Maruti Fronx: ಭಾರೀ ವೇಗದಲ್ಲಿ ಮುನ್ನುಗ್ಗುತ್ತಿದೆ ಮಾರುತಿ ಸುಜುಕಿ ಫ್ರಾಂಕ್ಸ್, ನಂಬರ್ 1 ಸ್ಥಾನಕ್ಕೆ ಬರುತ್ತಾ?
ದೇಶದಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿಗಳು ಭಾರೀ ಜನಪ್ರಿಯತೆ ಗಳಿಸುತ್ತಿವೆ. ಅದರಲ್ಲೂ ಪ್ರಮುಖ ಕಾರು ತಯಾರಕ ಕಂಪನಿಗಳ ಭವಿಷ್ಯ ಹಾಗೂ ಆದಾಯ ಇವುಗಳ ಮೇಲೆಯೇ ಅವಲಂಭಿತವಾಗಿದೆ. ಸದ್ಯ, ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಗೊಂಡಿದ್ದು, ಈ ಪಟ್ಟಿಯಲ್ಲಿ ಮಾರುತಿ ಫ್ರಾಂಕ್ಸ್ ಮೂರನೇ ಸ್ಥಾನದಲ್ಲಿದ್ದರೂ ಮುಂಬರುವ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರುವ ಎಲ್ಲ ಲಕ್ಷಣಗಳಿವೆ.
ಮಾರುತಿ ಸುಜುಕಿ ಫ್ರಾಂಕ್ಸ್ ಮಾರಾಟ ವಿವರವನ್ನು ನೋಡುವ ಮುನ್ನ, ಕಾಂಪ್ಯಾಕ್ಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಮೊದಲ ಸ್ಥಾನದಲ್ಲಿರುವ ಅದೇ ಕಂಪನಿಯ ಬ್ರೆಜ್ಜಾ ಕಾರಿನ ಬಗ್ಗೆ ಮಾತನಾಡೋಣ. ಕಂಪನಿಯು ಕಳೆದ ಆಗಸ್ಟ್ ತಿಂಗಳು 14,572 ಯುನಿಟ್ ಮಾರಾಟ ಮಾಡಿದೆ. 2022ರ ಇದೇ ಅವಧಿಗೆ ಹೋಲಿಸಿದರೆ (14,572) ವರ್ಷದಿಂದ ವರ್ಷಕ್ಕೆ ಶೇಕಡ -4% ನಷ್ಟ ಅನುಭವಿಸಿದೆ. ಈ ಬ್ರೆಜ್ಜಾ ಎಸ್‌ಯುವಿ ರೂ.8.29 ಲಕ್ಷ ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.

ಎರಡನೇ ಸ್ಥಾನದಲ್ಲಿ ಟಾಟಾ (Tata) ಕಂಪನಿಯ ಪಂಚ್ (Punch) ಎಸ್‌ಯುವಿ ಇದ್ದು, ಹೋದ ತಿಂಗಳು 14,523 ಯುನಿಟ್ ಕಾರುಗಳನ್ನು ಸೇಲ್ ಮಾಡಿ, ಕಳೆದ ವರ್ಷದ ಆಗಸ್ಟ್ ತಿಂಗಳಿಗೆ (12,006 ಯುನಿಟ್) ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ ಶೇಕಡ 21% ಪ್ರಗತಿ ಸಾಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್ ರೂ.6 ಲಕ್ಷದಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.
ಈಗ, ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಬಗ್ಗೆ ಮಾತನಾಡೋಣ. ಬಿಡುಗಡೆಯಾಗಿ ಕೆಲವೇ ತಿಂಗಳಲ್ಲಿ ಸಖತ್ ಫೇಮಸ್ ಆಗಿದ್ದು, ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮೂರನೇ ಸ್ಥಾನದಲ್ಲಿದೆ. ಕಂಪನಿಯು ಆಗಸ್ಟ್ ತಿಂಗಳಲ್ಲಿ 12,164 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. ಇದನ್ನು ಗಮನಿಸಿದರೆ, ಕೆಲವೇ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬಂದರೂ ಅಚ್ಚರಿ ಇಲ್ಲ.

ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ ರೂ.7.46 ಲಕ್ಷದಿಂದ ರೂ.13.13 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್ ಸೇರಿದಂತೆ 5 ರೂಪಾಂತರಗಳ ಆಯ್ಕೆಯಲ್ಲಿ ದೊರೆಯುತ್ತದೆ. ಇದು, ಮೂರು ಎಂಜಿನ್ ಆಯ್ಕೆಗಳಲ್ಲಿ ಸಿಗಲಿದೆ. ಅವುಗಳೆಂದರೆ, 1 - ಲೀಟರ್ ಟರ್ಬೊ ಪೆಟ್ರೋಲ್, 1.2 - ಲೀಟರ್ ಡುಯೆಲ್ಜೆಟ್ ಪೆಟ್ರೋಲ್ ಮತ್ತು 1.2 - ಲೀಟರ್ ಸಾಮರ್ಥ್ಯದ ಸಿಎನ್‌ಜಿ ಎಂಜಿನ್.
ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ರೂಪಾಂತರಗಳಿಗೆ ಅನುಗುಣವಾಗಿ, 20.01 - 22.89 kmpl ಮೈಲೇಜ್ ನೀಡುತ್ತದೆ. 9.0 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೈಮೇಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ಸ್ ಒಳಗೊಂಡಂತೆ ವಿವಿಧ ಫೀಚರ್ಸ್ ಪಡೆದಿದೆ.

ನಾಲ್ಕನೇ ಸ್ಥಾನದಲ್ಲಿ ಹುಂಡೈ ವೆನ್ಯೂ ಇದ್ದು, ಹೊದ ತಿಂಗಳು 10,948 ಯುನಿಟ್ ಕಾರುಗಳು ಮಾರಾಟವಾಗಿದ್ದು, 2022ರ ಇದೇ ಅವಧಿಗೆ ಹೋಲಿಸಿದರೆ (11,240 ಯುನಿಟ್) ಅದೇಕೋ ವರ್ಷದಿಂದ ವರ್ಷಕ್ಕೆ ಈ ಬಾರಿ ಶೇಕಡ 3% ಕುಸಿತ ಕಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ವೆನ್ಯೂ ಕಾರು, ರೂ.7.77 ಲಕ್ಷದಿಂದ ರೂ.13.48 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ.
ಕಡೆಯದಾಗಿ ಐದನೇ ಸ್ಥಾನದಲ್ಲಿರುವ ಟಾಟಾ ನೆಕ್ಸನ್ (Tata Nexon) ಮಾರಾಟದ ಬಗ್ಗೆ ಮಾತನಾಡೋಣ. ಕಳೆದ ತಿಂಗಳು ಭಾರೀ ಪ್ರಮಾಣದಲ್ಲಿ ಮಾರಾಟ ಕುಸಿತವನ್ನು ದಾಖಲಿಸಿದ್ದು, ಕೇವಲ 8,049 ಯುನಿಟ್ ಸೇಲ್ ಮಾಡಿದೆ. 2022ರ ಇದೇ ಅವಧಿಗೆ (15,085 ಯುನಿಟ್) ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ -47% ಇಳಿಕೆ ಸಾಧಿಸಿದೆ. ಈ ಕಾರು, ರೂ.8 ಲಕ್ಷ ಆರಂಭಿಕ ದರಕ್ಕೆ ಖರೀದಿಗೆ ಸಿಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಶಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.


Click it and Unblock the Notifications