ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಸಿಟ್ರನ್ ಸಿ3 ಕಾರು

ಫ್ರೆಂಚ್ ವಾಹನ ತಯಾರಕ ಕಂಪನಿಯಾದ ಸಿಟ್ರನ್ ಸಿ5 ಏರ್‌ಕ್ರಾಸ್ ಮತ್ತು ಸಿ3 ಕಾರುಗಳ ಬೆಲೆಗಳನ್ನು ಹೆಚ್ಚಿಸಿದೆ. ಈ ಸಿಟ್ರನ್ ಸಿ5 ಮತ್ತು ಸಿ3 ಕಾರುಗಳ ಬೆಲೆಗಳನ್ನು 50,000 ರೂ.ವರೆಗೆ ಹೆಚ್ಚಿಸಿದೆ. ಇದರಿಂದ ಹೊಸ ವರ್ಷದಿಂದ ಸಿಟ್ರನ್ ಸಿ5 ಏರ್‌ಕ್ರಾಸ್ ಮತ್ತು ಸಿ3 ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ತುಸು ದುಬಾರಿಯಾಗಿದೆ.

ಸಿಟ್ರನ್ ಸಿ5 ಏರ್‌ಕ್ರಾಸ್ ಕಾರಿನ ಬೆಲೆಯನ್ನು 50,000 ರೂ.ವರೆಗೆ ಹೆಚ್ಚಿಸಿದೆ. ಇನ್ನು ಸಿಟ್ರನ್ ಸಿ3 ಕಾರಿನ ಬೆಲೆಯನ್ನು ಈಗ 27,500 ರೂ.ವರೆಗೆ ದುಬಾರಿಯಾಗಿದೆ. ದೆ. NA ಪೆಟ್ರೋಲ್ ರೂಪಾಂತರದ ರೂಪಾಂತರಗಳು ಈಗ ಹೆಚ್ಚುವರಿಯಾಗಿ 27,500 ರೂ.ಗಳಷ್ಟು ದುಬಾರಿಯಾಗಿರುತ್ತದೆ, ಆದರೆ ಟರ್ಬೊ-ಪೆಟ್ರೋಲ್ ರೂಪಾಂತರದ ಬೆಲೆಯನ್ನು 20,000 ರೂ. ವರೆಗ್ ಹೆಚ್ಚಿಸಿದೆ. ಸಿ3 ಮಾದರಿಯ ಮೂಲಕ ಸಿಟ್ರನ್ ಕಂಪನಿಯು ಮೈಕ್ರೊ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಸಿಟ್ರನ್ ಸಿ3 ಕಾರು

ಸಿಟ್ರನ್ ಸಿ3 ಈಗಾಗಲೇ ಭಾರೀ ಪ್ರಮಾಣದ ಬುಕಿಂಗ್ ಕೂಡಾ ಹರಿದುಬಂದಿದೆ. ಸಿಟ್ರನ್ ಸಿ3 ಕಾರು ಮೈಕ್ರೊ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಸಿ3 ಕಾರು ಮಾದರಿಯು ಲೈವ್ ಮತ್ತು ಫೀಲ್ ಎನ್ನುವ ಎರಡು ವೆರಿಯೆಂಟ್‌ಗಳನ್ನು ಹೊಂದಿದೆ. ಈ ಮಾದರಿಯಲ್ಲಿ ಸಿಟ್ರನ್ ಕಂಪನಿಯು ಎರಡು ಎಂಜಿನ್ ಆಯ್ಕೆಗಳನ್ನು ನೀಡಿದೆ. ಆರಂಭಿಕ ಮಾದರಿಯು 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ತ್ರಿ-ಸಿಲಿಂಡರ್ ಪ್ಯೂರ್‌ಟೆಕ್ 82 ಪೆಟ್ರೋಲ್ ಎಂಜಿನ್‌ ಅನ್ನು ನೀಡಿದೆ.

ಹೈ ಎಂಡ್ ಮಾದರಿಯಲ್ಲಿ ಟರ್ಬೊ ಚಾರ್ಜ್ ವೈಶಿಷ್ಟ್ಯತೆಯ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ. ಆರಂಭಿಕ ವೆರಿಯೆಂಟ್‌ನಲ್ಲಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆ ನೀಡಿದ್ದರೆ ಹೈ ಎಂಡ್ ಮಾದರಿಯಲ್ಲಿ 6-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಿದ್ದು, ಹೊಸ ಕಾರಿನಲ್ಲಿ ಸದ್ಯಕ್ಕೆ ಮ್ಯಾನುವಲ್ ಆಯ್ಕೆ ಮಾತ್ರ ನೀಡುತ್ತಿರುವ ಮುಂಬರುವ ದಿನಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿ ಪರಿಚಯಿಸುವುದಾಗಿ ಹೇಳಿಕೊಂಡಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆ ಹೊಂದಿರುವ ಆರಂಭಿಕ ಮಾದರಿಯು 82 ಬಿಎಚ್‌ಪಿ ಮತ್ತು 115 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇನ್ನು 6-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆ ಹೊಂದಿರುವ ಟರ್ಬೊ ಪೆಟ್ರೋಲ್ ಆವೃತ್ತಿಯು 110 ಬಿಎಚ್‌ಪಿ, 190 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಲೈವ್ ವೆರಿಯೆಂಟ್‌ನಲ್ಲಿ 1.2-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮಾತ್ರ ಆಯ್ಕೆ ಲಭ್ಯವಿದ್ದರೆ ಫೀಲ್ ವೆರಿಯೆಂಟ್‌ನಲ್ಲಿ ನ್ಯಾಚುರಲಿ ಆಸ್ಪರೆಟೆಡ್ ಮತ್ತು ಟರ್ಬೊ ಪೆಟ್ರೋಲ್ ಆಯ್ಕೆ ಲಭ್ಯವಿದೆ. ಹಾಗೆಯೇ ಸಿಟ್ರನ್ ಸಿ3 ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಸಾಕಷ್ಟು ಆಕರ್ಷಕವಾಗಿದೆ. ಅಲ್ಲದೇ ಈ ಕಾರು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಸಿಟ್ರನ್ ಸಿ3 ಕಾರು ದೊಡ್ಡದಾದ ಗ್ರಿಲ್‌ನೊಂದಿಗೆ ಕ್ರೋಮ್ ಫಿನ್ಸಿಂಗ್ ಹೊಂದಿರುವ ಸಿಟ್ರನ್ ಲೊಗೊ, ವಿಭಜಿತವಾಗಿರುವ ಹೆಡ್‌ಲ್ಯಾಂಪ್, ಡಿಆರ್‌ಎಲ್, ಲೊಗೊಗೆ ಹೊಂದಾಣಿಕೆಯಾಗುವ ಎಕ್ಸ್ ಶೇಫ್ ಡಿಸೈನ್‌ನೊಂದಿಗೆ ಗಮನಸೆಳೆಯುತ್ತದೆ. ಎರಡು ಬದಿಯಲ್ಲೂ ಸ್ಕಫ್ ಪ್ಲೇಟ್, ಏರ್ ಪ್ಯಾಕೇಟ್ ಡಿಸೈನ್, ಅಲಾಯ್ ವ್ಹೀಲ್, ರೂಫ್ ರೈಲ್ಸ್, ಡ್ಯುಯಲ್ ಟೋನ್ ರೂಫ್, ಸ್ಪ್ಲಿಟ್ ಟೈಲ್ ಲ್ಯಾಂಪ್ ಮತ್ತು 180 ಗ್ರೌಂಡ್ ಕಿಯರೆನ್ಸ್ ಆಕರ್ಷಕವಾಗಿದೆ. ಈ ಕಾರಿನ ಕ್ಯಾಬಿನ್ ವೈಶಿಷ್ಟ್ಯತೆಯು ಸಹ ಆಕರ್ಷಕವಾಗಿದ್ದು, ಹೊಸ ಕಾರಿನಲ್ಲಿ 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್‍‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಇದರೊಂದಿಗೆ ಕ್ಲೈಮೆಟ್ ಕಂಟ್ರೋಲ್, ಕ್ವಿಕ್ ಚಾರ್ಜಿಂಗ್ ಯುಎಸ್‌ಬಿ ಸಾಕೆಟ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ನಾಲಜಿ, ಕ್ರೂಸ್ ಕಂಟ್ರೊಲ್, 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಸೌಲಭ್ಯವಿದೆ. ಸಿ3 ಮಾದರಿಯ ಮತ್ತೊಂದು ವಿಶೇಷವೆಂದರೆ ಕಂಪನಿಯು ಬಜೆಟ್ ಕಾರಿನಲ್ಲೂ ವೈರ್‌ಲೆಸ್ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯವನ್ನು ನೀಡುತ್ತಿದ್ದು, ಎಲ್ಇಡಿ ಡಿಆರ್‌ಎಲ್‌, ವೈರ್‌ಲೆಸ್ ಸ್ಮಾರ್ಟ್‌ಫೋನ್ ಸಂಪರ್ಕ, ಫೋಲ್ಡ್-ಫ್ಲಾಟ್ ಹಿಂದಿನ ಸೀಟ್, ಒನ್-ಟಚ್ ಡೌನ್ ವಿಂಡೋಸ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ಇದಲ್ಲದೆ ಈ ಕಾರಿನಲ್ಲಿ ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಹೊಸ ಕಾರು ಅತ್ಯುತ್ತಮ ಕ್ಯಾಬಿನ್ ಸ್ಥಳಾವಕಾಶದೊಂದಿಗೆ ಹಿಂಬದಿಯ ಪ್ರಯಾಣಿಕರಿಗೆ 653 ಎಂಎಂ ಲೆಗ್‌ರೂಂನೊಂದಿಗೆ 2 ಲೀಟರ್ ಸಾಮರ್ಥ್ಯದ ಡೋರ್ ಪ್ಯಾಕೇಟ್, ಸ್ಮಾರ್ಟ್‌ಫೋನ್ ಹೋಲ್ಡರ್ ಮತ್ತು ಸೆಂಟರ್ ಕನ್ಸೊಲ್ ಹೊಂದಿದೆ. ಸಿ3 ಕಾರಿನ ಸ್ಪೋರ್ಟಿ ಲುಕ್ ಹೆಚ್ಚಿಸಲು ಡ್ಯುಯಲ್ ಆಕ್ಸೆಂಟ್ ನೀಡುತ್ತಿರುವುದು ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದ್ದು, ಹೊಸ ಕಾರು ಒಟ್ಟು ಆರು ಸಿಂಗಲ್ ಟೋನ್ ಮತ್ತು ನಾಲ್ಕು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿದೆ.

Most Read Articles

Kannada
English summary
Citroen hiked the prices of c3 hatchback details
Story first published: Tuesday, January 3, 2023, 6:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X