Hyundai: ಕಡಿಮೆ ಬೆಲೆಯ ಹೊಚ್ಚ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿಗೆ 5 ಸ್ಟಾರ್ ಸೇಫ್ಟಿ ರೇಟಿಂಗ್?
ಭಾರತದ ಮಾರುಕಟ್ಟೆಯಲ್ಲಿ ಹೊಸ ಅಧ್ಯಾಯ ಬರೆಯಲು ಹ್ಯುಂಡೈ (Hyundai) ಅತ್ಯಂತ ಕಡಿಮೆ ಬೆಲೆಯಲ್ಲಿ ಎಕ್ಸ್‌ಟರ್ ಎಸ್‌ಯುವಿಯನ್ನು ಕಳೆದ ಕೆಲವು ದಿನಗಳ ಹಿಂದೆ ಬಿಡುಗಡೆಗೊಳಿಸಿದೆ. ದೇಶೀಯ ಗ್ರಾಹಕರಲ್ಲಿ ಈ ಕಾರು ದೊಡ್ಡ ಮಟ್ಟದ ನೀರಿಕ್ಷೆ ಹುಟ್ಟಿಸಿದ್ದು, ಇದು ಅತ್ಯಂತ ಸುರಕ್ಷಿತ ಎಸ್‌ಯುವಿಯಾಗಲಿದೆ ಎಂದು ಕಂಪನಿ ಹೇಳಿಕೊಂಡಿದೆ.
ಹ್ಯುಂಡೈ ಮೋಟಾರ್ ಇಂಡಿಯಾ (HMIL) ನೂತನ ಎಕ್ಸ್‌ಟರ್ ಎಸ್‌ಯುವಿ, ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಅಥವಾ 5 ಸ್ಟಾರ್ ಸೇಫ್ಟಿ ರೇಟಿಂಗ್ ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ. ಅದಕ್ಕೆ ಪ್ರಮುಖ ಕಾರಣವೆಂದರೆ, ಈ ಕಾರಿನಲ್ಲಿ ಬೆಲೆಗೆ ತಕ್ಕಂತೆ ಕಂಪನಿಯು ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳದೇ ಭರಪೂರ ಸುರಕ್ಷತಾ ವೈಶಿಷ್ಟ್ಯಗಳನ್ನು ನೀಡಿರುವುದು.

ಈ ಬಗ್ಗೆ ಮಾತನಾಡಿರುವ ಹ್ಯುಂಡೈ ಮೋಟಾರ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತರುಣ್ ಗಾರ್ಗ್, 'ಎಕ್ಸ್‌ಟರ್ ಕಾರಿನಲ್ಲಿ ಸುರಕ್ಷತೆಯು ಪ್ರಮುಖ ಅಂಶವಾಗಿದ್ದು, ಈ ಎಸ್‌ಯುವಿಯಲ್ಲಿ ಆರು ಏರ್‌ಬ್ಯಾಗ್‌ಗಳಿವೆ. ಜೊತೆಗೆ ಬೇಸ್ ಟ್ರಿಮ್‌ನಿಂದ ಟಾಪ್ ಎಂಡ್ ಟ್ರಿಮ್‌ವರೆಗೆ ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ನೀಡಿದ್ದೇವೆ. ಇವೆಲ್ಲವಿರುವುದರಿಂದ ಗ್ಲೋಬಲ್ NCAP ಪರೀಕ್ಷೆಯಲ್ಲಿ ಉತ್ತಮ ರೇಟಿಂಗ್ ಪಡೆಯುವ ಭರವಸೆಯಿದೆ' ಎಂದು ಹೇಳಿದ್ದಾರೆ.
ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಹೊಂದಿರುವ ಸುರಕ್ಷತಾ ವೈಶಿಷ್ಟ್ಯಗಳು ಯಾವುವೆಂದು ತಿಳಿಯುವುದಾದರೆ, ಈ ಕಾರು, 6 ಏರ್‌ಬ್ಯಾಗ್ಸ್, ಎಲ್ಲಾ ಆಸನಗಳಿಗೆ 3 ಪಾಯಿಂಟ್ ಸೀಟ್ ಬೆಲ್ಟ್ಸ್, ಸೀಟ್ ಬೆಲ್ಟ್ ರಿಮೈಂಡರ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), VSM (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಅಸಿಸ್ಟ್ ಕಂಟ್ರೋಲ್, ISOFIX ಚೈಲ್ಡ್-ಸೀಟ್ ಮೌಂಟ್ಸ್, ಡ್ಯಾಶ್‌ಬೋರ್ಡ್ ಕ್ಯಾಮೆರಾ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಬೆಲೆ ಮಾತನಾಡುವುದಾದರೆ, ಈ ಕಾರು, SX, SX(O) ಒಳಗೊಂಡಂತೆ ಐದು ರೂಪಾಂತರಗಳ ಆಯ್ಕೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗಲಿದ್ದು, ರೂ.5,99 ಲಕ್ಷದಿಂದ ರೂ.9.32 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್‌ಟರ್ ಎಸ್‌ಯುವಿ ಪೆಟ್ರೋಲ್ ಹಾಗೂ CNG ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ.
ಮೊದಲಿಗೆ ಎಕ್ಸ್‌ಟರ್ ಎಸ್‌ಯುವಿಯ ಪೆಟ್ರೋಲ್ ಆವೃತ್ತಿ ಬಗ್ಗೆ ಹೇಳುವುದಾದರೆ, ಇದು 1.2-ಲೀಟರ್, 4 ಸಿಲಿಂಡರ್ ಎಂಜಿನ್ ಹೊಂದಿದ್ದು, 81.8 bhp ಗರಿಷ್ಠ ಪವರ್ ಮತ್ತು 113.8 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5 ಸ್ಪೀಡ್ ಮ್ಯಾನುವಲ್ ಅಥವಾ AMT ಗೇರ್‌ಬಾಕ್ಸ್ ಆಯ್ಕೆಯಲ್ಲಿ ಖರೀದಿದಾರರಿಗೆ ಸಿಗುತ್ತದೆ.
CNG ಆವೃತ್ತಿಯು 67.7 bhp ಪವರ್ ಮತ್ತು 95.2 Nm ಪೀಕ್ ಟಾರ್ಕ್ ಉತ್ಪಾದಿಸಲಿದ್ದು, ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಮೈಲೇಜ್ ವಿಷಯಕ್ಕೆ ಬರುವುದಾದರೆ, ಈ ಕಾರು, 19.2 ರಿಂದ 27.1 kmpl ಮೈಲೇಜ್ ನೀಡಲಿದೆ. ಈ ಎಕ್ಸ್‌ಟರ್ ಎಸ್‌ಯುವಿ ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಅತ್ಯಾಧುನಿಕ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್ ಹಾಗೂ ಕ್ಲಾಮ್‌ಶೆಲ್ ಬಾನೆಟ್ ಅನ್ನು ಪಡೆದಿದೆ.
ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 4.2 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 8 ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಸೇರಿದಂತೆ ಹಲವು ಫೀಚರ್ಸ್ ಪಡೆದಿದೆ. ಇದೀಗ, ಕಂಪನಿಯು ಈ ಕಾರು, ಸುರಕ್ಷತೆಯ ದೃಷ್ಟಿಯಿಂದ 4 ಅಥವಾ 5 ಸ್ಟಾರ್ ಸೇಫ್ಟಿ ರೇಟಿಂಗ್ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದು, ಗ್ರಾಹಕರಿಗೆ ಖುಷಿತಂದಿದೆ.


Click it and Unblock the Notifications