Just In
- 41 min ago
ಓಲಾ S1 ಮತ್ತು S1 Pro ನಡುವೆ ಗೊಂದಲವೇ?: ಬೆಲೆ, ಡಿಸೈನ್, ಫೀಚರ್ಸ್ ಬಗೆಗಿನ ಮಾಹಿತಿ ಇಲ್ಲಿದೆ
- 44 min ago
24.90 ಕಿ.ಮೀ ಮೈಲೇಜ್ ನೀಡುವ ಆಲ್ಟೋ ಕೆ10 ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ಮಾರುತಿ ಸುಜುಕಿ
- 2 hrs ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 2 hrs ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
Don't Miss!
- Sports
ಧವನ್ ಹಾಗೂ ತೆಂಡೂಲ್ಕರ್ ನಡುವಿನ ಸಾಮ್ಯತೆ ವಿವರಿಸಿದ ಅಜಯ್ ಜಡೇಜಾ
- Movies
ನನಸಾಯ್ತು ಕಾಫಿನಾಡು ಚಂದು ಕನಸು, ಎಲ್ಲಾ ಶ್ರೇಯ ಅನುಶ್ರೀಗೆ
- News
ಕದ್ದ ಹಣದಲ್ಲಿ ವಿಮಾನದಲ್ಲಿ ಪ್ರಯಾಣಿಸುವ ಹೈಟೆಕ್ ಕಳ್ಳಿ
- Technology
ವಿಶ್ವ ಛಾಯಾಗ್ರಹಣ ದಿನ: ಈ ಸ್ಮಾರ್ಟ್ಫೋನ್ಗಳು ಫೋಟೋಗ್ರಫಿಗೆ ಸೂಕ್ತ ಎನಿಸಲಿವೆ!
- Lifestyle
ಈ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಕೆಲಸಕ್ಕಂತೂ ಅಲ್ಪ ವಿರಾಮ ನೀಡಲೇಬೇಕು..!
- Travel
ಮೋಜಿನ ವಾರಾಂತ್ಯದ ಪ್ರವಾಸಕ್ಕಾಗಿ ಇಲ್ಲಿಗೆ ಭೇಟಿ ನೀಡಿ
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
ಫೋಕ್ಸ್‌ವ್ಯಾಗನ್ ಟೈಗುನ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತಷ್ಟು ದುಬಾರಿ
ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆಯುತ್ತಿರುವ ಫೋಕ್ಸ್‌ವ್ಯಾಗನ್ ಟೈಗುನ್ ಕಾರು ಮಾದರಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿಗೆ ಭರ್ಜರಿ ಬೇಡಿಕೆ ಸಲ್ಲಿಕೆಯಾಗುತ್ತಿರುವ ಬೆನ್ನಲ್ಲೇ ಹೊಸ ಕಾರಿನ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

ಹೊಸ ಕಾರುಗಳ ಉತ್ಪಾದನಾ ವೆಚ್ಚವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಹೊಸ ವಾಹನಗಳ ಬೆಲೆ ಹೆಚ್ಚಿಸಿದ್ದು, ಫೋಕ್ಸ್‌ವ್ಯಾಗನ್ ಕಂಪನಿಯು ಕೂಡಾ ಹೊಸ ಟೈಗುನ್ ಕಾರಿನ ಬೆಲೆ ಪರಿಷ್ಕರಣೆ ಮಾಡಿದೆ. ಹೊಸ ದರ ಪಟ್ಟಿಯಲ್ಲಿ ಟೈಗುನ್ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.20 ಸಾವಿರದಿಂದ ರೂ. 60 ಸಾವಿರ ತನಕ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಹೊಸ ದರ ಪಟ್ಟಿಯಲ್ಲಿ ಟೈಗುನ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.39 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.59 ಲಕ್ಷ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.1.50 ರಷ್ಟು ದರ ಹೆಚ್ಚಿಸಲಾಗಿದೆ.

ದರ ಹೆಚ್ಚಳದೊಂದಿಗೆ ಫೋಕ್ಸ್‌ವ್ಯಾಗನ್ ಕಂಪನಿಯು ಟೈಗುನ್ ಮಾದರಿಯಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡುತ್ತಿದ್ದು, ಟೈಗುನ್ ಬೆಸ್ ವೆರಿಯೆಂಟ್‌ನಲ್ಲೂ ಇದೀಗ ಆಟೋ ಎಂಜಿನ್ ಸ್ಟಾರ್ಟ್/ಸ್ಟಾಪ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೌಲಭ್ಯವನ್ನು ಕಡ್ಡಾಯವಾಗಿ ಜೋಡಣೆ ಮಾಡಲಾಗಿದೆ.

ಹೊಸ ಟೈಗುನ್ ಕಾರು ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಟೈಗುನ್ ಕಾರನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಶೇ.95 ರಷ್ಟು ಸ್ಥಳೀಯವಾಗಿ ಉತ್ಪಾದನೆಗೊಂಡಿರುವ ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಿದೆ.

ಟೈಗುನ್ ಕಾರು ಸ್ಕೋಡಾ ಕುಶಾಕ್ ಮಾದರಿಯಲ್ಲಿಯೇ ತಾಂತ್ರಿಕ ಸೌಲಭ್ಯಗಳು, ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಕಾರಿನ ಡೈನಾಮಿಕ್ ಮಾದರಿಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್‌ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಟೈಗುನ್ ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದೆ.

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್‌ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, 1.0-ಲೀಟರ್ ಟಿಎಸ್ಐ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ 18.47 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ 1.5-ಲೀಟರ್ ಮಾದರಿಯು ಪ್ರತಿ ಲೀಟರ್‌ಗೆ 17.88 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಹೊಸ ಟೈಗುನ್ ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲ್‍ಇಡಿ ಮ್ಯಾಟ್ರಿಕ್ಸ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇಡಿ ಲೈಟ್ ಬಾರ್, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.

ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್‌ಪಿಟ್‌ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್‌ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳು ಟೈಗನ್ ಕಾರಿನಲ್ಲಿವೆ. 6 ಏರ್‌ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.

ಜೊತೆಗೆ ಹೊಸ ಕಾರಿನಲ್ಲಿ ಇನ್ನು ಹೆಚ್ಚಿನ ಆಕ್ಸೆಸರಿಸ್ ಬಯಸುವ ಗ್ರಾಹಕರಿಗೆ ಕಂಪನಿಯು ಆರು ವಿನೂತನ ಆಕ್ಸೆಸರಿಸ್ ಪ್ಯಾಕೇಜ್ ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿ ಮೇಲೆ 4 ವರ್ಷ ಸ್ಟ್ಯಾಂಡರ್ಡ್ ವಾರಂಟಿ ಜೊತೆಗೆ 4 ವರ್ಷಗಳ ರೋಡ್ ಸೈಡ್ ಅಸಿಸ್ಟಂಟ್ ಸೌಲಭ್ಯ ದೊರೆಯಲಿದೆ.