ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲಿಯೇ ಹಲವು ಹೊಸ ಇವಿ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ.

Recommended Video

New Maruti Alto K10 KANNADA Review | What’s New On The Affordable Hatchback? Mileage & Comfort

ಹೆಚ್ಚುತ್ತಿರುವ ಇಂಧನ ದರ ಪರಿಣಾಮ ಇವಿ ವಾಹನಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ವಿವಿಧ ಇವಿ ಬ್ರಾಂಡ್‌ಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಎಲೆಕ್ಟ್ರಿಕ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗೆ ಹೋಲಿಕೆ ಮಾಡಿದರೆ ತುಸು ದುಬಾರಿ ಎನ್ನಿಸಲಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಇವಿ ಕಾರುಗಳಲ್ಲಿ ಬಜೆಟ್ ಮತ್ತು ಐಷಾರಾಮಿ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಮಹೀಂದ್ರಾ ಇಎಕ್ಸ್‌ಯುವಿ400

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಹೊಸ ಇಎಕ್ಸ್‌ಯುವಿ300 ಮಾದರಿಯು ಇದೀಗ ಮಾರುಕಟ್ಟೆಯಲ್ಲಿನ ಸನ್ನಿವೇಶವನ್ನು ಆಧರಿಸಿ ಎಕ್ಸ್‌ಯುವಿ400 ಹೆಸರಿನಲ್ಲಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ 8ರಂದು ಮಾರುಕಟ್ಟೆ ಪ್ರವೇಶಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹೊಸ ಎಕ್ಸ್‌ಯುವಿ400 ಮಾದರಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ಎರಡು ರೀತಿಯ ಬ್ಯಾಟರಿ ಆಯ್ಕೆ ಪೆಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್‌ಗೆ ಕನಿಷ್ಠ 350 ಕಿ.ಮೀ ನಿಂದ 480 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌‌ಗಳನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಇದು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಯು ರೂ. 20 ಲಕ್ಷ ಬೆಲೆ ಹೊಂದಬಹುದಾಗಿದ್ದು, ಸ್ಟ್ಯಾಂಡರ್ಡ್ ಮತ್ತು ಎಕ್ಸ್ಸೆಂಡ್ ಮಾದರಿಗಳೊಂದಿಗೆ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳಿಗೆ ಪೈಪೋಟಿಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹ್ಯುಂಡೈ ಐಯಾನಿಕ್ 5

2028ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲೂ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಐದು ವರ್ಷಗಳಲ್ಲಿ ಆರು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆಗಾಗಿ ಕಂಪನಿಯು ಸುಮಾರು ರೂ. 4 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಆರು ಹೊಸ ಎಲೆಕ್ಟ್ರಿಕ್ ಕಾರುಗಳ ಪೈಕಿ ಐಯಾನಿಕ್ 5 ಕ್ರಾಸ್ಓವರ್ ಎಸ್‌ಯುವಿ ಮಾದರಿಯು ಕೂಡಾ ಒಂದಾಗಿದ್ದು, ಹೊಸ ಕಾರು ಮಾದರಿಯನ್ನು ಹ್ಯುಂಡೈ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಪರಿಚಯಿಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹೊಸ ಐಯಾನಿಕ್ 5 ಮಾದರಿಯು ಕಿಯಾ ಇವಿ6 ಮಾದರಿಯೆಂತೆ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (E-GMP) ಅನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಹೊಸ ಕಾರು ಈ ವರ್ಷಾಂತ್ಯಕ್ಕೆ ಇಲ್ಲವೇ 2023ರ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹ್ಯುಂಡೈ ಕೊನಾ ಫೇಸ್‌ಲಿಫ್ಟ್

ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯಾದ ಕೊನಾ ಎಸ್‌ಯುವಿ ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುತ್ತಿದ್ದು, ಕಂಪನಿಯು ಇದೀಗ ಕೊನಾ ಕಾರಿನ ನವೀಕೃತ ಮಾದರಿಯನ್ನು ವಿವಿಧ ಮಾರುಕಟ್ಟೆಗಳಿಗೆ ಪರಿಚಯಿಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಪ್ರಮಾಣದ ಮಾರಾಟ ಸಂಖ್ಯೆ ಹೊಂದಿರುವ ಹ್ಯುಂಡೈ ಕೊನಾ ಇವಿ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ನವೀಕೃತ ಮಾದರಿಯನ್ನು ಪರಿಚಯಿಸಿರುವ ಹ್ಯುಂಡೈ ಕಂಪನಿಯು ಮುಂಬರುವ ಕೆಲವೇ ದಿನಗಳಲ್ಲಿ ಭಾರತದಲ್ಲೂ ನವೀಕೃತ ಕೊನಾ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹೊಸ ಕಾರು ಸಾಮಾನ್ಯ ಕಾರುಗಳಿಂತ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಮರ್ಸಿಡಿಸ್ ಬೆಂಝ್ ಇಕ್ಯೂಎಸ್

ಜರ್ಮನ್ ಕಾರು ತಯಾರಕ ಕಂಪನಿ ಮರ್ಸಿಡಿಸ್-ಬೆಂಝ್ ತನ್ನ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಇಕ್ಯೂಎಲ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಇದು ಕಂಪನಿಯ ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹೊಸ ಕಾರನ್ನು 7-ಸೀಟರ್ ಆಯ್ಕೆಯಲ್ಲಿ ಪರಿಚಯಿಸಲಾಗುತ್ತಿದ್ದು, ಕಂಪನಿಯು ಆರಂಭದಲ್ಲಿ ಹೊಸ ಕಾರು ಮಾದರಿಯನ್ನು ಯುರೋಪ್ ಮತ್ತು ಅಮೆರಿಕದಲ್ಲಿ ತದನಂತರ ಭಾರತ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಇಕ್ಯೂಎಸ್ ಎಲೆಕ್ಟ್ರಿಕ್ ಎಸ್‌ಯುವಿಯು ಕಂಪನಿಯ ಎರಡನೇ ದೀರ್ಘ ಶ್ರೇಣಿಯ ಎಲೆಕ್ಟ್ರಿಕ್ ಕಾರು ಮಾದರಿಯಾಗಿದ್ದು, ಇಕ್ಯೂಎಸ್ 450 ಪ್ಲಸ್ ಮತ್ತು ಇಕ್ಯೂಎಸ್ 580 ಎನ್ನುವ ಎರಡೂ ಟ್ರಿಮ್‌ಗಳಲ್ಲಿ ಲಭ್ಯವಿರುವ ಹೊಸ ಕಾರು 108.7 kWh ಲಿಥಿಯಂ-ಐಯಾನ್ ಬ್ಯಾಟರಿಯೊಂದಿಗೆ ಗರಿಷ್ಠ 600 ಕಿ.ಮೀ ಮೈಲೇಜ್ ಖಾತ್ರಿಪಡಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಎಂಜಿ - ಎಂಟ್ರಿ ಲೆವೆಲ್ ಇವಿ

ಎಂಜಿ ಮೋಟಾರ್ ಕಂಪನಿಯು ತನ್ನ ಎಲೆಕ್ಟ್ರಿಕ್ ಕಾರು ಶ್ರೇಣಿಯಲ್ಲಿ ಭಾರತೀಯ ಮಾರುಕಟ್ಟೆಗೆ 2 ಹೊಸ ಮಾದರಿಯ ಕಾರುಗಳನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಎರಡರಲ್ಲಿ ಒಂದನ್ನು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕಾರು ಮತ್ತು ಇನ್ನೊಂದು ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿ ಪರಿಚಯಿಸಲಿದ್ದು, ಎರಡೂ ಹೊಸ ಕಾರುಗಳು ಈ ವರ್ಷದ ಅಂತ್ಯದ ವೇಳೆಗೆ ಅಥವಾ 2023 ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

Most Read Articles

Kannada
English summary
Upcoming electric cars in india mahindra xuv400 kona facelift ioniq 5 and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X