Maruti Suzuki: ಗೌರಿ ಗಣೇಶ ಹಬ್ಬ.. ಕಡಿಮೆ ಬೆಲೆಯ ಮಾರುತಿ ಸುಜುಕಿ ಕಾರು ಕೊಳ್ಳುವವರಿಗೆ ಸಿಹಿಸುದ್ದಿ
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿಗಳಿಸಿದೆ. ಅರೆನಾ ಡೀಲರ್‌ಶಿಪ್‌ನಲ್ಲಿ ಮಾರಾಟ ಮಾಡುವ ವಿವಿಧ ಕಾರುಗಳ ಮೇಲೆ ಈ ಸೆಪ್ಟೆಂಬರ್ ತಿಂಗಳಲ್ಲಿ ಭರ್ಜರಿಯಾಗಿ ರೂ.40,000 ರಿಯಾಯಿತಿ ನೀಡಿದೆ. ಯಾವ ಮಾದರಿ ಎಷ್ಟು ಹೊಂದಿದೆ ಎಂಬುದನ್ನು ತಿಳಿಯೋಣ ಬನ್ನಿ.
ಮೊದಲಿಗೆ ಮಾರುತಿ ಸುಜುಕಿ ಸೆಲರಿಯೊ (Maruti Suzuki Celerio) ಬಗ್ಗೆ ಮಾತನಾಡೋಣ. ಈ ಕಾರಿನ ಟಾಪ್ ಎಂಡ್ ಮಾದರಿ ರೂ.40,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಆದರೆ, ಬೇಸ್ ವೇರಿಯೆಂಟ್ ರೂ.30,000 ಮಾತ್ರ ಡಿಸ್ಕೌಂಟ್ ಆಫರ್ ಪಡೆದಿದೆ. ದೇಶೀಯ ಮಾರುಕಟ್ಟೆಯಲ್ಲಿ ರೂ.5.37 ಲಕ್ಷದಿಂದ ರೂ.7.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಈ ಸೆಲರಿಯೊ ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 26kmpl ರಿಂದ 35.6km/kg ವರೆಗೆ ಮೈಲೇಜ್ ನೀಡುತ್ತದೆ. ಕೆಫೀನ್ ಬ್ರೌನ್, ಫೈರ್ ರೆಡ್, ಗ್ಲಿಸ್ಟೆನಿಂಗ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯಲಿದ್ದು, 7-ಇಂಚಿನ ಟಚ್‌ಸ್ಕ್ರೀನ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ ಮ್ಯಾನ್ಯುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿಯ ಎಂಟ್ರಿ ಲೆವೆಲ್ ಕಾರಾಗಿರುವ ಆಲ್ಟೋ ಕೆ10 (Alto K10) ಕೂಡ ಈ ಸೆಪ್ಟೆಂಬರ್ ತಿಂಗಳಲ್ಲಿ ಭರ್ಜರಿ ಡಿಸ್ಕೌಂಟ್ ಹೊಂದಿದೆ. ಇದರ ಪೆಟ್ರೋಲ್ ರೂಪಾಂತರಗಳು ರೂ.35,000 ಹಾಗೂ ಸಿಎನ್‌ಜಿ ವೇರಿಯೆಂಟ್ಸ್ ರೂ.32,000 ರಿಯಾಯಿತಿ ಪ್ರಯೋಜನವನ್ನು ಪಡೆದಿವೆ. ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ.

ಮಾರುತಿ ಸುಜುಕಿ ಆಲ್ಟೋ ಕೆ10 LXi, VXi ಒಳಗೊಂಡಂತೆ ನಾಲ್ಕು ರೂಪಾಂತರ ಆಯ್ಕೆಯಲ್ಲಿ ಸಿಗುತ್ತದೆ. ಈ ಕಾರು, 1 ಲೀಟರ್ ಡ್ಯೂಯಲ್ಜೆಟ್ ಪೆಟ್ರೋಲ್/ಸಿಎನ್‌ಜಿ ಎಂಜಿನ್, 5 ಸ್ವೀಡ್ ಮ್ಯಾನುವಲ್ ಅಥವಾ 5 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. 24.39 - 24.9 kmpl ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso), ಒಟ್ಟು ರೂ.35,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಪಡೆದಿದೆ. ಅದರಲ್ಲಿ ಬೇಸ್ ವೇರಿಯೆಂಟ್ ರೂ.30,000 ಡಿಸ್ಕೌಂಟ್ ಒಳಗೊಂಡಿದೆ. ಉಳಿದ ಮಾದರಿಗಳಿಗೆ ರೂ.35,000 ರಿಯಾಯಿತಿ ಇದೆ. ಈ ಕಾರು, ರೂ.4.26 ಲಕ್ಷದಿಂದ ರೂ.6.12 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಈ ಎಸ್-ಪ್ರೆಸ್ಸೊ ಕಾರು, ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 24.12 - 25.3 kmpl ಮೈಲೇಜ್ ನೀಡುತ್ತದೆ. ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ವ್ಯಾಗನ್ ಆರ್ (Maruti Suzuki WagonR) ಸಿಎನ್‌ಜಿ VXi ಹಾಗೂ LXi ರೂಪಾಂತರಗಳು ರೂ.30,000 ರಿಯಾಯಿತಿ ಪ್ರಯೋಜನವನ್ನು ಹೊಂದಿವೆ. ಬೇಸ್ ವೇರಿಯೆಂಟ್ ರೂ.35,000 ಹಾಗೂ ಟಾಪ್ ಎಂಡ್ ಮಾದರಿ ರೂ.25,000 ಡಿಸ್ಕೌಂಟ್ ಆಫರ್ ಒಳಗೊಂಡಿದೆ. ಈ ಕಾರು, ರೂ.5.54 ಲಕ್ಷದಿಂದ ರೂ.7.42 ಲಕ್ಷ ಬೆಲೆಯಲ್ಲಿ ಸಿಗುತ್ತದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕೂಡ ಒಳ್ಳೆಯ ಡಿಸ್ಕೌಂಟ್ ಆಫರ್ ಹೊಂದಿದೆ. ಈ ಕಾರಿಗೆ ಬೇಸ್ ವೇರಿಯೆಂಟ್ ರೂ.35,000 ಹಾಗೂ ಟಾಪ್ ಎಂಡ್ ಮಾದರಿ ರೂ.25,000 ರಿಯಾಯತಿ ಪ್ರಯೋಜನ ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಸ್ವಿಫ್ಟ್, ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ನಿಮಗೆ ಗೊತ್ತಿರಲಿ.. ರಾಜ್ಯದಿಂದ ರಾಜ್ಯಕ್ಕೆ ಈ ರಿಯಾಯಿತಿಗಳು ಬೇರೆಯಾಗಿರುತ್ತವೆ. ಹೆಚ್ಚಿನ ಮಾಹಿತಿಗೆ ಡೀಲರ್‌ಶಿಪ್ ಸಂಪರ್ಕಿಸಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಶಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.


Click it and Unblock the Notifications