ಮೂಗು ಮುರಿಯುತ್ತಿದ್ದವರಿಗೆ ತಕ್ಕ ಉತ್ತರ, ಹ್ಯುಂಡೈ ವೆರ್ನಾ ಕಾರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್

ಭಾರತದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಹ್ಯುಂಡೈ (Hyundai) ಕಂಪನಿ ಮಾರಾಟ ಮಾಡಿ ಖ್ಯಾತಿಗಳಿಸಿದೆ. ಅದರ ವೆರ್ನಾ (Verna) ಸೆಡಾನ್ ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿದೆ. ಇದು ಸುರಕ್ಷತೆ ವಿಚಾರದಲ್ಲಿಯೂ ಅತ್ಯುತ್ತಮವಾಗಿದೆ ಎಂದು ಸದ್ಯ ಸಾಬೀತಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಇತ್ತೀಚೆಗೆ, ಹ್ಯುಂಡೈ ವೆರ್ನಾ ಕಾರನ್ನು ಗ್ಲೋಬಲ್ ಎನ್‌ಸಿಎಪಿ (Global NCAP) ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಲ್ಲಿ ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 28.18 ಅಂಕಗಳು, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 42 ಅಂಕಗಳನ್ನು ಗಳಿಸುವ ಮೂಲಕ 5 ಸ್ಟಾರ್ ಸೇಫ್ಟಿ ರೇಟಿಂಗ್ ಗಳಿಸಿದೆ. ಈ ರೇಟಿಂಗ್ ಪಡೆದಿದ್ದರೂ ಗ್ಲೋಬಲ್ ಎನ್‌ಸಿಎಪಿ, ಈ ಕಾರಿನಲ್ಲಿ ಕೆಲವೊಂದು ಲೋಪಗಳನ್ನು ಗುರುತಿಸಿದೆ.

ಮೂಗು ಮುರಿಯುತ್ತಿದ್ದವರಿಗೆ ತಕ್ಕ ಉತ್ತರ, ಹ್ಯುಂಡೈ ವೆರ್ನಾ ಕಾರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್

ಹ್ಯುಂಡೈ ವೆರ್ನಾದ ಬಾಡಿಶೆಲ್ ಮತ್ತು ಫುಟ್‌ವೆಲ್ ಸ್ಥಿರತೆಯಿಂದ ಕೂಡಿಲ್ಲ. ಜೊತೆಗೆ ಹೆಚ್ಚಿನ ಲೋಡ್ ತಡೆದುಕೊಳ್ಳುವ ಸಾಮರ್ಥ್ಯ ಹೊಂದಿಲ್ಲ ಎಂದು ತಿಳಿಸಿದೆ. ವೆರ್ನಾ, 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆಯಲು ಕಾರಣ, ಅದರಲ್ಲಿರುವ ಸುರಕ್ಷಿತ ವೈಶಿಷ್ಟ್ಯಗಳು. ಪ್ರಮುಖವಾಗಿ, 6 ಏರ್‌ಬ್ಯಾಗ್ಸ್, ISOFIX ಚೈಲ್ಡ್ ಸೀಟ್ ಆಂಕಾರೇಜ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

ಇದರೊಟ್ಟಿಗೆ, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಂ), ESC (ಎಲೆಕ್ಟ್ರಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ ಪಾರ್ಕಿಂಗ್ ಪಾರ್ಕಿಂಗ್ ಸೇನಾರ್ಸ್, ಆಲ್-ವೀಲ್ ಡಿಸ್ಕ್ ಬ್ರೇಕ್ಸ್, TPMS (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್‌), ADAS (ಸುಧಾರಿತ ಚಾಲಕ ಸಹಾಯ ವ್ಯವಸ್ಥೆ) ಒಳಗೊಂಡಿದೆ. ಇದು, ಬ್ಲೈಂಡ್ - ಸ್ಪಾಟ್ ಅಲರ್ಟ್, ಲೇನ್ ಕೀಪ್ ಅಸಿಸ್ಟ್ ಹಾಗೂ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್‌ ನಂತಹ ಫೀಚರ್ಸ್ ಹೊಂದಿದೆ.

ಮೂಗು ಮುರಿಯುತ್ತಿದ್ದವರಿಗೆ ತಕ್ಕ ಉತ್ತರ, ಹ್ಯುಂಡೈ ವೆರ್ನಾ ಕಾರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್

ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆರ್ನಾ, ರೂ.10.96 ಲಕ್ಷದಿಂದ ರೂ.17.38 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಇಎಕ್ಸ್, ಎಸ್ ಹಾಗೂ ಎಸ್ಎಕ್ಸ್ ರೂಪಾಂತರದ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಜೊತೆಗೆ ಟೈಟಾನ್ ಗ್ರೇ, ಟೆಲೂರಿಯನ್ ಬ್ರೌನ್, ಟೈಫೂನ್ ಸಿಲ್ವರ್, ಫಿಯರಿ ರೆಡ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್, ಸ್ಟಾರಿ ನೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಈ ಕಾರು, ಎರಡು ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. 1.5 - ಲೀಟರ್ ಟರ್ಬೋಚಾರ್ಚ್ದ್ ಪೆಟ್ರೋಲ್ ಎಂಜಿನ್, 160 PS ಗರಿಷ್ಠ ಪವರ್ ಹಾಗೂ 253 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ 6 ಸ್ವೀಡ್ ಮ್ಯಾನುವಲ್ ಅಥವಾ 7 ಸ್ವೀಡ್ DCT ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಮೂಗು ಮುರಿಯುತ್ತಿದ್ದವರಿಗೆ ತಕ್ಕ ಉತ್ತರ, ಹ್ಯುಂಡೈ ವೆರ್ನಾ ಕಾರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್

ಮತ್ತೊಂದು, 1.5 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟೋಲ್ ಎಂಜಿನ್, 115 PS ಗರಿಷ್ಠ ಪವರ್ 144 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 6 ಸ್ವೀಡ್ ಮ್ಯಾನುವಲ್ ಅಥವಾ CVT ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಸಿಗುತ್ತದೆ. ಅಲ್ಲದೆ, ಅತ್ಯುತ್ತಮ ಇಂಧನ ದಕ್ಷತೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 18.6 - 20.6 kmpl ಮೈಲೇಜ್ ನೀಡುತ್ತದೆ.

ಹ್ಯುಂಡೈ ವೆರ್ನಾ, ಡ್ಯುಯಲ್ ಸ್ಕ್ರೀನ್ ಸೆಟಪ್ (10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ) ಅನ್ನು ಹೊಂದಿದೆ. ಜೊತೆಗೆ 8 ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, 64 - ಕಲರ್ ಆಂಬಿಯೆಂಟ್ ಲೈಟಿಂಗ್, ಸಿಂಗಲ್ ಪೇನ್ ಸನ್‌ರೂಫ್, ಏರ್ ಪ್ಯೂರಿಫೈಯರ್ ಸೇರಿದಂತೆ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, October 3, 2023, 18:38 [IST]
English summary
Global ncap hyundai verna scores five star safety rating
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+