Best Cars: ಬೈಕ್‌ನಂತೆ ಮೈಲೇಜ್ ನೀಡುವ ಮಾರುತಿ, ಹ್ಯುಂಡೈ, ರೆನಾಲ್ಟ್ ಕಾರುಗಳು.. 6 ಲಕ್ಷಕ್ಕಿಂತ ಕಡಿಮೆ ಬೆಲೆ!
ಪ್ರತಿಯೊಬ್ಬರೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಆದರೆ, ನಮ್ಮ ಬಜೆಟ್ ಬೆಲೆಗೆ ಯಾವ ಕಾರು ಉತ್ತಮ, ಮೈಲೇಜ್ ಎಷ್ಟಿರುತ್ತದೆ ಎಂಬ ಗೊಂದಲವಿರುತ್ತದೆ. ಇಲ್ಲಿ 6 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗುವ ಮಾರುತಿ ಸುಜುಕಿ, ಹ್ಯುಂಡೈ, ರೆನಾಲ್ಟ್ ಕಂಪನಿಯ ಅತ್ಯುತ್ತಮ ಕಾರುಗಳ (Best Cars) ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರಿನ ಬಗ್ಗೆ ಮಾತನಾಡೋಣ. ಈ ಕಾರು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ಸಿಗಲಿದ್ದು, ಪೆಟ್ರೋಲ್ ರೂಪಾಂತರ 24.90 kmpl ಹಾಗೂ ಸಿಎನ್‌ಜಿ ವೇರಿಯೆಂಟ್ 33.85 km/kg ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಆಲ್ಟೊ ಕೆ10 ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದಲ್ಲೂ ಅತ್ಯಾಧುನಿಕವಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ರಿವರ್ಸಿಂಗ್ ಕ್ಯಾಮೆರಾ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಬಗ್ಗೆ ಹೇಳುವುದಾದರೆ, ಈ ಕಾರು ರೂ.4.26 ಲಕ್ಷದಿಂದ ರೂ.6.12 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಹೊಂದಿರುವ ಈ ಕಾರು, ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ. ಪೆಟ್ರೋಲ್ ವೇರಿಯೆಂಟ್ ಗರಿಷ್ಠ 25.30 kmpl, ಸಿಎನ್‌ಜಿ ರೂಪಾಂತರ 32.73 km/kg ಇಂಧನ ದಕ್ಷತೆಯನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸೆಲರಿಯೊ (Maruti Suzuki Celerio), ರೂ.5.37 ಲಕ್ಷದಿಂದ ರೂ.7.14 ಲಕ್ಷ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಇದು ಕೂಡ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರಗಳು 26 kmpl ವರೆಗೆ, ಸಿಎನ್‌ಜಿ ರೂಪಾಂತರ 35.6 km/kg ವರೆಗೆ ಮೈಲೇಜ್ ಕೊಡುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ರೂ.5.99 ಲಕ್ಷದಿಂದ ರೂ.9.03 ಲಕ್ಷ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಪೆಟ್ರೋಲ್/ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, ಪೆಟ್ರೋಲ್ ರೂಪಾಂತರ 22.56 kmpl ಹಾಗೂ ಸಿಎನ್‌ಜಿ ವೇರಿಯೆಂಟ್ಸ್ 30.90 km/kg ಇಂಧನ ದಕ್ಷತೆಯನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ಫೀಚರ್ಸ್ ಪಡೆದಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೋಸ್ (Hyundai Grand i10 Nios) ರೂ.5.84 ಲಕ್ಷದಿಂದ ರೂ.8.51 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಇದು ಸಹ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರ 21 kmpl ಹಾಗೂ ಸಿಎನ್‌ಜಿ ರೂಪಾಂತರ 28 km/kg ಮೈಲೇಜ್ ನೀಡುತ್ತದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ ಒಳಗೊಂಡಂತೆ ವಿವಿಧ ಫೀಚರ್ಸ್ ಇವೆ.
ರೆನಾಲ್ಟ್ ಕ್ವಿಡ್ (Renault Kwid) ಕಾರು ಸಹ ಭಾರತದ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದಲ್ಲಿ ಸಿಗುತ್ತದೆ. ಇದು ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5 - ಸ್ವೀಡ್ ಮ್ಯಾನುವಲ್ ಹಾಗೂ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದ್ದು, 22 kmpl ಮೈಲೇಜ್ ನೀಡುತ್ತದೆ.
ಇನ್ನು, ಮಾರುತಿ ಸುಜುಕಿಯ ಆಲ್ಟೊ ಕೆ10, ಎಸ್-ಪ್ರೆಸ್ಸೊ, ಸೆಲರಿಯೊ, ಸ್ವಿಫ್ಟ್, ಹ್ಯುಂಡೈನ ಗ್ರಾಂಡ್ ಐ10 ನಿಯೋಸ್, ರೆನಾಲ್ಟ್ ಕಂಪನಿಯ ಕ್ವಿಡ್ ಕಾರುಗಳು ಒಂದಕ್ಕಿಂತ ಒಂದು ಹೆಚ್ಚು ಆಕರ್ಷಣೀಯವಾಗಿದ್ದು, ಬೆಲೆ, ಕಾರ್ಯಕ್ಷಮತೆಯ ಆಧಾರ ಮೇಲೆ ನಿಮಿಷ್ಟದ ಕಾರುಗಳನ್ನು ಆಯ್ಕೆ ಮಾಡಿರಿ. ಹತ್ತಿರದ ಡೀಲರ್ ಶಿಪ್ ಸಂಪರ್ಕಿಸುವ ಮೂಲಕವೂ ಹೆಚ್ಚಿನ ಮಾಹಿತಿ ಪಡೆಯಬಹುದು.


Click it and Unblock the Notifications








