Just In
- 1 min ago
ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಿದ್ರೆ 50% ರಿಯಾಯಿತಿ: ರಾಜ್ಯ ಸರ್ಕಾರ ಆದೇಶ
- 1 hr ago
6 ಏರ್ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು
- 2 hrs ago
ಎಲೆಕ್ಟ್ರಿಕ್ ಬಳಿಕ ಸಿಎನ್ಜಿ ಕಾರುಗಳ ವಿಭಾಗದಲ್ಲೂ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಟಾಟಾ
- 2 hrs ago
ಹೊಸ ಮಹೀಂದ್ರಾ ಎಲೆಕ್ಟ್ರಿಕ್ XUV700 ಟೀಸರ್ ಬಿಡುಗಡೆ... ಫೆ.10 ರಂದು BE ಸರಣಿ SUV ಗಳ ಪ್ರದರ್ಶನ
Don't Miss!
- Sports
ಗದ್ದೆಯೇ ಕ್ರಿಕೆಟ್ ಮೈದಾನ: ಶುಭಮನ್ ಗಿಲ್ ವಿಕೆಟ್ ಪಡೆದವರಿಗೆ ಸಿಗ್ತಿತ್ತು 100 ರುಪಾಯಿ ಬಹುಮಾನ
- News
ಬೆಂಗಳೂರು ಟ್ರಾಫಿಕ್ನಿಂದಾಗಿ ಆಂಬುಲೆನ್ಸ್ನಲ್ಲಿ ಹಸುಗೂಸು ಸಾವು!
- Movies
ನಟ ಪ್ರೇಮ್ ಭೇಟಿ ವೇಳೆ ನಿರ್ಮಾಪಕರ ಮನೆಯಲ್ಲಿ ಕಾಣಿಸಿಕೊಂಡ ನಾಗರಹಾವು!
- Technology
ಹರಾಜಿನಲ್ಲಿರುವ ಈ ಹಳೆಯ ಐಫೋನ್ ಬೆಲೆ ಅರ್ಧಕೋಟಿ ದಾಟಿದ್ರೂ ಅಚ್ಚರಿಯಿಲ್ಲ!
- Finance
ಅಮುಲ್ ಹಾಲಿನ ದರ ಮತ್ತೆ 3 ರೂ ಏರಿಕೆ, ನೂತನ ದರ ಪರಿಶೀಲಿಸಿ
- Lifestyle
Maha Shivratri 2023 : ಮಹಾಶಿವರಾತ್ರಿ ದಿನಾಂಕ, ಪೂಜಾ ಮುಹೂರ್ತ, ಮಹತ್ವ, ಆಚರಣೆ ಹಿನ್ನೆಲೆ ಏನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
Auto Expo 2023: ಜಾಗತಿಕವಾಗಿ ಮಿಂಚಿದ Toyota Land Cruiser 300 ಪ್ರದರ್ಶನ
ಜಪಾನ್ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟೊಯೊಟಾ (Toyota) ಗ್ರೇಟರ್ ನೋಯ್ಡಾದಲ್ಲಿ ನಡೆಯುತ್ತಿರುವ 2023ರ ಆಟೋ ಎಕ್ಸ್‌ಪೋದಲ್ಲಿ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಗಾಗಿ ಅನಾವರಣಗೊಳಿಸಲಿದೆ. ಭಾರತದಲ್ಲಿ ಹೊಸ ಲ್ಯಾಂಡ್ ಕ್ರೂಸರ್ 300 (Toyota Land Cruiser 300) ಗಾಗಿ ಅಧಿಕೃತ ಬುಕಿಂಗ್‌ಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ.
2023ರ ಆಟೋ ಎಕ್ಸ್‌ಪೋದಲ್ಲಿ ಟೊಯೊಟಾ ತನ್ನ ಜನಪ್ರಿಯ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಪರಿಚಯಿಸಲಿದೆ. ಇದು ಭಾರತದಲ್ಲಿ ಮಾರಾಟವಾಗಲಿರುವ ಅತ್ಯಂತ ದುಬಾರಿ ಟೊಯೊಟಾ ಉತ್ಪನ್ನವಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ 300 ಜಪಾನಿನ ಮಾರ್ಕ್ಯೂನಿಂದ ಪ್ರಮುಖ ಎಸ್‍ಯುವಿಯಾಗಿದೆ. ಇನ್ನು ಟೊಯೊಟಾ(Toyota) ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್(Land Cruiser) ಎಸ್‍ಯುವಿಯನ್ನು ಕಳೆದ ವರ್ಷ ಜಾಗತಿಕ ಮಟ್ಟದಲ್ಲಿ ಪರಿಚಯಿಸಿತು. ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಸಂಚಲವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ.
ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಗೆ ಬಿಡುಗಡೆ ಮಾಡಿದ ಪ್ರತಿಯೊಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆ ಹೆಚ್ಚಿದೆ. ಈ ಬಹುಬೇಡಿಕೆಯ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಗೆ ವೈಟಿಂಗ್ ಪಿರೇಡ್ ಕೆಲವು ದೇಶಗಳಲ್ಲಿ 4 ವರ್ಷಗಳವರೆಗೆ ಇದೆ. ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಯು ಮಾಡ್ಯುಲರ್ TNGA-F ಆರ್ಕಿಟೆಕ್ಚರ್‌ನಿಂದ ಆಧಾರವಾಗಿದೆ ಮತ್ತು ಅದರ ಒಟ್ಟಾರೆ ಕರ್ಬ್ ತೂಕವು ಸುಮಾರು 200 ಕಿಲೋಗ್ರಾಂಗಳಷ್ಟು ಕಡಿಮೆಯಾಗಿದೆ.
ಹಳೆಯ ಮಾದರಿಗೆ ಹೋಲಿಸಿದರೆ, ಲ್ಯಾಂಡ್ ಕ್ರೂಸರ್ 300 ವಿನ್ಯಾಸಕ್ಕೆ ವಿಕಸನೀಯ ಪರಿಷ್ಕರಣೆಯೊಂದಿಗೆ ಬರಲಿದೆ. ಈ ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ನೇರವಾದ ಬಾಡಿ ಪ್ಯಾನೆಲ್‌ಗಳು ಮತ್ತು ಎತ್ತರದ ಕಂಬಗಳನ್ನು ಸ್ಕ್ವೇರ್-ಆಫ್ ವೀಲ್ ಆರ್ಚ್‌ಗಳು ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ 20-ಇಂಚಿನ ಅಲಾಯ್ ವ್ಹೀಲ್ ಗಳನ್ನು ಉಳಿಸಿಕೊಂಡಿದೆ. ಈ ಎಸ್‍ಯುವಿಯ ಕ್ಯಾಬಿನ್ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆ ಮತ್ತು ಸಂಪರ್ಕಿತ ವೈಶಿಷ್ಟ್ಯಗಳೊಂದಿಗೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ.
ಹೆಚ್ಚು ಜನಪ್ರಿಯವಾಗಿರುವ ಆಫ್-ರೋಡರ್‌ನ ಸಲಕರಣೆಗಳ ಪಟ್ಟಿಯು ಎಲ್ಲಾ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಹಲವಾರು ಸೌಕರ್ಯ, ಅನುಕೂಲತೆ, ಮನರಂಜನೆ, ಸಹಾಯಕ ಮತ್ತು ಸುರಕ್ಷತೆ ಆಧಾರಿತ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ. ಇನ್ನು ಬಹಿರಂಗವಾದ ಮಾಹಿತಿಗಳ ಪ್ರಕಾರ, ಮೂರು ಇಂಟಿರಿಯರ್ ಬಣ್ಣದ ಥೀಮ್‌ಗಳನ್ನು ಒಳಗೊಂಡಿದೆ. ಇನ್ನು ಐದು ಬಾಹ್ಯ ಬಣ್ಣಗಳ ಆಯ್ಕೆಯು ಸಹ ಲಭ್ಯವಿರುತ್ತವೆ. ಅವುಗಳೆಂದರೆ ಪ್ರೆಶಿಯಸ್ ವೈಟ್ ಪರ್ಲ್, ಸೂಪರ್ ವೈಟ್, ಡಾರ್ಕ್ ರೆಡ್ ಮೈಕಾ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್ ಮತ್ತು ಡಾರ್ಕ್ ಬ್ಲೂ ಮೈಕಾ ಎಂಬ ಬಣ್ಣಗಳಾಗಿವೆ.
ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ, ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ LC300 ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದು 3.5 ಎಲ್ ವಿ6 ಟ್ವಿನ್-ಟರ್ಬೊ ಪೆಟ್ರೋಲ್ ಮತ್ತು 3.3 ಎಲ್ ವಿ6 ಟ್ವಿನ್-ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳಾಗಿವೆ. ಇದರಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸತ್ತದೆ. ಇದರೊಂದಿಗೆ ಈ ಎಸ್‍ಯುವಿಯಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು ಹೊಂದಿದೆ.
ಈ ಎಂಜಿನ್ 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 10-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ, ಇನ್ನುಈ ಗೇರ್ ಬಾಕ್ಸ್ ಇಂಧನ ಬಳಕೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಹಿಂದಿನದಕ್ಕಿಂತ ಶೇ.10 ಕಡಿಮೆ ಮಾಡುತ್ತದೆ ಎಂದು ಕಂಪನಿ ಹೇಳಿದೆ, ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಬ್ರ್ಯಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ.
ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಗೆ ಬಿಡುಗಡೆ ಮಾಡಿದ ಪ್ರತಿಯೊಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೇಡಿಕೆ ಹೆಚ್ಚಿದೆ. ಈ ಬಹುಬೇಡಿಕೆಯ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಗೆ ವೈಟಿಂಗ್ ಪಿರೇಡ್ ಕೆಲವು ದೇಶಗಳಲ್ಲಿ 4 ವರ್ಷಗಳವರೆಗೆ ಇದೆ. ಈ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಯು ಮಾಡ್ಯುಲರ್ TNGA-F ಆರ್ಕಿಟೆಕ್ಚರ್‌ನಿಂದ ಆಧಾರವಾಗಿದೆ ಮತ್ತು ಅದರ ಒಟ್ಟಾರೆ ಕರ್ಬ್ ತೂಕವು ಸುಮಾರು 200 ಕಿಲೋಗ್ರಾಂಗಳಷ್ಟು ಕಡಿಮೆಯಾಗಿದೆ.