ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಹೊಸ ವಾಹನಗಳ ಮಾರಾಟದಲ್ಲಿ ಕುಸಿತ ಕಂಡುಬರುತ್ತಿದ್ದರೂ ಹೊಸ ಕಾರು ಮಾದರಿಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದ್ದು, ಮುಂದಿನ ತಿಂಗಳು ಏಪ್ರಿಲ್ ಅವಧಿಯಲ್ಲಿ ಹಲವು ಹೊಸ ಕಾರು ಮಾದರಿಗಳು ಭಾರತದಲ್ಲಿ ಬಿಡುಗಡೆಗಾಗಿ ಸಿದ್ದಗೊಂಡಿವೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಭಾರತದಲ್ಲಿ ಪ್ರಮುಖ ಕಾರು ತಯಾರಕ ಕಂಪನಿಗಳು ತಮ್ಮ ಪ್ರತಿಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ವಿವಿಧ ಹೊಸ ಮಾದರಿಯ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದ್ದು, ಏಪ್ರಿಲ್ ಅವಧಿಯಲ್ಲೂ ಪ್ರಮುಖ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದಗೊಂಡಿವೆ. ಹೊಸ ಕಾರು ಮಾದರಿಗಳ ಪಟ್ಟಿಯಲ್ಲಿ ಮಧ್ಯಮ ಕ್ರಮಾಂಕದ ಕಾರು ಮಾದರಿಗಳಲ್ಲದೆ ಪ್ರಮುಖ ಐಷಾರಾಮಿ ಕಾರು ಮಾದರಿಗಳು ಸಹ ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಮರ್ಸಿಡಿಸ್ ಬೆಂಝ್ ಹೊಸ ಇಕ್ಯೂಎಸ್ ಎಸ್‌ಯುವಿ

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಈಗಾಗಲೇ ವಿವಿಧ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಗಳೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಕಂಪನಿಯು ಶೀಘ್ರದಲ್ಲಿಯೇ ಇಕ್ಯೂಎಸ್ ಎಸ್‌ಯುವಿ ಸೇರಿದಂತೆ ಮತ್ತಷ್ಟು ಹೊಸ ಇವಿ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಹೊಸ ಇಕ್ಯೂಎಸ್ ಎಸ್‌ಯುವಿ ಮಾದರಿಯು ಕಳೆದ ವರ್ಷ ಅನಾವರಣಗೊಂಡಿದ್ದ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಕೆಲವು ಪ್ರಾಯೋಗಿಕ ಸೌಲಭ್ಯ ಗಳನ್ನು ಹೊಂದಿರುವ ಹೊಸ ಕಾರು ಮಾದರಿಯು EVA2 ಪ್ಲಾಟ್‌ಫಾರ್ಮ್ ಅಡಿ ಅಭಿವೃದ್ದಿಗೊಂಡಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಇಕ್ಯೂಎಸ್ ಎಸ್‌ಯುವಿ ಮಾದರಿಯು 2022ರ ಬೀಜಿಂಗ್ ಮೋಟಾರ್ ಶೋ ಉದ್ಘಾಟನೆಗೆ ಕೇವಲ ಎರಡು ದಿನಗಳ ಮೊದಲು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಅನಾವರಣಗೊಳ್ಳಲಿದ್ದು, ಹೊಸ ಕಾರು ಹೊಸ ಎಸ್‌ಯುವಿ ಕಾರು ಪ್ರತಿ ಚಾರ್ಜ್‌ಗೆ ಕನಿಷ್ಠ 600 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

2022ರ ಟಾಟಾ ನೆಕ್ಸಾನ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಯ ನೆಕ್ಸಾನ್ ಇವಿ ಮಾದರಿಯನ್ನು ಉನ್ನತೀಕರಿಸಿದ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಏಪ್ರಿಲ್‌ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ ಎನ್ನಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ನೆಕ್ಸಾನ್ ಇವಿ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದ್ದು, 2022ರ ಆವೃತ್ತಿಯು 40kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ನೆಕ್ಸಾನ್ ಇವಿ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 2022ರ ಆವೃತ್ತಿಯಲ್ಲಿ ಮೈಲೇಜ್ ರೇಂಜ್ ಪ್ರಮಾಣವು ಪ್ರತಿ ಚಾರ್ಜ್ 400 ಕಿ.ಮೀ ಗೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ವೊಲ್ವೊ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್

ಸ್ವೀಡಿಷ್ ಕಾರು ಉತ್ಪಾದನಾ ಕಂಪನಿಯಾಗಿರುವ ವೊಲ್ವೊ ಭಾರತದಲ್ಲಿ ತನ್ನ ಹೊಚ್ಚ ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯ ಬಿಡುಗಡೆಗೂ ಮುನ್ನ ಹೊಸ ಕಾರಿನ ಅಧಿೃತ ಬೆಲೆ ಮಾಹಿತಿ ಬಿಹಿರಂಗವಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಯೋಜನೆಯ ಪ್ರಕಾರ ಕಳೆದ ವರ್ಷದ ನವೆಂಬರ್‌ನಲ್ಲಿಯೇ ಹೊಸ ಎಕ್ಸ್‌ಸಿ40 ರಿಚಾರ್ಜ್ ಇವಿ ಕಾರು ಮಾದರಿಯನ್ನು ವಿತರಣೆ ಕೈಗೊಳ್ಳಬೇಕಿದ್ದ ವೊಲ್ವೊ ಕಂಪನಿಯು ಕೋವಿಡ್ ಕಾರಣದಿಂದಾಗಿ ಕಾರಿನ ವಿತರಣೆಯನ್ನು ಮುಂದೂಡಲಾಗುತ್ತಿದ್ದು, ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ತಯಾರಿ ನಡೆಸಲಾಗುತ್ತಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಹೊಸ ಕಾರಿನಲ್ಲಿ ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಬಲ್ಲ 78kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಹೊಂದಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 75 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಮಾರುತಿ ಎರ್ಟಿಗಾ/ಎಕ್ಸ್ಎಲ್6 ಫೇಸ್‌ಲಿಫ್ಟ್

ಮಾರುತಿ ಸುಜುಕಿಯು ತನ್ನ ಜನಪ್ರಿಯ ಎಂಪಿವಿ ಕಾರು ಮಾದರಿಯಾದ ಎರ್ಟಿಗಾ ಆವೃತ್ತಿಯನ್ನು ಪ್ರಮುಖ ಬದಲಾವಣೆಗಳೊಂದಿಗೆ ಶೀಘ್ರದಲ್ಲೇ ನವೀಕರಿಸಲಿದೆ. ಹೊಸ ಮಾದರಿಯಲ್ಲಿ ಈ ಬಾರಿ ಕಂಪನಿಯು ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ನೀಡಲಿದ್ದು, ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಬದಲಿಸಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಇದರ ಜೊತಗೆ ಕಂಪನಿಯು ಎರ್ಟಿಗಾ ಪ್ರೀಮಿಯಂ ಮಾದರಿಯಾದ ಎಕ್ಸ್‌ಎಲ್6 ಮಾದರಿಯನ್ನು ಸಹ ಉನ್ನತೀಕರಿಸಲಿದ್ದು, ಹೊಸ ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಬಂಪರ್‌ಗಳೊಂದಿಗೆ ಸ್ವಲ್ಪ ಪರಿಷ್ಕೃತ ಮುಂಭಾಗವನ್ನು ಪಡೆಯಬಹುದಾಗಿದೆ. ಇದಲ್ಲದೆ ಹೊಸ ಎಕ್ಸ್ಎಲ್6 ಮಾದರಿಯು ಈ ಬಾರಿ 6 ಸೀಟರ್ ಮಾದರಿಯಲ್ಲಿ ಮಾತ್ರವಲ್ಲದೆ 7-ಸೀಟರ್ ಕಾನ್ಫಿಗರೇಶನ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಟೊಯೊಟಾ ಹೈಲಕ್ಸ್ ಪಿಕ್ಅಪ್

ಹೈಲಕ್ಸ್ ಪಿಕ್ಅಪ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಎಂಪಿವಿ ಮತ್ತು ಫಾರ್ಚೂನರ್ ಎಸ್‌ಯುವಿ ನಡುವಿನ ಸ್ಥಾನದಲ್ಲಿ ಮಾರಾಟಗೊಳ್ಳಲಿದ್ದು, ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಬಿಡುಗಡೆಯಾಗುತ್ತಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿ ಬುಕ್ಕಿಂಗ್ ಆರಂಭಿಸಿರುವ ಟೊಯೊಟಾ ಕಂಪನಿಯು ಎಪ್ರಿಲ್ ಮಧ್ಯಂತರದಲ್ಲಿ ಹೊಸ ವಾಹನವನ್ನು ಅಧಿಕೃತವಾಗಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಪಿಕ್ಅಪ್ ಮಾದರಿಯು ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಆಕರ್ಷಕ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಹೊಸ ಕಾರು ಮಾದರಿಗಳಿವು!

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಸದ್ಯ ಹೈಲಕ್ಸ್ ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ 40ಕ್ಕೂ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಭಾರತದಲ್ಲಿ ಹೊಸ ಮಾದರಿಯನ್ನು ರೂ.25 ಲಕ್ಷದಿಂದ ರೂ. 30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಗಾಗಿ ಕೆಲವು ಕೆಲವು ವೆರಿಯೆಂಟ್‌ನೊಂದಿಗೆ ಮಾತ್ರ ಬಿಡುಗಡೆಯಾಗುತ್ತಿದೆ.

Most Read Articles

Kannada
English summary
Upcoming new cars launch in april 2022 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X