ಟಾಟಾ ಕಾರುಗಳ ಅಬ್ಬರ: ಕಳೆದ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಟಾ ಕಾರುಗಳು
ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ, ಹ್ಯುಂಡೈ ಕಾರುಗಳೊಂದಿಗೆ ಸ್ಪರ್ಧಿಸುವ ಪ್ರಮುಖ ವಾಹನ ತಯಾರಕರಲ್ಲಿ ಟಾಟಾ ಮೋಟಾರ್ಸ್ ಒಂದಾಗಿದೆ. ಸ್ವದೇಶಿ ಟಾಟಾ ಮೋಟಾರ್ಸ್ ಇತ್ತೀಚೆಗೆ 2023ರ ಜನವರಿ ತಿಂಗಳ ವಾಹನ ಮಾರಾಟದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ, ಟಾಟಾ ಮೋಟಾರ್ಸ್ ದೇಶದಲ್ಲಿ ಎರಡನೇ ಶ್ರೇಯಾಂಕಕ್ಕಾಗಿ ಅಗ್ರೇಸಿವ್ ಆಗಿ ಸ್ಪರ್ಧಿಸುತ್ತಿದೆ.
2023ರ ಜನವರಿ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 47,990 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು40,780 ಯುನಿಟ್‌ಗಳನ್ನು ಮಾರಾಟ ಮಾಡಿತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 18 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಆದರೆ ಟಾಟಾ ಮೋಟಾರ್ಸ್ ಕಳೆದ ತಿಂಗಳ ಮಾರಾಟದಲ್ಲಿ ಎರಡನೇ ಸ್ಥಾನದಿಂದ ಕುಸಿದು ಮೂರನೇ ಸ್ಥಾನಕ್ಕೆ ಇಳಿದಿದೆ. ಕಳೆದ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಮಾದರಿಗಳ ಬಗ್ಗೆ ಮಾಹಿತಿ ಇಲ್ಲಿದೆ.

ಟಾಟಾ ನೆಕ್ಸಾನ್
ಟಾಟಾ ನೆಕ್ಸಾನ್ ಟಾಟಾ ನೆಕ್ಸಾನ್ ಕಳೆದ ತಿಂಗಳ ಮಾರಾಟದಲ್ಲಿ ದೇಶದಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ. ಕಳೆದ ತಿಂಗಳು ನೆಕ್ಸಾನ್ ಕಾಂಪ್ಯಾಕ್ಟ್ ಮಾದರಿಯ 15,567 ಯೂನಿಟ್‌ಗಳು ಮಾರಾಟವಾಗಿತ್ತು. ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ 13,816 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.13 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳ ಮಾರಾಟದಲ್ಲಿ ಜನಪ್ರಿಯ ಮಾರುತಿ ಬ್ರೆಝಾ ಎಸ್‍ಯುವಿಯನ್ನು ಹಿಂದಿಕ್ಕಿ ಟಾಟಾ ನೆಕ್ಸಾನ್ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದೆ.
ಟಾಟಾ ನೆಕ್ಸಾನ್ (Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಟಾಟಾ ಮೋಟಾರ್ಸ್ ಕಂಪನಿಗೆ ನೆಕ್ಸಾನ್ ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಈ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ.
ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಲಭ್ಯವಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು.
ಟಾಟಾ ಪಂಚ್
ಈ ಪಂಚ್ ಸಬ್-ಕಾಂಪ್ಯಾಕ್ಟ್ ಎಸ್‍ಯುವಿ 2023ರ ಜನವರಿ ತಿಂಗಳಿನಲ್ಲಿ ಟಾಟಾ ಪಂಚ್‌ನ 12,006 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. ಇನ್ನು 2023ರ ಜನವರಿ ತಿಂಗಳಿನಲ್ಲಿ 10,027 ಯುನಿಟ್ ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.20 ರಷ್ಟು ಬೆಳವಣಿಗೆಯೊಂದಿಗೆ ಸುಮಾರು ದ್ವಿಗುಣಗೊಂಡಿದೆ.ಇತ್ತೀಚೆಗೆ, ಟಾಟಾ ಮೋಟಾರ್ಸ್ ಪಂಚ್ ಕ್ಯಾಮೊವನ್ನು ಪರಿಚಯಿಸಿತು. ಆವೃತ್ತಿಯು ದೇಶದಲ್ಲಿ ತನ್ನ ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು.
ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್ (Tata Punch) ಮೈಕ್ರೋ ಎಸ್‌ಯುವಿಯು ಈಗಾಗಲೇ ಸಾಕಷ್ಟು ಯಶಸ್ಸನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಟಾ ಪಂಚ್ ಮಾದರಿಯು ನೂತನ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿಯಾಗಿದೆ. ಇನ್ನು ಈ ಹೊಸ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ. ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಕೂಡ ಪೈಪೋಟಿ ನೀಡುತ್ತದೆ.
ಟಾಟಾ ಟಿಯಾಗೋ
ಈ ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಕಳೆದ ತಿಂಗಳು ಭಾರತದಲ್ಲಿ ಕಂಪನಿಗೆ ಮೂರನೇ ಅತಿ ಹೆಚ್ಚು ಮಾರಾಟವಾದ ಮಾದರಿಯಾಗಿದೆ. 2023ರ ಜನವರಿ ತಿಂಗಳಿನಲ್ಲಿಲ್ಲಿ ಟಾಟಾ ಟಿಯಾಗೋ ಮಾದರಿಯ 9,032 ಯುನಿಟ್ ಗಳನ್ನು ಮಾರಾಟಗೊಳಿಸಿತ್ತು. ಇನ್ನು ಕಳೆದ ವರ್ಷದ ಜನವರಿ ತಿಂಗಳ ಮಾರಾಟದಲ್ಲಿ 5,195 ಯುನಿಟ್ ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಭಾರೀ ಬೆಳವಣಿಗೆಯನ್ನು ಸಾಧಿಸಿದೆ. ಇತ್ತೀಚೆಗೆ ಬಿಡುಗಡೆಯಾದ ಟಾಟಾ ಟಿಯಾಗೋ ಇವಿ ಅತ್ಯಂತ ಕೈಗೆಟಕುವ ಎಲೆಕ್ಟ್ರಿಕ್ ಕಾರ್ ಆಗಿದೆ.


Click it and Unblock the Notifications