Budget Cars: ಭಾರತದಲ್ಲಿ ಮಧ್ಯಮ ವರ್ಗದವರು ಖರೀದಿಸಬಹುದಾದ ಕಾರುಗಳು, ಬೆಲೆ ತೀರಾ ಕಡಿಮೆ!

ದೇಶದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರಿಗೆ ಜೀವನದಲ್ಲಿ ಒಮ್ಮೆಯಾದರೂ ಕಾರು ಖರೀದಿಸಬೇಕೆಂಬುದು ಬಹುದೊಡ್ಡ ಆಸೆಯಾಗಿರುತ್ತದೆ. ಆದರೆ, ಕೆಲವರ ಜೀವನದಲ್ಲಿ ಅದು ಕನಸಾಗಿಯೇ ಉಳಿದು ಬಿಡುತ್ತದೆ. ಇಲ್ಲಿ, ನಿಮ್ಮ ಬಜೆಟ್ (Budget) ಬೆಲೆ, ರೂ.5 ಲಕ್ಷದಲ್ಲಿ ಖರೀದಿಗೆ ಸಿಗುವ ಕಾರುಗಳ ಬಗ್ಗೆ ತಿಳಿಯೋಣ.

ಮೊದಲಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಮಾರುತಿ ಸುಜುಕಿ (Maruti Suzuki) ಕಂಪನಿಯ ಎಂಟ್ರಿ ಲೆವೆಲ್ ಕಾರಾಗಿರುವ ಆಲ್ಟೊ ಕೆ10 (Alto K10) ಬಗ್ಗೆ ಮಾತನಾಡೋಣ. ಇದು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ ನಾಲ್ಕು ರೂಪಾಂತರಗಳ ಆಯ್ಕೆಯಲ್ಲಿ ದೊರೆಯುತ್ತದೆ.

Budget Cars: ಭಾರತದಲ್ಲಿ ಮಧ್ಯಮ ವರ್ಗದವರು ಖರೀದಿಸಬಹುದಾದ ಕಾರುಗಳು, ಬೆಲೆ ತೀರಾ ಕಡಿಮೆ!

ಮಾರುತಿ ಸುಜುಕಿ ಆಲ್ಟೊ ಕೆ10 ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು 1 ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ ಹೊಂದಿದೆ. 67 PS ಗರಿಷ್ಠ ಪವರ್ ಹಾಗೂ 89 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಅಥವಾ 5- ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಸಿಎನ್‌ಜಿ ಕಿಟ್ ಪಡೆದಿರುವ ಕಾರು, 57 PS ಪವರ್, 82 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಮಾತ್ರ ಗ್ರಾಹಕರಿಗೆ ಸಿಗುತ್ತದೆ. ಈ ಆಲ್ಟೊ ಕೆ10 ರೂಪಾಂತರಗಳಿಗೆ ಅನುಗುಣವಾಗಿ, 24.39 - 33.85 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಇದರೊಟ್ಟಿಗೆ, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸೇರಿದಂತೆ ಆರು ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

Budget Cars: ಭಾರತದಲ್ಲಿ ಮಧ್ಯಮ ವರ್ಗದವರು ಖರೀದಿಸಬಹುದಾದ ಕಾರುಗಳು, ಬೆಲೆ ತೀರಾ ಕಡಿಮೆ!

ಮಾರುತಿ ಸುಜುಕಿ ಆಲ್ಟೊ ಕೆ10 ಪಡೆದುಕೊಂಡಿರುವ ವೈಶಿಷ್ಟ್ಯಗಳ ಬಗ್ಗೆ ಮಾತನಾಡುವುದಾದರೆ, ಈ ಕಾರು, 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, ಡುಯಲ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ರೆನಾಲ್ಟ್ ಕ್ವಿಡ್ (Renault KWID) ಕೂಡ ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು, ರೂ.4.70 ಲಕ್ಷದಿಂದ ರೂ.6.33 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. RXE ಹಾಗೂ RXL ಸೇರಿದಂತೆ ಐದು ರೂಪಾಂತರಗಳ ಆಯ್ಕೆ ಹಾಗೂ ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಝನ್ಸ್ಕರ್ ಬ್ಲೂ ಸೇರಿದಂತೆ ಆರು ಮೊನೊಟೋನ್ ಹಾಗೂ ಎರಡು ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

ಈ ರೆನಾಲ್ಟ್ ಕ್ವಿಡ್ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಈ ಕಾರು, 1 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 PS ಗರಿಷ್ಠ ಪವರ್ ಹಾಗೂ 91 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 5 ಸ್ವೀಡ್ ಮ್ಯಾನುವಲ್ ಅಥವಾ 5 ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 21.46 - 22.3 kmpl ಮೈಲೇಜ್ ನೀಡುತ್ತದೆ.

ರೆನಾಲ್ಟ್ ಕ್ವಿಡ್ ಪಡೆದುಕೊಂಡಿರುವ ವೈಶಿಷ್ಟ್ಯದ ಬಗ್ಗೆ ಮಾತನಾದುದಾದರೆ, ಈ ಕಾರು, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ವೇ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕೀ ಲೆಸ್ ಎಂಟ್ರಿ, ಮ್ಯಾನುವಲ್ ಎಸಿ, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಡುಯಲ್ ಫ್ರಂಟ್ ಏರ್ ಬ್ಯಾಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Saturday, August 19, 2023, 8:35 [IST]
English summary
Budget cars rs 5 lakhs india maruti suzuki renault details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+