Tata - Maruti - Renault - Nissan: ದೀಪಾವಳಿ ಹಬ್ಬ.. 10 ಲಕ್ಷದೊಳಗೆ ಸಿಗುವ ಶಕ್ತಿಯುತ ಕಾರುಗಳು

ಮನೆಗೆ ಹೊಸ ವಾಹನಗಳನ್ನು ತರಲು ದೀಪಾವಳಿ (Diwali) ಹಬ್ಬವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ನೀವು ಕೈಗೆಟುಕುವ ಬೆಲೆಯಲ್ಲಿ ಅತ್ಯಾಕರ್ಷಕ ವಿನ್ಯಾಸ, ವೈಶಿಷ್ಟ್ಯ ಹೊಂದಿರುವ ಕಾರುಗಳನ್ನು ಖರೀದಿಸಲು ಬಯಸಿದರೆ, ಟಾಟಾ (Tata), ಮಾರುತಿ (Maruti), ರೆನಾಲ್ಟ್ (Renault), ನಿಸ್ಸಾನ್ (Nissan) ಕಂಪನಿಯ ಶಕ್ತಿಯುತ ಕಾರುಗಳ ಕುರಿತು ಇಲ್ಲಿ ವಿವರಿಸಿದ್ದೇವೆ.

ಮೊದಲಿಗೆ ಟಾಟಾ ಪಂಚ್ (Tata Punch) ಕಾರಿನ ಬಗ್ಗೆ ಮಾತನಾಡೋಣ. ಈ ಕಾರು, ರೂ.6 ಲಕ್ಷದಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, ಪೆಟ್ರೋಲ್ ರೂಪಾಂತರ 18.8 kmpl - 20.09 kmpl ಮತ್ತು ಸಿಎನ್‌ಜಿ ವೇರಿಯೆಂಟ್ 26.99 km/kg ಮೈಲೇಜ್ ನೀಡುತ್ತದೆ.

Tata - Maruti - Renault - Nissan: ದೀಪಾವಳಿ ಹಬ್ಬ.. 10 ಲಕ್ಷದೊಳಗೆ ಸಿಗುವ ಶಕ್ತಿಯುತ ಕಾರುಗಳು

ಟಾಟಾ ಪಂಚ್ ವೈಶಿಷ್ಟ್ಯದ ಬಗ್ಗೆ ಹೇಳುವುದಾದರೆ, 7 - ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7 - ಇಂಚಿನ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ಆಟೋ ಎಸಿ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಡಿಫಾಗರ್ಸ್, ರೇರ್ ಪಾರ್ಕಿಂಗ್ ಸೆನ್ಸರ್‌ ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx), ರೂ.7.46 ಲಕ್ಷದಿಂದ 13.13 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 5 ಆಸನ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ನೊಂದಿಗೆ ಗ್ರಾಹಕರಿಗೆ ಲಭ್ಯವಿದೆ. ಪೆಟ್ರೋಲ್ ರೂಪಾಂತರ 20.1 kmpl - 22.89 kmpl ಮತ್ತು ಸಿಎನ್‌ಜಿ ವೇರಿಯೆಂಟ್ 28.51 km/kg ಮೈಲೇಜ್ ನೀಡುತ್ತದೆ.

Tata - Maruti - Renault - Nissan: ದೀಪಾವಳಿ ಹಬ್ಬ.. 10 ಲಕ್ಷದೊಳಗೆ ಸಿಗುವ ಶಕ್ತಿಯುತ ಕಾರುಗಳು

ಮಾರುತಿ ಸುಜುಕಿ ಫ್ರಾಂಕ್ಸ್ 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೆಡ್ಸ್-ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇಯಂತಹ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಿಲ್-ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾ ಸೇರಿಂದಂತೆ ವಿವಿಧ ಫೀಚರ್ಸ್ ಪಡೆದಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಭಾರತದ ಮಾರುಕಟ್ಟೆಯಲ್ಲಿ ರೂ.6 ಲಕ್ಷದಿಂದ ರೂ.11.02 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1.0 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 1.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 5 - ಸ್ವೀಡ್ ಮ್ಯಾನುವಲ್ ಹಾಗೂ ಸಿವಿಟಿ ಗೇರ್ ಬಾಕ್ಸ್ ಅನ್ನು ಒಳಗೊಂಡಿದೆ.

Tata - Maruti - Renault - Nissan: ದೀಪಾವಳಿ ಹಬ್ಬ.. 10 ಲಕ್ಷದೊಳಗೆ ಸಿಗುವ ಶಕ್ತಿಯುತ ಕಾರುಗಳು

ಈ ಕಾರು, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್, ಸ್ಮಾರ್ಟ್ ಕೀ, ಆಟೋ ಎಸಿ, ರೇರ್ ಎಸಿ ವೆಂಟ್ಸ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಒಳಗೊಂಡಂತೆ ಅನೇಕ ಸೇಫ್ಟಿ ಫೀಚರ್ಸ್ ಇವೆ.

ಕಡೆಯದಾಗಿ ರೆನಾಲ್ಟ್ ಟ್ರೈಬರ್ (Renault Triber) ಬಗ್ಗೆ ಹೇಳುವುದಾದರೆ, ರೂ.6.33 ಲಕ್ಷದಿಂದ ರೂ.8.97 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 7 ಆಸನ ಹೊಂದಿರುವ ಕಾರು, ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್ ಪಡೆದಿದ್ದು, 18.2 - 20.0 kmpl ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Tata - Maruti - Renault - Nissan: ದೀಪಾವಳಿ ಹಬ್ಬ.. 10 ಲಕ್ಷದೊಳಗೆ ಸಿಗುವ ಶಕ್ತಿಯುತ ಕಾರುಗಳು

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, November 11, 2023, 10:32 [IST]
English summary
Diwal best car under rs 10 lakh tata punch maruti fronx nissan magnite renault triber
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+