ಫೀಚರ್ಸ್‌ನಿಂದ ತುಂಬಿ ತುಳುಕಿದ ಹೊಸ ಕಿಯಾ ಸೆಲ್ಟೋಸ್ ಎಸ್‍ಯುವಿಯ ವಿಶೇಷತೆಗಳು
ಕಿಯಾ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಮೊದಲ ಕಾರು ಸೆಲ್ಟೋಸ್ ಎಸ್‍ಯುವಿಯಾಗಿದೆ. ಈ ಕಿಯಾ ಸೆಲ್ಟೋಸ್ ಎಸ್‍ಯುವಿಯು ಮಾರಾಟದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಇದೀಗ ಹೊಸ ನವೀಕರಣಗಳೊಂದಿಗೆ ಕಿಯಾ ಇಂಡಿಯಾ ಕಂಪನಿಯು 2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ (Kia Seltos Facelift) ಎಸ್‍ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ.
ಭಾರತದ ಗ್ರಾಹಕರು ಕಿಯಾ ಸೆಲ್ಟೋಸ್ ಎಸ್‍ಯುವಿ ಆಕರ್ಷಕ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್‌ಗಳಿಗೆ ಫುಲ್ ಫಿದಾ ಆಗಿದ್ದಾರೆ. ಇದೀಗ ಹೊಸ ನವೀಕರಣಗಳೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಸಜ್ಜಾಗಿದೆ. ಇನ್ನು ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೆ ಸೆಲ್ಟೋಸ್ ಎಸ್‍ಯುವಿ ಯಾವುದೇ ಪ್ರಮುಖ ನವೀಕರಣಗಳನ್ನು ಪಡೆದಿರಲಿಲ್ಲ. ಇದೀಗ ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾದ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ರೂಪಾಂತರಗಳು: ಹೊಸದಾಗಿ ಬಿಡುಗಡೆಯಾದ 2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯು 18 ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತದೆ. ಈ ರೂಪಾಂತರಗಳು 3 ಎಂಜಿನ್ ಆಯ್ಕೆಗಳು ಮತ್ತು 5 ಟ್ರಾನ್ಸ್ಮಿಷನ್ ಆಯ್ಕೆಗಳನ್ನು ಒಳಗೊಂಡಿರುತ್ತವೆ. ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಬೆಲೆಯು ರೂ.10.89 ಲಕ್ಷದಿಂದ ರೂ.19.99 ಲಕ್ಷ ಬೆಲೆಯನ್ನು ಹೊಂದಿದೆ.
ಎಂಜಿನ್: 2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ನ್ಯಾಚುರಲ್ ಆಸ್ಪರರ್ಡ್ ಪೆಟ್ರೋಲ್ ಎಂಜಿನ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಮತ್ತು ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್, 6-ಸ್ಪೀಡ್ ಐಎಂಟಿ ಯುನಿಟ್, ಸಿವಿಟಿ ಯುನಿಟ್, ಸಿವಿಟಿ ಯುನಿಟ್, 6-ಜಿ-ಸ್ಪೀಡ್ ಡ್ಯುಯಲ್ ಟ್ರಾನ್ಸ್‌ಮಿಷನ್ ಮತ್ತು 6-ಜಿ-ಸ್ಪೀಡ್ ಡ್ಯುಯಲ್ ಟ್ರಾನ್ಸ್‌ಮಿಷನ್ ಆಯ್ಕೆಗಳನ್ನು ಹೊಂದಿವೆ
2023ರ ಕಿಯಾ ಸೆಲ್ಟೋಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.5-ಲೀಟರ್, ನ್ಯಾಚುರಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 113bhp ಮತ್ತು 144Nm ಪೀಕ್ ಟಾರ್ಕ್‌ನೊಂದಿಗೆ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಈ ಎಂಜಿನ್ ಅನ್ನು 6-ಸ್ಪೀಡ್ iMT ಗೇರ್‌ಬಾಕ್ಸ್ ಅಥವಾ CVT ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
ಈ ಫೇಸ್‌ಲಿಫ್ಟೆಡ್ ಮಾಡೆಲ್‌ನಲ್ಲಿಯೂ 1.5-ಲೀಟರ್, ಟರ್ಬೋಚಾರ್ಜ್ಡ್, ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 114bhp ಮತ್ತು 250Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಯುನಿಟ್‌ನೊಂದಿಗೆ ಜೋಡಿಸಬಹುದು.
ಇನ್ನು ಕೊನೆಯದಾಗಿ, ಹೊಸದಾಗಿ ಪರಿಚಯಿಸಲಾದ 1.5-ಲೀಟರ್, ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 158 bhp ಪವರ್ ಮತ್ತು 253 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ iMT ಯುನಿಟ್ ಅಥವಾ 7-ಸ್ಪೀಡ್ DCT ಗೇರ್‌ಬಾಕ್ಸ್‌ನೊಂದಿಗೆ ನೀಡಬಹುದು.
ಫೀಚರ್ಸ್: ಬಿಡುಗಡೆಯಾದಾಗಿನಿಂದ, ಕಿಯಾ ಸೆಲ್ಟೋಸ್ ಅದರ ಫೀಚರ್ಸ್-ಲೋಡ್ ಮಾಡಲಾದ ಒಳಾಂಗಣಕ್ಕೆ ಹೆಸರುವಾಸಿಯಾಗಿದೆ. ಈ ಫೇಸ್‌ಲಿಫ್ಟೆಡ್ ಮಾಡೆಲ್ ವಿಭಿನ್ನವಾಗಿಲ್ಲ. ಫೇಸ್‌ಲಿಫ್ಟೆಡ್ ಸೆಲ್ಟೋಸ್ ಎಸ್‌ಯುವಿಯಲ್ಲಿನ ಕೆಲವು ಗಮನಾರ್ಹ ವೈಶಿಷ್ಟ್ಯಗಳೆಂದರೆ ಇನ್ಫೋಟೈನ್‌ಮೆಂಟ್ ಮತ್ತು ಇನ್‌ಸ್ಟ್ರುಮೆಂಟೇಶನ್‌ಗಾಗಿ ಟ್ವಿನ್ 10.25-ಇಂಚಿನ ಡಿಸ್ ಪ್ಲೇ, ದೊಡ್ಡ 8-ಇಂಚಿನ ಹೆಡ್ಸ್-ಅಪ್ ಡಿಸ್ಪ್ಲೇ, ಪನೋರಮಿಕ್ ಸನ್‌ರೂಫ್, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್, ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಮತ್ತು ಹೆಚ್ಚಿನವುಗಳನ್ನು ಹೊಂದಿವೆ.


Click it and Unblock the Notifications








