ಭಾರತದಲ್ಲಿ ಸ್ಥಗಿತಗೊಂಡ ಹೋಂಡಾ ಅಮೇಜ್ ಡೀಸೆಲ್ ಕಾರು

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ಅಮೇಜ್‌ನ ಡೀಸೆಲ್ ರೂಪಾಂತರಗಳನ್ನು ಸದ್ದಿಲ್ಲದೆ ಸ್ಥಗಿತಗೊಳಿಸಿದೆ. ಈ ಹೋಂಡಾ ಅಮೇಜ್‌ನಕೊನೆಯ ನವೀಕರಣವು 2021ರ ಆಗಸ್ಟ್ ತಿಂಗಳಿನಲ್ಲಿ ಪಡೆದುಕೊಂಡಿತು. ಆ ವೇಳೆ ಹೋಂಡಾ ಅಮೇಜ್ ಹೆಚ್ಚುವರಿ ವೈಶಿಷ್ಟ್ಯಗಳೊಂದಿಗೆ ಪರಿಷ್ಕೃತ ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದುಕೊಂಡಿತು.

ಡೀಸೆಲ್ ಪೋರ್ಟ್‌ಫೋಲಿಯೊದಿಂದ ಹೊರಗುಳಿದಿರುವುದರಿಂದ ಇದೀಗ, ಹೋಂಡಾ ಅಮೇಜ್ E, S ಮತ್ತು VX ರೂಪಾಂತರಗಳಲ್ಲಿ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿದೆ. ಇನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಅಮೇಜ್ ಸಬ್‌ಕಾಂಪ್ಯಾಕ್ಟ್ ಸೆಡಾನ್ 5 ಲಕ್ಷ ಮಾರಾಟ ಮೈಲಿಗಲ್ಲನ್ನು ಸಾಧಿಸಿತು. ಹೋಂಡಾ ಅಮೇಜ್ ಮೊದಲ ಬಾರಿಗೆ 2013 ರಲ್ಲಿ ಬಿಡುಗಡೆಯಾಯಿತು, ಈ ಹೋಂಡಾ ಅಮೇಜ್ ಮಾದರಿಯ ಎರಡು ತಲೆಮಾರುಗಳ ಕಾರು ಮತ್ತು ಕೆಲವು ಫೇಸ್‌ಲಿಫ್ಟ್‌ಗಳನ್ನು ನೋಡಿದ್ದೇವೆ.

ಭಾರತದಲ್ಲಿ ಸ್ಥಗಿತಗೊಂಡ ಹೋಂಡಾ ಅಮೇಜ್ ಡೀಸೆಲ್ ಕಾರು

ಹೋಂಡಾ ಅಮೇಜ್ ಪ್ರಸ್ತುತ ಕಂಪನಿಯ ಸಾಲಿನಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಇದು ಭಾರತದಲ್ಲಿ ಅತ್ಯಂತ ಕೈಗೆಟುಕುವ ಹೋಂಡಾ ಕಾರು ಆಗಿದೆ. ಈ ಹೋಂಡಾ ಕಾಂಪ್ಯಾಕ್ಟ್-ಸೆಡಾನ್ ಹಳೆಯ ಮಾದರಿಯ ಮೇಲೆ ಅಮೇಜ್ ಫೇಸ್‌ಲಿಫ್ಟ್‌ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆಗಳನ್ನು ಮಾಡಿದೆ. ಹೊಸ ಮುಂಭಾಗದ ಬಂಪರ್, ಹೊಸ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಸಿ-ಆಕಾರದ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಫಾಗ್ ಲ್ಯಾಂಪ್‌ಗಳನ್ನು ಹೊಂದಿವೆ. ಇದರೊಂದಿಗೆ ಮರುವಿನ್ಯಾಸಗೊಳಿಸಿದ ಕ್ರೋಮ್ ಫ್ರಂಟ್ ಗ್ರಿಲ್ ಅನ್ನು ಹೊಂದಿದೆ.

ಇದರೊಂದಿಗೆ ಕ್ರೋಮ್ ಡೋರ್ ಹ್ಯಾಂಡಲ್‌ಗಳು, 15 ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ. ಫೇಸ್‌ಲಿಫ್ಟೆಡ್ ಕಾರಿನ ಒಟ್ಟಾರೆ ಸಿಲೂಯೆಟ್ ಬದಲಾಗದೆ ಉಳಿದಿದೆ. ಇನ್ನು ಈ ಹೊಸ ಅಮೇಜ್ ಕಾರಿನ ಒಳಭಾಗವು ಹೊಸ ಸೀಟ್ ಅಪ್‌ಹೋಲ್ಸ್ಟರಿ ಸೇರಿದಂತೆ ಹಲವು ಅಪ್‌ಗ್ರೇಡ್‌ಗಳನ್ನು ಮಾಡಲಾಗಿದೆ. ಒಳಭಾಗದಲ್ಲಿ ಶುದ್ಧ ಗಾಳಿಗಾಗಿ ಅಪ್‌ಗ್ರೇಡ್ ಕ್ಯಾಬಿನ್ ಫಿಲ್ಟರ್ ಅನ್ನು ಸೇರಿಸಿದೆ. ಇತರ ಅಪ್‌ಗ್ರೇಡ್‌ಗಳು ಸೇರಿವೆ. ಡ್ಯಾಶ್‌ಬೋರ್ಡ್‌ನಲ್ಲಿ ಸ್ಯಾಟಿನ್ ಸಿಲ್ವರ್ ಅಸ್ಸೆಂಟ್, ಕ್ಲೈಮೇಂಟ್ ಕಂಟ್ರೋಲ್, ಹೋಂಡಾ ಸ್ಮಾರ್ಟ್ ಕೀ ಮತ್ತು ಪುಶ್-ಬಟನ್ ಸ್ಟಾರ್ಟ್ ಅನ್ನು ಹೊಂದಿದೆ.

ಇದರೊಂದಿಗೆ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವಾಯ್ಸ್ ಕಮಾಂಡ್‌ಗಳು ಸೇರಿದಂತೆ ಇತರ ಫೀಚರ್ಸ್ ಗಳನ್ನು ಕೂಡ ಒಳಗೊಂಡಿದೆ, ಈ ಹೊಸ ಅಮೇಜ್ ಕಾರು ಮೆಟಿರಾಯ್ಡ್ ಗ್ರೇ, ಪ್ಲಾಟಿನಂ ಪರ್ಲ್ ವೈಟ್, ಲೂನಾರ್ ಸಿಲ್ವರ್, ಗೋಲ್ಡನ್ ಬ್ರೌನ್ ಮತ್ತು ರೇಡಿಯಂಟ್ ರೆಡ್ ಎಂಬ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ, ಈ ಹೋಂಡಾ ಅಮೇಜ್ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್ ಗಳನ್ನು ನೀಡಿದ್ದಾರೆ.

ಸುರಕ್ಷತೆಗಾಗಿ ಈ ಕಾರಿನಲ್ಲಿ ಇಬಿಡಿ, ISOFIX ಚೈಲ್ಡ್ ಸೀಟ್ ಆಂಕರ್‌ಗಳೊಂದಿಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಹಿಂಭಾಗದ ಪಾರ್ಕಿಂಗ್ ಸೆನ್ಸರ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಸೀಟ್-ಬೆಲ್ಟ್ ರಿಮೈಂಡರ್ ಗಳನ್ನು ಹೊಂದಿದೆ. ಹಿಂದಿನ ಮಾದರಿಗೆ ಹೋಲಿಸಿದರೆ ಪ್ರಸ್ತುತ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಆಯಾಮದಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ, ಇದು ಒಟ್ಟಾರೆ 3,995 ಮಿಮೀ ಉದ್ದ, 1,695 ಮಿಮೀ ಅಗಲ ಮತ್ತು 1,498 ಮಿಮೀ ಎತ್ತರವನ್ನು ಉಳಿಸಿಕೊಂಡಿದೆ.

ಇನ್ನು ಈ ಕಾರು 2,470 ಮಿಮೀ ವ್ಹೀಲ್‌ಬೇಸ್ ಉದ್ದವನ್ನು ಹೊಂದಿದೆ. ಈ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾಂಪ್ಯಾಕ್ಟ್ ಸೆಡಾನ್ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇದನ್ನು ಎರಡು ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗಿದೆ. ಇದು 1.2ಎಲ್ ಪೆಟ್ರೋಲ್ ಮತ್ತು 1.5ಎಲ್ ಡೀಸೆಲ್ ಎಂಬ ಎಂಜಿನ್ ಗಳಾಗಿವೆ. ಇನ್ನು ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 110 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ಸ್ಥಗಿತಗೊಂಡ ಡೀಸೆಲ್ ಕಾರಿನಲ್ಲಿ 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿತ್ತು. ಈ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 200 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರೊಂದಿಗೆ ಡೀಸೆಲ್ ಆಟೋಮ್ಯಾಟಿಕ್ ರೂಪಾಂರರವು 78 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿತು. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸ್ಪೀಡ್ ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿತ್ತು.

Article Published On: Tuesday, January 10, 2023, 16:03 [IST]
English summary
Honda cars india discontinued diesel variants of amaze sedan details
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+