ಗ್ಲೋಬಲ್ ಎನ್‌ಸಿಎಪಿ ಸುರಕ್ಷತಾ ರೇಟಿಂಗ್ ಅನ್ನು ಇನ್ನಷ್ಟು ಸುಧಾರಿಸುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹುಂಡೈ ವೆನ್ಯೂ ಫೇಸ್‌ಲಿಫ್ಟ್

ಹ್ಯುಂಡೈ ಕಂಪನಿಯು ವೆನ್ಯೂ ಫೇಸ್‌ಲಿಫ್ಟ್ ಮಾದರಿಯನ್ನು ಜೂನ್ 16 ರಂದು ಹೊಸ ವಿನ್ಯಾಸದಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯು ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್‌ಗೆ ಹೋಲುವ ಸ್ಪೋರ್ಟಿಯರ್ ಎನ್-ಲೈನ್ ಮಾದರಿಯ ವಿನ್ಯಾಸ ಪಡೆಯುವ ನಿರೀಕ್ಷೆಯಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಮಾದರಿಯು ನವೀಕರಿಸಿದ ವಿನ್ಯಾಸಗಳೊಂದಿಗೆ ಹೊಸ ವೈಶಿಷ್ಟ್ಯಗಳು, ಎಂಜಿನ್ ಆಯ್ಕೆಗಳಲ್ಲಿ ಸಣ್ಣ ಬದಲಾವಣೆಗಳನ್ನು ಪಡೆದುಕೊಳ್ಳಲಿದೆ. ಪ್ರಸ್ತುತ ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ. 7.11 ಲಕ್ಷದಿಂದ 11.83 ಲಕ್ಷ ಬೆಲೆ ಹೊಂದಿರುವ ಹೊಸ ಮಾದರಿಯು ಫೇಸ್‌ಲಿಫ್ಟ್ ಮಾದರಿಯೊಂದಿಗೆ ತುಸು ದುಬಾರಿ ಬೆಲೆ ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹ್ಯುಂಡೈ ಕ್ರೆಟಾ ಎನ್ ಲೈನ್

ಹ್ಯುಂಡೈ ಕಂಪನಿಯು ಎನ್ ಸರಣಿಯ ಪರ್ಫಾಮೆನ್ಸ್ ಕಾರುಗಳೊಂದಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದ್ದು, ಕಂಪನಿಯು ಭಾರತದಲ್ಲಿಯು ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಎನ್ ಲೈನ್ ಪರ್ಫಾಮೆನ್ಸ್ ಕಾರನ್ನು ಮಾರಾಟ ಮಾಡಲು ನಿರ್ಧರಿಸಿದೆ. ಈಗಾಗಲೇ ಐ20 ಮಾದರಿಯಲ್ಲಿ ಎನ್-ಲೈನ್ ಪರಿಚಯಿಸಿರುವ ಕಂಪನಿಯು ಮುಂಬರುವ ದಿನಗಳಲ್ಲಿ ಕ್ರೆಟಾ ಸೇರಿದಂತೆ ಪ್ರಮುಖ ಮಾದರಿಗಳಲ್ಲಿ ಹೊಸ ಮಾದರಿ ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್ ಮಾದರಿಯಲ್ಲಿ ಸ್ಪೋರ್ಟಿ ಬ್ಯಾಡ್ಜ್, ಮುಂಭಾಗದ ಬಂಪರ್, ಬದಿಗಳು ಮತ್ತು ಕೆಂಪು ಬ್ರೇಕ್ ಕ್ಯಾಲಿಪರ್‌ಗಳಲ್ಲಿ ಕೆಂಪು ಅಸ್ಸೆಂಟ್ ಗಳೊಂದಿಗೆ ಚೆಕ್ಕರ್ ಫ್ಲ್ಯಾಗ್ ಪ್ರೇರಿತ ಫ್ರಂಟ್ ಗ್ರಿಲ್ ಅನ್ನು ಪಡೆಯುವ ಸಾಧ್ಯತೆಯಿದ್ದು, ಸ್ಪೋರ್ಟಿ ಎಸ್‍ಯುವಿ ಹೊಸ ಬಂಪರ್‌ಗಳು ಮತ್ತು ಅಲಾಯ್ ವ್ಹೀಲ್ ಗಳನ್ನು ಸಹ ಪಡೆಯಬಹುದಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಸಿಟ್ರನ್ ಸಿ3

ಸಿ3 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಇಂಡಿಯಾ ಕಂಪನಿಯು ಈಗಾಗಲೇ ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯ ಅನಾವರಣದೊಂದಿಗೆ ಬಿಡುಗಡೆ ಸಿದ್ದವಾಗುತ್ತಿದೆ. ಸದ್ಯ ಸಿ5 ಏರ್‌ಕ್ರಾಸ್ ಬಿಡುಗಡೆಗೊಳಿಸಿರುವ ಸಿಟ್ರನ್ ಕಂಪನಿಯು ಹೊಸ ಮಾದರಿಯೊಂದಿಗೆ ಕಾರು ಮಾರಾಟ ಜಾಲವನ್ನು ವಿಸ್ತರಿಸುತ್ತಿದ್ದು, ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಸಬ್ ಫೋರ್ ಮೀಟರ್ ವೈಶಿಷ್ಟ್ಯತೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರು ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದ್ದು, ಹೊಸ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು ಫ್ಲೆಕ್ಸ್ ಫ್ಯೂಲ್ ತಂತ್ರಜ್ಞಾನ ಹೊಂದಿರುವ 1.2-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಸಿ3 ಮಾದರಿಯು ಟಾಟಾ ಪಂಚ್ ಮಾದರಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಮಾದರಿಯು ಭಾರತದಲ್ಲಿ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದೆ.

Most Read Articles

Kannada
English summary
Upcoming cars in india kia ev6 maruti brezza mahindra scorpion and more
Story first published: Friday, May 27, 2022, 21:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X