2023 Hyundai Verna: ಹೊಸ ಹ್ಯುಂಡೈ ವೆರ್ನಾಗೆ ಭಾರೀ ಬೇಡಿಕೆ: ಹೋಂಡಾ ಸಿಟಿಗೆ ಸೆಡ್ಡು ಹೊಡೆಯಲು ತಯಾರಿ

ಜನಪ್ರಿಯ ಮತ್ತು ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ತನ್ನ ಬಹುನಿರೀಕ್ಷಿತ 2023ರ ವೆರ್ನಾ ಸೆಡಾನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ 2023ರ ಹ್ಯುಂಡೈ ವೆರ್ನಾ (2023 Hyundai Verna) ಕಾರಿಗೆ ಭಾರೀ ಬೇಡಿಕೆಯನು ಪಡೆದುಕೊಂಡಿದೆ.

ಈ ಹೊಸ ಹ್ಯುಂಡೈ ವೆರ್ನಾ ಕಾರಿನ ಪ್ರಾರಂಭಿಕ ಬೆಲೆಯು ರೂ.10.89 ಲಕ್ಷವಾಗಿದೆ. ಇದೀಗ ಭಾರತದಲ್ಲಿ ಈ ಹೊಸ 2023ರ ಹ್ಯುಂಡೈ ವೆರ್ನಾ ಕಾರಿಗಾಗಿ 8,000ಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಪಡೆದುಕೊಂಡಿವೆ. ಈ ಹೊಸ ಹ್ಯುಂಡೈ ವೆರ್ನಾ ಕಾರು EX, S, S ಮತ್ತು SX (O) ಎಂಬ ನಾಲ್ಕು ಟ್ರಿಮ್‌ಗಳಲ್ಲಿ ಲಬ್ಯವಿದೆ. ಈ ಕಾರಿನಲ್ಲಿ 1.5 ಲೀಟರ್ ನ್ಯಾಚುರಲ್ ಆಸ್ಪರರ್ಡ್ ಮತ್ತು 1.5 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಹೊಂದಿದೆ.

ಹೊಸ ಹ್ಯುಂಡೈ ವೆರ್ನಾಗೆ ಭಾರೀ ಬೇಡಿಕೆ

ಈ ಕಾರಿನ 1.5 ಲೀಟರ್ ನ್ಯಾಚುರಲ್ ಆಸ್ಪರರ್ಡ್ ಮಾದರಿಗಳ ಬೆಲೆಯು ರೂ,10.89 ಲಕ್ಷ ದಿಂದ ರೂ.16.19 ಲಕ್ಷಗಳಾದರೆ, ಟರ್ಬೊ-ಪೆಟ್ರೋಲ್ ರೂಪಾಂತರಗಳ ಬೆಲೆಯು ರೂ,14.83 ಲಕ್ಷದಿಂದ ರೂ.17.37 ಲಕ್ಷಗಳಾಗಿದೆ. ಈ ಮೇಲಿನ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ, ಈ ಹೊಸ ಹ್ಯುಂಡೈ ವೆರ್ನಾ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ಸ್ಕೋಡಾ ಸ್ಲಾವಿಯಾ, ಫೋಕ್ಸ್ ವ್ಯಾಗನ್ ವಿಟ್ರಸ್ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಹೊಸ ಅತ್ಯಾಧುನಿಕ ಸುರಕ್ಷತಾ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿಗಳಿಗೆ ಹೆಚ್ಚಿನ ಪೈಪೋಟಿಯನ್ನು ನೀಡುತ್ತದೆ, 2023ರ ಹ್ಯುಂಡೈ ವೆರ್ನಾ ಕಾರಿನಲ್ಲಿ ಡ್ಯುಯಲ್-ಡಿಸ್ ಪ್ಲೇಯಂತಹ ಕೆಲವು ಸೆಗ್ಮೆಂಟ್-ಮೊದಲ ಫೀಚರ್ಸ್ ಗಳನ್ನು ಪಡೆದುಕೊಂಡಿದೆ. ಈ ಕಾರಿನಲ್ಲಿ ಒಂದು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಮತ್ತು ಇನ್ನೊಂದು ಡಿಜಿಟಲ್ ಡ್ರೈವರ್‌ಸ್ ಡಿಸ್ ಪ್ಲೇಯನ್ನು ಹೊಂದಿದೆ. ಇದರಲ್ಲಿ ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಹೊಸ ಟಚ್- ಆಧಾರಿತ ಕ್ಲೈಮೆಂಟ್ ಕಂಟ್ರೋಲ್, ಚಾಲಕ ಹೊಂದಾಣಿಕೆಯ ಮಾಡಬಹುದಾದ ಸೀಟ್ ಅನ್ನು ಹೊಂದಿದೆ.

ಹೊಸ ಹ್ಯುಂಡೈ ವೆರ್ನಾಗೆ ಭಾರೀ ಬೇಡಿಕೆ

ಈ ಹ್ಯುಂಡೈ ವೆರ್ನಾ ಕಾರು ಕಾರಿನ EX ಮತ್ತು S ರೂಪಾಂತರಗಳಲ್ಲಿ 1.5 ಲೀಟರ್ ನ್ಯಾಚುರಲ್ ಆಸ್ಪರರ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ ಈ ಎಂಜಿನ್ 113.4 ಬಿಹೆಚ್‍ಪಿ ಪವರ್ ಮತ್ತು 144 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ iVT ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಇನ್ನು ಈ ಹೊಸ ಹ್ಯುಂಡೈ ಕಾರಿನ S ಮತ್ತು SX (O) ರೂಪಾಂತರಗಳಲ್ಲಿ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿರುವ ಮಾದರಿಯಲ್ಲಿ 1.5 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.ಈ ಎಂಜಿನ್ 158bhp ಮತ್ತು 253Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ DCT ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ.

ಹೊಸ ಹ್ಯುಂಡೈ ವೆರ್ನಾಗೆ ಭಾರೀ ಬೇಡಿಕೆ

ಇದರೊಂದಿಗೆ ಮೌಂಟೆಡ್ ಆಡಿಯೋ ಮತ್ತು ಕ್ರೂಸ್ ಕಂಟ್ರೋಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಡ್ಯುಯಲ್-ಟೋನ್ ಬೀಜ್ ಮತ್ತು ಲೆದರ್ ಅಪ್ಹೋಲ್ಸ್ಟರಿ ಅನ್ನು ಹೊಂದಿದೆ. ಈ ಕಾರಿನಲ್ಲಿ 65+ ಬ್ಲೂಲಿಂಕ್ ಕನೆಕ್ಟಿವಿಟಿ ಫೀಚರ್ಸ್ ಗಳೊಂದಿಗೆ ಹೊಸ 2-ಸ್ಪೋಕ್ ಸ್ಟೀರಿಂಗ್ ವೀಲ್ ಅನ್ನು ಸಹ ಪಡೆಯುತ್ತದೆ. ಹೊಸ ವೆರ್ನಾದ ಪ್ರಮುಖ ವೈಶಿಷ್ಟ್ಯವೆಂದರೆ ADAS (ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ತಂತ್ರಜ್ಞಾನವನ್ನು ಒಳಗೊಂಡಿದೆ.

ಈ ಹ್ಯುಂಡೈ ಕಾರಿನಲ್ಲಿ ADAS ಸೂಟ್ 17 ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಒದಗಿಸುತ್ತದೆ, ಜೊತೆಗೆ ಸ್ಟಾಪ್ ಮತ್ತು ಗೋ ಜೊತೆಗೆ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವರ್ಡ್ ಕೊಲಿಷನ್ ಅಲರ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಲೇನ್ ಕೀಪ್ ಅಸಿಸ್ಟ್, ಲೇನ್ ಫಾಲೋಯಿಂಗ್ ಅಸಿಸ್ಟ್, ಹೈ ಬೀಮ್ ಅಸಿಸ್ಟ್ ಮತ್ತು ರಿಯರ್ ಕ್ರಾಸ್ ಟ್ರಾಫಿಕ್ ಅನ್ನು ಹೊಂದಿದೆ. ಈ ಹೊಸ ಹ್ಯುಂಡೈ ಕಾರಿನಲ್ಲಿ ಇನ್ನು ಹಲವಾರು ಸುರಕ್ಷತಾ ಫೀಚರ್ಸ್ ಗಳೊಂದಿಗೆ ಬಿಡುಗಡೆಗೊಂಡಿದೆ.

Article Published On: Thursday, March 23, 2023, 14:20 [IST]
English summary
2023 hyundai verna sedan garners more than 8000 bookings details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+