ಹೆಚ್ಚು ಮೈಲೇಜ್, ಕೈಗೆಟುಕುವ ಬೆಲೆಯ ಹೋಂಡಾ ಎಲಿವೇಟ್ ಆಕರ್ಷಕ ಟಿವಿಸಿ ಬಿಡುಗಡೆ

ಹೋಂಡಾ ಕಾರ್ಸ್ ಇಂಡಿಯಾ ತನ್ನ ಹೊಸ ಹೋಂಡಾ ಎಲಿವೇಟ್ (Honda Elevate) ಎಸ್‍ಯುವಿಯನ್ನು ಭಾರತಿಯ ಮಾರುಕಟ್ಟೆಯಲ್ಲಿ ತಿಂಗಳುಗಳ ಹಿಂದೆ ಬಿಡುಗಡೆಗೊಂಡಿತು. ಈ ಹೊಂಡಾ ಎಲಿವೇಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಇತರ ಜನಪ್ರಿಯ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಹೋಂಡಾ ಎಲಿವೇಟ್‌ನ ಹೊಚ್ಚಹೊಸ ದೂರದರ್ಶನ ಜಾಹೀರಾತನ್ನು ಹೋಂಡಾ ಕಾರ್ಸ್ ಇಂಡಿಯಾ ತಮ್ಮ ಅಧಿಕೃತ ಚಾನೆಲ್‌ನಲ್ಲಿ YouTube ನಲ್ಲಿ ಹಂಚಿಕೊಂಡಿದೆ. ಈ ಹೊಸ TVC ಎಲಿವೇಟ್‌ನ ಎಲ್ಲಾ ಬಾಹ್ಯ ವಿನ್ಯಾಸದ ವಿವರಗಳನ್ನು ಅದರ ಆಯಾಮಗಳು, ಪವರ್‌ಟ್ರೇನ್ ವಿಶೇಷಣಗಳು, ಒಳಾಂಗಣ ವಿನ್ಯಾಸ ಮತ್ತು ವೈಶಿಷ್ಟ್ಯಗಳ ವಿವರಗಳೊಂದಿಗೆ ಹೈಲೈಟ್ ಮಾಡುತ್ತದೆ. ಇದು ಹೋಂಡಾ ಎಲಿವೇಟ್ ಚಾಲನೆಯನ್ನು ತೋರಿಸುತ್ತದೆ ಮತ್ತು ಅದರ ಎಲ್ಲಾ ಸುರಕ್ಷತಾ ವೈಶಿಷ್ಟ್ಯಗಳನ್ನು ವಿವರಿಸಿದೆ.

Honda Elevate

ಈ ಎಸ್‍ಯುವಿಯ SV, V, VX ಮತ್ತು ZX ಎಂಬಟ್ರಿಮ್ ಹಂತಗಳಲ್ಲಿ ಲಭ್ಯವಿದೆ. ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಈ ಎಲಿವೇಟ್ ಎಸ್‍ಯುವಿಗಾಗಿ ಮತ್ತೊಂದು ಹೊಸ TVC ಅನ್ನು ಬಿಡುಗಡೆ ಮಾಡಿದೆ. ಹೊಚ್ಚಹೊಸ ಎಲಿವೇಟ್‌ನ ಹತ್ತಿರ ಹೋಗುವುದರೊಂದಿಗೆ ಮತ್ತು ಅದನ್ನು ಅನ್‌ಲಾಕ್ ಮಾಡುವುದರೊಂದಿಗೆ ವೀಡಿಯೊ ಪ್ರಾರಂಭವಾಗುತ್ತದೆ. ಅದರ ನಂತರ ಅದರ LED DRL ನೊಂದಿಗೆ ಹೊಸ ಬೋಲ್ಡ್ LED ಹೆಡ್‌ಲೈಟ್‌ಗಳನ್ನು ತೋರಿಸುತ್ತದೆ.

ಇನ್ನು ಈ ಎಸ್‍ಯುವಿಯ ಒಳಭಾಗದ ಒಂದು ನೋಟವನ್ನು ವೀಡಿಯೊದಲ್ಲಿ ತೋರಿಸಲಾಗಿದೆ. ಎಸ್‍ಯುವಿಯ ಒಳಭಾಗದಲ್ಲಿ ಡ್ಯುಯಲ್-ಡಿಸ್ ಪ್ಲೇ ಡ್ಯಾಶ್ ಅನ್ನು ಹೊಂದಿದೆ, ಇದು 10.25 ಇಂಚಿನ HD ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹೊಂದಿದೆ. ಇದು ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಕನೆಕ್ಟಿವಿಟಿಯನ್ನು ಹೊಂದಿದೆ ಮತ್ತು 8-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ಗೆ ಕನೆಕ್ಟ್ ಹೊಂದಿದೆ.

Honda Elevate

ಇದರೊಂದಿಗೆ ಅನಲಾಗ್ ಸ್ಪೀಡೋದ ಪಕ್ಕದಲ್ಲಿ 7-ಇಂಚಿನ ಡಿಜಿಟಲ್ ಡಿಸ್ಪ್ಲೇ, ಸಿಂಗಲ್ ಪೇನ್ ಸನ್‌ರೂಫ್, ಪ್ಲಶ್ ಸೀಟಿಂಗ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಹೊಂದಿದೆ. ಹೋಂಡಾ ಎಲಿವೇಟ್ ಎಸ್‍ಯುವಿಯನ್ನು ಹೋಂಡಾ ಆರ್&ಡಿ ಏಷ್ಯಾ ಪೆಸಿಫಿಕ್, ಥೈಲ್ಯಾಂಡ್ ಅಭಿವೃದ್ಧಿಪಡಿಸಿದೆ. ಈ ಹೊಸ ಎಸ್‍ಯುವಿಯು ಅತ್ಯಾಧುನಿಕ ಸೌಕರ್ಯ ಮತ್ತು ತಂತ್ರಜ್ಞಾನದ ಜೊತೆಗೆ ಸ್ಥಿತಿ ಮತ್ತು ಹೆಚ್ಚು ವಿಶೇಷವಾದ ಖರೀದಿದಾರರನ್ನು ಆಕರ್ಷಿಸಿಸುವಂತೆ ವಿನ್ಯಾಸಗೊಳಿಸಿದೆ.

ಹೊಸ ಎಸ್‍ಯುವಿ ಮಾದರಿಯ ವಿನ್ಯಾಸವು ನ್ಯೂ ಜನರೇಷನ್ CR-V ಮತ್ತು WR-V ಎಸ್‍ಯುವಿಗಳಿಂದ ಸ್ಫೂರ್ತಿ ಪಡೆದಿದೆ. ಹೋಂಡಾ ಎಲಿವೇಟ್ ಎಸ್‍ಯುವಿಯು ಬಾಕ್ಸಿ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಮುಂಭಾಗವು ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಎಸ್‍ಯುವಿಯು ಎಲ್ಇಡಿ ಹೆಡ್‌ಲೈಟ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ದಪ್ಪ ಕ್ರೋಮ್ ಸ್ಟ್ರಿಪ್‌ನಿಂದ ಸಂಪರ್ಕ ಹೊಂದಿವೆ. ಇನ್ನು ಈ ಎಸ್‍ಯುವಿಯ ಫಾಂಗ್ ಲ್ಯಾಂಪ್ ಗಳನ್ನು ಬಂಪರ್‌ನಲ್ಲಿ ಕೆಳಕ್ಕೆ ಇರಿಸಲಾಗಿದೆ.

Honda Elevate

ಹೋಂಡಾ ಎಲಿವೇಟ್ ಎಸ್‌ಯುವಿಯಲ್ಲಿ 1.5-ಲೀಟರ್, ಡಿಒಹೆಚ್‌ಸಿ, 4-ಸಿಲಿಂಡರ್, ನ್ಯಾಚುರಲ್ ಆಸ್ಪೈರ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 5ನೇ ತಲೆಮಾರಿನ ಹೋಂಡಾ ಸಿಟಿಯಲ್ಲಿ ಲಭ್ಯವಿದೆ. ಈ ಹೋಂಡಾ ಎಲಿವೇಟ್ ಎಸ್‍ಯುವಿ ಈ ಎಂಜಿನ್ 6,600rpm ನಲ್ಲಿ 119.4 bhp ಪವರ್ ಮತ್ತು 4,300rpm ನಲ್ಲಿ 145 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೋಂಡಾ ಎಲಿವೇಟ್ ಎಸ್‌ಯುವಿಯಲ್ಲಿ ಈ 1.5-ಲೀಟರ್ ಎಂಜಿನ್ ಹೊಂದಿರುವ ಟ್ರಾನ್ಸ್‌ಮಿಷನ್ ಆಯ್ಕೆಗಳು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಮತ್ತು ಸಿವಿಟಿ ಗೇರ್‌ಬಾಕ್ಸ್ ಅನ್ನು ಒಳಗೊಂಡಿವೆ.ಹೋಂಡಾ ಪ್ರಕಾರ, ಹೋಂಡಾ ಎಲಿವೇಟ್ ಎಸ್‍ಯುವಿ ಮ್ಯಾನುವಲ್ ರೂಪಾಂತರವು 15.31 ಕಿ.ಮೀ ಮೈಲೇಜ್ ನೀಡಿದರೆ, CVT ರೂಪಾಂತರವು 16.92 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

Honda Elevate

ಹೋಂಡಾ ಎಲಿವೇಟ್ ಎಸ್‌ಯುವಿಯ ರಿಯಲ್ ವರ್ಲ್ಡ್ ಮೈಲೇಜ್ ಮಾಹಿತಿ ಬಹಿರಂಗವಾಗಿದೆ. ನಗರ ಪ್ರದೇಶದಲ್ಲಿ ಎಲಿವೇಟ್ ಪೆಟ್ರೋಲ್ MT ಮಾದರಿಯು 11.36 ಕಿ.ಮೀ ಮೈಲೇಜ್ ನೀಡುತ್ತದೆ. ಇನ್ನು ಹೆದ್ದಾರಿಯಲ್ಲಿ 18.50 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಓ ಹೋಂಡಾ ಎಲಿವೇಟ್ ಎಸ್‍ಯುವಿಯನ್ನು ಹೋಂಡಾ ಆರ್&ಡಿ ಏಷ್ಯಾ ಪೆಸಿಫಿಕ್, ಥೈಲ್ಯಾಂಡ್ ಅಭಿವೃದ್ಧಿಪಡಿಸಿದೆ.

More from DriveSpark

Article Published On: Friday, November 3, 2023, 18:49 [IST]
English summary
Honda elevate suv new tvc out video details
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+