ಭಾರತದಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಟೊಯೊಟಾ, ಮಾರುತಿಯ ಈ ಎಸ್‍ಯುವಿಗಳು

ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಗ್ರ್ಯಾಂಡ್ ವಿಟಾರಾ ಮತ್ತು ಜಪಾನ್ ಮೂಲದ ಮತ್ತೊಂದು ದೈತ ಕಂಪನಿಯಾದ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಯನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಎರಡು ಎಸ್‍ಯುವಿಗಳು ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

ಭಾರತದ ರಸ್ತೆಗಳಲ್ಲಿ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಗಳು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಇದು ಈ ಎರಡು ಎಸ್‍ಯುವಿಗಳು ಕಡಿಮೆ ಅವಧಿಯಲ್ಲಿ ಎಷ್ಟು ಜನಪ್ರಿಯವಾಗಿದೆ ಎಂದು ತೋರಿಸುತ್ತದೆ. ಮಾರುತಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಹೈರೈಡರ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್‌ನಂತಹ ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ. ಕಳೆದ ತಿಂಗಳು ಮಾರುತಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಹೈರೈಡರ್ ಮಾದರಿಗಳ ಒಟ್ಟು 12856 ಯುನಿಟ್‌ಗಳು ಮಾರಾಟವಾಗಿವೆ.

ಭಾರೀ ಬೇಡಿಕೆ ಪಡೆದುಕೊಂಡ ಟೊಯೊಟಾ, ಮಾರುತಿಯ ಈ ಎಸ್‍ಯುವಿಗಳು

ಈ ಎರಡೂ ಎಸ್‍ಯುವಿಗಳನ್ನು ಎರಡು ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ ಮತ್ತು ಅತ್ಯಾಧುನಿಕ ಫೀಚರ್ಸ್ ಮತ್ತು ಆರಾಮದಾಯಕ ಕ್ಯಾಬಿನ್ ಅನ್ನು ಒಳಗೊಂಡಿವೆ. 2023ರ ಜನವರಿ ತಿಂಗಳಿನಲ್ಲಿ ಮಾರುತಿ ಗ್ರ್ಯಾಂಡ್ ವಿಟಾರಾ ಮಾದರಿಯ 8662 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಹೊಸ ವರದಿಗಳ ಪ್ರಕಾರ, ಹೊಸ ಎರಡೂ ಎಸ್‌ಯುವಿಗಳ ಕಾಯುವ ಅವಧಿ (ವೈಟಿಂಗ್ ಪಿರೇಡ್) ಹೆಚ್ಚಾಗಿದೆ. ನೀವು ಕೂಡ ಈ ಎರಡು ಎಸ್‍ಯುವಿಗಳಲ್ಲಿ ಯಾವುದನ್ನಾದರೂ ಖರೀದಿಸಲು ಬಯಸಿದ್ದರೆ, ನೀವು ಕೂಡ ತಿಂಗಳುಗಳ ಕಾಲ ಕಾಯಬೇಕು.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಗಳಲ್ಲಿ ಒಂದೇ ರೀತಿಯ ಎಂಜಿನ್ ಆಯ್ಕೆಗಳನ್ನು ಒಳಗೊಂಡಿದೆ. ಈ ಎರಡೂ ಎಸ್‍ಯುವಿಗಳು ಮೈಲ್ಡ್ ಹೈಬ್ರಿಡ್ ಮತ್ತು ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿವೆ. ಮೈಲ್ಡ್ ಆವೃತ್ತಿಯು 1.5 ಲೀಟರ್ ನ್ಯಾಚುರಲ್ ಆಸ್ಪೈರರ್ಡ್ ಎಂಜಿನ್ ಆಗಿದ್ದು, ಈ ಎಂಜಿನ್ 103 ಬಿಹೆಚ್‍ಪಿ ಪವರ್ ಮತ್ತು 136 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರೀ ಬೇಡಿಕೆ ಪಡೆದುಕೊಂಡ ಟೊಯೊಟಾ, ಮಾರುತಿಯ ಈ ಎಸ್‍ಯುವಿಗಳು

ಈ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. ಇನ್ನು 1.5 ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಸ್ಟ್ರಾಂಗ್ ಹೈಬ್ರಿಡ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ. ಈ ಸಿಸ್ಟಂನಲ್ಲಿ ಪೆಟ್ರೋಲ್ ಎಂಜಿನ್ ಎಲೆಕ್ಟ್ರಿಕ್ ಮೋಟಾರ್ ಜೊತೆಗೆ ಕಾರ್ಯನಿರ್ವಹಿಸುತ್ತದೆ. ಈ ಎಂಜಿನ್ 93 ಬಿಹೆಚ್‍ಪಿ ಪವರ್ ಮತ್ತು 122 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು eCVT ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಎಸ್‍ಯುವಿಗಳ ಮ್ಯಾನುವಲ್ ರೂಪಾಂತರವು ಅಲ್ ವ್ಹೀಲ್ ಡ್ರೈವ್ ಸಿಸ್ಟಂನೊಂದಿಗೆ ಬರುತ್ತಿದೆ. ಮಾರುತಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಅರ್ಬನ್ ಕ್ರೂಸರ್ ಎಸ್‍ಯುವಿಗಳಲ್ಲಿ ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ. ಈ ಎಸ್‍ಯುವಿಗಳಲ್ಲಿ ಪನೋರಮಿಕ್ ಸನ್ ರೂಫ್, ಡ್ಯುಯಲ್ ಟೋನ್ ಲೆಥರೆಟ್ ಅಫೋಲ್ಶರಿ, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಕ್ರೂಸ್ ಕಂಟ್ರೋಲ್ ಮತ್ತು ಇತರ ಫೀಚರ್ಸ್ ಗಳನ್ನು ಒಳಗೊಂಡಿವೆ.

ಭಾರೀ ಬೇಡಿಕೆ ಪಡೆದುಕೊಂಡ ಟೊಯೊಟಾ, ಮಾರುತಿಯ ಈ ಎಸ್‍ಯುವಿಗಳು

ಇನ್ನು ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಹೊಂದಿದೆ. ಭಾರತದಲ್ಲಿ ಮಾರಾಟವಾಗುತ್ತಿರುವ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೈರೈಡರ್‌ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್‌ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸ.

ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯನ್ನು ಸುಜುಕಿಯು ತನ್ನ ಗ್ಲೋಬಲ್ ಸಿ ಫ್ಲಾಟ್ ಫಾರ್ಮ್ ಅನ್ನು ಬಳಿಸಿ ಅಭಿವೃಧಿಪಡಿಸಲಾಗಿದೆ. ಈ ಎಸ್‍ಯುವಿಯು ಮಾರುತಿ ಸುಜುಕಿ ಕಂಪನಿಯು ನೆಕ್ಸಾ ಡೀಲರ್ ಶಿಪ್ ಗಳ ಮೂಲಕ ಮಾರಾಟ ಮಾಡಲಾಗುತ್ತಿದೆ. ಟೊಯೊಟಾ ಹೈರೈಡರ್ ಎಸ್‍ಯುವಿ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯ ಮೈಲ್ಡ್ ಹೈಬ್ರಿಡ್ ರೂಪಾಂತರಕ್ಕೆ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ.ಈ ಟೊಯೊಟಾ ಹೈರೈಡರ್ ಎಸ್‍ಯುವಿಯು E, S, G ಮತ್ತು V ಎಂಬ ರೂಪಾಂತರಗಳಲ್ಲಿ ಲಭ್ಯವಿದೆ.

Article Published On: Monday, February 20, 2023, 13:45 [IST]
English summary
Car sales jan 2023 maruti grand vitara toyota hyryder posted 12856 units details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+