ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್

ಫೋಕ್ಸ್‌ವ್ಯಾಗನ್ ಕಂಪನಿಯು ಇತ್ತೀಚೆಗೆ ತನ್ನ ಹೊಸ ಕಾರು ಮಾದರಿಗಳ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರುಗಳ ಪೈಕಿ ವರ್ಟಸ್ ಸೆಡಾನ್ ಮಾದರಿಯು ಸಹ ಹೆಚ್ಚಿನ ಮಟ್ಟದ ಬುಕಿಂಗ್ ಪಡೆದುಕೊಂಡಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಜೂನ್ ಮೊದಲ ವಾರದಲ್ಲಿ ಹೊಸ ವರ್ಟಸ್ ಬಿಡುಗಡೆ ಮಾಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ವಿತರಣೆಗೆ ಚಾಲನೆ ನೀಡಿದ್ದು, ದೇಶಾದ್ಯಂತ ಹೊಸ ಕಾರು ಮಾದರಿಗಾಗಿ ಭಾರೀ ಪ್ರಮಾಣದ ಬೇಡಿಕೆ ದಾಖಲಾಗಿದೆ. ಬುಕಿಂಗ್ ಆಧರಿಸಿ ಹೊಸ ಕಾರು ಈಗಾಗಲೇ ಗ್ರಾಹಕರ ಕೈಸೇರುತ್ತಿದ್ದು, ಕೇರಳ ಕೊಚ್ಚಿಯಲ್ಲಿ ಫೋಕ್ಸ್‌ವ್ಯಾಗನ್ ಡೀಲರ್ಸ್ ಒಬ್ಬರು ಹೊಸ ಕಾರಿನ ಮೂಲಕ ಒಂದೇ ದಿನದಲ್ಲಿ ಅತಿ ಕಾರುಗಳನ್ನು ವಿತರಣೆಗೊಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಹೊಸ ಕಾರುಗಳ ಬಿಡುಗಡೆಯ ನಂತರ ಈ ಮೊದಲು 100 ಕಾರುಗಳನ್ನು ಒಂದೇ ಡೀಲರ್ಸ್ ಮೂಲಕ ವಿತರಣೆಗೊಳಿಸಿದ ದಾಖಲೆಯನ್ನು ಸರಿಗಟ್ಟಿರುವ ಕೊಚ್ಚಿ ಇವಿಎಂ ಫೋಕ್ಸ್‌ವ್ಯಾಗನ್ ಡೀಲರ್ಸ್ ಒಂದೇ ದಿನದಲ್ಲಿ ಬರೋಬ್ಬರಿ 150 ಕಾರುಗಳನ್ನು ವಿತರಣೆ ಮಾಡಿ ಇಂಡಿಯಾ ಬುಕ್ ಆಫ್ ರೇಕಾರ್ಡ್‌ ಪ್ರಶಸ್ತಿಗೆ ಪಾತ್ರವಾಗಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಹೊಸ ಕಾರುಗಳ ಮೂಲಕ ಫೋಕ್ಸ್‌ವ್ಯಾಗನ್ ಕಂಪನಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಟೈಗುನ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ವರ್ಟಸ್ ಕಾರು ಮಾದರಿಗಳೊಂದಿಗೆ ಕಂಪನಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

2.0 ಇಂಡಿಯಾ ಯೋಜನೆಯ ಅಡಿಯಲ್ಲಿ ಹೊಸ ಕಾರುಗಳನ್ನು ಪರಿಚಯಿಸಿರುವ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಕಂಪನಿಯು ಸಹಭಾಗಿತ್ವ ಯೋಜನೆ ಅಡಿ ಒಟ್ಟು ನಾಲ್ಕು ಕಾರುಗಳನ್ನು ಬಿಡುಗಡೆ ಮಾಡಿದ್ದು, ಸ್ಕೋಡಾ ಕಂಪನಿಯು ಕುಶಾಕ್, ಸ್ಲಾವಿಯಾ ಮಾದರಿಯನ್ನು ಮತ್ತು ಫೋಕ್ಸ್‌ವ್ಯಾಗನ್ ಕಂಪನಿಯು ಟೈಗನ್, ವರ್ಟಸ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ನಾಲ್ಕು ಮಾದರಿಗಳಲ್ಲೂ ಒಂದೇ ಮಾದರಿಯ ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ವಿಭಿನ್ನವಾದ ತಾಂತ್ರಿಕ ಸೌಲಭ್ಯದೊಂದಿಗೆ ತಮ್ಮದೆ ಗ್ರಾಹಕರ ವರ್ಗವನ್ನು ಹೊಂದಿವೆ. ಅದರಲ್ಲೂ ಹೊಸದಾಗಿ ಬಿಡುಗಡೆಯಾಗಿರುವ ಹೊಸ ವರ್ಟಸ್ ಮಾದರಿಯು ಮಧ್ಯಮ ಕ್ರಮಾಂಕದ ಸೆಡಾನ್ ಮಾದರಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಹೊಸ ಫೋಕ್ಸ್‌ವ್ಯಾಗನ್ ವರ್ಟಸ್ ಅನ್ನು ಡೈನಾಮಿಕ್ ಲೈನ್ ಮತ್ತು ಪರ್ಫಾರ್ಮೆನ್ಸ್ ಲೈನ್ ಎಂಬ ಎರಡು ಮಾದರಿಗಳಲ್ಲಿ ಬಿಡುಗಡೆಗೊಳಿಸಲಾಗಿದ್ದು, ಡೈನಾಮಿಕ್ ಲೈನ್‌ನಲ್ಲಿ ಕಂಫರ್ಟ್‌ಲೈನ್, ಹೈಲೈನ್ ಮತ್ತು ಟಾಪ್‌ಲೈನ್ ಎಂಬ ಮೂರು ರೂಪಾಂತರಗಳನ್ನು ಮತ್ತು ಪರ್ಫಾಮೆನ್ಸ್ ಲೈನ್‌ನಲ್ಲಿ ಜಿಟಿ ಪ್ಲಸ್ ವೆರಿಯೆಂಟ್ ನೀಡಲಾಗಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಕಂಫರ್ಟ್‌ಲೈನ್, ಹೈಲೈನ್ ಮತ್ತು ಟಾಪ್‌ಲೈನ್, ಇವುಗಳ ಬೆಲೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.22 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಯು ರೂ. 15.71 ಲಕ್ಷ ಬೆಲೆ ಹೊಂದಿದ್ದರೆ ಟಾಪ್-ಎಂಡ್ ಪರ್ಫಾರ್ಮೆನ್ಸ್ ಲೈನ್‌ನಲ್ಲಿರುವ ಜಿಟಿ ಲೈನ್‌ ಎಕ್ಸ್‌ಶೋರೂಂ ಪ್ರಕಾರ ರೂ. 17.92 ಲಕ್ಷ ಬೆಲೆ ಹೊಂದಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಹೊಸ ಕಾರು ಫೋಕ್ಸ್‌ವ್ಯಾಗನ್ ಕಂಪನಿಯ ಹೊಸ MQB A0 IN ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ್ದು, ಇದು ಬ್ರ್ಯಾಂಡ್‌ನ ಮಾಡ್ಯುಲರ್ ಆರ್ಕಿಟೆಕ್ಚರ್‌ನ ಸ್ಥಳೀಯ ಆವೃತ್ತಿಯಾಗಿದೆ. ವಿಶೇಷವಾಗಿ ಭಾರತದಲ್ಲಿ ಉತ್ಪಾದನೆಗೊಳ್ಳುವ ಮಾದರಿಗಾಗಿ ವಿಶೇಷವಾಗಿ ಅಭಿವೃದ್ಧಿಪಡಿಸಲಾಗಿದ್ದು, ಇದೇ ಪ್ಲಾಟ್‌ಫಾರ್ಮ್‌ನಲ್ಲಿ ಟೈಗನ್ ಕೂಡಾ ಅಭಿವೃದ್ದಿಗೊಂಡಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ವರ್ಟಸ್ ಕಾರು ಮಾದರಿಯನ್ನು ಈ ಹಿಂದಿನ ವೆಂಟೊ ಮಾದರಿಯ ಸ್ಥಾನಕ್ಕೆ ಬದಲಿಸಿದ್ದು, ಇದು ವೆಂಟೊ ಮಾದರಿಗಿಂತಲೂ ಹೆಚ್ಚು ಬಲಿಷ್ಠ ಮತ್ತು ಹೆಚ್ಚಿನ ಮಟ್ಟದ ಉದ್ದಳತೆ ಹೊಂದಿದೆ. ಹೊಸ ಕಾರು 4,561 ಎಂಎಂ ಉದ್ದ, 1,752 ಎಂಎಂ ಅಗಲ ಮತ್ತು 1,507 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್‌ಬೆಸ್ ಅನ್ನು ಒಳಗೊಂಡಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ವರ್ಟಸ್ ಸೆಡಾನ್ ಮಾದರಿಯಲ್ಲಿ ಕಂಪನಿಯು ಒಟ್ಟು ಎರಡು ಎಂಜಿನ್ ಆಯ್ಕೆಗಳನ್ನು ನೀಡುತ್ತದೆ. ಇದರಲ್ಲಿ 1.0 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮಾದರಿಯು 113 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಇದರಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಇನ್ನು ಟಾಪ್ ಎಂಡ್ ಮಾದರಿಯಾಗಿರುವ 1.5 ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 148 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, ಈ ಎಂಜಿನ್‌ನಲ್ಲಿ ಕಂಪನಿಯು 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಜೋಡಿಸಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ವರ್ಟಸ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹೊಸ ಕಾರಿನಲ್ಲಿ ಡ್ಯುಯಲ್ ಏರ್‌ಬ್ಯಾಗ್‌ಗಳು, ಇಬಿಎಸ್ ಜೊತೆಗೆ ಎಬಿಎಸ್, ಪಾರ್ಕಿಂಗ್ ಸೆನ್ಸಾರ್, 3-ಪಾಯಿಂಟ್ ಸೀಟ್ ಬೆಲ್ಟ್‌ಗಳು, ಹಿಂಭಾಗದ ಪಾರ್ಕಿಂಗ್ ಕ್ಯಾಮೆರಾ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC),ಟೈರ್ ಒತ್ತಡದ ಡಿಫ್ಲೇಶನ್ ಅಲರ್ಟ್, ಹಿಲ್ ಹೋಲ್ಡ್ ಕಂಟ್ರೋಲ್ ಸೌಲಭ್ಯಗಳಿವೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಕಾರುಗಳನ್ನು ವಿತರಿಸಿ ಹೊಸ ದಾಖಲೆ ನಿರ್ಮಿಸಿದ ಫೋಕ್ಸ್‌ವ್ಯಾಗನ್ ಡೀಲರ್ಸ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹೊಸ ಫೋಕ್ಸ್‌ವ್ಯಾಗನ್ ವರ್ಟಸ್ ಕಾರು ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾರುಕಟ್ಟೆಯಲ್ಲಿನ ಪ್ರಮುಖ ಸೆಡಾನ್ ಕಾರು ಮಾದರಿಗಳಾಗ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸಿಯಾಜ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Volkswagen dealership delivered 150 units virtus in single day
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X