ಮಹಿಳೆಯರಿಗೆ ಬಂಪರ್ ಆಫರ್... ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಸೌಲಭ್ಯ

ಬೆಂಗಳೂರಿನಲ್ಲಿ ಉತ್ತಮ ನಿತ್ಯ ಸಾರಿಗೆ ವ್ಯವಸ್ಥೆಯಲ್ಲಿ ಜನಪ್ರಿಯತೆ ಗಳಿಸಿರುವ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಅಂತರಾಷ್ಟ್ರೀಯ ಮಹಾಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುತ್ತಿದೆ. ಬೆಂಗಳೂರು ನಗರದಲ್ಲಿ ಇದೇ 8ರಂದು ಬಿಎಂಟಿಸಿಯ ಎಲ್ಲಾ ಬಸ್‌ಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

ಮಹಿಳೆಯರು ಪ್ರತಿದಿನ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಹಾಗೂ ಎಲ್ಲಾ ಕಾರ್ಯಕ್ಷೇತ್ರಗಳಲ್ಲಿ ಭಾಗವಹಿಸಲು ಸುರಕ್ಷಿತ, ಉತ್ತಮ ಭದ್ರತೆಯುಳ್ಳ ಸಾರಿಗೆ ಸೌಲಭ್ಯ ಕಲ್ಪಿಸಲು ಹಾಗೂ ಆರ್ಥಿಕವಾಗಿ ಶಕ್ತಿಯನ್ನು ತುಂಬಲು ಈ ಸೌಲಭ್ಯ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು (ದಿನಾಂಕ 8-3-2023) ಬೆಂಗಳೂರು ನಗರದ ಮಹಿಳೆಯರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ ಸೇವೆಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿರುವುದಾಗಿ ಬಿಎಂಟಿಸಿ ಪ್ರಕಟಿಸಿದೆ.

ಮಹಿಳೆಯರಿಗೆ ಬಂಪರ್ ಆಫರ್... ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಸೌಲಭ್ಯ

ಮಹಿಳೆಯರ ಉಚಿತ ಪ್ರಯಾಣದಿಂದ ಆಗುವ ಅನುಕೂಲಗಳು:
ಬಿಎಂಟಿಸಿ ಪ್ರಕಾರ, ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯುಳ್ಳ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವುದು, ಮಹಿಳೆಯರು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ಉಪಯೋಗಿಸುವುದರಿಂದ ನಗರದ ಸಂಚಾರ ದಟ್ಟಣೆ ಹಾಗೂ ವಾಯು ಮಾಲಿನ್ಯ ಕಡಿಮೆಯಾಗಲಿದೆ. ಹಾಗೆಯೇ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಿದಂತಾಗುತ್ತದೆ. ಈ ಉಚಿತ ಪ್ರಯಾಣವು ಸಂಸ್ಥೆಯ ಹವಾನಿಯಂತ್ರಿತ ವಜ್ರ ಹಾಗೂ ವಾಯುವಜ್ರ ಸೇವೆಗಳಿಗೂ ಅನ್ವಯಿಸುತ್ತದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ, ದಿನಾಂಕ 08-03-2023 ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಎಲ್ಲಾ ಮಹಿಳೆಯರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲಾ ಸೇವೆಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ನಗರದಲ್ಲಿ ಎಲ್ಲಾ ಮಹಿಳೆಯರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ. ಈ ಸೌಲಭ್ಯವು ಕೇವಲ ಒಂದು ದಿನ ಮಾತ್ರ ಇರಲಿದೆ ಎಂದು ಬಿಎಂಟಿಸಿ ತಿಳಿಸಿದೆ. ಹಾಗಾಗಿ ತಮ್ಮ ಕೆಲಸ-ಕಚೇರಿ, ಮತ್ತಿತರ ಕಡೆಗಳಿಗೆ ಯಾವುದೇ ಪಾವತಿಯಿಲ್ಲದೇ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮಹಿಳೆಯರಿಗೆ ಬಂಪರ್ ಆಫರ್... ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಸೌಲಭ್ಯ

48 ಘಟಕಗಳು, 50 ಬಸ್‌ ನಿಲ್ದಾಣಗಳು, 6,600 ವಾಹನ ಬಲ:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬೆಂಗಳೂರು ನಗರ ಮತ್ತು ಹೊರವಲಯ ಪ್ರದೇಶದ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಥ, ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಮಿತವ್ಯಯ ದರದಲ್ಲಿ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದು ಬಿಎಂಟಿಸಿ ಹೇಳಿಕೊಡಿದೆ. ಪ್ರಸ್ತುತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 48 ಘಟಕಗಳು ಹಾಗೂ ಬೃಹತ್ 6,600 ವಾಹನ ಬಲವನ್ನು ಹೊಂದಿದೆ ಎಂದು ಬಿಎಂಟಿಸಿ ತಿಳಿಸಿದೆ.

ಬಿಎಂಟಿಸಿ ಪ್ರತಿದಿನ 5,567 ಬಸ್ಸುಗಳ ಮೂಲಕ 54 ಸಾವಿರ ಸುತ್ತುವಳಿಗಳೊಂದಿಗೆ, 10. 84 ಲಕ್ಷ ಕಿ.ಮೀಗಳನ್ನು ಕ್ರಮಿಸಿ ಸರಾಸರಿ 29 ಲಕ್ಷ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯವನ್ನು ಕಲ್ಪಿಸುತ್ತಿದೆ. ನಿತ್ಯ ಯಾವುದೇ ಸಮಸ್ಯೆಗಳಿಲ್ಲದೇ ಪ್ರಯಾಣಿಕರ ಸೌಕರ್ಯಕ್ಕೆ ಅನುಗುಣವಾಗಿ ಎಲ್ಲಾ ನಿಲ್ದಾಣಗಳಲ್ಲೂ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ನಿಯೋಜಿಸಲಾಗುತ್ತಿದೆ. ನಗರದಲ್ಲಿ ಮಿತಿಗೊಳಿಸಿರುವ ಮಾರ್ಗಗಳಿಗೆ ಅನುಗುಣವಾಗಿ ಪ್ರತಿಯೊಂದು ಪ್ರದೇಶಗಳಿಗೂ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಮಹಿಳೆಯರಿಗೆ ಬಂಪರ್ ಆಫರ್... ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಸೌಲಭ್ಯ

ಪ್ರಸ್ತುತ ಬಿಎಂಟಿಸಿ ನಗರದ ಮುಖ್ಯ ಸಾರಿಗೆ ಸಾಧನವಾಗಿದೆ, ನಿತ್ಯ ಲಕ್ಷಾಂತರ ಜನರು ಈ ಸೌಲಭ್ಯವನ್ನು ಬಳಸಿಕೊಳ್ಳುತ್ತಿದ್ದಾರೆ. ನಗರದ ಬಹುತೇಕರು ಬಿಎಂಟಿಸಿ ನಂಬಿಕೊಂಡು ನಿತ್ಯ ಜೀವನ ಸಾಗಿಸುತ್ತಿದ್ದಾರೆ. ಕಡಿಮೆ ದರ, ಪ್ರಯಾಣ ಸೌಕರ್ಯಗಳಿಂದ ಬಿಎಂಟಿಸಿ ಇತರ ಸಾರಿಗೆಗಳಿಗೆ ಹೋಲಿಸಿಕೊಂಡರೆ ಪ್ರಯಾಣಿಕರಿಗೆ ಹೆಚ್ಚು ಲಾಭದಾಯಕವಾಗಿದೆ. ಅಲ್ಲದೇ ಹಸಿರು ಬೆಂಗಳೂರಿಗೆ ಆಧ್ಯತೆ ನೀಡಿ ಇತ್ತೀಚೆಗೆ ಎಲೆಕ್ಟ್ರಿಕ್ ಬಸ್‌ಗಳನ್ನು ಕೂಡ ಬಿಎಂಟಿಸಿಯಲ್ಲಿ ಪರಿಚಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಬಹುದು.

More from DriveSpark

Article Published On: Tuesday, March 7, 2023, 17:00 [IST]
English summary
Free travel facility for women on international womens day in bmtc
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+