Maruti Suzuki: ಜಿಮ್ನಿ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಮೇಲೆ ದೊಡ್ಡ ರಿಯಾಯಿತಿ, ರೂ 2.3 ಲಕ್ಷದವರೆಗೆ..

ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಈ ಡಿಸೆಂಬರ್ ತಿಂಗಳು (2023) ಆಯ್ದ ಜಿಮ್ನಿ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಕಾರುಗಳ ಮೇಲೆ ದೊಡ್ಡ ಮಟ್ಟದಲ್ಲಿ ಡಿಸ್ಕೌಂಟ್ ಘೋಷಣೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಈ ರಿಯಾಯಿತಿ ಸೌಲಭ್ಯಗಳು ರೂ 2.3 ಲಕ್ಷದವರೆಗೆ ಇರಲಿದೆ. ಅದರಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್ಚೇಂಜ್ ಬೋನಸ್ ಹಾಗೂ ಕಾರ್ಪೊರೇಟ್ ಬೋನಸ್ ಒಳಗೊಂಡಿರಲಿವೆ. ಮೊದಲಿಗೆ ಮಾರುತಿ ಸುಜುಕಿ ಜಿಮ್ನಿ ಪಡೆದುಕೊಂಡಿರುವ ಡಿಸ್ಕೌಂಟ್ ಆಫರ್ ಬಗ್ಗೆ ತಿಳಿಯೋಣ. ಜಿಮ್ನಿಯ ಎಂಟ್ರಿ ಲೆವೆಲ್ ಮಾದರಿಯಾಗಿರುವ ಜಿಟಾ ರೂಪಾಂತರವು ರೂ.2.3 ಲಕ್ಷ ಹಾಗೂ ಆಲ್ಫಾ ಮತ್ತು ಜೆಟ್ ವೇರಿಯೆಂಟ್ಸ್ ರೂ.2 ಲಕ್ಷ ರಿಯಾಯಿತಿಯನ್ನು ಹೊಂದಿವೆ.

Maruti Suzuki: ಜಿಮ್ನಿ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಮೇಲೆ ದೊಡ್ಡ ರಿಯಾಯಿತಿ, ರೂ 2.3 ಲಕ್ಷದವರೆಗೆ..

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಜಿಮ್ನಿ (Maruti Suzuki), ರೂ.12.74 ಲಕ್ಷದಿಂದ ರೂ.15.05 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 104.8 Ps ಗರಿಷ್ಠ ಪವರ್ ಹಾಗೂ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್/ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಈ ಎಸ್‌ಯುವಿ, 9 - ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿದೆ.

Maruti Suzuki: ಜಿಮ್ನಿ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಮೇಲೆ ದೊಡ್ಡ ರಿಯಾಯಿತಿ, ರೂ 2.3 ಲಕ್ಷದವರೆಗೆ..

ನೆಕ್ಸಾ ಶೋರೂಂ ಮೂಲಕ ಮಾರಾಟಗೊಳ್ಳುವ ಬಲೆನೊ ಆಧಾರಿತ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಕೂಡ ಈ ತಿಂಗಳು ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಈ ಕಾರಿಗೆ ರೂ.40,000 ವರೆಗೆ ಡಿಸ್ಕೌಂಟ್ ಆಫರ್ ಇದೆ. ಪ್ರಸ್ತುತ ಭಾರತದ ಮಾರುಕಟ್ಟೆಯಲ್ಲಿ ಫ್ರಾಂಕ್ಸ್ ರೂ.7.46 ಲಕ್ಷದಿಂದ ರೂ.13.13 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

ಈ ಮಾರುತಿ ಸುಜುಕಿ ಫ್ರಾಂಕ್ಸ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ನೊಂದಿಗೆ ಗ್ರಾಹಕರಿಗೆ ಸಿಗಲಿದ್ದು, 5 - ಸ್ವೀಡ್ ಮ್ಯಾನುವಲ್ ಹಾಗೂ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರ 20.1 kmpl - 22.89 kmpl, ಸಿಎನ್‌ಜಿ ವೇರಿಯೆಂಟ್ 28.51 km/kg ಮೈಲೇಜ್ ನೀಡುತ್ತದೆ. 9 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Maruti Suzuki: ಜಿಮ್ನಿ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾ ಮೇಲೆ ದೊಡ್ಡ ರಿಯಾಯಿತಿ, ರೂ 2.3 ಲಕ್ಷದವರೆಗೆ..

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಒಟ್ಟು ರೂ.35,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಪಡೆದಿದೆ. ಈ ಕಾರು, ರೂ.10.70 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯಲಿದ್ದು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 19.38 - 27.97 kmpl ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌, ಹೆಡ್ಸ್-ಅಪ್ ಡಿಸ್ಪ್ಲೇ ಒಳಗೊಂಡಂತೆ ವಿವಿಧ ಫೀಚರ್ಸ್ ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಇನ್ನು, ಕೆಲವೇ ದಿನಗಳ ಹಿಂದೆ, ಮಾರುತಿ ಸುಜುಕಿ ತನ್ನ ವಿವಿಧ ಮಾದರಿಗಳ ಬೆಲೆಯನ್ನು ಜನವರಿ 2024 ರಿಂದ ಹೆಚ್ಚಿಸುವುದಾಗಿ ಘೋಷಿಸಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಈ ರಿಯಾಯಿತಿ ಸೌಲಭ್ಯಗಳು ರಾಜ್ಯದಿಂದ ರಾಜ್ಯಕ್ಕೆ, ರೂಪಾಂತರಗಳನ್ನು ಅವಲಂಭಿಸಿ ಬೇರೆ - ಬೇರೆ ಇದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಡೀಲರ್ ಶಿಪ್ ಭೇಟಿರಿ.

Article Published On: Friday, December 8, 2023, 14:57 [IST]
English summary
Big discounts on maruti suzuki jimny fronx grand vitara up to rs 2 3 lakh
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+