ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮಕ್ಕಾಗಿ ಫೋಕ್ಸ್‌ವ್ಯಾಗನ್ ಟೈಗುನ್ ಆ್ಯನಿರ್ವಸರಿ ಎಡಿಷನ್ ಬಿಡುಗಡೆ
ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಹೊಸ ತಲೆಮಾರಿನ ಪ್ರೀಮಿಯಂ ಕಾರು ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಟೈಗುನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸಿದ ವರ್ಷದ ಸಂಭ್ರಮಕ್ಕಾಗಿ ಇದೀಗ ಆ್ಯನಿರ್ವಸರಿ ಎಡಿಷನ್ ಬಿಡುಗಡೆ ಮಾಡಿದೆ.

2021ರ ಸೆಪ್ಟೆಂಬರ್ ಆರಂಭದಲ್ಲಿ ಬಿಡುಗಡೆಗೊಂಡಿದ್ದ ಟೈಗುನ್ ಕಂಪ್ಯಾಕ್ಟ್ ಎಸ್‌ಯುವಿಯು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿದ್ದು, ಇದುವರೆಗೆ ಸುಮಾರು 22 ಸಾವಿರ ಯುನಿಟ್ ಮಾರಾಟದೊಂದಿಗೆ ಯಶಸ್ವಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಹೊಸ ಕಾರು ಮಾದರಿಯಾಗಿ ಇದುವರೆಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕಿಂಗ್ ಸಲ್ಲಿಸಿದ್ದು, ಉತ್ಪಾದನೆ ಆಧರಿಸಿ 22 ಸಾವಿರ ಯುನಿಟ್ ಇದುವರೆಗೆ ವಿತರಣೆಯಾಗಿದೆ. ಇದೀಗ ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ಆ್ಯನಿರ್ವಸರಿ ಎಡಿಷನ್ ಮೂಲಕ ಹೊಸ ಬಣ್ಣಗಳ ಆಯ್ಕೆ ಪರಿಚಯಿಸಿದ್ದು, ಹೊಸ ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ರೂ. 30 ಸಾವಿರದಷ್ಟು ದುಬಾರಿಯಾಗಿರಲಿವೆ.

ಆ್ಯನಿರ್ವಸರಿ ಎಡಿಷನ್‌ಗಳು ಟೈಗುನ್ ಮಾದರಿಯ 1.0 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಮಾದರಿಯಲ್ಲಿ ರೈಸಿಂಗ್ ಬ್ಲ್ಯೂ, ಕರ್ಕುಮಾ ಯೆಲ್ಲೊ ಮತ್ತು ಚೆರಿ ರೆಡ್ ಬಣ್ಣಗಳ ಆಯ್ಕೆ ಹೊಂದಿದೆ.

ಹೊಸ ಬಣ್ಣಗಳ ಆಯ್ಕೆಯೊಂದಿಗೆ ಕಂಪನಿಯು ಹೈ ಲಕ್ಸ್ ಫಾಗ್ ಲ್ಯಾಂಪ್, ಬಾಡಿ ಕಲರ್ಡ್ ಡೋರ್ ಗಾರ್ನಿಶ್, ಬ್ಲ್ಯಾಕ್ ಸಿ-ಪಿಲ್ಲರ್ ಗ್ರಾಫಿಕ್ಸ್, ಬ್ಲ್ಯಾಕ್ ರೂಫ್ ಫಾಯ್ಲ್, ಡೋರ್ ಎಡ್ಜ್ ಪ್ರೊಟೆಕ್ಟರ್, ವಿಂಡೋ ವಿಸರ್ ಮತ್ತು ಅಲ್ಯುನಿಯಂ ಪೆಡಲ್ ನೀಡಲಾಗಿದೆ.

ಇನ್ನುಳಿದಂತೆ ಸ್ಟ್ಯಾಂಡರ್ಡ್ ಮಾದರಿಗಳಲ್ಲಿರುವ ತಾಂತ್ರಿಕ ಅಂಶಗಳು ಆ್ಯನಿರ್ವಸರಿ ಎಡಿಷನ್‌ನಲ್ಲಿದ್ದು, ಗ್ರಾಹಕರ ಬೇಡಿಕೆ ಅನುಸಾರವಾಗಿ ಹೊಸ ಕಾರು ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಟೈಗುನ್ ಕಾರು ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳ ಸಹಭಾಗೀತ್ವದ ಎಂಕ್ಯೂಬಿ-ಎ0-ಇನ್(MQB-AO-IN) ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಬಿಡುಗಡೆಗೊಂಡಿದ್ದು, ಸ್ಕೋಡಾ ಕುಶಾಕ್ ಮಾದರಿಯಲ್ಲಿ ಅಭಿವೃದ್ದಿಗೊಂಡಿರುವ ಟೈಗುನ್ ಕೆಲವು ವಿಶೇಷ ಫೀಚರ್ಸ್ ಮೂಲಕ ತನ್ನದೆ ಆದ ಗ್ರಾಹಕ ವರ್ಗವನ್ನು ಪಡೆದುಕೊಳ್ಳುತ್ತಿದೆ.

ಹೊಸ ಕಾರಿನ ಡೈನಾಮಿಕ್ ಮಾದರಿಗಳಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು 1.0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದಲ್ಲಿ ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್‌ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದೆ.

ಹೊಸ ಕಾರಿನಲ್ಲಿರುವ ಡೈನಾಮಿಕ್ ಲೈನ್ ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.40 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಹೊಂದಿದ್ದರೆ ಜಿಟಿ ಲೈನ್ ಮಾದರಿಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.60 ಲಕ್ಷ ಬೆಲೆ ಹೊಂದಿದೆ.

ಟೈಗುನ್ ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳು 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಎಸ್‌ಜಿ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿವೆ.

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್‌ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, 1.0-ಲೀಟರ್ ಟಿಎಸ್ಐ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ 18.47 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ 1.5-ಲೀಟರ್ ಮಾದರಿಯು ಪ್ರತಿ ಲೀಟರ್‌ಗೆ 17.88 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಹೊಸ ಟೈಗುನ್ ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲ್‍ಇಡಿ ಮ್ಯಾಟ್ರಿಕ್ಸ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇಡಿ ಲೈಟ್ ಬಾರ್, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.

ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್‌ಪಿಟ್‌ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್‌ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳು ಟೈಗನ್ ಕಾರಿನಲ್ಲಿವೆ. 6 ಏರ್‌ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.

ಜೊತೆಗೆ ಹೊಸ ಕಾರಿನಲ್ಲಿ ಇನ್ನು ಹೆಚ್ಚಿನ ಆಕ್ಸೆಸರಿಸ್ ಬಯಸುವ ಗ್ರಾಹಕರಿಗೆ ಕಂಪನಿಯು ಆರು ವಿನೂತನ ಆಕ್ಸೆಸರಿಸ್ ಪ್ಯಾಕೇಜ್ ಸಹ ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿ ಮೇಲೆ 4 ವರ್ಷದ ಸ್ಟ್ಯಾಂಡರ್ಡ್ ವಾರಂಟಿ ಜೊತೆಗೆ 4 ವರ್ಷಗಳ ರೋಡ್ ಸೈಡ್ ಅಸಿಸ್ಟಂಟ್ ಸೌಲಭ್ಯ ದೊರೆಯಲಿದೆ.


Click it and Unblock the Notifications








