ಟಾಟಾ ಪಂಚ್‌ಗೆ ನಡುಕು ಹುಟ್ಟಿಸಿದ ಎಕ್ಸ್‌ಟರ್ ಗ್ರಾಹಕರಿಗೆ ಶಾಕ್ ನೀಡಿದ ಹ್ಯುಂಡೈ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಿದರು. ಈ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್ ಅನ್ನು ಪಡೆದುಕೊಂಡಿದೆ.
ಕಳೆದ ಮೂರು ತಿಂಗಳುಗಳಲ್ಲಿ, ಈ ಹ್ಯುಂಡೈ ಎಕ್ಸ್‌ಟರ್‌ನ 23,000 ಯುನಿಟ್‌ಗಳನ್ನು ಮಾರಾಟವಾಗಿದ್ದು, ಜುಲೈನಲ್ಲಿ 7,000 ಯುನಿಟ್‌ಗಳು, ಆಗಸ್ಟ್‌ನಲ್ಲಿ 7,430 ಯುನಿಟ್‌ಗಳು ಮತ್ತು ಸೆಪ್ಟೆಂಬರ್‌ನಲ್ಲಿ 8,647 ಯುನಿಟ್‌ಗಳು ಮಾರಾಟವಾಗಿವೆ. ಈ ಹ್ಯುಂಡೈ ಎಕ್ಸ್‌ಟರ್ ಮಾದರಿಯನ್ನು ರೂ.6 ಲಕ್ಷದಿಂದ ರೂ.10 ಲಕ್ಷದವರೆಗೆ ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ, ಹ್ಯುಂಡೈ ಎಕ್ಸ್‌ಟರ್ ತನ್ನ ಮೊದಲ ಬೆಲೆ ಏರಿಕೆಯನ್ನು ಪಡೆದುಕೊಂಡಿದ್ದು, 16,000 ರೂ.ವರೆಗೆ ಏರಿಕೆಯಾಗಿದೆ.

ಹ್ಯುಂಡೈ ಎಕ್ಸ್‌ಟರ್ EX ಮ್ಯಾನುಯಲ್ ಮತ್ತು SX (O) ಕನೆಕ್ಟ್ AMT ರೂಪಾಂತರಗಳ ಬೆಲೆಗಳು ಬದಲಾವಣೆಗಳಿಲ್ಲ, SX (O) ಕನೆಕ್ಟ್ MT ಮತ್ತು AMT ಡ್ಯುಯಲ್-ಟೋನ್ ರೂಪಾಂತರಗಳ ಬೆಲೆಗಳು ರೂ.5,000 ಬೆಲೆಯನ್ನು ಹೆಚ್ಚಿಸಿವೆ, ಆದರೆ ಉಳಿದ ರೂಪಾಂತರಗಳ ಬೆಲೆಗಳು 10,400 ರೂಪಾಯಿಗಳವರೆಗೆ ಏರಿಕೆಯಾಗಿದೆ. ಈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಗೆ ಭಾರೀ ಬೇಡಿಕೆಯನು ಹೊಂದಿರುವುದರಿಂದ ಈ ಕಾರಿನ EX ಮತ್ತು EX(O) ರೂಪಾಂತರಗಳ ಕಾಯುವ ಅವಧಿಯು 1 ವರ್ಷದವರೆಗೆ ತಲುಪಿದೆ.
ಆದರೆ ಇತರ ರೂಪಾಂತರಗಳಿಗೆ ಇದು 5 ರಿಂದ 6 ತಿಂಗಳ ನಡುವೆ ಇರುತ್ತದೆ. ಹ್ಯುಂಡೈ ಎಕ್ಸ್‌ಟರ್ ಕಾರು ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಇವು EX, EX(O), S, S(O), SX, SX(O) ಮತ್ತು SX(O) ಆಗಿದೆ. ಇತ್ತೀಚೆಗೆ ಹೊಸದಾಗಿ ಬಿಡುಗಡೆಗೊಂಡ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಇತ್ತೀಚೆಗೆ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ. ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 81.8 bhp ಪವರ್ ಮತ್ತು 113.8 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಹ್ಯುಂಡೈ ಎಕ್ಸ್‌ಟರ್ ಕಾರಿನ CNG ಆವೃತ್ತಿಯು 67.7 bhp ಪವರ್ ಮತ್ತು 95.2 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹ್ಯುಂಡೈ ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.

ಇನ್ನು CNG ಆವೃತ್ತಿಯು ಭರ್ಜರಿ 27.1 ಕಿ.ಮೀ ಮೈಲೇಜ್ ನೀಡುತ್ತದೆ. ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ.
ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಒಳಗೊಂಡಿದೆ. ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ.
ಇನ್ನು ಒಟ್ಟಾರೆಯಾಗಿ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), VSM ಮತ್ತು HAC (ಹಿಲ್ ಅಸಿಸ್ಟ್ ಕಂಟ್ರೋಲ್) ಸೇರಿದಂತೆ 26 ಸುರಕ್ಷತಾ ಫೀಚರ್ಸ್ ಗಳನ್ನು ಹೊಂದಿವೆ. ಹ್ಯುಂಡೈ ಎಕ್ಸ್‌ಟರ್ ಕಾರ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳನ್ನು ಪರಿಚಯಿಸಲಾಗಿವೆ. ಇದರಲ್ಲಿ ಗ್ರಾಹಕರು ತಮ್ಮ ಮೆಚ್ಚಿನ ಬಣ್ಣಗಳನ್ನು ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು.


Click it and Unblock the Notifications