ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಇಂಧನ ಆಧರಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ವಾಹನಗಳ ಬಳಕೆ ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಹೊಸ ಯೋಜನೆಗಳ ಪರಿಣಾಮ ಇವಿ ಕಾರುಗಳ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಇವಿ ಕಾರುಗಳು ಬಿಡುಗಡೆಗೆ ಸಿದ್ದವಾಗುತ್ತಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳ ಮಹತ್ವದ ನಿರ್ಣಯದ ಪರಿಣಾಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ವಿಶ್ವಾದ್ಯಂತ ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿದ್ದು, ಭಾರತದಲ್ಲೂ ಕೂಡಾ ಇವಿ ಕಾರುಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಅವಧಿಯಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲು ಸಜ್ಜುಗೊಂಡಿವೆ. ಇವಿ ಕಾರುಗಳು ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಎನ್ನಿಸಲಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಇವಿ ಕಾರುಗಳಲ್ಲಿ ಬಜೆಟ್ ಮತ್ತು ಐಷಾರಾಮಿ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಕಿಯಾ ಇವಿ6 ಎಲೆಕ್ಟ್ರಿಕ್

ಕಿಯಾ ಇಂಡಿಯಾ ಕಂಪನಿಯು ತನ್ನ ಮೊದಲ ಇವಿ ಕಾರು ಮಾದರಿಯಾದ ಇವಿ6 ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಜೂನ್ 2ರಂದು ಮಾರುಕಟ್ಟೆ ಪ್ರವೇಶಿಸುತ್ತಿದೆ. ಕಿಯಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿಗಾಗಿ ರೂ.3 ಲಕ್ಷ ಮುಂಗಡದೊಂದಿಗೆ ಬುಕಿಂಗ್ ಅನ್ನು ಆರಂಭಿಸಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಇವಿ6 ಎಲೆಕ್ಟ್ರಿಕ್ ಕಾರು ಕಂಪನಿಯ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (E-GMP) ಅನ್ನು ಆಧರಿಸಿದ್ದು, ಇದು ಬ್ರ್ಯಾಂಡ್‌ನ ಭವಿಷ್ಯದ ಶ್ರೇಣಿಯ ಎಲೆಕ್ಟ್ರಿಕ್ ಮಾದರಿಗಳ ಆಧಾರವಾಗಿದೆ. ಹೊಸ ಕಾರಿನಲ್ಲಿ ಕಂಪನಿಯು 77.4kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ ಜೋಡಣೆ ಮಾಡುತ್ತಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 528 ಕಿ.ಮೀ ರೇಂಜ್ ಅನ್ನು ನೀಡಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಭಾರತದಲ್ಲಿ ಬಿಡುಗಡೆಯಾಗಲಿರುವ ಇವಿ6 ಜಿಟಿ ಲೈನ್ ಸಂಪೂರ್ಣವಾಗಿ ವಿದೇಶಿಯ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳುತ್ತಿರುವುದರಿಂದ ಬೆಲೆಯು ತುಸು ದುಬಾರಿಯಾಗಿರಲಿದ್ದು, ಈ ಹೊಸ ಕಾರು ಮಾದರಿಗಳಲ್ಲಿ ಎಲ್ಲಾ ತಂತ್ರಜ್ಞಾನ ಆಯ್ಜೆಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಪ್ರಮುಖ ಐಷಾರಾಮಿ ಕಾರುಗಳಿಗೆ ಇದು ಪೈಪೋಟಿ ನೀಡಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹ್ಯುಂಡೈ ಐಯಾನಿಕ್ 5

2028ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲೂ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಐದು ವರ್ಷಗಳಲ್ಲಿ ಆರು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆಗಾಗಿ ಕಂಪನಿಯು ಸುಮಾರು ರೂ. 4 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಆರು ಹೊಸ ಎಲೆಕ್ಟ್ರಿಕ್ ಕಾರುಗಳ ಪೈಕಿ ಐಯಾನಿಕ್ 5 ಕ್ರಾಸ್ಓವರ್ ಎಸ್‌ಯುವಿ ಮಾದರಿಯು ಕೂಡಾ ಒಂದಾಗಿದ್ದು, ಹೊಸ ಕಾರು ಮಾದರಿಯನ್ನು ಹ್ಯುಂಡೈ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಪರಿಚಯಿಸುತ್ತಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಐಯಾನಿಕ್ 5 ಮಾದರಿಯು ಕಿಯಾ ಇವಿ6 ಮಾದರಿಯೆಂತೆ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (E-GMP) ಅನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಎರಡು ಕಾರು ಮಾದರಿಗಳು ಬಹುತೇಕ ಒಂದೇ ಮಾದರಿಯ ತಾಂತ್ರಿಕ ಸೌಲಭ್ಯಗಳೊಂದಿಗೆ ದುಬಾರಿ ಬೆಲೆ ಹೊಂದಿರಲಿವೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹ್ಯುಂಡೈ ಕೊನಾ ಫೇಸ್‌ಲಿಫ್ಟ್

ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯಾದ ಕೊನಾ ಎಸ್‌ಯುವಿ ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುತ್ತಿದ್ದು, ಕಂಪನಿಯು ಇದೀಗ ಕೊನಾ ಕಾರಿನ ನವೀಕೃತ ಮಾದರಿಯನ್ನು ವಿವಿಧ ಮಾರುಕಟ್ಟೆಗಳಿಗೆ ಪರಿಚಯಿಸುತ್ತಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಪ್ರಮಾಣದ ಮಾರಾಟ ಸಂಖ್ಯೆ ಹೊಂದಿರುವ ಹ್ಯುಂಡೈ ಕೊನಾ ಇವಿ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ನವೀಕೃತ ಮಾದರಿಯನ್ನು ಪರಿಚಯಿಸಿರುವ ಹ್ಯುಂಡೈ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ನವೀಕೃತ ಕೊನಾ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಕಾರು ಸಾಮಾನ್ಯ ಕಾರುಗಳಿಂತ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಮಹೀಂದ್ರಾ ಇಎಕ್ಸ್‌ಯುವಿ300

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಹೊಸ ಇಎಕ್ಸ್‌ಯುವಿ(eXUV300) ಕಾರನ್ನು ಮಾರುಕಟ್ಟೆಯಲ್ಲಿನ ಸನ್ನಿವೇಶವನ್ನು ಆಧರಿಸಿ ಇದೀಗ ಬಿಡುಗಡೆ ಮಾಡಲು ಮುಂದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಕಾರು ಈ ವರ್ಷಾಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಕಂಪನಿಯು ಇಎಕ್ಸ್‌ಯುವಿ300 ಬಿಡುಗಡೆಗೂ ಮುನ್ನ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಇವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿ ಟಾಟಾ ನೆಕ್ಸಾನ್ ಇವಿ ಮಾದರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಹೊಸ ಇಎಕ್ಸ್‌ಯುವಿ300 ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 380 ಕಿ.ಮೀ ನಿಂದ 420 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಟಾಟಾ ನೆಕ್ಸಾನ್ ಇವಿ ಬೆಲೆಗೆ ಸರಿಸಮನಾಗಿ ಬಿಡುಗಡೆ ಹೊಂದಬಹುದಾಗಿದ್ದು, ಹೊಸ ಕಾರು ಎಂಜಿ ಜೆಡ್ಎಸ್ ಇವಿ ಮಾದರಿಗೂ ಸಹ ಪೈಪೋಟಿ ನೀಡಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ವೊಲ್ವೊ ಎಕ್ಸ್‌ಸಿ40 ರಿಚಾರ್ಜ್

ಸ್ವೀಡಿಷ್ ಕಾರು ಉತ್ಪಾದನಾ ಕಂಪನಿಯಾಗಿರುವ ವೊಲ್ವೊ ಭಾರತದಲ್ಲಿ ತನ್ನ ಹೊಚ್ಚ ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ವೊಲ್ವೊ ಎಕ್ಸ್‌ಸಿ40 ರಿಚಾರ್ಜ್ ಸ್ಟ್ಯಾಂಡರ್ಡ್ ವೊಲ್ವೊ ಎಕ್ಸ್‌ಸಿ40 ಎಸ್‍ಯುವಿಯನ್ನು ಆಧರಿಸಿದ ವಾಹನವಾಗಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಎಕ್ಸ್‌ಸಿ40 ರಿಚಾರ್ಜ್ ಮಾದರಿಯನ್ನು ಕಂಪನಿಯು ಭಾರತಕ್ಕೆ ಸಂಪೂರ್ಣವಾಗಿ ನಿರ್ಮಿಸಿದ ಯುನಿಟ್ (ಸಿಬಿಯು) ಆಗಿ ತರಲಾಗುವುದು ಮತ್ತು ಇದು ಶೀಘ್ರದಲ್ಲೇ CKD (ಸಂಪೂರ್ಣವಾಗಿ ನಾಕ್ಡ್ ಡೌನ್) ಯುನಿಟ್ ಆಗಿ ಲಭ್ಯವಿರುವುದಿಲ್ಲ. ಹೊಸ ವೊಲ್ವೊ ಎಕ್ಸ್‌ಸಿ40 ರಿಚಾರ್ಜ್ ಸಿಬಿಯು ಮಾಡೆಲ್ ಆಗಿರುವುದರಿಂದ ವೊಲ್ವೊ ಎಕ್ಸ್‌ಸಿ40 ರಿಚಾರ್ಜ್ ಸ್ವಲ್ಪ ಹೆಚ್ಚು ಬೆಲೆಯನ್ನು ಹೊಂದಿರುತ್ತದೆ. ಭಾರತದಲ್ಲಿ ಸ್ಟ್ಯಾಂಡರ್ಡ್ ವೊಲ್ವೊ ಎಕ್ಸ್‌ಸಿ40 ಎಸ್‍ಯುವಿಯ ಬೆಲೆಯು ರೂ. 75 ಲಕ್ಷವಾಗಿದ್ದು, ಇದು ಮುಂಬರುವ ಅಗಸ್ಟ್ ಅಥವಾ ಸೆಪ್ಟೆಂಬರ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್

ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಟಿಗೋರ್ ಎಲೆಕ್ಟ್ರಿಕ್ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೆ ಆಲ್‌ಟ್ರೊಜ್ ಇವಿ ಮಾದರಿಯನ್ನು ಸಹ ಬಿಡುಗಡೆ ಮಾಡಲಿದೆ. ಹೊಸ ಕಾರು 2022ರ ಕೊನೆಯಲ್ಲಿ ಬಿಡುಗಡೆಯಾಗಬಹುದಾಗಿದ್ದು, ಆಕರ್ಷಕ ಬೆಲೆಯೊಂದಿಗೆ ಒಂದು ಬಾರಿ ಚಾರ್ಜ್ ಮಾಡಿದರೆ ಕನಿಷ್ಠ 300 ರಿಂದ ಗರಿಷ್ಠ 320 ಕಿ.ಮೀ ಪ್ರಯಾಣ ಮಾಡಬಹುದಾಗಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಕಂಪನಿಯು ಇವಿ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಆರಂಭಿಸಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಮರ್ಸಿಡಿಸ್ ಬೆಂಝ್ ಇಕ್ಯೂಎಸ್

ಜರ್ಮನ್ ಕಾರು ತಯಾರಕ ಕಂಪನಿ ಮರ್ಸಿಡಿಸ್-ಬೆಂಝ್ ತನ್ನ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಇಕ್ಯೂಎಲ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಇದು ಕಂಪನಿಯ ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾಗಿದೆ. ಹೊಸ ಕಾರನ್ನು 7-ಸೀಟರ್ ಆಯ್ಕೆಯಲ್ಲಿ ಪರಿಚಯಿಸಲಾಗುತ್ತಿದ್ದು, ಕಂಪನಿಯು ಆರಂಭದಲ್ಲಿ ಹೊಸ ಕಾರು ಮಾದರಿಯನ್ನು ಯುರೋಪ್ ಮತ್ತು ಅಮೆರಿಕದಲ್ಲಿ ತದನಂತರ ಭಾರತ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಿದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಇಕ್ಯೂಎಸ್ ಎಲೆಕ್ಟ್ರಿಕ್ ಎಸ್‌ಯುವಿಯು ಕಂಪನಿಯ ಎರಡನೇ ದೀರ್ಘ ಶ್ರೇಣಿಯ ಎಲೆಕ್ಟ್ರಿಕ್ ಕಾರು ಮಾದರಿಯಾಗಿದ್ದು, ಇಕ್ಯೂಎಸ್ 450 ಪ್ಲಸ್ ಮತ್ತು ಇಕ್ಯೂಎಸ್ 580 ಎನ್ನುವ ಎರಡೂ ಟ್ರಿಮ್‌ಗಳಲ್ಲಿ ಲಭ್ಯವಿರುವ ಹೊಸ ಕಾರು 108.7 kWh ಲಿಥಿಯಂ-ಐಯಾನ್ ಬ್ಯಾಟರಿಯೊಂದಿಗೆ ಗರಿಷ್ಠ 600 ಕಿ.ಮೀ ಮೈಲೇಜ್ ಖಾತ್ರಿಪಡಿಸುತ್ತದೆ.

ಭಾರತದಲ್ಲಿ ಬಿಡುಗಡೆಗಾಗಿ ಸಿದ್ದವಾಗಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!

ಎಂಜಿ - ಎಂಟ್ರಿ ಲೆವೆಲ್ ಇವಿ

ಎಂಜಿ ಮೋಟಾರ್ ಕಂಪನಿಯು ತನ್ನ ಎಲೆಕ್ಟ್ರಿಕ್ ಕಾರು ಶ್ರೇಣಿಯಲ್ಲಿ ಭಾರತೀಯ ಮಾರುಕಟ್ಟೆಗೆ 2 ಹೊಸ ಮಾದರಿಯ ಕಾರುಗಳನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ. ಎರಡರಲ್ಲಿ ಒಂದನ್ನು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕಾರು ಮತ್ತು ಇನ್ನೊಂದು ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿ ಪರಿಚಯಿಸಲಿದ್ದು, ಎರಡೂ ಹೊಸ ಕಾರುಗಳು ಈ ವರ್ಷದ ಅಂತ್ಯದ ವೇಳೆಗೆ ಅಥವಾ 2023 ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

Most Read Articles

Kannada
English summary
Upcoming electric cars in india kia ev6 volvo xc40 recharge and more
Story first published: Saturday, May 28, 2022, 17:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X