ಮಾರುತಿ-ಟೊಯೊಟಾ ಎಸ್‍ಯುವಿಗಳಿಗೆ ಸೆಡ್ಡು ಹೊಡೆಯಲು ಸಜ್ಜಾದ ಹೋಂಡಾ ಎಲಿವೇಟ್
ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಅಮೇಜ್ ಮತ್ತು ಸಿಟಿ ಎಂಬ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿವೆ. ಇದೀಗ ಜಪಾನ್ ಮೂಲದ ಹೋಂಡಾ ಕಂಪನಿಯು ಅತಿ ಹೆಚ್ಚು ಪೈಪೋಟಿ ಹೊಂದಿರುವ ಎಸ್‍ಯುವಿ ವಿಭಾಗದಲ್ಲೇ ಹೊಸ ಮಾದರಿಯನ್ನು ಬಿಡುಗಡೆಗೊಳಿಸಿ ಭಾರತದಲ್ಲಿ ತನ್ನ ಕಾರುಗಳ ಸರಣಿಯನ್ನು ವಿಸ್ತರಿಸಲಾಗುತ್ತಿದೆ.
ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಹೊಸ ಎಲಿವೇಟ್ ಎಸ್‍ಯುವಿಯನ್ನು ಭಾರತದಲ್ಲಿ ಈಗಾಗಲೇ ಅನಾವರಣಗೊಳಿಸಲಾಗಿದೆ. ಹೋಂಡಾ ಎಲಿವೇಟ್ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಡೀಲರ್ ಮೂಲಗಳ ಪ್ರಕಾರ, ಈ ಹೊಸ ಹೋಂಡಾ ಎಲಿವೇಟ್ ಎಸ್‌ಯುವಿಯನ್ನು ಖರೀದಿಸಲು ಬಯಸುವ ಗ್ರಾಹಕರು ರೂ.25,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಈ ಹೊಸ ಹೋಂಡಾ ಎಲಿವೇಟ್ (Honda Elevate) ಎಸ್‍ಯುವಿಯು ಅತ್ಯಾಧುನಿಕ ತಂತ್ರಜ್ಙಾನ ಮತ್ತು ಫೀಚರ್ಸ್ ಗಳೊಂದಿಗೆ ಬರುತ್ತಿದೆ. ಇದು ಹೆಚ್ಚು ಪೈಪೋಟಿ ಹೊಂದಿರುವ ಮಿಡ್ ಎಸ್‍ಯುವಿ ವಿಭಾಗದಲ್ಲಿ ಸ್ಪರ್ಧಿಸಲು ಸಜ್ಜಾಗಿದೆ. ಹೋಂಡಾ ಎಲಿವೇಟ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರ್ಡರ್, ಫೋಕ್ಸ್‌ವ್ಯಾಗನ್ ಟೈಗನ್ ಮತ್ತು ಸ್ಕೋಡಾ ಕುಶಾಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.
ಮುಂಬರುವ ಹೋಂಡಾ ಎಲಿವೇಟ್ ಎಸ್‍ಯುವಿಯ ರೂಪಾಂತರಗಳ ಅನುಗುಣವಾಗಿ ಫಿಚರ್ಸ್ ಗಳನ್ನು ಬಹಿರಂಗಪಡಿಸಿದೆ. ಎಲಿವೇಟ್ ಎಸ್‍ಯುವಿಯ SV ರೂಪಾಂತರದಲ್ಲಿ, ಬೀಜ್ ಫ್ಯಾಬ್ರಿಕ್ ಅಪ್ಹೋಲ್ಸ್ಟರಿ, 60:40 ಸ್ಪ್ಲಿಟ್ ಹಿಂಬದಿ ಸೀಟುಗಳು, ಆಟೋ AC ವಿಟ್ hPM 2.5 ಕ್ಯಾಬಿನ್ ಏರ್ ಪ್ಯೂರಿಫೈಯಿಂಗ್ ಫಿಲ್ಟರ್, ಎಂಜಿನ್ ಪುಶ್ ಬಟನ್ ಜೊತೆಗೆ ಹೋಂಡಾ ಸ್ಮಾರ್ಟ್ ಎಂಟ್ರಿ ಸಿಸ್ಟಮ್, ಡ್ಯುಯಲ್ ಫ್ರಂಟ್ SRS ಏರ್‌ಬ್ಯಾಗ್‌ಗಳು, LED ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು LED ಟೈಲ್‌ಲ್ಯಾಂಪ್‌ಗಳಿವೆ.

ಹೋಂಡಾ ಎಲಿವೇಟ್ ಎಸ್‍ಯುವಿಯ V ರೂಪಾಂತರದಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ವೈರ್‌ಲೆಸ್ ಆಪಲ್ ಕಾರ್ಪ್ಲೇ, ಆಂಡ್ರಾಯ್ಡ್ ಆಟೋ, ಹೋಂಡಾ ಕನೆಕ್ಟ್, 8-ಸ್ಪೀಕರ್ ಆಡಿಯೊ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೊ ಮತ್ತು HFT ಸ್ವಿಚ್‌ಗಳು, ಮಲ್ಟಿ-ಆಂಗಲ್ ರಿಯರ್ ವ್ಯೂ ಕ್ಯಾಮೆರಾ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿವೆ.
ಹೋಂಡಾ ಎಲಿವೇಟ್ ಎಸ್‍ಯುವಿಯ VX ರೂಪಾಂತರದಲ್ಲಿ 7-ಇಂಚಿನ HD ಬಣ್ಣದ TFT ಮೀಟರ್ ಕ್ಲಸ್ಟರ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, 6-ಸ್ಪೀಕರ್ ಆಡಿಯೊ ಸಿಸ್ಟಮ್, ಲೇನ್‌ವಾಚ್ ಕ್ಯಾಮೆರಾ, ಒನ್-ಟಚ್ ಎಲೆಕ್ಟ್ರಿಕ್ ಸನ್‌ರೂಫ್ ಆಟೋ, ಫೋಲ್ಡಿಂಗ್ ಡೋರ್ ಮಿರೋಸ್, R17 ಡ್ಯುಯಲ್-ಟೋನ್, ರೂಫ್ ರೈಲ್ಸ್, LED ಪ್ರೊಜೆಕ್ಟರ್ ಫಾಗ್ ಲ್ಯಾಂಪ್ ಗಳು ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿವೆ.
ಹೋಂಡಾ ಎಲಿವೇಟ್ ಎಸ್‍ಯುವಿಯ ZX ರೂಪಾಂತರದಲ್ಲಿ ಹೋಂಡಾ ಸೆನ್ಸಿಂಗ್ - ADAS ಟೆಕ್, ಆಟೋ ಡಿಮ್ಮಿಂಗ್ IRVM, ಬ್ರೌನ್ ಲೆಥೆರೆಟ್ ಅಪ್ಹೋಲ್ಸ್ಟರಿ, ಡ್ಯಾಶ್‌ಬೋರ್ಡ್ ಮತ್ತು ಡೋರ್ ಟ್ರಿಮ್‌ಗಳಲ್ಲಿ ಸಾಫ್ಟ್ ಟಚ್ ಪ್ಯಾಡ್‌ಗಳು, 8-ಸ್ಪೀಕರ್ ಆಡಿಯೊ ಸಿಸ್ಟಮ್, 10.25-ಇಂಚಿನ HD ಟಚ್‌ಸ್ಕ್ರೀನ್ ಡಿಸ್ಪ್ಲೇ, ಆಡಿಯೋ, ಸಬ್-ಡಿಸ್ಪ್ಲೇ ಏರಿಯಾ, 6 ಏರ್‌ಬ್ಯಾಗ್‌ಗಳು ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿವೆ.
ಈ ಹೋಂಡಾ ಎಲಿವೇಟ್ ಎಸ್‍ಯುವಿಯಲ್ಲಿ 1.5 ಲೀಟರ್, 4-ಸಿಲಿಂಡರ್ ನ್ಯಾಚುರಲ್ ಆಸ್ಪೈರ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 121 bhp ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಮತ್ತು CVT ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಇನ್ನು ಇದರ 1.5 ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಆವೃತ್ತಿಯ ಬಗ್ಗೆ ಯಾವುದೇ ಮಾಹಿತಿಗಳು ಬಹಿರಂಗವಾಗಿಲ್ಲ.


Click it and Unblock the Notifications








