25 ಇಂಟರ್-ಸಿಟಿ ಹವಾನಿಯಂತ್ರಿತ ಇವಿ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಕೆಎಸ್‌ಆರ್‌ಟಿಸಿ ತನ್ನ ಇವಿ ಬಲವನ್ನು ಹೆಚ್ಚಿಸಕೊಳ್ಳುವ ಸಲುವಾಗಿ ಹೊಸ ಎಲೆಕ್ಟ್ರಿಕ್ ವಾಹನಗಳ ಸೇರ್ಪಡೆಗೆ ಯೋಜಿಸಲಾಗಿದ್ದ, 50 ಅಂತರ ನಗರ ಹವಾನಿಯಂತ್ರಿತ "EV ಪವರ್ ಪ್ಲಸ್" ಎಲೆಕ್ಟ್ರಿಕ್ ವಾಹನಗಳ ಪೈಕಿ ಮೊದಲ ಹಂತವಾಗಿ ಇಂದು (ಮಾರ್ಚ್ 20) 25 "EV ಪವರ್ ಪ್ಲಸ್" ಎಲೆಕ್ಟ್ರಿಕ್ ಬಸ್‌ಗಳನ್ನು ಲೋಕಾರ್ಪಣೆ ಮಾಡಿದೆ.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರಾರಸಾ ನಿಗಮದ ನೂತನ ಅಂತರ ನಗರ ಹವಾ ನಿಯಂತ್ರಿತ "EV ಪವರ್ ಪ್ಲಸ್" ವಾಹನಗಳನ್ನು ಲೋಕಾರ್ಪಣೆ ಮಾಡಿದರು. ಪ್ರಸ್ತುತ ಉದ್ಘಾಟಿಸಲಾಗಿರುವ ವಾಹನಗಳನ್ನು ಬೆಂಗಳೂರು - ಮೈಸೂರು, ಬೆಂಗಳೂರು - ಮಡಿಕೇರಿ, ಬೆಂಗಳೂರು - ವಿರಾಜಪೇಟೆ, ಬೆಂಗಳೂರು- ದಾವಣಗೆರೆ, ಬೆಂಗಳೂರು- ಶಿವಮೊಗ್ಗ, ಬೆಂಗಳೂರು - ಚಿಕ್ಕಮಗಳೂರು ನಡುವೆ ಕಾರ್ಯಾಚರಿಸಲು ಯೋಜಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

25 ಇಂಟರ್-ಸಿಟಿ ಹವಾನಿಯಂತ್ರಿತ ಇವಿ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಭಾರತ ಸರ್ಕಾರದ "ಮೇಕ್ ಇನ್ ಇಂಡಿಯಾ" ಎಲೆಕ್ಟ್ರಿಕ್ ಬಸ್ ಫೇಮ್-2 ಯೋಜನೆ ಅಡಿಯಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್ ಚಾಲಿತ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಯೋಜಿಸಿದ್ದು, ಇಂದು ಈ ಪೈಕಿ 25 ವಾಹನಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ. ಉಳಿದ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗೊಳಿಸುವುದಾಗಿ ತಿಳಿಸಿದೆ. ಇನ್ನೂ ಈ ಹಿಂದೆ ಇದರ PROTO-TYPE ವಾಹನವನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಯಶಸ್ವಿಯಾಗಿ ಬೆಂಗಳೂರು-ಮೈಸೂರು ನಡುವೆ ಪ್ರಾಯೋಗಿಕವಾಗಿ ಕಾರ್ಯಾಚರಣೆ ಮಾಡಲಾಗಿತ್ತು.

ಹೇಗಿದೆ ಬಸ್:
ಈ ವಾಹನವು 12 ಮೀಟರ್ ಉದ್ದವಿದ್ದು, ಚಾಲಕರು, ನಿರ್ವಾಹಕರಿಗೆ ಸೇರಿದಂತೆ 45 ಆಸನಗಳನ್ನು ಹೊಂದಿದೆ. ಪ್ರತಿ ಚಾರ್ಜಿಗೆ 300 ಕಿ.ಮೀ ಕ್ರಮಿಸಲಿದೆ. ಸುಧಾರಿತ Li-ion Phosphate Battery ಹೊಂದಿರುವ ಇದು 2-3 ಗಂಟೆಗಳಲ್ಲಿ ಫಾಸ್ಟ ಚಾರ್ಚಿಂಗ್ ಮೂಲಕ ಸಂಪೂರ್ಣವಾಗಿ ಚಾರ್ಚ್ ಮಾಡಬಹುದು. ಬಸ್ಸುಗಳಲ್ಲಿ ಸಿಸಿ ಟಿವಿ ಕ್ಯಾಮರಾಗಳು, ಎಮರ್ಜೆನ್ಸಿ ಬಟನ್, ಅಗ್ನಿಶಾಮಕ ಸಾಧನ, ಪ್ರಥಮ ಚಿಕಿತ್ಸಾ ಕಿಟ್, ಗ್ಲಾಸ್ ಹ್ಯಾಮ್ಮರ್ ಮುಂತಾದ ಸುರಕ್ಷತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ.

25 ಇಂಟರ್-ಸಿಟಿ ಹವಾನಿಯಂತ್ರಿತ ಇವಿ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕೆಎಸ್‌ಆರ್‌ಟಿಸಿ ತನ್ನ ವಾಹನ ಬಲಕ್ಕೆ ಹೈಟೆಕ್ ಸ್ಕ್ಯಾಂಡಿನೇವಿಯನ್ ಯೂರೋಪಿಯನ್ ವಿನ್ಯಾಸದ ವೋಲ್ವೋ 9600s "ಅಂಬಾರಿ ಉತ್ಸವ" ವಾಹನವನ್ನು ಸಾರ್ವಜನಿಕ ಬಳಕೆಗಾಗಿ ಲೋಕಾರ್ಪಣೆ ಮಾಡಿತ್ತು. ಈ ಹೊಸ ಎಲೆಕ್ಟ್ರಿಕ್ ವಾಹನಗಳಿಗೆ ಸಾರ್ವಜನಿಕರಿಂದ ಸ್ವೀಕರಿಸಿದ ಹೆಸರುಗಳ ಮೂಲಕ 'EV ಪವರ್ ಪ್ಲಸ್' ಟ್ಯಾಗ್ ಲೈನ್ 'ಅತ್ಯುತ್ತಮ ಅನುಭವ', ('EV Power Plus' - e-Xperience e- levated') ಎಂದು ಹೆಸರಿಸಲಾಗಿದೆ.

ರಾಜ್ಯದ ಎಲ್ಲಾ ನಗರಗಳ ನಡುವೆ ಸುಸಜ್ಜಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಹಂತ ಹಂತವಾಗಿ 350 ಎಲೆಕ್ಟ್ರಿಕ್ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಇಂದ ಸೇರ್ಪಡೆಗೊಳಿಸುವ ಯೋಜನೆ ಇರುವುದಾಗಿ ನಿಗಮ ತಿಳಿಸಿದೆ. ಗ್ರಾಮಾಂತರ ಪ್ರದೇಶದ ಪ್ರಯಾಣಿಕರಿಗೂ ಸುಸಜ್ಜಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ 600 ಹೊಸ ಕರ್ನಾಟಕ ಸಾರಿಗೆ ಮಾದರಿಯ ವಾಹನಗಳು ಮುಂದಿನ ಮೂರು ತಿಂಗಳ ಒಳಗೆ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದೆ.

25 ಇಂಟರ್-ಸಿಟಿ ಹವಾನಿಯಂತ್ರಿತ ಇವಿ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಇನ್ನು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರವನ್ನು ಈಗಾಗಲೇ ಬೆಂಗಳೂರು ಮತ್ತು ಮೈಸೂರಿನಲ್ಲಿ ಸ್ಥಾಪಿಸಲಾಗಿದ್ದು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ನಗರಗಳಲ್ಲಿ ಪ್ರಗತಿಯಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರತಿ ದಿನ 7400 ಅನುಸೂಚಿಗಳಿಂದ 27 ಲಕ್ಷ ಕಿ.ಮೀ ಕ್ರಮಿಸುವುದರ ಮೂಲಕ 26 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೇವೆಯನ್ನು ಒದಗಿಸುತ್ತಿದ್ದು, ಇದರಲ್ಲಿ ಶೇ.17 ರಷ್ಟು ವಿದ್ಯಾರ್ಥಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಲಾಗುತ್ತಿದೆ. ಪ್ರತಿ ದಿನ ರೂ.9.5 ಕೋಟಿ ಆದಾಯ ಗಳಿಸುತ್ತಿರುವುದಾಗಿ ಕೆಎಸ್‌ಆರ್‌ಟಿಸಿ ಹೇಳಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

More from DriveSpark

Article Published On: Monday, March 20, 2023, 20:17 [IST]
English summary
Cm bommai inaugurated 25 inter city air conditioned electric buses
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+