ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಇತ್ತೀಚೆಗೆ ಭಾರತದಲ್ಲಿ ನವೀಕರಿಸಿದ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಮಾದರಿಯು ಸ್ಲೀಕರ್ ವಿನ್ಯಾಸ ಮತ್ತು ಹೆಚ್ಚುವರಿ ವೈಶಿಷ್ಟ್ಯಗಳನ್ನು ಪಡೆಯುತ್ತದೆ ಮತ್ತು ಪವರ್‌ಟ್ರೇನ್‌ಗೆ ನವೀಕರಣಗಳೂ ಇವೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ ಹ್ಯಾಚ್‌ಬ್ಯಾಕ್ ಮೊದಲಿಗಿಂತ ಹೆಚ್ಚು ಒಟ್ಟಾರೆ ಮೌಲ್ಯವನ್ನು ನೀಡುತ್ತದೆ, ಕಳೆದ ತಿಂಗಳು, ಕಳೆದ ತಿಂಗಳು, ಭಾರತೀಯ ಮಾರುಕಟ್ಟೆಯಲ್ಲಿ ಗ್ಲಾಂಝಾದ ಒಟ್ಟು 2,646 ಯುನಿಟ್ ಟೊಯೊಟಾ ಗ್ಲಾಂಝಾ ಮಾರಾಟವಾಗಿದೆ. ಇದು ವರ್ಷದಿಂದ ವರ್ಷಕ್ಕೆ (YoY) ಶೇಕಡಾ 21.26 ರ ಮಾರಾಟದ ಬೆಳವಣಿಗೆಯಾಗಿದ್ದು, ಕಳೆದ ವರ್ಷ ಏಪ್ರಿಲ್‌ನಲ್ಲಿ 2,182 ಯುನಿಟ್‌ಗಳು ಮಾರಾಟವಾಗಿವೆ. ಟೊಯೊಟಾ ಕಂಪನಿಯು 2022ರ ಮಾರ್ಚ್ ತಿಂಗಳಿನಲ್ಲಿ ಗ್ಲಾಂಝಾ ಹ್ಯಾಚ್‌ಬ್ಯಾಕ್‌ನ 2,987 ಯೂನಿಟ್‌ಗಳನ್ನು ಮಾರಾಟ ಮಾಡಿದರು.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಇದು ಏಪ್ರಿಲ್ 2022 ರಲ್ಲಿ ತಿಂಗಳಿನಿಂದ ತಿಂಗಳ (MoM) ಆಧಾರದ ಮೇಲೆ ಮಾರಾಟದಲ್ಲಿ 11.42 ಶೇಕಡಾ ಕುಸಿತವಾಗಿದೆ. ಈ ಟೊಯೊಟಾ ಗ್ಲಾಂಝಾ ಕಾರು ಮಾರುತಿ ಸುಜುಕಿ ಬಲೆನೊ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದೆ. ಈ ಹೊಸ ಟೊಯೊಟಾ ಗ್ಲಾಂಝಾ ಕಾರು ಹಿಂದಿನ ಮಾದರಿಗಿಂತ ಹೆಚ್ಚು ಸ್ಪೋರ್ಟಿಯರ್ ವಿನ್ಯಾಸದ ಶೈಲಿಯನ್ನು ಹೊಂದಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಹೊಸ ಟೊಯೊಟಾ ಗ್ಲಾಂಝಾ ಕಾರಿನ ವಿನ್ಯಾಸದ ಬಗ್ಗೆ ಹೆಳುವುದಾದರೆ, ಮುಂಭಾಗದ ಹೊಸ ವಿನ್ಯಾಸ ಶೈಲಿಯೊಂದಿಗೆ ಬಂದಿದೆ. ಇದು ಟೊಯೊಟಾದ ಜಾಗತಿಕ ಕಾರುಗಳಿಗೆ ಅನುಗುಣವಾಗಿರುತ್ತದೆ. ಇದು ಕ್ಯಾಮ್ರಿ ತರಹದ ಮುಂಭಾಗದ ಗ್ರಿಲ್ ಮತ್ತು ಬಂಪರ್, ಹೊಸ ಕ್ರೋಮ್ ಮತ್ತು ಎಲ್-ಆಕಾರದ ಎಲ್ಇಡಿ ಡಿಆರ್ಎಲ್ (ಡೇಟೈಮ್ ರನ್ನಿಂಗ್ ಲ್ಯಾಂಪ್) ಗಳನ್ನು ಒಳಗೊಂಡಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಈ ಟೊಯೊಟಾ ಗ್ಲಾಂಝಾ ಕಾರಿನ ಹಿಂಭಾಗವು ಸ್ವಲ್ಪ ಪರಿಷ್ಕೃತ ಬಂಪರ್ ಮತ್ತು ಟೈಲ್-ಲೈಟ್‌ಗಾಗಿ ಹೊಸ ಇನ್‌ಸರ್ಟ್‌ಗಳೊಂದಿಗೆ ಬರುತ್ತದೆ. ಇದು ಹೊಸದಾಗಿ ವಿನ್ಯಾಸಗೊಳಿಸಲಾದ 16-ಇಂಚಿನ ವ್ಹೀಲ್ ಗಳನ್ನು ಹೊಂದಿದೆ. ಇನ್ನು ಈ ಹೊಸ ಗ್ಲಾಂಝಾ ಕಾರು ರೆಡ್, ಬ್ಲೂ, ಗ್ರೇ, ವೈಟ್ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಗ್ರಾಹಕರು ಇದರಲ್ಲಿ ತಮ್ಮ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಈ ಹೊಸ ಟೊಯೊಟಾ ಗ್ಲಾಂಝಾ ಹ್ಯಾಚ್‌ಬ್ಯಾಕ್ ಕಾರಿನ ಕ್ಯಾಬಿನ್ ಹೊಸ ಬಲೆನೊ ಮಾದರಿಗೆ ಹೋಲುವಂತಿದೆ. ಇದು ಬಲೆನೊದಲ್ಲಿ ನೀಡಲಾಗುವ ಬ್ಲ್ಯಾಕ್ ಮತ್ತು ಬ್ಲೂ ಬಣ್ಣಗಳ ಬದಲಿಗೆ ಬ್ಲ್ಯಾಕ್ ಮತ್ತು ಬೀಜ್ ಬಣ್ಣಗಳ ಯೋಜನೆಯೊಂದಿಗೆ ಬರುತ್ತದೆ. ವೈಶಿಷ್ಟ್ಯಗಳ ವಿಷಯದಲ್ಲಿ, ಹೊಸ ಗ್ಲಾಂಝಾ ಮಲ್ಟಿ-ಫಂಕ್ಷನಲ್ ಲೆದರ್ ಸುತ್ತಿದ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್, ನವೀಕರಿಸಿದ ಇನ್ಸ್ಟ್ರುಮೆಂಟ್ ಕನ್ಸೋಲ್, ಸೆಂಟರ್ ಕನ್ಸೋಲ್‌ನಲ್ಲಿ ಹೊಸ ಏರ್-ಕಾನ್ ವೆಂಟ್‌ಗಳು ಮತ್ತು ಹಿಂಭಾಗ ಆಟೋಮ್ಯಾಟಿಕ್ ಎಸಿಯನ್ನು ಹೊಂದಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಇದರೊಂದಿಗೆ Apple CarPlay ಮತ್ತು Android Auto, ನ್ಯಾವಿಗೇಶನ್ ಮತ್ತು ವಾಯ್ಸ್ ಕಾಮೆಂಡ್ ಗಳೊಂದಿಗೆ ದೊಡ್ಡ 9-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಬಂದಿದೆ. ಈ ಕಾರಿನಲ್ಲಿ ಹೊಸದಾಗಿ 360-ಡಿಗ್ರಿ ಕ್ಯಾಮೆರಾ, ಹೆಡ್ಸ್-ಅಪ್ ಡಿಸ್ಪ್ಲೇ (HUD), ವಾಯ್ಸ್ ಅಸಿಸ್ಟ್ ಫೈಂಡ್ ಮೈ ಕಾರ್ ವೈಶಿಷ್ಟ್ಯ ಮತ್ತು ರಿಮೋಟ್ ಲಾಕ್ ಮತ್ತು ಅನ್‌ಲಾಕ್ ಕಾರ್ಯಗಳಂತಹ ವೈಶಿಷ್ಟ್ಯಗಳೊಂದಿಗೆ ಕನೆಕ್ಟಿವಿಟಿ ಕಾರ್ ತಂತ್ರಜ್ಞಾನಗಳನ್ನು ಹೊಂದಿವೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಈ ಹೊಸ ಹ್ಯಾಚ್‌ಬ್ಯಾಕ್ ನಲ್ಲಿ ಸುರಕ್ಷೆತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷೆತೆಗೆಗಾಗಿ, ಆರು ಏರ್‌ಬ್ಯಾಗ್‌ಗಳು, ಕ್ರೂಸ್ ಕಂಟ್ರೋಲ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎತ್ತರ ಹೊಂದಾಣಿಕೆಯ ಡ್ರೈವರ್ ಸೀಟ್, ಇಬಿಡಿಯೊಂದಿಗೆ ಎಬಿಎಸ್ ಇತ್ಯಾದಿಗಳಂತಹ ಉನ್ನತ-ಮಟ್ಟದ ಸುರಕ್ಷತಾ ವೈಶಿಷ್ಟ್ಯಗಳನ್ನು ನೀಡಲಾಗಿದೆ,

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಹೊಸ ಟೊಯೊಟಾ ಗ್ಲಾಂಝಾ ಕಾರಿನಲ್ಲಿ 1.2-ಲೀಟರ್ ಡ್ಯುಯಲ್-ಜೆಟ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ ಕಂಪನಿಯು ಗ್ಲಾಂಝಾ ಕಾರಿಗಾಗಿ 5 ವರ್ಷಗಳು/220,000 ಕಿಮೀ ವರೆಗೆ ವಿಸ್ತೃತ ವಾರಂಟಿಯನ್ನು ಆಯ್ಕೆ ಮಾಡುವ ಆಯ್ಕೆಯೊಂದಿಗೆ 3 ವರ್ಷಗಳು/100,000 ಕಿಮೀ ವಾರಂಟಿಯನ್ನು ನೀಡುತ್ತಿದೆ. ಕಂಪನಿಯು EM60 ಮೂಲಕ ಕೇವಲ 60 ನಿಮಿಷಗಳಲ್ಲಿ ಪಿರಿಯೋಡಿಕ್ ಸರ್ವಿಸ್ ನೀಡುತ್ತದೆ, ಇನ್ನು ರೋಡ್ ಅಸಿಸ್ಟ್ ಪ್ರಯೋಜನಗಳು ಮತ್ತು ಹೆಚ್ಚಿನವುಗಳನ್ನು ಹೊಂದಿವೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಟೊಯೊಟಾ ಕಂಪನಿಯು ಗ್ಲಾಂಝಾ ಕಾರಿನ ಅಧಿಕೃತ ಟಿವಿಸಿಯನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದು ಕಾರಿನ ಒಳಭಾಗವನ್ನು ತೋರಿಸುತ್ತದೆ. ಈ ವಿಡಿಯೋವನ್ನು ಟೊಯೊಟಾ ಇಂಡಿಯಾ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ, ಕಾರು ಹಿಂದಿನ ಆವೃತ್ತಿಗಿಂತ ಭಿನ್ನವಾಗಿ ಕಾಣುತ್ತದೆ. ಈ ಹೊಸ ಮಾದರಿಯಲ್ಲಿ ಹೊಸ ವೈಶಿಷ್ಟ್ಯಗಳು, ಸುಧಾರಿತ ಸ್ಟೈಲಿಂಗ್ ಮತ್ತು ಸಮರ್ಥ ಎಂಜಿನ್ ಅನ್ನು ಒಳಗೊಂಡಿದೆ. ಹಿಂದಿನ ಗ್ಲಾಂಝಾ ಬಲೆನೊಗೆ ಹೋಲುವಂತಿದ್ದರೆ, ಹೊಸ ಮಾದರಿಯು ವಿಭಿನ್ನ ವಿನ್ಯಾಸದೊಂದಿಗೆ ಬಿಡುಗಡೆಗೊಳಿಸಲಾಗಿದೆ.

ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟೊಯೊಟಾ ಗ್ಲಾಂಝಾ ಕಾರು

ಒಟ್ಟಾರೆಯಾಗಿ ಟೊಯೊಟಾ ಕಂಪನಿಯು ಹೊಸ ಗ್ಲಾಂಝಾಗೆ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಇದು 2022ರ ಮಾರುತಿ ಸುಜುಕಿ ಬಲೆನೊದಿಂದ ದೃಶ್ಯಾತ್ಮಕವಾಗಿ ಪ್ರತ್ಯೇಕಿಸುತ್ತದೆ. 2022ರ ಟೊಯೊಟಾ ಗ್ಲಾಂಝಾ ಕಾರು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಹೊಸ ಟೊಯೊಟಾ ಗ್ಲಾಂಝಾ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೋಜ್, ಹೋಂಡಾ ಜಾಝ್ ಮತ್ತು ಮಾರುತಿ ಸುಜುಕಿ ಬಲೆನೊ ಕಾರುಗಳುಗೆ ಪೈಪೋಟಿ ನೀಡುತ್ತಿದೆ.

Article Published On: Wednesday, May 18, 2022, 12:52 [IST]
English summary
Updated toyota glanza registers over 21 sales growth in april 2022 details
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+