40 ಕಿ.ಮೀ ಮೈಲೇಜ್ ನೀಡುವ ಸ್ವಿಫ್ಟ್ ಕಾರಿನ ಮಾಹಿತಿ ಬಹಿರಂಗ: ಬೈಕ್‌ಗಳಿಗೆ ಪೈಪೋಟಿ ನೀಡುತ್ತಾ?
2024ರ ಮಾರುತಿ ಸ್ವಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಯಾಕೆಂದರೆ ಭಾರತದಲ್ಲಿ ಅತಿ ಹೆಚ್ಚು ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಇದೀಗ ಸುಜುಕಿ ಕಂಪನಿಯು ಜಪಾನ್‌ನಲ್ಲಿ ಹೊಸ ಸ್ವಿಫ್ ಕಾರನ್ನು ಪರಿಚಯಿಸಿದೆ. ಈ ಹೊಸ ಸುಜುಕಿ ಸ್ವಿಫ್ಟ್ (Suzuki Swift) ಕಾರು ಹಲವಾರು ಬದಲಾವಣೆಗಳೊಂದಿಗೆ ಜಪಾನ್ ಮಾರುಕಟ್ಟೆಯನ್ನು ಪ್ರವೇಶಿಸಿದೆ.
2024ರ ಮಾರುತಿ ಸ್ವಿಫ್ಟ್ ಕಾರಿನ ವಿನ್ಯಾಸದ ಬಗ್ಗೆ ಹೇಳಬೇಕಾದರೆ, ಮಾರುತಿ ಸ್ವಿಫ್ಟ್ ಕಾರಿನ ಮುಂಭಾಗದಲ್ಲಿ ನವೀಕರಿಸಲಾಗಿದೆ. ಈ ಹೊಸ ಮಾರುತಿ ಸ್ವಿಫ್ಟ್ ಕಾರಿನ ಮುಂಭಾಗದಲ್ಲಿ ಚಿಕ್ ಗ್ರಿಲ್, ಎಲ್-ಆಕಾರದ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್ (ಡಿಆರ್ಎಲ್ಗಳು), ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್ಗಳು, ಕ್ಲ್ಯಾಂಪ್-ಶೆಲ್ ಹುಡ್ ಮತ್ತು 16-ಇಂಚಿನ ಅಲಾಯ್ ವ್ಹೀಲ್ ಗಳೊಂದಿಗೆ ಎಲ್ಇಡಿ ಹೆಡ್ ಲೈಟ್ ಗಳನ್ನು ಹೊಂದಿವೆ.

2024ರ ಸ್ವಿಫ್ಟ್ ಮಾದರಿಯು ಒಂಬತ್ತು ಸಿಂಗಲ್-ಟೋನ್ ಮತ್ತು ನಾಲ್ಕು ಡ್ಯುಯಲ್-ಟೋನ್ ಆಯ್ಕೆಗಳನ್ನು ಒಳಗೊಂಡಂತೆ 13 ಬಣ್ಣಗಳ ಆಯ್ಕೆಗಳೊಂದಿಗೆ ಬರುತ್ತದೆ. ಈ ಕಾರು ಸಿಂಗಲ್-ಟೋನ್ ಬಣ್ಣಗಳ ಆಯ್ಕೆ ಫ್ರಾಂಟಿಯರ್ ಬ್ಲೂ, ಕೂಲ್ ಹಳದಿ, ಫ್ಲೇಮ್ ಆರೆಂಜ್, ಕಾರವಾನ್ ಐವರಿ, ಪ್ಯೂರ್ ವೈಟ್, ಪ್ರೀಮಿಯಂ ಸಿಲ್ವರ್, ಸ್ಟಾರ್ ಸಿಲ್ವರ್ ಮತ್ತು ಸೂಪರ್ ಬ್ಲ್ಯಾಕ್ ಆಗಿದೆ.
ಇನ್ನು ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆ ಫ್ರಾಂಟಿಯರ್ ಬ್ಲೂ, ಬರ್ನಿಂಗ್ ರೆಡ್, ಕೂಲ್ ಯೆಲ್ಲೋ ಮತ್ತು ಪ್ಯೂರ್ ವೈಟ್ ಅನ್ನು ಒಳಗೊಂಡಿವೆ. ಇನ್ನು ಒಳಭಾಗದಲ್ಲಿ, ಹೊಸ ಸುಜುಕಿ ಸ್ವಿಫ್ಟ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ತೇಲುವ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್, ಕ್ಲೈಮೆಂಟ್ ಕಂಟ್ರೋಲ್, ಸ್ಟಾರ್ಟ್-ಸ್ಟಾಪ್ ಬಟನ್, 360-ಡಿಗ್ರಿ ಕ್ಯಾಮೆರಾ ಮತ್ತು ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್ (ADAS) ಅನ್ನು ಹೊಂದಿದೆ.

ಜಪಾನ್‌ನಲ್ಲಿ ನ್ಯೂ ಜನರೇಷನ್ ಸ್ವಿಫ್ಟ್ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಮಾರುತಿ ಸ್ವಿಫ್ಟ್ ಕಾರು XG, ಹೈಬ್ರಿಡ್ MX ಮತ್ತು ಹೈಬ್ರಿಡ್ MZ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಈ ಹೊಸ ಸ್ವಿಫ್ಟ್ ಕಾರು 1.2-ಲೀಟರ್ ಪೆಟ್ರೋಲ್ 3-ಸಿಲಿಂಡರ್ ಎಂಜಿನ್ ಮತ್ತು 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್-ಹೈಬ್ರಿಡ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ.
ಈ ಎಂಜಿನ್‌ಗಳು 80 bhp ಪವರ್ ಮತ್ತು 108Nm ಟಾರ್ಕ್ ಅನ್ನು ಉತ್ಪಾದಿಸುತ್ತವೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು CVT ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಆಯ್ಕೆ ಮಾಡಬಹುದು. ಇನ್ನು ಜಪಾನ್-ಸ್ಪೆಕ್ ಸ್ವಿಫ್ಟ್ ಆಫ್-ರೋಡ್ ಉತ್ಸಾಹಿಗಳಿಗೆ 4WD ರೂಪಾಂತರವನ್ನು ಸಹ ನೀಡುತ್ತದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವೀಫ್ ಕಳೆದ ಹಲವು ವರ್ಷದಿಂದ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ.

ಈ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift ) ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಗೊಂಡಿತ್ತು. ಈ ಮಾರುತಿ ಸುಜುಕಿ ಸ್ವಿಫ್ಟ್ ದೀರ್ಘಕಾಲದಿಂದಲೇ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು.
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಕಂಪನಿಗೆ ಮಾರಾಟದಲ್ಲಿ ಸ್ವಿಫ್ಟ್ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ. ಮಾರುತಿ ಸುಜುಕಿ ಕಂಪನಿಯು ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿ ಮಾಸಿಕ ಪ್ರಯಾಣಿಕ ಕಾರು ಮಾರಾಟ ಪಟ್ಟಿಯಲ್ಲಿ ಪಾರುಪತ್ಯ ಹೊಂದಿದೆ. ಮಾರುತಿ ಸುಜುಕಿ ಮಾರಾಟದಲ್ಲಿ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸಲು ಪ್ರಯತ್ನಿಸುತ್ತಿದೆ. ಮಾರುತಿ ಸುಜುಕಿ ಕಂಪನಿಯು ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಲು ಮರೆಯದಿರಿ.


Click it and Unblock the Notifications