Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ವೊಲ್ವೊ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ
ಸ್ವೀಡಿಷ್ ಕಾರು ಉತ್ಪಾದನಾ ಕಂಪನಿಯಾಗಿರುವ ವೊಲ್ವೊ ಭಾರತದಲ್ಲಿ ತನ್ನ ಹೊಚ್ಚ ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯನ್ನು ಈಗಾಗಲೇ ಅನಾವರಣಗೊಳಿಸಿರುವ ಕಂಪನಿಯು ಮುಂಬರುವ ಅಕ್ಟೋಬರ್ ವೇಳೆಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಮಾಲಿನ್ಯ ತಡೆಗಾಗಿ ಈಗಾಗಲೇ ಮುಂದುವರಿದ ಹಲವು ರಾಷ್ಟ್ರಗಳು ಡೀಸೆಲ್ ಎಂಜಿನ್ ವಾಹನಗಳ ಬಳಕೆ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ಇದಕ್ಕೆ ಪೂರಕವಾಗಿ ಭವಿಷ್ಯದ ವಾಹನ ಮಾದರಿಗಳ ಮೇಲೆ ಗಮನಹರಿಸಿರುವ ಆಟೋ ಉತ್ಪಾದನಾ ಕಂಪನಿಗಳು ಡೀಸೆಲ್ ವಾಹನಗಳ ಉತ್ಪಾದನೆಯನ್ನು ತಗ್ಗಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುತ್ತಿವೆ.

ವೊಲ್ವೊ ಕಂಪನಿಯು ಕೂಡಾ ಈಗಾಗಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೂರ್ಣ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಹೈಬ್ರಿಡ್ ಕಾರು ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, 2023ರಿಂದ ಇನ್ನುಳಿದ ಕಾರು ಮಾದರಿಗಳಲ್ಲೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.

ಹೈಬ್ರಿಡ್ ಎಂಜಿನ್ ವಾಹನ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿ ಹೊಂದಿರುವ ವೊಲ್ವೊ ಕಂಪನಿಯು 2023ರ ವೇಳೆಗೆ ಒಟ್ಟು 6 ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಮಾರಾಟ ಮಾಡುವ ಗುರಿಹೊಂದಿದ್ದು, ಭಾರತದಲ್ಲಿ ಮೊದಲ ಇವಿ ಕಾರು ಮಾದರಿಯಾಗಿ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆಗಡೆಗೊಳಿಸುತ್ತಿದೆ.

ಹೊಸ ಎಕ್ಸ್‌ಸಿ40 ರಿಚಾರ್ಜ್ ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಗೂ ಮುನ್ನ ಅನಾವರಣಗೊಳಿಸಿದ ವೊಲ್ವೊ ಕಂಪನಿಯು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅಕ್ಟೊಬರ್ ಆರಂಭದಲ್ಲಿ ಹೊಸ ಕಾರಿನ ವಿತರಣೆಯು ಆರಂಭಗೊಳಿಸಲಿದೆ.

ಹೊಸ ಕಾರು ಮಾದರಿಯನ್ನು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದು ಮಾಡಿಕೊಳ್ಳಲಿರುವ ವೊಲ್ವೊ ಕಂಪನಿಯು ಬೆಲ್ಜಿಯಂನಲ್ಲಿರುವ ಘೆಂಟ್ ಕಾರು ಉತ್ಪಾದನಾ ಘಟಕದಿಂದ ನಿರ್ಮಾಣ ಮಾಡುತ್ತಿದ್ದು, ಇದೇ ಘಟಕದಿಂದಲೇ ವೊಲ್ವೊ ಕಂಪನಿಯು ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ತನ್ನ ಹೊಸ ಇವಿ ಕಾರುಗಳನ್ನು ರಫ್ತು ಕೈಗೊಳ್ಳಲಿದೆ.

ಯೋಜನೆಯ ಪ್ರಕಾರ ಕಳೆದ ವರ್ಷದ ನವೆಂಬರ್‌ನಲ್ಲಿಯೇ ಹೊಸ ಎಕ್ಸ್‌ಸಿ40 ರಿಚಾರ್ಜ್ ಇವಿ ಕಾರು ಮಾದರಿಯನ್ನು ವಿತರಣೆ ಕೈಗೊಳ್ಳಬೇಕಿದ್ದ ವೊಲ್ವೊ ಕಂಪನಿಯು ಕಾರಣಾಂತರಗಳಿಂದ ಹೊಸ ಕಾರಿನ ವಿತರಣೆಯನ್ನು ಮುಂದಿನ ಅಕ್ಟೋಬರ್‌ಗೆ ನಿಗದಿಪಡಿಸಿದೆ.

ಕೋವಿಡ್ ಕಾರಣಕ್ಕೆ ಏರಿಳಿತವಾಗುತ್ತಿರುವ ಆರ್ಥಿಕ ಬೆಳವಣಿಗೆ ಮತ್ತು ಜಾಗತಿಕ ಮಟ್ಟದಲ್ಲಿ ಭಾರೀ ಹೊಡೆತ ನೀಡುತ್ತಿರುವ ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ಕೊರತೆ ಕೂಡಾ ಹೊಸ ಕಾರುಗಳ ಬಿಡುಗಡೆಯಲ್ಲಿ ವಿಳಂಬವಾಗುತ್ತಿದ್ದು, ಅದರಲ್ಲೂ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಹೆಚ್ಚಿನ ಮಟ್ಟದ ಸೆಮಿಕಂಡಕ್ಟರ್ ಅವಶ್ಯವಿರುವುದರಿಂದ ಬಿಡುಗಡೆ ಯೋಜನೆಗೆ ಹಿನ್ನಡೆಯಾಗಿದೆ.

ಹೊಸ ಕಾರಿನ ಅನಾವರಣದ ಹೊರತಾಗಿ ಬೆಲೆ ಕುರಿತಾಗಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲವಾದರೂ ಹೊಸ ಕಾರು ಸಾಮಾನ್ಯ ಆವೃತ್ತಿಗಿಂತಲೂ ತುಸು ದುಬಾರಿಯಾಗಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು 78kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದೆ.

ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಸೌಲಭ್ಯ ಹೊಂದಿರುವ ಹೊಸ ಕಾರು 408-ಬಿಎಚ್‌ಪಿ ಮತ್ತು 660-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಎಲೆಕ್ಟ್ರಿಕ್ ಕಾರು ಮಾದರಿಯಲ್ಲೇ ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಅಧಿಕ ಮೈಲೇಜ್ ಪ್ರೇರಣೆ ಪಡೆದುಕೊಂಡಿರುವ ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಕಾರಿನ ಹೊರಭಾಗದಲ್ಲಿನ ಫೀಚರ್ಸ್‌ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್‌ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ನೀಡಲಾಗಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ.

ಹೊಸ ಕಾರಿನ ಹೊರಭಾಗದಲ್ಲಿನ ಫೀಚರ್ಸ್‌ಗಳನ್ನು ಸಾಮಾನ್ಯ ಕಾರಿನ ಮಾದರಿಯಲ್ಲೇ ಕಾಣುವಂತೆ ಡ್ಯುಯಲ್ ಎಕ್ಸಾಸ್ಟ್, ಚಾರ್ಜಿಂಗ್ ಪಾಯಿಂಟ್‌ಗೆ ಫ್ಯೂಲ್ ಟ್ಯಾಂಪ್ ಮಾದರಿಯ ಕ್ಯಾಪ್ ನೀಡಲಾಗಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ.

ಭಾರತದಲ್ಲಿ ಸದ್ಯ ಬೆರಳಣಿಕೆಯಲ್ಲಿ ಎಲೆಕ್ಟ್ರಿಕ್ ಕಾರುಗಳು ಮಾರಾಟಗೊಳ್ಳುತ್ತಿದ್ದು, ಮಾಲಿನ್ಯ ಮತ್ತು ಇಂಧನ ವೆಚ್ಚಗಳನ್ನು ತಗ್ಗಿಸಲು ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುತ್ತಿರುವುದು ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯು ಕ್ರಮೇಣ ಹೆಚ್ಟುತ್ತಿದೆ.

ಅದರಲ್ಲೂ ಐಷಾರಾಮಿ ಎಲೆಕ್ಟ್ರಿಕ್ ವಾಹನ ವಿಭಾಗದಲ್ಲಿ ಸದ್ಯ ಮರ್ಸಿಡಿಸ್ ಬೆಂಝ್, ಆಡಿ, ಜಾಗ್ವಾರ್ ಇವಿ ಕಾರುಗಳು ಗಮನಸೆಳೆಯುತ್ತಿದ್ದು, ವೊಲ್ವೊ ಎಕ್ಸ್‌ಸಿ40 ರೀಚಾರ್ಜ್ ಕಾರು ಮಾದರಿಯು ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಪ್ರತಿ ಸ್ಪರ್ಧಿ ಮಾದರಿಗಳಿಂತಲೂ ತುಸು ಕಡಿಮೆ ಬೆಲೆಯಲ್ಲಿ ನೀರಿಕ್ಷಿಸಬಹುದಾದರೂ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 55 ಲಕ್ಷದಿಂದ ರೂ. 65 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಬಿಡುಗಡೆಯ ನಂತರವಷ್ಟೇ ಹೊಸ ನಿಖರ ಕಾರ್ಯಕ್ಷಮತೆ ಬಗೆಗೆ ಸಂಪೂರ್ಣ ಮಾಹಿತಿ ಸಿಗಲಿದೆ.