ಫೀಚರ್ಸ್‌ನಿಂದ ತುಂಬಿ ತುಳುಕಿದ ಹೊಸ ಕಿಯಾ ಸೆಲ್ಟೋಸ್ ಎಸ್‍ಯುವಿಯ ರಿವ್ಯೂ ವೀಡಿಯೊ ನೋಡಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಕಿಯಾ ಇಂಡಿಯಾ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಕಾರು ಸೆಲ್ಟೋಸ್ ಎಸ್‍ಯುವಿಯಾಗಿದೆ. ಈ ಕಿಯಾ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಇದೀಗ ಹೊಸ ನವೀಕರಣಗಳೊಂದಿಗೆ ಕಿಯಾ ಇಂಡಿಯಾ ಕಂಪನಿಯು 2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ (Kia Seltos Facelift) ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದೆ.

ಈ ಕಿಯಾ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ನಂತರದ ನಾಲ್ಕು ವರ್ಷಗಳಲ್ಲಿ, ಸೆಲ್ಟೋಸ್ ಮಾರಾಟದ ಯಶೋಗಾಧೆಯಾಗಿದೆ. ಈ ಹೊಸ ಕಿಯಾ ಸೆಲ್ಟೋಸ್ ವಿನ್ಯಾಸ, ಹೊಸ ಫೀಚರ್ಸ್ ಮತ್ತು ಪರ್ಫಾಮೆನ್ಸ್ ಬಗ್ಗೆ ತಿಳಿದುಕೊಳ್ಳಲು ನಾವು ಡ್ರೈವ್ ಮಾಡಿದ್ದೇವೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ವೀಡಿಯೊ ನೋಡಿ.

ಹೊಸ ಕಿಯಾ ಸೆಲ್ಟೋಸ್ ಮೊದಲ ನೋಟದಲ್ಲಿ, ಅದರ ಹಿಂದಿನ ಮಾದರಿಗೆ ಹೋಲಿಸಿದರೆ ಸೆಲ್ಟೋಸ್ 2.0 ನಲ್ಲಿ ಹೆಚ್ಚು ಬದಲಾಗಿಲ್ಲ. ಈ ಹೊಸ ಮಾದರಿಯನ್ನು ಹತ್ತಿರದಿಂದ ನೋಡಿ, ಮತ್ತು ಬದಲಾವಣೆಗಳು ಹೆಚ್ಚು ಗೋಚರಿಸುತ್ತವೆ. ಇನ್ನು ಹೊಸದಾಗಿ ಬಿಡುಗಡೆಯಾದ ಈ 2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯು 18 ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಹೊಸ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.5-ಲೀಟರ್, ನ್ಯಾಚುರಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 113bhp ಮತ್ತು 144Nm ಪೀಕ್ ಟಾರ್ಕ್‌ನೊಂದಿಗೆ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಈ ಎಂಜಿನ್ ಅನ್ನು 6-ಸ್ಪೀಡ್ iMT ಗೇರ್‌ಬಾಕ್ಸ್ ಅಥವಾ CVT ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

Kia Seltos

ಈ ಫೇಸ್‌ಲಿಫ್ಟೆಡ್ ಮಾಡೆಲ್‌ನಲ್ಲಿಯೂ 1.5-ಲೀಟರ್, ಟರ್ಬೋಚಾರ್ಜ್ಡ್, ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 114bhp ಮತ್ತು 250Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಯುನಿಟ್‌ನೊಂದಿಗೆ ಜೋಡಿಸಲಾಗಿದೆ.

ಇನ್ನು ಕೊನೆಯದಾಗಿ, ಈ ಹೊಸದಾಗಿ ಪರಿಚಯಿಸಲಾದ 1.5-ಲೀಟರ್, ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 158 bhp ಪವರ್ ಮತ್ತು 253 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ iMT ಯುನಿಟ್ ಅಥವಾ 7-ಸ್ಪೀಡ್ DCT ಗೇರ್‌ಬಾಕ್ಸ್‌ನೊಂದಿಗೆ ನೀಡಬಹುದು.

More from DriveSpark

Article Published On: Sunday, July 23, 2023, 10:00 [IST]
English summary
2023 kia seltos facelift suv review video details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+