Maruti Suzuki: ಇನ್ವಿಕ್ಟೋಗಾಗಿ ಶೋರೂಂ ಮುಂದೆ ಜನವೋ ಜನ, 8 ಮಂದಿ ಹೋಗಬಹುದು.. 23 ಕಿ.ಮೀ ಮೈಲೇಜ್
ಮಾರುತಿ ಸುಜುಕಿ (Maruti Suzuki) ಕಳೆದ ಜುಲೈ ತಿಂಗಳು ಇನ್ವಿಕ್ಟೋ (Invicto) ಎಂಪಿವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ರೂ.24.79 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಬಿಡುಗಡೆ ಮಾಡಿತ್ತು. ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಆಧಾರಿತ ಈ ಎಂಪಿವಿ, 4 ಬಣ್ಣಗಳು, 2 ರೂಪಾಂತರದ ಆಯ್ಕೆಯಲ್ಲಿ ಸಿಗುತ್ತದೆ.
ಈ ಡಿಸೆಂಬರ್ ತಿಂಗಳು ಇನ್ವಿಕ್ಟೋ ಎಂಪಿವಿಯ 5,000 ಆರ್ಡರ್‌ಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಮಾರುತಿ ಸುಜುಕಿ ಬಹಿರಂಗಪಡಿಸಿದೆ. ಕಂಪನಿಯೂ ತಿಂಗಳಿಗೆ 500 - 700 ಯುನಿಟ್ ಮಾದರಿಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದು, ಇನ್ವಿಕ್ಟೋದ ಟಾಪ್ ಎಂಡ್ ವೇರಿಯೆಂಟ್ ಆಲ್ಫಾ ಪ್ಲಸ್ (Alpha+) ಅನ್ನು ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದು, ಜಿಟಾ (Zeta+) ವೇರಿಯೆಂಟ್ ಕೂಡ ಲೈನ್-ಅಪ್ ನಲ್ಲಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ, ರೂ.24.82 ಲಕ್ಷದಿಂದ ರೂ.28.42 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಮಿಸ್ಟಿಕ್ ವೈಟ್, ನೆಕ್ಸಾ ಬ್ಲೂ, ಮೆಜೆಸ್ಟಿಕ್ ಸಿಲ್ವರ್ ಸೇರಿದಂತೆ 4 ಬಣ್ಣದ ಆಯ್ಕೆಯಲ್ಲಿ ದೊರೆಯಲಿದ್ದು, ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಗೆ ಹೋಲಿಕೆಯಾಗುವಂತಹ ವಿನ್ಯಾಸವನ್ನು ಪಡೆದಿದೆ.
ನೂತನ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಎಂಪಿವಿ 2 - ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 186 PS ಪವರ್ ಹಾಗೂ 206 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಇ -ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, 23.24 kmpl ಮೈಲೇಜ್ ಕೊಡುತ್ತದೆ.

ಈ ಎಂಪಿವಿ ಭರಪೂರ ವೈಶಿಷ್ಟ್ಯಗಳನ್ನು ಹೊಂದಿದೆ. 10.1 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಮತ್ತು ಆಂಬಿಯೆಂಟ್ ಲೈಟಿಂಗ್. ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ನಂತಹ ಹಲವು ಫೀಚರ್ಸ್ ಇವೆ.
ಸುರಕ್ಷತೆಯ ವಿಚಾರದಲ್ಲಿ ಮಾರುತಿ ಸುಜುಕಿ ಇನ್ವಿಕ್ಟೋಗೆ ಸರಿ ಸಾಟಿಯೇ ಇಲ್ಲ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಎಂಪಿವಿ 6 ಏರ್‌ಬ್ಯಾಗ್, ಸೀಟ್‌ಬೆಲ್ಟ್ ರಿಮೈಂಡರ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

ಇನ್ನು, ಮಾರುತಿ ಸುಜುಕಿ ಬಾಕಿ ಉಳಿಸಿಕೊಂಡಿರುವ ಇನ್ವಿಕ್ಟೋ ಎಂಪಿವಿ ಆರ್ಡರ್‌ಗಳನ್ನು ಗಮನಿಸಿದರೆ ಈ ಕಾರು ಎಷ್ಟರಮಟ್ಟಿಗೆ ಬೇಡಿಕೆ ಹೊಂದಿದೆ ಎಂಬುದು ಸುಲಭವಾಗಿ ಅರ್ಥವಾಗುತ್ತದೆ. ಇದು, ಪ್ರೀಮಿಯಂ ಮಾದರಿಯಾಗಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದು, ಒಂದಷ್ಟು ಕಾಯುವಿಕೆ ಅವಧಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ಈ ಕಾರಿಗೆ ಹೆಚ್ಚಿನ ಡಿಮ್ಯಾಂಡ್ ಬಂದರೂ ಅಚ್ಚರಿಯಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications