ಮಾರುತಿ ಬ್ರೆಝಾಗೆ ಸೆಡ್ಡು ಹೊಡೆಯಲು ಹೊಸ ನವೀಕರಣಗಳೊಂದಿಗೆ ಬರುತ್ತಿದೆ ಟಾಟಾ ನೆಕ್ಸಾನ್
ಟಾಟಾ ನೆಕ್ಸಾನ್ (Tata Nexon) ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಪಾರುಪತ್ಯ ಸಾಧಿಸುತ್ತಿದೆ. ಆದರೂ ತನ್ನ ಪ್ರತಿಸ್ಪರ್ಧಿಗಳಿಗೆ ಸೆಡ್ಡು ಹೊಡೆದು ತನ್ನ ಪಾರುಪತ್ಯವನ್ನು ಮುಂದುವರೆಸಲು ನವೀಕರಸುವುದು ಅನಿವಾರ್ಯವಾಗಿದ್ದು, ಇದೇ ಕಾರಣಕ್ಕೆ ನೆಕ್ಸಾನ್ ಹೊಸ ನವೀಕರಣವನ್ನು ಪಡೆಯಲಿದೆ.
ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ 2017ರಲ್ಲಿ ಬಿಡುಗಡೆಗೊಳಿಸಿತು.ಟಾಟಾ ನೆಕ್ಸಾನ್ ಬಿಡುಗಡೆಯಾದ ಆರಂಭದಲ್ಲಿ ಮಾರಾಟವು ನಿಧಾನಗತಿಯಲ್ಲಿ ಸಾಗಿತು. ಆದರೆ 2020ರ ಆರಂಭದಲ್ಲಿ ನೆಕ್ಸಾನ್‌ನ ಹೆಚ್ಚು ನವೀಕರಿಸಿದ ಆವೃತ್ತಿಯನ್ನು ತಂದರು. ಅಂದಿನಿಂದ ನೆಕ್ಸಾನ್ ನಿಜವಾಗಿಯೂ ಮಾರಾಟದಲ್ಲಿ ಭಾರೀ ಏರಿಕೆಯನ್ನು ಕಂಡಿತು.

ಹೊಸ ಪ್ರತಿಸ್ಪರ್ಧಿಗಳೊಂದಿಗೆ ಸ್ಪರ್ಧಿಸಲು ವಾಹನ ತಯಾರಕರು ಸಮಯೋಚಿತ ನವೀಕರಣಗಳನ್ನು ಹೊರತರಲು ವಿಫಲವಾದರೆ ಮಾರಾಟದಲ್ಲಿ ಕುಸಿಯಬಹುದು. ಇದರಿಂದ ಟಾಟಾ ತನ್ನ ಜನಪ್ರಿಯ ನೆಕ್ಸಾನ್ ಎಸ್‍ಯುವಿಯನ್ನು ನವೀಕರಿಸಲು ಮುಂದಾಗಿದೆ. ಟಾಟಾ ಮೋಟಾರ್ಸ್ ಕಂಪನಿಯು ತನ್ನ ನೆಕ್ಸಾನ್ ಎಸ್‌ಯುವಿಯ ಫೇಸ್‌ಲಿಫ್ಟೆಡ್ ಆವೃತ್ತಿಯನ್ನು ಹಲವಾರು ಬಾರಿ ಟೆಸ್ಟ್ ಮಾಡಲಾಗುತ್ತಿದೆ. ಈ ಎಸ್‍ಯುವಿಯನ್ನು ಟೆಸ್ಟ್ ಮಾಡುತ್ತಿರುವ ಚಿತ್ರಗಳು ಸೋರಿಕೆಯಾಗಿದೆ,
ಈ ಮುಂಬರುವ ನವೀಕರಿಸಿದ ನೆಕ್ಸಾನ್ ಎಸ್‍ಯುವಿಯು ಹೆಚ್ಚು ಪವರ್ ಫುಲ್ ಮತ್ತು ನವೀಕರಿಸಿದ ಎಂಜಿನ್ ಆಯ್ಕೆಗಳೊಂದಿಗೆ ಸುಸಜ್ಜಿತವಾಗಿ ಬರಲಿದ್ದು, ಈ ಹೊಸ ನೆಕ್ಸಾನ್ ಎಸ್ಯುವಿಯು ಹೊಸ ಫೀಚರ್ಸ್ ಗಳನ್ನು ಪಡೆದುಕೊಳ್ಳಬಹುದು ಎಂದು ನಿರೀಕ್ಷಿಸುತ್ತೇವೆ. ಮುಂಬರುವ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಟಾಪ್-ಸ್ಪೆಕ್ ಮಾಡೆಲ್‌ಗಳಲ್ಲಿ ADAS ನೊಂದಿಗೆ ಬರಲಿದೆ ಎಂದು ವದಂತಿಗಳಿವೆ. ಈ ಬಗ್ಗೆ ಕಂಪನಿಯು ಅಧಿಕೃತವಾಗಿ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ.

ಮುಂಬರುವ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿರುವ ಹೆಚ್ಚು ಪವರ್ ಫುಲ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಸುಮಾರು 125 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ, ಟಾಟಾ ನೆಕ್ಸಾನ್ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ AMT ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗುತ್ತದೆ. ಈ ಟಾಟಾ ನೆಕ್ಸಾನ್ ಎಸ್‍ಯುವಿಯ ಮುಂಬರುವ ಫೇಸ್‌ಲಿಫ್ಟೆಡ್ ಮಾದರಿಯು ಡಿಸಿಟಿ ಗೇರ್‌ಬಾಕ್ಸ್ ಅನ್ನು ಹೊಂದುವ ಸಾಧ್ಯತೆಯಿದೆ. ಈ ಪರಿಷ್ಕರಣೆಯ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಮತ್ತು ಉತ್ತಮ ಡ್ರೈವಿಂಗ್ ಅನುಭವನ್ನು ನೀಡುತ್ತದೆ, ಡಿಸಿಟಿ ಗೇರ್‌ಬಾಕ್ಸ್ ಮಾದರಿಗಳಿಗೆ ಪ್ರತ್ಯೇಕ ಅಭಿಮಾನಿಗಳಿವೆ.

ಈ ಹೊಸ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 7-ಇಂಚಿನ ಇನ್ಫೋಟೈನ್‌ಮೆಂಟ್ ಯುನಿಟ್ ಮತ್ತು ಪಾರ್ಟ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬದಲಾಯಿಸಿ ಹೊಸ 10.25-ಇಂಚಿನ ಇನ್ಫೋಟೈನ್‌ಮೆಂಟ್ ಯುನಿಟ್ ಮತ್ತು ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಬಹುದು ಎಂದು ನಾವು ನಿರೀಕ್ಷಿಸುತ್ತೇವೆ. ಇದರೊಂದಿಗೆ ಕೆಲವು ಹೊಸ ಪೀಚರ್ಸ್ ಮತ್ತು ತಂತ್ರಜ್ಙಾನವನ್ನು ಪಡೆಯಲಿದೆ ಎಂದು ಹೇಳಲಾಗುತ್ತಿದೆ.
ಟಾಟಾ ನೆಕ್ಸಾನ್ ಫೇಸ್‌ಲಿಫ್ಟೆಡ್ ಆವೃತ್ತಿಯ ಟೆಸ್ಟಿಂಗ್ ಅನ್ನು ಪ್ರಾರಂಭಿಸಿದೆ, ಇದರಿಂದ ಈ ಹೊಸ ನೆಕ್ಸಾನ್ ಎಸ್‍ಯುವಿಯು ಶೀಘ್ರದಲ್ಲೇ ಬಿಡುಗಡೆಯಾಗುತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ಜನಪ್ರಿಯ ಟಾಟಾ ನೆಕ್ಸಾನ್ ಎಸ್ಯುವಿಯು ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗುತ್ತಿರುವುದನ್ನು ಕಾಯುತ್ತಿದ್ದಾರೆ. ಈ ಹೊಸ ನೆಕ್ಸಾನ್ ಫೇಸ್‌ಲಿಫ್ಟೆಡ್ ಆವೃತ್ತಿಯ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಲಿದೆ.


Click it and Unblock the Notifications