Just In
- 8 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 11 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 13 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- News
ಶಿವಸೇನೆ-ಬಿಜೆಪಿ ಮೈತ್ರಿ ಸುಳಿವು ಕೊಟ್ಟ ಕರ್ನಾಟಕದ ಸಚಿವ!
- Sports
ಭಾರತ vs ಐರ್ಲೆಂಡ್: ಮೊದಲ ಟಿ20 ಪಂದ್ಯ, ಟಾಸ್ ಗೆದ್ದ ಭಾರತ, Live ಸ್ಕೋರ್, ಆಡುವ ಬಳಗ
- Movies
ಕೆ.ಎಲ್.ರಾಹುಲ್ ಜೊತೆ ಜರ್ಮನಿಗೆ ಹಾರಿದ ಆತಿಯಾ ಶೆಟ್ಟಿ
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಏಪ್ರಿಲ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರು ಮಾದರಿಗಳಿವು!
ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಹೊಸ ವಾಹನಗಳ ಮಾರಾಟದಲ್ಲಿ ತುಸು ಕುಸಿತ ಕಂಡುಬರುತ್ತಿದ್ದರೂ ಹೊಸ ಕಾರು ಮಾದರಿಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದ್ದು, ಈ ತಿಂಗಳಾಂತ್ಯಕ್ಕೆ ಹಲವು ಹೊಸ ಕಾರು ಮಾದರಿಗಳು ಭಾರತದಲ್ಲಿ ಬಿಡುಗಡೆಗಾಗಿ ಸಿದ್ದಗೊಂಡಿವೆ.

ಭಾರತದಲ್ಲಿ ಪ್ರಮುಖ ಕಾರು ತಯಾರಕ ಕಂಪನಿಗಳು ತಮ್ಮ ಪ್ರತಿಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ವಿವಿಧ ಹೊಸ ಮಾದರಿಯ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದ್ದು, ಏಪ್ರಿಲ್ ಅವಧಿಯಲ್ಲೂ ಪ್ರಮುಖ ಕಾರು ಮಾದರಿಗಳು ಮಾರುಕಟ್ಟೆಯನ್ನು ಪ್ರವೇಶಿಸಲು ಸಿದ್ದಗೊಂಡಿವೆ. ಹೊಸ ಕಾರು ಮಾದರಿಗಳ ಪಟ್ಟಿಯಲ್ಲಿ ಮಧ್ಯಮ ಕ್ರಮಾಂಕದ ಕಾರು ಮಾದರಿಗಳಲ್ಲದೆ ಪ್ರಮುಖ ಐಷಾರಾಮಿ ಕಾರು ಮಾದರಿಗಳು ಸಹ ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ.

ಹೋಂಡಾ ಸಿಟಿ ಹೈಬ್ರಿಡ್
ಹೊಸ ಹೋಂಡಾ ಸಿಟಿ ಹೈಬ್ರಿಡ್ ಮಾದರಿಯಲ್ಲಿ ಮಲ್ಟಿ-ಮೋಡ್ ಡ್ರೈವ್ (ಐ-ಎಂಎಂಡಿ) ಪವರ್‌ಟ್ರೇನ್ ಜೋಡಣೆ ಮಾಡಲಾಗಿದ್ದು, ಅದು ಐ-ಡಿಸಿಡಿಯನ್ನು ಬದಲಾಯಿಸಿದೆ. ಇದರಲ್ಲಿ 1.5-ಲೀಟರ್ ಅಟ್ಕಿನ್ಸನ್-ಸೈಕಲ್ ಡಿಒಹೆಚ್‌ಸಿ ಐ-ವಿಟಿಇಸಿ ನಾಲ್ಕು-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 98 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ ಮತ್ತು ಎರಡು ಮೋಟಾರ್‌ಗಳಿಗೆ ಹೊಂದಿಕೆಯಾಗುತ್ತದೆ.

ಹೊಸ ಎಲೆಕ್ಟ್ರಿಕ್-ಹೈಬ್ರಿಡ್ ಸೆಟಪ್ ಸಿಟಿ ಕಾರನ್ನು ಕೇವಲ 9.9 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳಲು ನೆರವಾಗಲಿದ್ದು, ಈ ಹೊಸ ಹೋಂಡಾ ಸಿಟಿ ಆರ್‌ಎಸ್ ಇ:ಹೆಚ್‌ಇವಿ ಕಾರು 173 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿರುತ್ತದೆ. ಈ ಹೈಬ್ರಿಡ್ ಕಾರು ಪ್ರತಿ ಲೀಟರ್ ಪೆಟ್ರೋಲ್‌ಗೆ 27 ಕಿ.ಮೀ.ಗೂ ಹೆಚ್ಚು ಮೈಲೇಜ್ ನೀಡುತ್ತದೆ ಎಂದು ಹೇಳಲಾಗಿದ್ದು, ಹೊಸ ಕಾರು ಈ ತಿಂಗಳಾಂತ್ಯಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ.

ಫೋಕ್ಸ್‌ವ್ಯಾಗನ್ ವರ್ಟಸ್
ಜನಪ್ರಿಯ ವಾಹನ ತಯಾರಕ ಕಂಪನಿ ಫೋಕ್ಸ್‌ವ್ಯಾಗನ್ ಇಂಡಿಯಾ ತನ್ನ ಬಹುನೀರಿಕ್ಷಿತ ಹೊಸ ವರ್ಟಸ್ ಸೆಡಾನ್ ಅನಾವರಣಗೊಳಿಸಿದ್ದು, ಈ ತಿಂಗಳ ಮಧ್ಯಂತರದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿಗಾಗಿ ಕಂಪನಿಯು ಬುಕ್ಕಿಂಗ್ ಆರಂಭಿಸಿದೆ.

ಹೊಸ ವರ್ಟಸ್ ಕಾರು ಸ್ಕೋಡಾ ಸ್ಲಾವಿಯಾದಂತೆಯೇ ಹೆಚ್ಚು ಸ್ಥಳೀಕರಿಸಿದ MQB A0 IN ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ್ದು, ಹೊಸ ಕಾರಿನಲ್ಲಿ 1.0 ಲೀಟರ್, 3-ಸಿಲಿಂಡರ್ TSI ಮತ್ತು 1.5 ಲೀಟರ್, 4-ಸಿಲಿಂಡರ್ TSI ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಗಳಿವೆ. ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡಲಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ. 9 ಲಕ್ಷದಿಂದ ರೂ. 16 ಲಕ್ಷ ಬೆಲೆ ಹೊಂದಲಿದೆ.

ಮಾರುತಿ ಎರ್ಟಿಗಾ/ಎಕ್ಸ್ಎಲ್6 ಫೇಸ್‌ಲಿಫ್ಟ್
ಮಾರುತಿ ಸುಜುಕಿಯು ತನ್ನ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಎರ್ಟಿಗಾ ಆವೃತ್ತಿಯನ್ನು ಪ್ರಮುಖ ಬದಲಾವಣೆಗಳೊಂದಿಗೆ ಶೀಘ್ರದಲ್ಲೇ ನವೀಕರಿಸಲಿದೆ. ಹೊಸ ಮಾದರಿಯಲ್ಲಿ ಈ ಬಾರಿ ಕಂಪನಿಯು ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ನೀಡಲಿದ್ದು, ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಬದಲಿಸಲಿದೆ.

ಇದರ ಜೊತಗೆ ಕಂಪನಿಯು ಎರ್ಟಿಗಾ ಪ್ರೀಮಿಯಂ ಮಾದರಿಯಾದ ಎಕ್ಸ್‌ಎಲ್6 ಮಾದರಿಯನ್ನು ಸಹ ಉನ್ನತೀಕರಿಸಲಿದ್ದು, ಹೊಸ ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಬಂಪರ್‌ಗಳೊಂದಿಗೆ ಸ್ವಲ್ಪ ಪರಿಷ್ಕೃತ ಮುಂಭಾಗವನ್ನು ಪಡೆಯಬಹುದಾಗಿದೆ. ಇದಲ್ಲದೆ ಹೊಸ ಎಕ್ಸ್ಎಲ್6 ಮಾದರಿಯು ಈ ಬಾರಿ 6 ಸೀಟರ್ ಮಾದರಿಯಲ್ಲಿ ಮಾತ್ರವಲ್ಲದೆ 7-ಸೀಟರ್ ಕಾನ್ಫಿಗರೇಶನ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸ್ಕೋಡಾ ಕುಶಾಕ್ ಮಾಂಟೆ ಕಾರ್ಲೋ
ಸ್ಕೋಡಾಕಂಪನಿಯು ತನ್ನ ಹೊಚ್ಚ ಹೊಸ ಕುಶಾಕ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಕಂಪನಿಯು ಕುಶಾಕ್ ಮಾದರಿಯಲ್ಲಿ ಶೀಘ್ರದಲ್ಲೇ ವಿಶೇಷ ಆವೃತ್ತಿಯೊಂದನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ತನ್ನ ಕಾರು ಮಾದರಿಗಳಲ್ಲಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್ ಮಾರಾಟ ಹೊಂದಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್‌ನಲ್ಲಿ ಸ್ಟ್ಯಾಂಡರ್ಡ್ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆ ಆಕರ್ಷಕ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದೆ.

ಹ್ಯುಂಡೈ ಕ್ರೆಟಾ ನೈಟ್ ಎಡಿಷನ್
ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯು ಹ್ಯುಂಡೈ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಮಾದರಿಗಾಗಿ ಕಂಪನಿಯು ಶೀಘ್ರದಲ್ಲಿಯೇ ನೈಟ್ ಎಡಿಷನ್ ಬಿಡುಗಡೆ ಮಾಡುತ್ತಿದೆ.

ಕ್ರೆಟಾ ನೈಟ್ ಎಡಿಷನ್ ಸಂಪೂರ್ಣವಾಗಿ ಕಪ್ಪು ಮಿಶ್ರಿತ ಬಣ್ಣದ ಆಯ್ಕೆ ಹೊಂದಿದ್ದು, ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯಲಿದೆ. ಹೊಸ ಕಾರು ಮಾದರಿಗಾಗಿ ಕಂಪನಿಯು ಈಗಾಗಲೇ ಬುಕಿಂಗ್ ಆರಂಭಿಸಿದ್ದು, ಎಸ್, ಎಸ್ ಪ್ಲಸ್ ಮತ್ತು ಎಸ್ಎಕ್ಸ್ ಆಪ್ಷನ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿರವಿದೆ.

2022ರ ಟಾಟಾ ನೆಕ್ಸಾನ್ ಇವಿ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯ ನೆಕ್ಸಾನ್ ಇವಿ ಮಾದರಿಯನ್ನು ಉನ್ನತೀಕರಿಸಿದ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಏಪ್ರಿಲ್ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ ಎನ್ನಲಾಗಿದೆ.

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ನೆಕ್ಸಾನ್ ಇವಿ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದ್ದು, 2022ರ ಆವೃತ್ತಿಯು 40kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದೆ.

ಮರ್ಸಿಡಿಸ್ ಬೆಂಝ್ ಹೊಸ ಇಕ್ಯೂಎಸ್ ಎಸ್‌ಯುವಿ
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಈಗಾಗಲೇ ವಿವಿಧ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಗಳೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಕಂಪನಿಯು ಶೀಘ್ರದಲ್ಲಿಯೇ ಇಕ್ಯೂಎಸ್ ಎಸ್‌ಯುವಿ ಸೇರಿದಂತೆ ಮತ್ತಷ್ಟು ಹೊಸ ಇವಿ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.

ಹೊಸ ಇಕ್ಯೂಎಸ್ ಎಸ್‌ಯುವಿ ಮಾದರಿಯು ಕಳೆದ ವರ್ಷ ಅನಾವರಣಗೊಂಡಿದ್ದ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಕೆಲವು ಪ್ರಾಯೋಗಿಕ ಸೌಲಭ್ಯ ಗಳನ್ನು ಹೊಂದಿರುವ ಹೊಸ ಕಾರು ಮಾದರಿಯು EVA2 ಪ್ಲಾಟ್‌ಫಾರ್ಮ್ ಅಡಿ ಅಭಿವೃದ್ದಿಗೊಂಡಿದೆ.