Honda: ತಿಂಗಳಾರಂಭದಲ್ಲೇ ಹೋಂಡಾದಿಂದ ಸಿಹಿಸುದ್ದಿ ಘೋಷಣೆ, ಮಿಸ್ ಮಾಡಿಕೊಳ್ಳಬೇಡಿ
ಜಪಾನ್ ಪ್ರಮುಖ ವಾಹನ ತಯಾರಕ ಕಂಪನಿ ಹೋಂಡಾ (Honda) ಭಾರತದಲ್ಲಿ ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ. ಆಗಸ್ಟ್ ತಿಂಗಳ ಆರಂಭದಲ್ಲಿಯೇ ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ಘೋಷಿಸಿದ್ದು, ತನ್ನ ಸಿಟಿ ಹಾಗೂ ಅಮೇಜ್ ಸೆಡಾನ್ ಮೇಲೆ ರೂ.73,000 ರಿಯಾಯಿತಿ ನೀಡುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಮೊದಲಿಗೆ ಐದನೇ ತಲೆಮಾರಿನ ಹೋಂಡಾ ಸಿಟಿ ಪಡೆದುಕೊಂಡಿರುವ ಡಿಸ್ಕೌಂಟ್ ಬಗ್ಗೆ ಮಾತನಾಡೋಣ. ಈ ಕಾರು, ಒಟ್ಟು 73,946 ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಅದರಲ್ಲಿ ರೂ.10,000 ಕ್ಯಾಶ್ ಡಿಸ್ಕೌಂಟ್, ರೂ.5,000 ಲಾಯಲ್ಟಿ ಬೋನಸ್, ರೂ.10,000 ಎಕ್ಸ್ಚೇಂಜ್ ಬೋನಸ್, ರೂ.8,000 ಕಾರ್ಪೊರೇಟ್ ಡಿಸ್ಕೌಂಟ್ ಹಾಗೂ ರೂ.20,000 ಸ್ಪೆಷಲ್ ಕಾರ್ಪೊರೇಟ್ ಡಿಸ್ಕೌಂಟ್ ಸೇರಿದಂತೆ ವಿವಿಧ ರಿಯಾಯಿತಿಯನ್ನು ಒಳಗೊಂಡಿದೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಐದನೇ ತಲೆಮಾರಿನ ಹೋಂಡಾ ಸಿಟಿ, ರೂ.11.57 ಲಕ್ಷದಿಂದ ರೂ.16.05 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಇದರಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಬಳಕೆ ಮಾಡಲಾಗಿದ್ದು, 121 PS ಪವರ್ ಹಾಗೂ 145 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6 ಸ್ವೀಡ್ ಮ್ಯಾನುವಲ್/ CVT ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. 17.8-18.4 kmpl ಮೈಲೇಜ್ ನೀಡುತ್ತದೆ.
ಹೋಂಡಾ ಸಿಟಿ ಹೈಬ್ರಿಡ್ 'ವಿ' ರೂಪಾಂತರ ರೂ.40,000 ನಗದು ರಿಯಾಯಿತಿಯನ್ನು ಹೊಂದಿದೆ. ಈ ಸೆಡಾನ್ ರೂ.18.89 ಲಕ್ಷದಿಂದ ರೂ.20.39 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಟ್ವಿನ್ ಎಲೆಕ್ಟ್ರಿಕ್ ಮೋಟಾರ್ ನೊಂದಿಗೆ ಇದರ 1.5 ಲೀಟರ್ ಪೆಟ್ರೋಲ್ ಎಂಜಿನ್, 126 PS ಪವರ್ ಹಾಗೂ 253 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. e-CVT ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, 27.13 kmpl ಮೈಲೇಜ್ ನೀಡುತ್ತದೆ.

ಐದನೇ ಜನರೇಷನ್ & ಹೈಬ್ರಿಡ್ ಹೋಂಡಾ ಸಿಟಿ ಸೆಡಾನ್ ಬಹುತೇಕ ಒಂದೇ ರೀತಿಯ ವೈಶಿಷ್ಟ್ಯವನ್ನು ಹೊಂದಿವೆ. ಮುಖ್ಯವಾಗಿ, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಅಂಬಿಯೆಂಟ್ ಲೈಟಿಂಗ್ ಅನ್ನು ಒಳಗೊಂಡಿವೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್ ಬಾಗ್ಸ್, ADAS (ಸುಧಾರಿತ ಚಾಲಕ ಸಹಾಯ ವ್ಯವಸ್ಥೆ) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿವೆ.
ಹೋಂಡಾ ಅಮೇಜ್ ಕೂಡ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ರೂ.10,000 ನಗದು ರಿಯಾಯಿತಿ, ರೂ.5,000 ಲಾಯಲ್ಟಿ ಬೋನಸ್, ರೂ.6,000 ಕಾರ್ಪೊರೇಟ್ ಡಿಸ್ಕೌಂಟ್ ಸೇರಿದಂತೆ ಒಟ್ಟು, ರೂ.23,296 ಡಿಸ್ಕೌಂಟ್ ಆಫರ್ ಒಳಗೊಂಡಿದೆ. ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ರೂ.7.05 ಲಕ್ಷದಿಂದ 9.66 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ.
ಹೋಂಡಾ ಅಮೇಜ್ ಸೆಡಾನ್ ಇ, ಎಸ್ ಹಾಗೂ ವಿಎಕ್ಸ್ ರೂಪಾಂತರ ಹಾಗೂ ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಮೆಟಿರೊಯ್ಡ್ ಗ್ರೇ ಮೆಟಾಲಿಕ್ ಮತ್ತು ಲೂನಾರ್ ಸಿಲ್ವರ್ ಮೆಟಾಲಿಕ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಇದರ, 1.2 ಲೀಟರ್ ಪೆಟ್ರೋಲ್ ಎಂಜಿನ್ 90 PS ಗರಿಷ್ಠ ಪವರ್ ಹಾಗೂ 110 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.
ಜೊತೆಗೆ ಈ ಕಾರು, 5 ಸ್ವೀಡ್ ಮ್ಯಾನುವಲ್ ಅಥವಾ CVT ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, 18.3-18.6 kmpl ಮೈಲೇಜ್ ನೀಡುತ್ತದೆ. 7 ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ LED ಪ್ರೊಜೆಕ್ಟರ್ ಹೆಡ್‌ಲೈಟ್ಸ್ ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಪಡೆದಿದೆ.
ಒಟ್ಟಾರೆ, ಆಗಸ್ಟ್ ತಿಂಗಳ ಆರಂಭದಲ್ಲಿಯೇ ಹೋಂಡಾ ತನ್ನ ಗ್ರಾಹಕರಿಗೆ ಒಳ್ಳೆಸುದ್ದಿ ನೀಡಿದ್ದು, ರೂ.73,000 ವರೆಗೆ ರಿಯಾಯಿತಿ ಘೋಷಣೆ ಮಾಡಿದೆ. ಈ ಡಿಸ್ಕೌಂಟ್ ದೊಡ್ಡಮಟ್ಟದಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಿಟಿ ಹಾಗೂ ಅಮೇಜ್ ಸೆಡಾನ್ ಖರೀದಿಸುತ್ತಾರೆ ಎಂಬ ವಿಶ್ವಾಸದಲ್ಲಿ ಕಂಪನಿಯಿದೆ. ಮುಂಬರುವ ದಿನಗಳಲ್ಲಿ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.


Click it and Unblock the Notifications








