ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಟೊಯೊಟಾ ಇನೋವಾ ಕ್ರಿಸ್ಟಾ ಡೀಸೆಲ್ ಕಾರು

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ಭಾರತೀಯ ಮಾರುಕಟ್ಟೆಯಲ್ಲಿ 2023ರ ಇನೋವಾ ಕ್ರಿಸ್ಟಾ ಎಂಪಿವಿಯನ್ನು ಮರುಪರಿಚಯಿಸಲು ಸಿದ್ಧವಾಗಿದೆ. ಈ ಹೊಸ ಟೊಯೊಟಾ ಇನೋವಾ ಕ್ರಿಸ್ಟಾ (Toyota Innova Crysta) ಎಂಪಿವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಲಾಗಿದೆ.

ಈ ಹೊಸ ಎಂಪಿವಿಯನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.ಇತ್ತೀಚೆಗೆ ಬಿಡುಗಡೆಗೊಂಡ ಇನೋವಾ ಹೈಕ್ರಾಸ್ ಜೊತೆಗೆ ಇನ್ನೋವಾ ಕ್ರಿಸ್ಟಾ ಕಾರನ್ನು ಮಾರಾಟ ಮಾಡುವುದನ್ನು ಮುಂದುವರಿಸುತ್ತಾರೆ. ನವೀಕರಿಸಿದ ಇನೋವಾ ಕ್ರಿಸ್ಟಾ ಬೆಲೆಯನ್ನು ಇದೇ ತಿಂಗಳಿನಲ್ಲಿ ಬಹಿರಂಗಪಡಿಸುವ ಸಾಧ್ಯತೆಗಳಿದೆ. ಇನ್ನು ಈ ಹೊಸ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ವಿತರಣೆಯು ಏಪ್ರಿಲ್ ತಿಂಗಳ ಅಂತ್ಯದಲ್ಲಿ ನಡೆಯಲಿದೆ. 2005ರಲ್ಲಿ ಹೆಚ್ಚು ಜನಪ್ರಿಯವಾದ ಕ್ವಾಲಿಸ್ ಅನ್ನು ಬದಲಾಯಿಸಿ ಪ್ರೀಮಿಯಂ ಎಂಪಿವಿಯಾಗಿ ಟೊಯೊಟಾ ಇನೋವಾವನ್ನು ಪರಿಚಯಿಸಿದರು.

ಬಿಡುಗಡೆಗೆ ಸಜ್ಜಾದ ಹೊಸ ಟೊಯೊಟಾ ಇನೋವಾ ಕ್ರಿಸ್ಟಾ ಡೀಸೆಲ್ ಕಾರು

ಅಂದಿನಿಂದ ಇಂದಿನವರೆಗೂ ಈ ಕಾರಿಗೆ ಭಾರೀ ಬೇಡಿಕೆಯನ್ನು ಹೊಂದಿದೆ. ಇದೇ ಕಾರಣದಿಂದ ಟೊಯೊಟಾ ಕಂಪನಿಯು ಡೀಸೆಲ್ ಎಂಜಿನ್ ನೊಂದಿಗೆ ಇನ್ನೋವಾ ಕ್ರಿಸ್ಟಾ ಕಾರನ್ನು ಮರಳಿ ತಂದಿದೆ. 2023ರ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನಲ್ಲಿ ಲುಕ್ ಹೆಚ್ಚಾಗಿ ಬದಲಾಗದೆ ಉಳಿದಿದೆ, ಟೊಯೊಟಾ ಕಂಪನಿಯು ಬಿಡುಗಡೆ ಮಾಡಿದ ಚಿತ್ರದಲ್ಲಿ ಇನೋವಾ ಕ್ರಿಸ್ಟಾ ಕಾರು ಮೈಲ್ಡ್ ಫೇಸ್‌ಲಿಫ್ಟ್ ಅನ್ನು ಪಡೆದುಕೊಂಡಿದೆ. ಈ ಕಾರು ಹೆಚ್ಚು ಎಸ್‍ಯುವಿ ಶೈಲಿಯನ್ನು ನೀಡುವ ಪ್ರಯತ್ನದಲ್ಲಿ, ಟೊಯೊಟಾ ಮುಂಭಾಗದ ಫಾಸಿಕವನ್ನು ನವೀಕರಿಸಿದೆ.

ಇದು ಈಗ ಸ್ವಲ್ಪ ಚಿಕ್ಕದಾದ ಮತ್ತು ಹೆಚ್ಚು ಪ್ರಮುಖವಾದ ಮುಂಭಾಗದ ಗ್ರಿಲ್‌ನೊಂದಿಗೆ ಬರುತ್ತದೆ, ಇದೇ ರೀತಿ ಮುಂಭಾಗದಲ್ಲಿ ಕೆಲವು ನವೀಕರಣಗಳನ್ನು ಮಾಡಲಾಗಿದೆ. ಇನ್ನು ಫಾಂಗ್ ಲ್ಯಾಂಪ್ ಇರುವ ಕಡೆಗಳಲ್ಲಿ ಸಹ ಮರುವಿನ್ಯಾಸಗೊಳಿಸಲಾಗಿದೆ. ಸೈಡ್ ಪ್ರೊಫೈಲ್ ಮತ್ತು ಅಲಾಯ್ ವೀಲ್ ವಿನ್ಯಾಸ ಒಂದೇ ಆಗಿರುತ್ತದೆ. ಕಳೆದ ವರ್ಷ ಸ್ಥಗಿತಗೊಂಡ ಟೊಯೊಟಾ ಇನೋವಾ ಕ್ರಿಸ್ಟಾ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಮಾರಾಟವಾಗುತ್ತಿತ್ತು. ಆದರೆ 2023ರ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಡೀಸೆಲ್ ಎಂಜಿನ್ ನೊಂದಿಗೆ ಮಾತ್ರ ಲಗ್ಗೆಯಿಟ್ಟಿದೆ.

ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನಲ್ಲಿ 2.4-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮುಂದುವರಿಯುತ್ತದೆ. ಈ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 343 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಯಾವುದೇ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿಲ್ಲ.ಈ ಟೊಯೊಟಾ ಕಂಪನಿಯು ಎರಡೂ ಇನೋವಾ ಮಾದರಿಗಳನ್ನು ಒಟ್ಟಿಗೆ ಮಾರಾಟ ಮಾಡುತ್ತಿರುವುದು ಇದೇ ಮೊದಲು. ಆದರೆ ಇವುಗಳ ಎಂಜಿನ್ ನಲ್ಲಿ ಸ್ಪಷ್ಟ ವ್ಯತ್ಯಾಸಗಳಿವೆ.

ಹೊಸ ಇನೋವಾ ಕ್ರಿಸ್ಟಾ ಕಾರು ಕೇವಲ ಡೀಸೆಲ್ ಎಂಜಿನ್ ನಲ್ಲಿ ಮಾತ್ರ ಲಭ್ಯವಿದೆ. ಹೈಕ್ರಾಸ್ ಶುದ್ಧ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಪವರ್‌ಟ್ರೇನ್‌ಗಳೊಂದಿಗೆ ಮಾರಾಟವಾಗುತ್ತಿದೆ. ಈ 2023ರ ಟೊಯೊಟಾ ಇನೋವಾ ಕ್ರಿಸ್ಟಾ G, GX, VX ಮತ್ತು ಟಾಪ್-ಸ್ಪೆಕ್ ZX ಎಂಬ ನಾಲ್ಕೂ ರೂಪಾಂತರಗಳಲ್ಲಿ ಲಭ್ಯವಿದೆ. ZX ಅನ್ನು ಹೊರತುಪಡಿಸಿ ಎಲ್ಲಾ ಟ್ರಿಮ್‌ಗಳು ಏಳು ಅಥವಾ ಎಂಟು ಸೀಟುಗಳ ಲೇಔಟ್‌ಗಳೊಂದಿಗೆ ಲಭ್ಯವಿರುತ್ತವೆ. ಟಾಪ್-ಸ್ಪೆಕ್ ಇನ್ನೋವಾ ಕ್ರಿಸ್ಟಾ ZX ಎಂಟು ಸೀಟುಗಳಾಗಿ ಮಾತ್ರ ಬರಲಿದೆ.

ಈ ಹೊಸ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಕಾರಿನಲ್ಲಿರುವ ಫೀಚರ್ಸ್ ಗಳ ಬಗ್ಗೆ ಹೇಳುವುದಾದರೆ, ಈ ಕಾರಿನಲ್ಲಿ ಸ್ಮಾರ್ಟ್ ಪ್ಲೇಕಾಸ್ಟ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗಿದೆ. ಈ ಇನ್ಫೋಟೈನ್‌ಮೆಂಟ್ ಸಿಸ್ಟಂ Android Auto ಮತ್ತು Apple CarPlay ಕನೆಕ್ಟಿವಿಟಿಯನ್ನು ಹೊಂದಿದೆ. ಇನ್ನು 8-ವೇ ಪವರ್ ಅಡ್ಜಸ್ಟ್ ಡ್ರೈವರ್ ಸೀಟ್, ಡಿಜಿಟಲ್ ಡಿಸ್ ಪ್ಲೇಯೊಂದಿಗೆ ಹಿಂಬದಿಯ ಪ್ರಯಾಣಿಕರಿಗಾಗಿ ಎಸಿ ಮತ್ತು ಲೆದರ್ ಸೀಟ್, ಇದು ಬ್ಲ್ಯಾಕ್ ಮತ್ತು ಕ್ಯಾಮೆಲ್ ಟ್ಯಾನ್ ಆಯ್ಕೆಗಳಲ್ಲಿ ಲಭ್ಯವಿದೆ.

ಇದರೊಂದಿಗೆ ಸ್ಮಾರ್ಟ್ ಎಂಟ್ರಿ ಸಿಸ್ಟಮ್, ಸೀಟ್ ಬ್ಯಾಕ್ ಟೇಬಲ್, ಒನ್ ಟಚ್ ಟಂಬಲ್ ಎರಡನೇ ಸಾಲಿನ ಸೀಟುಗಳು ಮತ್ತು ಆಂಬಿಯೆಂಟ್ ಇಲ್ಯುಮಿನೇಷನ್ ಅನ್ನು ಒಳಗೊಂಡಿದೆ, ಇನ್ನು ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ, 7 ಏರ್‌ಬ್ಯಾಗ್‌ಗಳನ್ನು ನೀಡಲಾಗಿದೆ. ಇನ್ನು ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್, ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್, ಬ್ರೇಕ್ ಅಸಿಸ್ಟ್, ಹಿಲ್ ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್, ಫ್ರಂಟ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, 3-ಪಾಯಿಂಟ್ ಸೀಟ್‌ಬೆಲ್ಟ್ ಮತ್ತು ಹೆಡ್‌ರೆಸ್ಟ್ ಮತ್ತು ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಅನ್ನು ನೀಡಿದೆ.

Most Read Articles

Kannada
Read more on ಟೊಯೊಟಾ toyota
English summary
2023 toyota innova crysta diesel launching soon details in kannada
Story first published: Wednesday, February 1, 2023, 11:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X