Just In
- 7 min ago
ಇವಿಗಳ ಅಬ್ಬರ... 2023 ಜನವರಿಯಲ್ಲಿ ಅತಿ ಹೆಚ್ಚು ಮಾರಾಟ ಕಂಡ ಎಲೆಕ್ಟ್ರಿಕ್ ಸ್ಕೂಟರ್ಗಳಿವು!
- 47 min ago
ಕಡಿಮೆ ಬೆಲೆಯ ಟಾಟಾ ಎಲೆಕ್ಟ್ರಿಕ್ ಕಾರಿನ ವಿತರಣೆ ಪ್ರಾರಂಭ: 2,000 ಕಾರುಗಳ ಹಸ್ತಾಂತರ
- 1 hr ago
ಮಾರುತಿ, ಟಾಟಾ ಕಾರುಗಳ ಪ್ರಾಬಲ್ಯದ ನಡುವೆ ದಾಖಲೆ ಮಟ್ಟದ ಮಾರಾಟವಾದ ಹ್ಯುಂಡೈ ಕ್ರೆಟಾ
- 2 hrs ago
13 ಉದ್ಯೋಗಿಗಳಿಗೆ ಹೊಸ ಟೊಯೋಟಾ ಗ್ಲಾನ್ಜಾ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಕಂಪನಿ
Don't Miss!
- Movies
ಡಾಲಿ ಧನಂಜಯ್ 25ನೇ ಸಿನಿಮಾ 'ಹೊಯ್ಸಳ' ಟೀಸರ್ಗೆ ಮುಹೂರ್ತ ಫಿಕ್ಸ್
- News
ಮಂಗಳೂರಿನಲ್ಲಿ ಚಾಕು ಇರಿತದಿಂದ ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿ ಸಾವು
- Sports
Border-Gavaskar Trophy: ಭಾರತ ವಿರುದ್ಧ ಮೊದಲ ಪಂದ್ಯದಲ್ಲಿ ಈ ವೇಗಿ ಬೌಲಿಂಗ್ ಮಾಡಲ್ಲ; ಪ್ಯಾಟ್ ಕಮ್ಮಿನ್ಸ್
- Finance
ಅದಾನಿ ಗ್ರೂಪ್ ಬಿಕ್ಕಟ್ಟಿನ ಮಧ್ಯೆ ಭರವಸೆ ನೀಡಿದ ವಿತ್ತ ಸಚಿವೆ, ಹೇಳಿದ್ದೇನು?
- Lifestyle
ಗಂಡ-ಹೆಂಡತಿ ಜಗಳವಾಡಿದರೆ ಈ ಪ್ರಯೋಜನಗಳೂ ಇವೆ!
- Technology
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಡಿಮೆ ಮೊತ್ತಕ್ಕೆ ಲೀಸ್‌ಗೆ ಸಿಗಲಿದೆ ಫೋಕ್ಸ್‌ವ್ಯಾಗನ್ ವರ್ಟಸ್ ಕಾರು
ಫೋಕ್ಸ್‌ವ್ಯಾಗನ್‌ನ ಓಮ್ನಿ-ಚಾನೆಲ್ ಮೊಬಿಲಿಟಿ ಸೊಲ್ಯೂಷನ್ಸ್, ಫೋಕ್ಸ್‌ವ್ಯಾಗನ್ ಕಾರುಗಳಿಗೆ ಲೀಸ್ (Lease) ಮತ್ತು ಚಂದಾದಾರಿಕೆ (Subscription) ಮಾಲೀಕತ್ವದ ಮಾದರಿಗಳನ್ನು ನೀಡುವ ಸರಣಿಗೆ ವರ್ಟಸ್ ಸೆಡಾನ್ ಕಾರನ್ನು ಸೇರಿಸಲಾಗಿದೆ.
Recommended Video
ನೀವು ಕೂಡ 2 ರಿಂದ 4 ವರ್ಷಗಳ ಅವಧಿಗೆ ಹೊಸ ಫೋಕ್ಸ್‌ವ್ಯಾಗನ್ ವರ್ಟಸ್ ಸೆಡಾನ್ ಅನ್ನು ಲೀಸ್‌ಗೆ ಪಡೆಯಬಹುದು. ಈ ಸೆಡಾನ್ ಮಾದರಿಯು ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಪೀಚರ್ಸ್ ಹೊಂದಿರುವ ಮಾದರಿಯಾಗಿದೆ.

ಫೋಕ್ಸ್‌ವ್ಯಾಗನ್ ವರ್ಟಸ್ ರೂ. 26,987 ರಿಂದ ಪ್ರಾರಂಭವಾಗುವ ಮಾಸಿಕ ಚಂದಾದಾರಿಕೆಯಲ್ಲಿ ಲಭ್ಯವಿದೆ. ಇನ್ನು ಫೋಕ್ಸ್‌ವ್ಯಾಗನ್ ಗ್ರಾಹಕರಿಗೆ ವರ್ಟಸ್ ಕಾರನ್ನು 2-4 ವರ್ಷಗಳ ಅವಧಿಗೆ ಮತ್ತು ಅನಿಯಮಿತ ಮೈಲೇಜ್‌ಗೆ ಚಾಲನೆ ಮಾಡುವ ಅವಕಾಶವನ್ನು ನೀಡುತ್ತಿದೆ. ಅವರು 1 ತಿಂಗಳ ಭದ್ರತಾ ಠೇವಣಿ ಮತ್ತು ಮುಂಗಡ ಬಾಡಿಗೆ ಪಾವತಿಯನ್ನು ಪಾವತಿಸುವ ಮೂಲಕ ಚಂದಾದಾರರಾಗಬಹುದು. ಮಾಸಿಕ ಶುಲ್ಕಗಳು ಅವಧಿ ವಿಮೆ, ನಿಗದಿತ ಸೇವೆ ಮತ್ತು ನಿಗದಿತ ರಿಪೇರಿಗಳನ್ನು ಒಳಗೊಂಡಿವೆ. ಪವರ್ ಲೀಸ್ ಆಯ್ಕೆಯ ಭಾಗವಾಗಿ, ಲೀಸ್ ಅವಧಿ ಮುಗಿದ ನಂತರ, ಗ್ರಾಹಕರು ಎಕ್ಸ್ ಶೋರೂಂ ಬೆಲೆಯ 20% ಪಾವತಿಸುವ ಮೂಲಕ ಕಾರನ್ನು ಉಳಿಸಿಕೊಳ್ಳಬಹುದು.

ವರ್ಟಸ್‌ನ ಮಾಸಿಕ ಪವರ್ ಲೀಸ್ ಬಾಡಿಗೆಗಳು ರೂ. 29,991 (ಎಕ್ಸ್-ಶೋ ರೂಂ, ಅಹಮದಾಬಾದ್) ರಿಂದ ಪ್ರಾರಂಭವಾಗುತ್ತವೆ. ಫೋಕ್ಸ್‌ವ್ಯಾಗನ್ ಕಂಪನಿಯು ವರ್ಟಸ್ ಕಾರನ್ನು ವೆಂಟೊಗೆ ಬದಲಿಯಾಗಿ ಕಾಂಪ್ಯಾಕ್ಟ್ ಸೆಡಾನ್ ಅನ್ನು ವಿಶೇಷವಾಗಿ ಭಾರತೀಯ ಮಾರುಕಟ್ಟೆಗಾಗಿ ವಿನ್ಯಾಸಗೊಳಿಸಲಾಗಿದೆ.

ಈ ಹೊಸ ಕಾರಿನ ಉತ್ಪಾದನೆಯು ಪುಣೆಯಲ್ಲಿರುವ ಕಂಪನಿಯ ಚಕನ್ ಸ್ಥಾವರದಲ್ಲಿ ನಡೆಯುತ್ತಿದೆ. ಫೋಕ್ಸ್‌ವ್ಯಾಗನ್ ವರ್ಟಸ್ ಕಳೆದ ವರ್ಷ ಬಿಡುಗಡೆಯಾ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ನಂತರ ಭಾರತ 2.0 ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಫೋಕ್ಸ್‌ವ್ಯಾಗನ್‌ನ ಎರಡನೇ ಉತ್ಪನ್ನವಾಗಿದೆ.ಫೋ ಈ ವ್ಯಾಗನ್ ವರ್ಟಸ್ ಕಾರು ಮುಂಭಾಗ ಮಸ್ಕಲರ್ ಲುಕ್ ಅನ್ನು ಹೂಂದಿದೆ.

ಈ ಹೊಸ ಸೆಡಾನ್ ಸ್ಲ್ಯಾಟ್ ಗ್ರಿಲ್, ಸುತ್ತಲೂ ಕ್ರೋಮ್ ಗಾರ್ನಿಶ್ ಮತ್ತು ಎಲ್‌ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಎಲ್-ಆಕಾರದ ಎಲ್ಇಡಿ ಡಿಆರ್ಎಲ್ ಗಳು ಸ್ಪೋರ್ಟಿಯಾಗಿ ಕಾಣುತ್ತವೆ. ಚೂಪಾದ ಲೈನ್ ಗಳು ಮತ್ತು ಹರಿತವಾದ ವಿನ್ಯಾಸವು ಫೋಕ್ಸ್‌ವ್ಯಾಗನ್ ಕಾರುಗಳ ಸಾಮಾನ್ಯ ಲಕ್ಷಣವಾಗಿದೆ.

ಈ ಹೊಸ ವರ್ಟಸ್ ಜಿಟಿ ಬ್ಯಾಡ್ಜ್ ಹೊಂದಿರುವ ಪರ್ಫಾಮೆನ್ಸ್ ವೆರಿಯೆಂಟ್ ಅನ್ನು ಹೊಂದಿದೆ. ಈ ಕಾರಿನಲ್ಲಿ ಅಲಾಯ್ ವ್ಹೀಲ್ ಗಳು ಕಾರಿನ ಒಟ್ಟಾರೆ ನಿಲುವಿಗೆ ಪೂರಕವಾಗಿವೆ. ಡೋರ್ ಹ್ಯಾಂಡಲ್‌ಗಳು, ಕಾಂಟ್ರಾಸ್ಟ್ ಕಪ್ಪು ORVM ಗಳು ಮತ್ತು ರೂಪ್ ಗಾಗಿ ಕ್ರೋಮ್ ಅನ್ನು ಒಳಗೊಂಡಿದೆ. ಇದರೊಂದಿಗೆ ಈ ಕಾರಿನ ಪ್ರೊಫೈಲ್ ಅನ್ನು ಪೂರ್ಣಗೊಳಿಸಿದಾಗ ಎಲ್ಇಡಿ ಟೈಲ್‌ಲೈಟ್‌ಗಳು, ಬೂಟ್ ಲಿಡ್‌ನಲ್ಲಿ ವಿರ್ಟಸ್ ಬ್ಯಾಡ್ಜ್ ಮತ್ತು ಬೂಟ್-ಮೌಂಟೆಡ್ ನಂಬರ್ ಪ್ಲೇಟ್ ರಿಸೆಸ್ ಕಾರಿನ ಹಿಂಭಾಗವನ್ನು ಆವರಿಸುತ್ತದೆ.

ಈ ಫೋಕ್ಸ್‌ವ್ಯಾಗನ್ ವಿರ್ಟಸ್ ಸ್ಟ್ಯಾಂಡರ್ಡ್ ವೆರಿಯೆಂಟ್ ಮತ್ತು ಜಿಟಿ ವೇರಿಯಂಟ್ ನಡುವೆ ವಿಭಿನ್ನ ಸ್ಟೈಲಿಂಗ್ ಬಿಟ್‌ಗಳನ್ನು ಕೂಡ ಸೇರಿಸಿದೆ. ಅತ್ಯಂತ ಪ್ರಮುಖವಾದ ಬದಲಾವಣೆಯು ಮುಂಭಾಗದಲ್ಲಿದೆ. ವಿರ್ಟಸ್ ಫಾಸಿಕ ಬ್ಲ್ಯಾಕ್ ಇನಸರ್ಟ್ ಅನ್ನು ಹೊಂದಿದೆ.

ಈ ಹೊಸ ವರ್ಟಸ್ ಕಾರಿನ ವೈಶಿಷ್ಟ್ಯಗಳ ವಿಷಯದಲ್ಲಿ, ಕಾರು ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೆಟರ್ ಮುಂಭಾಗದ ಸೀಟುಗಳು, ಹಿಂಭಾಗದ ಏರ್-ಕಾನ್ ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್‌ನೊಂದಿಗೆ ಬರುತ್ತದೆ. ವರ್ಟಸ್ ಕ್ಲಾಸ್-ಲೀಡಿಂಗ್ 521-ಲೀಟರ್ ಬೂಟ್ ಸ್ಪೇಸ್‌ನೊಂದಿಗೆ ಬರುತ್ತದೆ, ಇದನ್ನು ಎರಡನೇ ಸಾಲಿನ ಸೀಟುಗಳನ್ನು ಮಡುಚುವ ಮೂಲಕ 1,050-ಲೀಟರ್‌ಗೆ ವಿಸ್ತರಿಸಬಹುದು. ಪರ್ಫಾರ್ಮೆನ್ಸ್ ಲೈನ್ ಕೂಡ 60:40 ಸ್ಪ್ಲಿಟ್ ಫಂಕ್ಷನ್‌ನೊಂದಿಗೆ ಬರುತ್ತದೆ.

ಒಳಗೆ, ಫೋಕ್ಸ್‌ವ್ಯಾಗನ್ ವರ್ಟಸ್ ವಿಶಾಲವಾದ ಮತ್ತು ಉತ್ತಮವಾದ ಕ್ಯಾಬಿನ್‌ನೊಂದಿಗೆ ಬರುತ್ತದೆ, ಡ್ಯುಯಲ್-ಟೋನ್ ಕಪ್ಪು ಮತ್ತು ಬೀಜ್ ಒಳಾಂಗಣದಲ್ಲಿ ಪೂರ್ಣಗೊಂಡಿದೆ. ವೈಲ್ಡ್ ಚೆರ್ರಿ ರೆಡ್ ಪೇಂಟ್ ಸ್ಕೀಮ್‌ಗೆ ನಿರ್ದಿಷ್ಟವಾದ ಡ್ಯಾಶ್‌ಬೋರ್ಡ್‌ನಲ್ಲಿ ಪರ್ಫಾರ್ಮೆನ್ಸ್ ಲೈನ್ ವರ್ಟಸ್ ರೆಡ್ ಬಣ್ಣದ ಮುಖ್ಯಾಂಶಗಳನ್ನು ಸಹ ಪಡೆಯುತ್ತದೆ.

ಚಾಲಕ-ಕೇಂದ್ರಿತ ಡ್ಯಾಶ್‌ಬೋರ್ಡ್ ದೊಡ್ಡ 10.1-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ವೈರ್‌ಲೆಸ್ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಗೆ ಸಂಪೂರ್ಣ ಡಿಜಿಟಲ್ ವರ್ಚುವಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಈ ಫೋಕ್ಸ್‌ವ್ಯಾಗನ್ ವರ್ಟಸ್ ಕಾರು ದೇಶದಲ್ಲಿ ವೆಂಟೊ ಮಾದರಿಯ ಬದಲಿಯಾಗಿದೆ, ಇದು ಅದರ ಬದಲಿಗಿಂತ ದೊಡ್ಡದಾಗಿದೆ ಮತ್ತು ಸುಸಜ್ಜಿತವಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಸೆಡಾನ್ 4561 ಮಿಮೀ ಉದ್ದ, 1752 ಎಂಎಂ ಅಗಲ ಮತ್ತು 1507 ಎಂಎಂ ಎತ್ತರವನ್ನು 2651 ಎಂಎಂ ವ್ಹೀಲ್‌ಬೇಸ್ ಅನ್ನು ಒಳಗೊಂಡಿದೆ.

ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾಂಪ್ಯಾಕ್ಟ್ ಸೆಡಾನ್ ಎರಡು ಎಂಜಿನ್ ಆಯ್ಕೆಗಳನ್ನು ಪಡೆಯುತ್ತದೆ. ಇದರಲ್ಲಿ 1.0 ಲೀಟರ್ TSI ಪೆಟ್ರೋಲ್ ಎಂಜಿನ್ 113 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ ಆಯ್ಕೆಯ 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಅನ್ನು ಪಡೆಯುತ್ತದೆ. ಇದರೊಂದಿಗೆ 1.5 ಲೀಟರ್ TSI ಪೆಟ್ರೋಲ್ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ,

ಫೋಕ್ಸ್‌ವ್ಯಾಗನ್ ಕಂಪನಿಯು ವಿರ್ಟಸ್ ಕಾರಿನ ಸುರಕ್ಷತೆಗಾಗಿ, ಡ್ಯುಯಲ್ ಏರ್‌ಬ್ಯಾಗ್‌ಗಳು, ಇಬಿಎಸ್ ಜೊತೆಗೆ ಎಬಿಎಸ್, ಪಾರ್ಕಿಂಗ್ ಸೆನ್ಸರ್ ಮತ್ತು ಹೆಚ್ಚಿನವು. ಇತರ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಎಲ್ಲಾ ಪ್ರಯಾಣಿಕರಿಗೆ 3-ಪಾಯಿಂಟ್ ಸೀಟ್ ಬೆಲ್ಟ್‌ಗಳು, ಹಿಂಭಾಗದ ಪಾರ್ಕಿಂಗ್ ಕ್ಯಾಮೆರಾ, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC),ಟೈರ್ ಒತ್ತಡದ ಡಿಫ್ಲೇಶನ್ ಅಲರ್ಟ್, ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು ಹೆಚ್ಚಿನದನ್ನು ನೀಡಿದೆ. ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾಂಪ್ಯಾಕ್ಟ್ ಸೈಜ್ ಸೆಡಾನ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಈ ಹೊಸ ಫೋಕ್ಸ್‌ವ್ಯಾಗನ್ ವರ್ಟಸ್ ಕಾರು ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿದೆ. ಇನ್ನು ಪರ್ಪಾಮೆನ್ಸ್ ಪ್ರಿಯರಿಗಾಗಿ ಫೋಕ್ಸ್‌ವ್ಯಾಗನ್ ವಿರ್ಟಸ್ ಕಾರಿನ ಜಿಟಿ ಪರ್ಪಾಮೆನ್ಸ್ ವೆರಿಯೆಂಟ್ ಕೂಡ ಲಭ್ಯವಿದೆ.