ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಹೊಸ ವಾಹನಗಳ ಮಾರಾಟದಲ್ಲಿ ಏರಿಳಿತ ಕಂಡುಬರುತ್ತಿದ್ದರೂ ಹೊಸ ಕಾರು ಮಾದರಿಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದ್ದು, ಈ ತಿಂಗಳಾಂತ್ಯಕ್ಕೆ ಹಲವು ಹೊಸ ಕಾರು ಮಾದರಿಗಳು ಭಾರತದಲ್ಲಿ ಬಿಡುಗಡೆಗಾಗಿ ಸಜ್ಜುಗೊಂಡಿವೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಭಾರತದಲ್ಲಿ ಪ್ರಮುಖ ಕಾರು ತಯಾರಕ ಕಂಪನಿಗಳು ತಮ್ಮ ಪ್ರತಿಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ವಿವಿಧ ಹೊಸ ಮಾದರಿಯ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದ್ದು, ಮೇ ತಿಂಗಳಲ್ಲೂ ಪ್ರಮುಖ ಕಾರು ಮಾದರಿಗಳು ಮಾರುಕಟ್ಟೆಯನ್ನು ಪ್ರವೇಶಿಸಲು ಸಿದ್ದಗೊಂಡಿವೆ. ಹೊಸ ಕಾರು ಮಾದರಿಗಳ ಪಟ್ಟಿಯಲ್ಲಿ ಮಧ್ಯಮ ಕ್ರಮಾಂಕದ ಕಾರು ಮಾದರಿಗಳಲ್ಲದೆ ಪ್ರಮುಖ ಐಷಾರಾಮಿ ಕಾರು ಮಾದರಿಗಳು ಸಹ ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರು ಮಾದರಿಗಳು ಸಹ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೋಂಡಾ ಸಿಟಿ ಹೈಬ್ರಿಡ್

ಹೊಸ ಹೋಂಡಾ ಸಿಟಿ ಹೈಬ್ರಿಡ್ ಮಾದರಿಯಲ್ಲಿ ಮಲ್ಟಿ-ಮೋಡ್ ಡ್ರೈವ್ (ಐ-ಎಂಎಂಡಿ) ಪವರ್‌ಟ್ರೇನ್ ಜೋಡಣೆ ಮಾಡಲಾಗಿದ್ದು, ಅದು ಐ-ಡಿಸಿಡಿಯನ್ನು ಬದಲಾಯಿಸಿದೆ. ಇದರಲ್ಲಿ 1.5-ಲೀಟರ್ ಅಟ್ಕಿನ್ಸನ್-ಸೈಕಲ್ ಡಿಒಹೆಚ್‌ಸಿ ಐ-ವಿಟಿಇಸಿ ನಾಲ್ಕು-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಎರಡು ಮೋಟಾರ್‌‌ಗಳ ಮೂಲಕ 98 ಬಿಹೆಚ್‍ಪಿ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಎಲೆಕ್ಟ್ರಿಕ್-ಹೈಬ್ರಿಡ್ ಸೆಟಪ್ ಸಿಟಿ ಕಾರನ್ನು ಕೇವಲ 9.9 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳಲು ನೆರವಾಗಲಿದ್ದು, ಈ ಹೊಸ ಹೋಂಡಾ ಸಿಟಿ ಆರ್‌ಎಸ್ ಇ:ಹೆಚ್‌ಇವಿ ಕಾರು 173 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿರುತ್ತದೆ. ಈ ಹೈಬ್ರಿಡ್ ಕಾರು ಪ್ರತಿ ಲೀಟರ್ ಪೆಟ್ರೋಲ್‌ಗೆ 27 ಕಿ.ಮೀ.ಗೂ ಹೆಚ್ಚು ಮೈಲೇಜ್ ನೀಡುತ್ತದೆ ಎಂದು ಹೇಳಲಾಗಿದ್ದು, ಹೊಸ ಕಾರು ಇದೇ ತಿಂಗಳು 4ರಂದು ಬಿಡುಗಡೆಯಾಗಲಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಫೋಕ್ಸ್‌ವ್ಯಾಗನ್ ವರ್ಟಸ್

ಜನಪ್ರಿಯ ವಾಹನ ತಯಾರಕ ಕಂಪನಿ ಫೋಕ್ಸ್‌ವ್ಯಾಗನ್ ಇಂಡಿಯಾ ತನ್ನ ಬಹುನೀರಿಕ್ಷಿತ ಹೊಸ ವರ್ಟಸ್ ಸೆಡಾನ್ ಅನಾವರಣಗೊಳಿಸಿದ್ದು, ಈ ತಿಂಗಳ ಮಧ್ಯಂತರದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿಗಾಗಿ ಕಂಪನಿಯು ಈಗಾಗಲೇ ಬುಕಿಂಗ್ ಆರಂಭಿಸಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ವರ್ಟಸ್ ಕಾರು ಸ್ಕೋಡಾ ಸ್ಲಾವಿಯಾದಂತೆಯೇ ಹೆಚ್ಚು ಸ್ಥಳೀಕರಿಸಿದ MQB A0 IN ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ್ದು, ಹೊಸ ಕಾರಿನಲ್ಲಿ 1.0 ಲೀಟರ್, 3-ಸಿಲಿಂಡರ್ TSI ಮತ್ತು 1.5 ಲೀಟರ್, 4-ಸಿಲಿಂಡರ್ TSI ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಆಯ್ಕೆಗಳಿವೆ. ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡಲಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ. 9 ಲಕ್ಷದಿಂದ ರೂ. 16 ಲಕ್ಷ ಬೆಲೆ ಹೊಂದಿರಲಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಸ್ಕೋಡಾ ಕುಶಾಕ್ ಮಾಂಟೆ ಕಾರ್ಲೋ

ಸ್ಕೋಡಾ ಕಂಪನಿಯು ತನ್ನ ಹೊಚ್ಚ ಹೊಸ ಕುಶಾಕ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಕಂಪನಿಯು ಕುಶಾಕ್ ಮಾದರಿಯಲ್ಲಿ ಇದೇ ತಿಂಗಳು 9ರಂದು ವಿಶೇಷ ಆವೃತ್ತಿಯೊಂದನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಪ್ರಸ್ತುತ ಮಾರುಕಟ್ಟೆಯಲ್ಲಿ ತನ್ನ ಕಾರು ಮಾದರಿಗಳಲ್ಲಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್ ಮಾರಾಟ ಹೊಂದಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್‌ನಲ್ಲಿ ಸ್ಟ್ಯಾಂಡರ್ಡ್ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆ ಆಕರ್ಷಕ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

2022ರ ಟಾಟಾ ನೆಕ್ಸಾನ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯ ನೆಕ್ಸಾನ್ ಇವಿ ಮಾದರಿಯನ್ನು ಉನ್ನತೀಕರಿಸಿದ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಇದೇ ತಿಂಗಳು 11ರಂದು ಬಿಡುಗಡೆಯಾಗಬಹುದಾಗಿದೆ ಎನ್ನಲಾಗಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ನೆಕ್ಸಾನ್ ಇವಿ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದ್ದು, 2022ರ ಆವೃತ್ತಿಯು 40kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರು

ಮರ್ಸಿಡಿಸ್-ಬೆಂಝ್ ಸಿ-ಕ್ಲಾಸ್ ಬಹಳ ಹಿಂದಿನಿಂದಲೂ ಕಂಪನಿಯ ಸರಣಿಯಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ. ಇದೀಗ ಮರ್ಸಿಡಿಸ್ ಬೆಂಝ್ ಕಂಪನಿಯು 5ನೇ ಜನರೇಷನ್ ಸಿ-ಕ್ಲಾಸ್ ಕಾರು ಭಾರತದಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮರ್ಸಿಡಿಸ್ ಬೆಂಜ್ ಇಂಡಿಯಾ ಹೊಸ ಸಿ ಕ್ಲಾಸ್ ಸೆಡಾನ್ ಉತ್ಪಾದನೆಯನ್ನು ಈಗಾಗಲೇ ಪ್ರಾರಂಭಿಸಿದ್ದು, ಹೊಸ ಕಾರಿನ ಬುಕಿಂಗ್ ಟೋಕನ್ ಮೊತ್ತವನ್ನು ರೂ. 50 ಸಾವಿರ ನಿಗದಿಪಡಿಸಲಾಗಿದೆ. ಹೊಸ ಮರ್ಸಿಡಿಸ್-ಬೆಂಝ್ ಸಿ-ಕ್ಲಾಸ್ ಕಾರು ಬಾಹ್ಯ ಮತ್ತು ಆಂತರಿಕ ನವೀಕರಣಗಳೊಂದಿಗೆ ಬರಲಿದ್ದು, ಹೊಸ ತಲೆಮಾರಿನ ಬಹುನಿರೀಕ್ಷಿತ ಮರ್ಸಿಡಿಸ್-ಬೆಂಝ್ ಸಿ-ಕ್ಲಾಸ್ ಮೇ 10ರ 2022 ರಂದು ಭಾರತದಲ್ಲಿ ಪಾದಾರ್ಪಣೆ ಮಾಡಲಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಜೀಪ್ ಮೆರಿಡಿಯನ್

ಜೀಪ್ ಮೆರಿಡಿಯನ್ ಭಾರತದಲ್ಲಿ ಟೊಯೊಟಾ ಫಾರ್ಚೂನರ್, ಸ್ಕೋಡಾ ಕೊಡಿಯಾಕ್ ಮತ್ತು ಎಂಜಿ ಗ್ಲೋಸ್ಟರ್‌ಗಳೊಂದಿಗೆ ಸ್ಪರ್ಧಿಸಲಿದೆ. ಜೀಪ್ ಮೆರಿಡಿಯನ್ ಅನ್ನು ಫಿಯೆಟ್ ಕ್ರಿಸ್ಲರ್ ಆಟೋದ ಹೊಸ 4X4 ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗಿದೆ. ಜೀಪ್ ಕಂಪಾಸ್ ಮತ್ತು ರೆನೆಗೇಡ್ ಎಸ್‌ಯುವಿಗಳಲ್ಲೂ ಅದೇ ಪ್ಲಾಟ್‌ಫಾರ್ಮ್ ಬಳಸಲಾಗುತ್ತಿದ್ದು, ಮೆರಿಡಿಯನ್ ಮಾದರಿಯು 7 ಸೀಟರ್ ಸೌಲಭ್ಯ ಹೊಂದಿದೆ.

ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಹೊಸ ಕಾರು 2.0-ಲೀಟರ್ 4-ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 9-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ ಬಾಕ್ಸ್‌ ಅನ್ನು ಒಳಗೊಂಡಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.35 ಲಕ್ಷ ಬೆಲೆ ಹೊಂದಿರಲಿದೆ.

Article Published On: Monday, May 2, 2022, 10:18 [IST]
English summary
Upcoming new car launches in may 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+