Maruti - Renault: ಭರ್ಜರಿ ಮೈಲೇಜ್.. 5 ಲಕ್ಷಕ್ಕೆ ಸಿಗುತ್ತವೆ ಮಾರುತಿ ಸುಜುಕಿ, ರೆನಾಲ್ಟ್ ಕಂಪನಿಯ ಈ ಕಾರುಗಳು
ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬುದು ಮಹಾದಾಸೆಯಾಗಿರುತ್ತದೆ. ಅಂತಹವರಿಗಾಗಿ ರೂ.5 ಲಕ್ಷ ಬೆಲೆಗೆ ದೊರೆಯುವ ಮಾರುತಿ ಸುಜುಕಿ (Maruti Suzuki), ರೆನಾಲ್ಟ್ (Renault) ಕಂಪನಿಯ ಕಾರುಗಳ ಬಗ್ಗೆ ಇಲ್ಲಿ ವಿವರಿಸಿದ್ದೇವೆ. ನೀವು, ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆ ಆಧಾರದ ಮೇಲೆ ನಿಮಿಷ್ಟದ ಕಾರನ್ನು ಆರಿಸಿಕೊಳ್ಳಿರಿ.
ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಬಗ್ಗೆ ಮಾತನಾಡೋಣ. ಇದು ಕಂಪನಿಯ ಎಂಟ್ರಿ ಲೆವೆಲ್ ಮಾದರಿಯಾಗಿದ್ದು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ರೂಪಾಂತರ, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್ ಒಳಗೊಂಡಂತೆ 6 ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

ಈ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು, 1-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 67 PS ಪವರ್, 89 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ರೂಪಾಂತರ ಇದೇ ಎಂಜಿನ್ ಪಡೆದಿದ್ದು, 57 PS ಪವರ್, 82 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. 24.39 - 24.9 kmpl ಮೈಲೇಜ್ ನೀಡುತ್ತದೆ.
ನೂತನ ಆಲ್ಟೊ ಕೆ10, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ - ಮೌಂಟೆಡ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ರಿವರ್ಸಿಂಗ್ ಕ್ಯಾಮೆರಾ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ ಒಳಗೊಂಡಂತೆ ವಿವಿಧ ಸೇಫ್ಟಿ ಫೀಚರ್ಸ್ ಇವೆ.

ಮತ್ತೊಂದು ಕಾರು ರೆನಾಲ್ಟ್ ಕ್ವಿಡ್ (Renault KWID), ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಆರ್‌ಎಕ್ಸ್‌ಇ, ಆರ್‌ಎಕ್ಸ್‌ಎಲ್, ಆರ್‌ಎಕ್ಸ್‌ಎಲ್ (ಒ) ಸೇರಿದಂತೆ ಐದು ರೂಪಾಂತರ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಜೊತೆಗೆ ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೋನ್ ಒಳಗೊಂಡಂತೆ 6 ಮೊನೊಟೊನ್ ಹಾಗೂ 2 ಡುಯೆಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಈ ರೆನಾಲ್ಟ್ ಕ್ವಿಡ್, 1- ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 PS ಗರಿಷ್ಠ ಪವರ್, 91 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. 21.46 - 22.3 kmpl ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯ ವಿಚಾರವಾಗಿ ಹೇಳುವುದಾದರೆ ರೆನಾಲ್ಟ್ ಕ್ವಿಡ್, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ ಒಳಗೊಂಡಂತೆ ವಿವಿಧ ಫೀಚರ್ಸ್ ಹೊಂದಿದೆ. ಸುರಕ್ಷತೆ ಸಲುವಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ರೇರ್ ಪಾರ್ಕಿಂಗ್ ಸೇನಾರ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಹಿಲ್ ಸ್ಟಾರ್ಟ್ ಅಸಿಸ್ಟ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಲವು ಸೇಫ್ಟಿ ವೈಶಿಷ್ಟ್ಯಗಳಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








