Citroen C3 Aircross: ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ ರಿವ್ಯೂ ವಿಡಿಯೋ ಇಲ್ಲಿದೆ.. ನೋಡಿ
ಸಿಟ್ರನ್, ದೇಶೀಯ ಮಾರುಕಟ್ಟೆಯಲ್ಲಿ ಸಿ3 ಏರ್‌ಕ್ರಾಸ್ (C3 Aircross) ಮಿಡ್-ಸೈಜ್ ಎಸ್‌ಯುವಿಯನ್ನು ಪರಿಚಯಿಸಿದೆ. ಇದು ಹೇಗೆ ಕಾರ್ಯನಿರ್ವಹಿಸುತ್ತಿದೆ. ಯಾವ ವೈಶಿಷ್ಟ್ಯಗಳನ್ನು ಹೊಂದಿದೆ ಎಂಬುದನ್ನು ತಿಳಿದುಕೊಳ್ಳಲು ನಮ್ಮ ತಂಡಕ್ಕೆ ಈ ಕಾರಿನ ಟೆಸ್ಟ್ ಡ್ರೈವ್ ಮಾಡಲು ಅವಕಾಶ ದೊರೆಯಿತು. ಅದರ ರಿವ್ಯೂ ವಿಡಿಯೋ ಇಲ್ಲಿದೆ.
ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ ಎಂಜಿನ್ ಕಾರ್ಯಕ್ರಮತೆ ಬಗ್ಗೆ ಮಾತನಾಡುವುದಾದರೆ, 1.2 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 108.4 bhp ಗರಿಷ್ಠ ಪವರ್ ಹಾಗೂ 190 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ. 18.5 km/l ಮೈಲೇಜ್ ನೀಡುತ್ತದೆ.
ಈ ಕಾರು, ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 10.2 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸ್ಟೀರಿಂಗ್-ಮೌಂಟೆಡ್ ಆಡಿಯೊ ಕಂಟ್ರೋಲ್, ಹೊಂದಿದೆ. ವಿಶೇಷವಾಗಿ ಮೈಸಿಟ್ರಸ್ (MyCitroen) ಕನೆಕ್ಟ್ ಎಂಬ ಫೀಚರ್ಸ್ ಪಡೆದಿದೆ. ಇದು, ಜಿಯೋ ಫೆನ್ಸಿಂಗ್, ಫ್ಯುಯೆಲ್ ಸ್ಟೇಟಸ್, SOS ಅಲರ್ಟ್ ಸೇರಿದಂತೆ ವಿವಿಧ ಮಾಹಿತಿಯನ್ನು ಒದಗಿಸುತ್ತದೆ.
ಸುರಕ್ಷತೆಯ ದೃಷ್ಟಿಯಿಂದ ಸಿಟ್ರಸ್ ಸಿ3 ಏರ್‌ಕ್ರಾಸ್ ಎಸ್‌ಯುವಿ ಅತ್ಯುತ್ತಮವಾಗಿದ್ದು, 6 ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) EBD ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ISOFIX ಚೈಲ್ಡ್ ಸೀಟ್ ಆಂಕರ್ಸ್, ರೇರ್ -ವ್ಯೂ ಕ್ಯಾಮೆರಾ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ ಸೇರಿದಂತೆ ಹತ್ತಾರು ಸೇಫ್ಟಿ ಫೀಚರ್ಸ್ ಪಡೆದಿದೆ.

ಇನ್ನು, ಸಿಟ್ರನ್ ಕಂಪನಿ ಸಿ3 ಏರ್‌ಕ್ರಾಸ್ ಎಸ್‌ಯುವಿಯನ್ನು ಒಂದೇ ರೂಪಾಂತರದಲ್ಲಿ (ಮ್ಯಾಕ್ಸ್) ಮಾರಾಟ ಮಾಡಲು ನಿರ್ಧರಿಸಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ. ಈ ಕಾರು, ರೂ.11 ಲಕ್ಷ ಆರಂಭಿಕ ಬೆಲೆಯಲ್ಲಿ ಖರೀದಿಗೆ ಸಿಗುವ ಸಾಧ್ಯತೆ ಇದ್ದು, ಆಕರ್ಷಕ ವೈಶಿಷ್ಟ್ಯದೊಂದಿಗೆ ಲಾಂಚ್ ಆಗುವುದರಿಂದ ಹೆಚ್ಚಿನ ಗ್ರಾಹಕರಿಗೆ ಇಷ್ಟವಾಗಬಹುದು. ಎಲ್ಲದಕ್ಕೂ ಶೀಘ್ರವೇ ಉತ್ತರ ಸಿಗಲಿದೆ.


Click it and Unblock the Notifications








